ಬೆಳಗಾವಿ,-ಕೋವಿಡ್-೧೯ ಸೋಂಕು ತಗುಲಿದ್ದ 9 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ: ಪಿ-298 ಪಿ-418 ಪಿ- 448 ಪಿ-484 ಪಿ-495 ಪಿ-496 ಪಿ-541 ಪಿ-542 ಪಿ-551
Read More »Monthly Archives: ಮೇ 2020
6609 ಜನರ ವರದಿ ಕೊರೊನಾ ನೆಗೆಟಿವ್ ನಾಳೆ146 ಜನರ ವರದಿ ನಿರೀಕ್ಷೆಯಲ್ಲಿ ಜಿಲ್ಲಾಡಳಿತ
ಬೆಳಗಾವಿ- ನಾಳೆ 146 ಕೊರೊನಾ ಶಂಕಿತರ ವರದಿ ನಿರೀಕ್ಷೆಯಲ್ಲಿ ಬೆಳಗಾವಿ ಜಿಲ್ಲಾಡಳಿತವಿದ್ದು ಬೆಳಗಾವಿ ಜಿಲ್ಲಾಡಳಿತದಿಂದ ಹೆಲ್ತ್ ಬುಲೆಟಿನ್ ರಿಲೀಸ್ ಆಗಿದೆ. ಬೆಳಗಾವಿ ಜಿಲ್ಲೆಯಲ್ಲಿ 50 ಆಕ್ಟಿವ್ ಕೊರೊನಾ ಪಾಸಿಟಿವ್ ಕೇಸ್ ಗಳಿವೆ, ಬೆಳಗಾವಿ ಜಿಲ್ಲೆಯಲ್ಲಿ ಈವರೆಗೂ 8281 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ. ಒಟ್ಟು 78 ಜನರಿಗೆ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಒಟ್ಟು 50 ಜನರಿಗೆ ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಐಸೋಲೇಟ್ ಮಾಡಲಾಗಿದೆ. …
Read More »ರಾಜ್ಯದಲ್ಲಿ ಇನ್ನೆರಡು ದಿನ ಲಾಕ್‍ಡೌನ್ 3.0 ಮುಂದುವರಿಕೆ
ಬೆಂಗಳೂರು : ಸೋಮವಾರದಿಂದ ಜನಜೀವನ ಸಹಜ ಸ್ಥಿತಿಗೆ ಬರಬಹುದೆಂಬ ನಿರೀಕ್ಷೆ ಮತ್ತೆ ಹುಸಿಯಾಗಿದ್ದು, ರಾಜ್ಯದಲ್ಲಿ ಎರಡು ದಿನ ಲಾಕ್‍ಡೌನ್ ಮುಂದುವರಿಸಿ ಸರ್ಕಾರ ಆದೇಶ ನೀಡಿದೆ. ಈ ಹಿಂದಿನ ಮಾರ್ಗಸೂಚಿಗಳಂತೆ ಮೇ 19ರವರೆಗೆ ಬಸ್, ಆಟೋ, ಟ್ಯಾಕ್ಸಿ ಸಂಚಾರವಿರಲ್ಲ ಮತ್ತು ಮಾಲ್, ಥಿಯೇಟರ್, ಶಾಲಾ, ಕಾಲೇಜ್, ದೇವಸ್ಥಾನ, ಮಸೀದಿ, ಚರ್ಚ್ ಈ ಹಿಂದಿನಂತೆ ಬಂದ್ ಆಗಲಿವೆ. ಮುಂದಿನ ಆದೇಶ ಬರುವ ತನಕ ಅಥವಾ ಮೇ 19ರ ರಾತ್ರಿ 12 ಗಂಟೆಯ ತನಕ …
Read More »ಶ್ರೀ ಜಗದೀಶ್ ಶೆಟ್ಟರ್ ರಾಜ್ಯ ಸಚಿವರ ನೇತೃತ್ವದಲ್ಲಿ ಆಶಾ ಕಾರ್ಯಕರ್ತರಿಗೆ ಸನ್ಮಾನ
ಹುಬ್ಬಳ್ಳಿ: ಮಾನ್ಯ ಶ್ರೀ ಜಗದೀಶ್ ಶೆಟ್ಟರ್ ರಾಜ್ಯ ಸಚಿವರ ನೇತೃತ್ವದಲ್ಲಿ ವಾರ್ಡ್ ನಂಬರ್ 47 ರಲ್ಲಿ ಬರುವ ಸುವಿಧಾ ಅನೆಕ್ಸ್ ಅಪಾರ್ಟ್ಮೆಂಟ್ಸ್ ನಲ್ಲಿ ಆಶಾ ಕಾರ್ಯಕರ್ತರಿಗೆ ಸನ್ಮಾನ ಮಾಡಲಾಯಿತು. ಮತ್ತು ಈ ಕಾರ್ಯಕ್ರಮದಲ್ಲಿ ಅಪಾರ್ಟ್ಮೆಂಟ್ಗಳಿಗೆ ಸ್ಯಾನಿಟೈಸರ್ ಸ್ಟ್ಯಾಂಡ್ ಗಳನ್ನು ವಿತರಿಸಲಾಯಿತು . ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಶ್ರೀ ಮಹೇಂದ್ರ ಕೌತಾಳ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ತೆಂಗಿನಕಾಯಿ ಹಾಗೂ ಹುಡಾ ಅಧ್ಯಕ್ಷರಾದ ನಾಗೇಶ್ ಕಲಬುರ್ಗಿ ಮಲ್ಲಿಕಾರ್ಜುನ್ ಸಹಕಾರ …
Read More »ಎಪಿಎಂಸಿ ಕಾಯ್ದೆ ವಿರೋಧಿಸುವವರು ಚರ್ಚೆಗೆ ಬರಲಿ: ಸಚಿವ ಸಿ.ಟಿ.ರವಿ
ಚಿಕ್ಕಮಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುವವರಿಗೆ ಸಚಿವ ಸಿ.ಟಿ.ರವಿ ಸಾರ್ವಜನಿಕ ಚರ್ಚೆಗೆ ಆಹ್ವಾನ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ವಿರೋಧಕ್ಕಾಗಿ ವಿರೋಧ ಮಾಡೋದು ಅರ್ಥಹೀನ. 2003ರಲ್ಲಿ ಡ್ರಾಫ್ಟ್ ಆಯ್ತು. ಯುಪಿಎ ಸರ್ಕಾರದ ಅವಧಿಯಲ್ಲಿ ಆ ಡ್ರಾಫ್ಟ್ ನ ಪರಿಷ್ಕರಣೆ ಮಾಡಿ ಮಾಡೆಲ್ ಡ್ರಾಫ್ಟ್ ಆದ ಬಳಿಕ 16 ರಾಜ್ಯಗಳು ಅದನ್ನು ಒಪ್ಪಿಕೊಂಡವು. ಈಗ ಅದನ್ನು ಇನ್ನಷ್ಟು ಸುಧಾರಣೆ ಮಾಡಿ ರೈತ ಸ್ನೇಹಿಯಾಗಿ ಹೊಸ ಕಾಯ್ದೆಯನ್ನು ಜಾರಿಗೆ …
Read More »ಧಾರವಾಡದಲ್ಲಿಂದು ಒಂದೇ ದಿನ ನಾಲ್ಕು ಕೊರೊನಾ ಪ್ರಕರಣಗಳು…..
ಧಾರವಾಡ: ಕಳೆದ ವಾರದ ಕೊನೆಯವರೆಗೂ ಯಾವುದೇ ಹೊಸ ಕೇಸ್ ಇಲ್ಲದೆ ತಣ್ಣಗಾಗಿದ್ದ ಧಾರವಾಡ ಜಿಲ್ಲೆಯಲ್ಲಿಗ ಕೊರೊನಾ ರಣಕೇಕೆ ಮತ್ತೆ ಶುರುವಾಗಿದ್ದು, ಒಂದೇ ದಿನ ನಾಲ್ವರಿಗೆ ಕೊರೊನಾ ಸೋಂಕು ತಗುಲಿರೋದು ದೃಢವಾಗಿದೆ. ಇಂದು ದೃಢ ಪಟ್ಟಿರುವ ನಾಲ್ಕು ಪ್ರಕರಣ ಪೈಕಿ ಒಬ್ಬರಿಗೆ ಸ್ಥಳೀಯ ಸಂಪರ್ಕದಿಂದ ಸೋಂಕು ತಗುಲಿರೋದು ಆಗಿದ್ರೆ, ಉಳಿದ ಮೂರೂ ಸಹ ಮಹಾರಾಷ್ಟ್ರ ಪ್ರಯಾಣದ ಹಿನ್ನೆಲೆ ಹೊಂದಿವೆ. ಮುಂಬೈನಿಂದ ಬಂದಿರುವ 39 ವರ್ಷದ ಪುರುಷ (ರೋಗಿ-1123) ಹಾಗೂ 28 ವರ್ಷದ …
Read More »ಒಂದೇ ವಿಡಿಯೋ – 20 ಕ್ಯಾಮೆರಾಮ್ಯಾನ್‍ಗಳಿಗೆ ಕೆಲಸ ಕೊಟ್ಟ ಸೃಜನ್….
ಬೆಂಗಳೂರು: ಲಾಕ್‍ಡೌನ್‍ನಿಂದ ಚಿತ್ರರಂಗದ ಕೆಲಸಗಳು ಸ್ಥಗಿತವಾಗಿವೆ. ಇದರಿಂದ ಕಲಾವಿದರು, ಕ್ಯಾಮೆರಾಮ್ಯಾನ್‍ಗಳು ಸೇರಿದಂತೆ ಅನೇಕರು ಕೆಲಸವಿಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಆತ್ಮನಿರ್ಭರ್ ಭಾರತಕ್ಕೆ ಕೈ ಜೋಡಿಸುವ ಮೂಲಕ ಕಲಾವಿದರಿಗೆ ಸಹಾಯ ಮಾಡಿದ್ದಾರೆ. ನಟ ಸೃಜನ್ ಲೋಕೇಶ್ ಚಿತ್ರರಂಗದ ಕೆಲಸಗಳು ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಮನೆಯಲ್ಲಿ ಕ್ರಿಯೇಟಿವ್ ವಿಡಿಯೋ ತಯಾರಿಸಿದ್ದಾರೆ. 20 ಕ್ಯಾಮೆರಾಮ್ಯಾನ್‍ಗಳನ್ನು ಬಳಸಿ ಈ ವಿಡಿಯೋ ತಯಾರಿಸಿದ್ದು, ಕ್ಯಾಮೆರಾ ವಿಭಾಗದವರಿಗೆ ಕೆಲಸ ಸೃಷ್ಟಿಸಬೇಕೆಂಬ ಉದ್ದೇಶದಿಂದ ಈ ರೀತಿ …
Read More »ಮೇ 31ರವರೆಗೂ ಲಾಕ್‍ಡೌನ್ ವಿಸ್ತರಿಸಿದ ಮಹಾರಾಷ್ಟ್ರ ಸರ್ಕಾರ………..
ಮುಂಬೈ: ಮಹಾರಾಷ್ಟ್ರ ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ಜನರಿಗೆ ಕೊರೊನಾ ವೈರಸ್ ತಗುಲಿ ಆತಂಕ ಸೃಷ್ಟಿಸಿದ ಹಿನ್ನೆಲೆ ಮೇ 31ರ ಮಧ್ಯರಾತ್ರಿಯವರೆಗೂ ಲಾಕ್‍ಡೌನ್ ವಿಸ್ತರಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರವು ಆದೇಶ ಹೊರಡಿಸಿದೆ. ಇತ್ತ ತಮಿಳುನಾಡು, ಪಂಜಾಬ್ ಹಾಗೂ ಪಶ್ಚಿಮ ಬಂಗಾಳದಲ್ಲೂ ಲಾಕ್‍ಡೌನ್ ಅನ್ನು ಮೇ 31ರ ವರೆಗೆ ವಿಸ್ತರಿಸಲಾಗಿದೆ. ಮಹಾರಾಷ್ಟ್ರ ಸರ್ಕಾರವು ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ಸಾಂಕ್ರಾಮಿಕ ರೋಗ ಕಾಯ್ದೆ 1898ರ ಅಡಿ ಮೇ 17ರ …
Read More »ಮೇ 31ರವರೆಗೆ ಲಾಕ್‍ಡೌನ್ ವಿಸ್ತರಣೆ,, ಕೆಲವೇ ಕ್ಷಣಗಳಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ
ನವದೆಹಲಿ: ಮೇ 31ರವರೆಗೆ ಲಾಕ್‍ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಇಂದು ಮಧ್ಯರಾತ್ರಿಯಿಂದಲೇ ಹೊಸ ಲಾಕ್‍ಡೌನ್ ಆರಂಭವಾಗಲಿದೆ. ಮೂರನೇ ಹಂತದ ಲಾಕ್‍ಡೌನ್ ಇಂದು ಅಂತ್ಯವಾಗಲಿದೆ. ಇಡೀ ದೇಶದಾದ್ಯಂತ ಎರಡು ವಾರಗಳ ಕಾಲ ಲಾಕ್‍ಡೌನ್ ವಿಸ್ತರಣೆಯಾಗಲಿದ್ದು, ಕೆಲವೇ ಕ್ಷಣಗಳಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. ಹೊಸ ಲಾಕ್‍ಡೌನ್ ಹೊಸ ರೀತಿಯಲ್ಲಿ ಇರಲಿದೆ ಅಂತ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಸುಳಿವು ನೀಡಿದ್ದು, ಕೇಂದ್ರ ಸರ್ಕಾರದ ಲೆಕ್ಕಾಚಾರ ಹೇಗಿರಲಿದೆ ಅನ್ನೋದು …
Read More »ನಾಳೆಯಿಂದ ಬಸ್ ಸಂಚಾರ ಆರಂಭ..? ಕೆಎಸ್‌ಆರ್‌ಟಿಸಿಯಿಂದ ಸಕಲ ಸಿದ್ಧತೆ ………
ಬೆಂಗಳೂರು, ಮೇ17-ಕೇಂದ್ರ ಸರ್ಕಾರದ ಮಾರ್ಗಸೂಚಿ ನೀರಿಕ್ಷೆಯಲ್ಲಿರುವ ಸಾರಿಗೆ ಸಂಸ್ಥೆಗಳು ಬಸ್ ಸಂಚಾರ ಆರಂಭಸಲು ಸಿದ್ಧತೆ ಮಾಡಿಕೊಂಡಿವೆ. ಇತ್ತ ಸಾರ್ವಜನಿಕರು ಕೂಡ ಪ್ರಯಾಣ ಆರಂಭಿಸಲು ಸಿದ್ಧತೆಯಲ್ಲಿ ತೊಡಗಿದ್ದಾರೆ. ಲಾಕ್‍ಡೌನ್ ಸಡಿಲಿಕೆಯಾಗಿರುವ ಹಿನ್ನೆಲೆಯಲ್ಲಿ ಕೋವಿಡ್-19 ಹರಡುವಿಕೆ ತಡೆಯಲು ಕೇಂದ್ರ ಸರ್ಕಾರ ಹೊರಡಿಸುವ ಮಾರ್ಗಸೂಚಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರೆ, ನಾಳೆಯಿಂದ ಸಾರಿಗೆ ಸಂಸ್ಥೆ ಬಸ್ ಸಂಚಾರ ಆರಂಭಿಸಲಿವೆ. ಕಳೆದ 54 ದಿನಗಳಿಂದ ತುರ್ತು ಹಾಗೂ ಅಗತ್ಯ ಸೇವೆ ಹೊರತುಪಡಿಸಿ ನಗರ ಸಾರಿಗೆ ಸೇರಿದಂತೆ …
Read More »
Laxmi News 24×7