ಬೆಂಗಳೂರು: ಇಂದು 14 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆಯಾಗಿದೆ. ಬೆಳಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ, ದಾವಣಗೆರೆ 3, ಬೀದರ್ 2, ಬಾಗಲಕೋಟೆ 2, ಕಲಬುರಗಿ 1, ಮಂಡ್ಯ 1, ಹಾವೇರಿ 1 ಮತ್ತು ವಿಜಯಪುರದಲ್ಲಿ 1, ಹಾವೇರಿ 1, ಆಂಧ್ರದ ಮೂಲದ ವ್ಯಕ್ತಿಯಿಂದ ಆತನ ಪತ್ನಿಗೆ, ಬೆಂಗಳೂರಿನಲ್ಲಿ 1 ಹೊಸ ಕೊರೊನಾ ಪ್ರಕರಣಗಳು …
Read More »Monthly Archives: ಮೇ 2020
ಹೋಟೆಲ್‍ನ ಕ್ವಾರಂಟೈನ್ ಘಟಕ ಮಾಡುತ್ತಾರೆಂದು ವಿಷಯ ತಿಳಿದು ಹೋಟೆಲ್ ಸಿಬ್ಬಂದಿಗಳು ಮೊಬೈಲ್ ಸ್ವಿಚ್
ಚಿಕ್ಕಮಗಳೂರು: ಹೋಟೆಲ್‍ನ ಕ್ವಾರಂಟೈನ್ ಘಟಕ ಮಾಡುತ್ತಾರೆಂದು ವಿಷಯ ತಿಳಿದು ಹೋಟೆಲ್ ಸಿಬ್ಬಂದಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಹೋಗಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಕೋಟೆ ಬಡಾವಣೆಯಲ್ಲಿರೋ ವೈಟ್ ಫೆದರ್ ಹೋಟೆಲ್‍ನಲ್ಲಿ ವಿದೇಶ ಹಾಗೂ ಹೊರರಾಜ್ಯ ಬಂದ ಪ್ರಯಾಣಿಕರಿಗೆ ಕ್ವಾರಂಟೈನ್ ಘಟಕಕ್ಕೆ ಜಿಲ್ಲಾಡಳಿತ ಚಿಂತಿಸಿತ್ತು. ಈ ವಿಷಯ ತಿಳಿದ ಕೂಡಲೇ ಹೋಟೆಲ್ ಸಿಬ್ಬಂದಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಇತ್ತ ಈ ಹೋಟೆಲ್‍ನಲ್ಲಿ ಕ್ವಾರಂಟೈನ್ ಘಟಕ ಮಾಡಲು ಸ್ಥಳೀಯರು ಕೂಡ …
Read More »ಬೆಂಗ್ಳೂರು ಹೋಟಿಲಿನಲ್ಲಿ ಕ್ವಾರಂಟೈನ್ – 1 ದಿನಕ್ಕೆ ಊಟ, ತಿಂಡಿ, ಬಾಡಿಗೆ ಎಷ್ಟು?
ಬೆಂಗಳೂರು: ವಿದೇಶದಿಂದ ಕರ್ನಾಟಕಕ್ಕೆ ಆಗಮಿಸುತ್ತಿರುವ 6,100 ಮಂದಿ ಕನ್ನಡಿಗರನ್ನು ಕ್ವಾರಂಟೈನ್ ಮಾಡಲು ಸರ್ಕಾರ ಹೋಟೆಲ್ ಗಳನ್ನು ಬುಕ್ ಮಾಡಿದೆ. ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲಾಧಿಕಾರಿ ಮತ್ತು ಬಿಬಿಎಂಪಿ ಆಯುಕ್ತರು ಈ ವ್ಯವಸ್ಥೆ ಮಾಡಿದ್ದಾರೆ. 18 ಫೈವ್ ಸ್ಟಾರ್, 23 ತ್ರಿಸ್ಟಾರ್, 18 ಬಜೆಟ್ ಹೋಟೆಲ್ ಸೇರಿದಂತೆ ಒಟ್ಟು 6,008 ರೂಂ ಗಳನ್ನು ಬುಕ್ ಮಾಡಲಾಗಿದ್ದು, ಕ್ವಾರಂಟೈನ್ ವೆಚ್ಚವನ್ನು ಅವರೇ ತುಂಬಬೇಕಾಗುತ್ತದೆ. ಮೊದಲು ಬಂದವರು ತಮ್ಮ ಆಯ್ಕೆ ಅನ್ವಯ ಹೋಟೆಲಿಗೆ ಕರೆದುಕೊಂಡು …
Read More »ಹೃದಯಾಘಾತದಿಂದ ಸಾವನ್ನಪ್ಪಿದ್ದ ಮಂಡ್ಯ ಜಿಲ್ಲೆಯ ಮಹಿಳೆಯ ಅಂತ್ಯಸಂಸ್ಕಾರ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗ ಬೆಳಗಾವಿಯಲ್ಲಿ
ಬೆಳಗಾವಿ: ಹೃದಯಾಘಾತದಿಂದ ಸಾವನ್ನಪ್ಪಿದ್ದ ಮಂಡ್ಯ ಜಿಲ್ಲೆಯ ಮಹಿಳೆಯ ಅಂತ್ಯಸಂಸ್ಕಾರ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗ ಬೆಳಗಾವಿಯಲ್ಲಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಪುಣೆಯಲ್ಲಿ ಟೆಕ್ಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಂಡ್ಯ ಜಿಲ್ಲೆಯ ಮುದ್ದೂರು ತಾಲೂಕಿನ ತೈಲೂರು ಗ್ರಾಮದ ನಿವಾಸಿ ಸೌಮ್ಯ ಟಿ.ಎ ಎರಡು ದಿನಗಳ ಹಿಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಮೃತ ಮಹಿಳೆ ಪತಿ ಶರತ್ ತನ್ನ ಪತ್ನಿ ಮೃತ ದೇಹವನ್ನು ತನ್ನೂರಿಗೆ ತೆಗೆದುಕೊಂದು ಬರಲು ಮಂಡ್ಯ ಜಿಲ್ಲಾಡಳಿತಕ್ಕೆ ಅನುಮತಿ ಕೇಳಿದ್ದಾರೆ. ಆದರೆ ಮೃತ …
Read More »ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯನನ್ನು ಹರಿಹರ ತಾಲ್ಲೂಕಿನ ಮಲೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯನನ್ನು ಹರಿಹರ ತಾಲ್ಲೂಕಿನ ಮಲೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ. ಮಲೆಬೆನ್ನೂರು ಪುರಸಭೆಯ ಕಾಂಗ್ರೆಸ್ ಸದಸ್ಯ ಅಬ್ದುಲ್ ಲತೀಫ್ ಮತ್ತು ಆತನ ಸ್ನೇಹಿತರು ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಈ ಜಾಲದ ಖಚಿತ ಮಾಹಿತಿಯನ್ನು ಆಧರಿಸಿ ಮಲೆಬೆನ್ನೂರು ಪೊಲೀಸರು ದಾಳಿ ನಡೆಸಿ ಆರೋಪಿಗಳಾದ ಅಬ್ದುಲ್ ಲತೀಫ್, ಸರ್ ಅಲಿ, ರಜಾಕ್, ನಧೀರ್ ನನ್ನು ಬಂಧಿಸಿದ್ದಾರೆ. ರಾಜ್ಯ ಸರ್ಕಾರದಿಂದ ಬಡವರಿಗೆ …
Read More »ವುಹಾನ್ ನಗರದಲ್ಲಿ ಮತ್ತೆ ಸೋಂಕು, ಕ್ಲಸ್ಟರ್ ರಚನೆ – ಶಾಂಘೈ ಡಿಸ್ನಿ ಲ್ಯಾಂಡ್ ಓಪನ್
ಬೀಜಿಂಗ್: ಕೋವಿಡ್ 19 ಮೂಲ ನೆಲೆ ವುಹಾನ್ ನಗರದಲ್ಲಿ ಮತ್ತೆ ಐದು ಮಂದಿಯಲ್ಲಿ ಸೊಂಕು ಕಾಣಿಸಿಕೊಂಡಿದೆ. ಒಂದೇ ಕಾಂಪೌಂಡಿನ 5 ಮಂದಿಯಲ್ಲಿ ಸೋಂಕು ಕಾಣಿಸಿದ ಹಿನ್ನೆಲೆಯಲ್ಲಿ ಆ ಜಾಗವನ್ನು ಕ್ಲಸ್ಟರ್ ಎಂದು ಗುರುತಿಸಲಾಗಿದೆ. ಒಂದು ತಿಂಗಳ ಹಿಂದೆ ವುಹಾನ್ ನಗರದಲ್ಲಿ ಲಾಕೌಡೌನ್ ತೆರೆಯಲಾಗಿತ್ತು. ಈಗ ಮತ್ತೆ 5 ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕ್ಲಸ್ಟರ್ ರಚಿಸಲಾಗಿದೆ. ಈ ಹಿಂದೆ ಏಪ್ರಿಲ್ 3 ರಂದು ವುಹಾನ್ ನಗರದಲ್ಲಿ ಕೊನೆಯದಾಗಿ ಸೋಂಕು ಕಾಣಿಸಿಕೊಂಡಿತ್ತು. ಆದಾದ ಬಳಿಕ …
Read More »ಕೋವಿಡ್-೧೯: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸಭೆ……..
ಕೋವಿಡ್-೧೯: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸಭೆ ಗಡಿ ಪ್ರವೇಶಿಸುವ ಜನರನ್ನು ಅವರ ಜಿಲ್ಲೆಗಳಿಗೆ ಕಳುಹಿಸಲು ನಿರ್ದೇಶನ ಬೆಳಗಾವಿ,-ನೆರೆಯ ರಾಜ್ಯದಿಂದ ಬೆಳಗಾವಿ ಜಿಲ್ಲೆಗೆ ಆಗಮಿಸುವ ಜನರನ್ನು ತಪಾಸಣೆ ನಡೆಸಿದ ಬಳಿಕ ಅವರನ್ನು ಸಂಬಂಧಿಸಿದ ಜಿಲ್ಲೆಗಳಲ್ಲಿ ಕ್ವಾರಂಟೈನ್ ಮಾಡುವ ಅಗತ್ಯವಿದೆ ಎಂದು ಈಗಾಗಲೇ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಲಾಗಿದೆ. ಆದ್ದರಿಂದ ಗಡಿ ಜಿಲ್ಲೆ ಬೆಳಗಾವಿಗೆ ಆಗಮಿಸುವ ಇತರೆ ಜಿಲ್ಲೆಯ ಜನರನ್ನು ಆಯಾ ಜಿಲ್ಲೆಯ ನೋಡಲ್ ಅಧಿಕಾರಿಗಳ ಮೂಲಕ ಕಳಿಸಿಕೊಡಬೇಕು ಎಂದು …
Read More »ಮಾಜಿ ಸಂಸದ ರಾಜಾರಂಗಪ್ಪ ನಾಯಕ ಇನ್ನಿಲ್ಲ……………
ರಾಯಚೂರು: ಜಿಲ್ಲೆಯ ಮಾಜಿ ಸಂಸದ ರಾಜಾರಂಗಪ್ಪ ನಾಯಕ(61)ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಂಸದರು ಯಾದಗಿರಿ ಜಿಲ್ಲೆಯ ಸುರಪುರದ ವಸಂತಮಹಲ್ ನಲ್ಲಿ ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ. 1996 ರಲ್ಲಿ ಜೆಡಿಎಸ್ ಪಕ್ಷದಿಂದ ರಾಯಚೂರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಇವರು ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಸ್ವಗ್ರಾಮ ಸುರಪುರ ತಾಲೂಕಿನ ಮುಷ್ಠಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಮೃತರ ಅಂತ್ಯಕ್ರಿಯೆ ನೆರವೇರಲಿದೆ.
Read More »ಅಣ್ಣನನ್ನು ಕೊಂದು ಹುಣಸೆಮರಕ್ಕೆ ನೇತು ಹಾಕಿದ ತಮ್ಮ……..
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ತಮ್ಮನೊಬ್ಬ ತನ್ನ ಸ್ವಂತ ಅಣ್ಣನನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಮಾವನೂರಿನಲ್ಲಿ ನಡೆದಿದೆ. ಅಣ್ಣ ಮಂಜುನಾಥ ಸುಳ್ಳದ ಕೊಲೆಯಾದ ವ್ಯಕ್ತಿ. ಆರೋಪಿಯನ್ನು ಕಲ್ಮೇಶ ಸುಳ್ಳದ ಎಂದು ಗುರುತಿಸಲಾಗಿದೆ. ಮೇ 9ರಂದು ಪಾನಮತ್ತನಾಗಿ ಮನೆಗೆ ಬಂದಿದ್ದ ಮಂಜುನಾಥ, ಆಸ್ತಿ ಮತ್ತು ಮನೆಯಲ್ಲಿ ತನಗೆ ಪಾಲು ಕೊಡುವಂತೆ ತಾಯಿ ಶಿವಲಿಂಗವ್ವ ಜೊತೆ ಜಗಳವಾಡಿ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವಿಚಾರ ತಿಳಿದು ಕೆರಳಿದ ತಮ್ಮ ಕಲ್ಮೇಶ ಅಣ್ಣನ …
Read More »ಎಣ್ಣೆ ಪಾರ್ಟಿಗೆ ಸೈಡ್ಸ್ ತರಲಿಲ್ಲ ಎಂದು ಸಿಟ್ಟಿಗೆದ್ದ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಕೊಲೆ
ಚೆನ್ನೈ:ಎಣ್ಣೆ ಪಾರ್ಟಿಗೆ ಸೈಡ್ಸ್ ತರಲಿಲ್ಲ ಎಂದು ಸಿಟ್ಟಿಗೆದ್ದ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು ವಾಸು(38) ಎಂದು ಗುರುತಿಸಲಾಗಿದ್ದು, ವಿನಯಗಂ(43) ಕೊಲೆಯಾದ ದುರ್ದೈವಿಯಾಗಿದ್ದಾನೆ. ತಮಿಳುನಾಡಿನ ಚೆಂಗಲ್ಪಟ್ಟುವಿನ ಗುಡುವಾಂಚೇರಿ ಪಟ್ಟಣದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ವಾಸು ಹಾಗೂ ವಿನಯಗಂ ಇಬ್ಬರೂ ಆತ್ಮೀಯ ಸ್ನೇಹಿತರಾಗಿದ್ದು, ಹೂವು ಮಾರುವುದು, ಕ್ಯಾಬ್ ಓಡಿಸುವುದು ಹಾಗೂ ರಿಯಲ್ ಎಸ್ಟೇಟ್ ಬ್ರೋಕರ್ಸ್ ಆಗಿದ್ದರು. ಲಾಕ್‍ಡೌನ್ ಸಡಿಲಿಕೆ …
Read More »
Laxmi News 24×7