Breaking News

Monthly Archives: ಮೇ 2020

ಕೇರಳ ಮೂಲದ ವಿದ್ಯಾರ್ಥಿನಿಯರು ತಮ್ಮ ಸ್ವಂತ ನಾಡಿಗೆ ತೆರಳಲು ಶಾಸಕಿ ಲಕ್ಷ್ಮಿ ಹೆಬ್ಬಾಳರ್ ನೆರವಾಗಿದ್ದಾರೆ.

ಬೆಳಗಾವಿ : ಲಾಕ್ ಡೌನ್ ನಿಂದಾಗಿ ಸಿಕ್ಕಿಕೊಂಡಿದ್ದ ಕೇರಳ ಮೂಲದ ವಿದ್ಯಾರ್ಥಿನಿಯರು ತಮ್ಮ ಸ್ವಂತ ನಾಡಿಗೆ ತೆರಳಲು ಶಾಸಕಿ ಲಕ್ಷ್ಮಿ ಹೆಬ್ಬಾಳರ್ ನೆರವಾಗಿದ್ದಾರೆ. ಬೈಲಹೊಂಗಲ ತಾಲೂಕು ಇಂಚಲದಲ್ಲಿ ಕಾಲೇಜು ಓದುತ್ತಿರುವ ವಿದ್ಯಾರ್ಥಿನಿಯರು ಲಾಕ್ ಡೌನ್ ಆದಾಗಿನಿಂದ ಕಾಲೇಜೂ ಇಲ್ಲದೆ, ಊರಿಗೂ ತೆರಳಲಾಗದೆ ಕಂಗಾಲಾಗಿದ್ದರು. ಅವರಿಗೆ ಕೇರಳಕ್ಕೆ ತೆರಳಲು ಸ್ವಂತ ಖರ್ಚಿನಲ್ಲಿ ಬಸ್ ವ್ಯವಸ್ಥೆ ಮಾಡಿದ ಹೆಬ್ಬಾಳಕರ್, ಅದಕ್ಕೆ ಅಗತ್ಯವಾದ ಪಾಸ್ ಸೇರಿದಂತೆ ಎಲ್ಲವ್ಯವಸ್ತೆ ಮಾಡಿ ಕಳುಹಿಸಿಕೊಟ್ಟರು. ಲಕ್ಷ್ಮಿ ಹೆಬ್ಬಾಳಕರ್ ಸಹಾಯಕ್ಕೆ …

Read More »

ಸತೀಶ ಜಾರಕಿಹೊಳಿ ಅವರ‌ ಸೂಚನೆಯಂತೆ ನಗರದ 21 ಪೊಲೀಸ್ ಠಾಣೆಗಳಿಗೆ ಸ್ಯಾನಿಟೈಜರ್, ಮಾಸ್ಕ್ ಸೇರಿ ಹಣ್ಣುಗಳನ್ನು ವಿತರಿಸಿದರು.

ಬೆಳಗಾವಿ: ಪೊಲೀಸ್ ಕಮಿಷನರೆಟ್, ವರಿಷ್ಠಾಧಿಕಾರಿ ಕಚೇರಿಗಳು ಸೇರಿ ನಗರದ 21 ಪೊಲೀಸ್ ಠಾಣೆಗಳಿಗೆ ಸ್ಯಾನಿಟೈಜರ್, ಮಾಸ್ಕ್ ಸೇರಿ ಹಣ್ಣುಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ‌ ಸೂಚನೆಯಂತೆ ವಿತರಿಸಿದರು. ಕೊರೋನಾ ವಿರುದ್ದ ಜೀವ ಪಣಕ್ಕಿಟ್ಟು ಹೋರಾಡುತ್ತಿರುವ ಪೊಲೀಸ್ ಇಲಾಖೆ ಯವರ ಸನ್ಮಾನದಲ್ಲಿ ಸತೀಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯಾದ್ಯಂತ ಈಗಾಗಲೇ ಸ್ಯಾನಿಟೈಜರ್ ಮತ್ತು ಮಾಸ್ಕ್ ಗಳನ್ನು ವಿತರಿಸಲಾಗಿದೆ. ಅದರ ಭಾಗವಾಗಿ ಇಂದು ನಗರದ ಎಲ್ಲ ಪೊಲೀಸ್ ಕಚೇರಿಗಳಲ್ಲಿ ಮಾಸ್ಕ್ ಸ್ಯಾನಿಟೈಜರ್ …

Read More »

ಮದ್ಯ ಮಾರಾಟಕ್ಕೆ ತಡೆ ನೀಡಲು ಸಾಧ್ಯವೇ ಇಲ್ಲ: ಸುಪ್ರೀಂಕೋರ್ಟ್,ಆದರೆ ಸಾಮಾಜಿಕ ಅಂತರ ಕಾಪಾಡಿ……….

ನವದೆಹಲಿ: ದೇಶಾದ್ಯಂತದ ಮದ್ಯದಂಗಡಿಗಳಲ್ಲಿ ಜನಸಂದಣಿ ಕಡಿಮೆಗೊಳಿಸಲು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಮಯವನ್ನು ಜಾರಿಗೊಳಿಸಲು ಹೋಮ್ ಡೆಲಿವರಿಯನ್ನು ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸಲಹೆ ನೀಡಿದೆ. ಕೊರೊನಾ ಲಾಕ್‍ಡೌನ್ ಸಮಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದನ್ನು ಪ್ರಶ್ನಿಸಿ ಕೆಲ ರಾಜ್ಯಗಳು ಸುಪ್ರೀಂ ಕೋರ್ಟಿಗೆ ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ) ಸಲ್ಲಿಸಿದ್ದವು. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್ ಕಿಶನ್ ಕೌಲ್ ಮತ್ತು ಬಿ.ಆರ್.ಗವಾಯಿ ಅವರ ನೇತೃತ್ವದ ನ್ಯಾಯ ಪೀಠವು ವಿಡಿಯೋ …

Read More »

ಹೆಮ್ಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ. ಇಂದು 45 ಮಂದಿಗೆ ಕೊರೊನಾ

ಭಟ್ಕಳದಲ್ಲಿ 5 ತಿಂಗಳ ಕಂದಮ್ಮ, 3 ವರ್ಷದ ಬಾಲಕಿ ಸೇರಿ 12 ಮಂದಿಗೆ ಸೋಂಕು – ಬೆಳಗಾವಿ, ದಾವಣಗೆರೆಯಲ್ಲಿ ಕೊರೊನಾ ಸ್ಫೋಟ ಇಂದು 45 ಮಂದಿಗೆ ಕೊರೊನಾ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ.     ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ. ಇಂದು 45 ಮಂದಿಗೆ ಕೊರೊನಾ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ. ರಾಜ್ಯ ಕುಟುಂಬ ಕಲ್ಯಾಣ ಹಾಗೂ …

Read More »

BIG BREAKING-ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ 11 ಪಾಸಿಟೀವ್ ಕೇಸ್ ಪತ್ತೆ

ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೊರೋನಾ ಬಾಂಬ್ ಸ್ಪೋಟ ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ 11 ಪಾಸಿಟೀವ್ ಕೇಸ್ ಪತ್ತೆ *ಹಿರೇಬಾಗೇವಾಡಿ ಗ್ರಾಮದಲ್ಲಿ 10 ರಾಯಬಾಗ ಕುಡಚಿಯಲ್ಲಿ 1 ಪಾಸಿಟೀವ್ ಕೇಸ್ ಪತ್ತೆ ಬೆಳಗಾವಿ ಜಿಲ್ಲೆಯಲ್ಲಿ 85 ಕ್ಕೇರಿದ ಸೊಂಕಿತರ ಸಂಖ್ಯೆ

Read More »

ಬೆಂಗಳೂರಿನಲ್ಲಿ ಮತ್ತೊಂದು ಹತ್ಯೆ; ಕುಡಿದ ಅಮಲಿನಲ್ಲಿ ಕೊಲೆಯಾದ ರೌಡಿಶೀಟರ್‌

ಬ್ಯಾಟರಾಯನಪುರ ರೌಡಿಶೀಟರ್‌ ಅಶೋಕ್‌ ನಿನ್ನೆ ಕುಡಿದ ಅಮಲಿನಲ್ಲಿದ್ದಾಗ ದಾಳಿ ಮಾಡಿದ್ದ ಕೆಲವರು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿಯೇ ಈ ಕೊಲೆ ನಡೆದಿರಬಹುದು ಎನ್ನಲಾಗುತ್ತಿದೆ. ಬೆಂಗಳೂರು (ಮೇ 08); ಕಳೆದ 47 ದಿನಗಳಿಂದ ಶಾಂತವಾಗಿದ್ದ ಬೆಂಗಳೂರು ಕ್ರೈಂ ಲೋಕ ಲಾಕ್‌ಡೌನ್ ಅನ್ನು ಸಡಿಲಿಸಿ ಮದ್ಯ ಮಾರಾಟಕ್ಕೆ ಅವಕಾಶ ನೀಡುತ್ತಿದ್ದಂತೆ ಮತ್ತೆ ಕ್ರಿಯಾಶೀಲವಾಗಿದೆ. ನಿನ್ನೆ ತಡರಾತ್ರಿ ಕುಡಿದ ಮತ್ತಿನಲ್ಲಿದ್ದ ರೌಡಿಶೀಟರ್‌ ಅಶೋಕ್‌ ಅಲಿಯಾಸ್ ದಡಿಯಾ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ …

Read More »

ಹಳಿ ಮೇಲೆ ಮಲಗಿದ್ದ 14 ಮಂದಿ ಕೂಲಿ ಕಾರ್ಮಿಕರ ಮೇಲೆ ಹರಿದ ರೈಲು,ಅಪ್ಪಚ್ಚಿಯಾದ ಮಕ್ಕಳು, ಮಹಿಳೆಯರ ಮೃತ ದೇಹಗಳು

ಮುಂಬೈ: ಹಳಿ ಮೇಲೆ ಮಲಗಿದ್ದ 14 ಮಂದಿ ಕೂಲಿ ಕಾರ್ಮಿಕರ ಮೇಲೆ ರೈಲು ಹರಿದ ದಾರುಣ ಘಟನೆ ಮಹಾರಾಷ್ಟ್ರದ ಔರಂಗಾಬಾದ್‍ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಕ್ಕಳು, ಮಹಿಳೆಯರು ಸೇರಿದಂತೆ 15 ಜನ ವಲಸೆ ಕಾರ್ಮಿಕರು ಔರಂಗಾಬಾದ್-ಜಲ್ನಾ ರೈಲ್ವೆ ಟ್ರ್ಯಾಕ್ ಮೇಲೆ ಮಲಗಿದ್ದರು. ನಸುಕಿನ ಜಾವ 4 ಗಂಟೆಗೆ ಬಂದ ಗೂಡ್ಸ್ ರೈಲು ಕಾರ್ಮಿಕರ ಮೇಲೆ ಹರಿದಿದೆ. ಪರಿಣಾಮ ಮಕ್ಕಳು, ಕಾರ್ಮಿಕರ ದೇಹ ತುಂಡು ತುಂಡಾಗಿ ಟ್ರ್ಯಾಕ್ ಮೇಲೆ, ಕೆಳಗೆ ಬಿದ್ದಿವೆ.ಕರ್ಮದ್ …

Read More »

ಬೆಂಗ್ಳೂರಿಗರೇ ಎಚ್ಚರ- ಮೇ ಅಂತ್ಯಕ್ಕೆ ಹೆಚ್ಚಾಗಲಿದೆ ಕೊರೊನಾ ಅಬ್ಬರ……………

ಬೆಂಗಳೂರು: ಭಾರತದಲ್ಲಿ ಜೂನ್, ಜುಲೈ ಅಂತ್ಯಕ್ಕೆ ಕೊರೊನಾ ಇನ್ನಿಲ್ಲದಂತೆ ಬಾಧಿಸಲಿದೆ ಅಂತ ಎಚ್ಚರಿಸಲಾಗಿದೆ. ಆದರೆ ಬೆಂಗಳೂರಿಗೆ ಮಾತ್ರ ಮೇ ತಿಂಗಳೇ ಕಂಟಕವಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಮುಂದಿನ ವಾರ ಬೆಂಗಳೂರಿನಲ್ಲಿ ಮತ್ತಷ್ಟು ಕೊರೊನಾ ಹೆಚ್ಚಳವಾಗಲಿದ್ದು, ಮೇ ಅಂತ್ಯಕ್ಕೆ 5 ಸಾವಿರ ಪ್ರಕರಣ ಪತ್ತೆಯಾಗಬಹುದು ಅಂತ ತಜ್ಞರು ಎಚ್ಚರಿಕೆ ಕೊಟ್ಟಿದ್ದಾರೆ. ಲಾಕ್‍ಡೌನ್ ಸಡಿಲಿಕೆ ಆಗಿ ನಾಲ್ಕು ದಿನದಲ್ಲಿ ಅಂತಹ ಕಂಟಕ ಬೆಂಗಳೂರಿಗೆ ಎದುರಾಗಿಲ್ಲ. ಆದರೆ ಮುಂದಿನ ವಾರ ಹೈ ರಿಸ್ಕ್ …

Read More »

ಕೋವಿಡ್-19 ವಾರಿಯರ್ಸ್‌ಗೆ ಆರತಿ ಎತ್ತಿ, ಹೂಮಳೆಗೈದ ಗುರೂಜಿ……

ಚಿಕ್ಕಮಗಳೂರು: ಕೊರೊನಾ ವಾರಿಯರ್ಸ್ ಗಳಿಗೆ ಗೌರಿಗದ್ದೆ ದತ್ತಶ್ರಮದ ಅವಧೂತ ವಿನಯ್ ಗುರೂಜಿ ಆರತಿ ಎತ್ತಿ, ಹೂಮಳೆಗೈದಿದ್ದಾರೆ. ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ದತ್ತಾಶ್ರಮದಲ್ಲಿ ಬುದ್ಧ ಪೂರ್ಣಿಮೆಯ ಅಂಗವಾಗಿ ಕೊರೊನಾ ವಾರಿಯರ್ಸ್ ಗಳಿಗೆ ಗೌರವ ಸಮರ್ಪಿಸಿದರು. ಹೆಲ್ತ್ ವಾರಿಯರ್ಸ್‍ಗೆ ವಿನಯ್ ಗುರೂಜಿ ಅವರು ಆರತಿ ಎತ್ತಿದರು. ಬಳಿಕ ಮೇಲ್ಭಾಗದಲ್ಲಿ ಕುಳಿತಿದ್ದ ಅವರ ಬಳಿಗೆ ಹೋಗಿ ಹೂಗಳನ್ನ ಸುರಿದು ಪುಷ್ಪಾರ್ಚನೆಯ ಮೂಲಕ ಗೌರವಿಸಿದ್ದಾರೆ. ಈ ವೇಳೆ ಮಾತನಾಡಿದ ವಿನಯ್ ಗುರೂಜಿ, ವೈದ್ಯರು, …

Read More »

ಮೈಸೂರಿನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿ ಸಿಕ್ಕಿ ಹಾಕಿಕೊಂಡಿದ್ದಾರೆ.

ಮೈಸೂರು: ಇಡೀ ದೇಶವೇ ಕೊರೊನಾ ವೈರಸ್ ಎಂಬ ಮಹಾಮಾರಿಯನ್ನು ಎದುರಿಸುತ್ತಿದೆ. ಈ ಮಧ್ಯೆ ಮೈಸೂರಿನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿ ಸಿಕ್ಕಿ ಹಾಕಿಕೊಂಡಿದ್ದಾರೆ. ಹೌದು. ಗುರುವಾರ ರಾತ್ರಿ ಖದೀಮರು ಸರಗಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡಿದ್ದಾರೆ. ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದ ಮೂವರು ಯುವಕರನ್ನು ಬಂಧಿಸಲಾಗಿದೆ. ಮಹದೇಶ್ವರ ಬಡಾವಣೆಯಲ್ಲಿ ಮಹಿಳೆಯಿಂದ ಚಿನ್ನದ ಸರ ಕದ್ದು ಪರಾರಿಯಾಗಿದ್ದಾರೆ. ನಂತರ ರಿಂಗ್‍ರಸ್ತೆ ಹಾಗೂ ಕಾರ್ಪೋರೇಷನ್ ಬ್ಯಾಂಕ್ ಬಳಿಯೂ ಸರಗಳ್ಳತನ ಮಾಡಿ ಪಲ್ಸರ್ ಬೈಕಿನಲ್ಲಿ ಕಳ್ಳರು ಪರಾರಿಯಾಗುತ್ತಿದ್ದರು. …

Read More »