Breaking News

Daily Archives: ಜೂನ್ 3, 2020

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಊಟೋಪಚಾರ ನೀಡಿ ಆರೈಕೆ ಮಾಡಿದ್ದ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಜಗಣಭೀ ಬಾಪುಲಾಲ್ ಪಟೇಲ್ ಅಜ್ಜಿ (108) ಇಂದು ನಿಧನ

ಚಿಕ್ಕೋಡಿ: ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಊಟೋಪಚಾರ ನೀಡಿ ಆರೈಕೆ ಮಾಡಿದ್ದ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಜಗಣಭೀ ಬಾಪುಲಾಲ್ ಪಟೇಲ್ ಅಜ್ಜಿ (108) ಇಂದು ನಿಧನರಾಗಿದ್ದಾರೆ. 1972ರಲ್ಲಿ ಮಹಾರಾಷ್ಟ್ರದ ಔರವಾಡ ಗ್ರಾಮದ ದೇವಸ್ಥಾನದ ಜಮೀನು ವಾದವನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಕೈಗೆತ್ತಿಕೊಂಡಿದ್ದರು. ಈ ಹಿನ್ನೆಲೆ ಚಿಕ್ಕೋಡಿಯ ಕರೋಶಿ ಗ್ರಾಮದಲ್ಲಿ ಅಂಬೇಡ್ಕರ್ ಅವರು 9 ದಿನ ತಂಗಿದ್ದರು. ಈ ವೇಳೆ ಅವರಿಗೆ ಜಗಣಭೀ ಅವರೇ ಊಟೋಪಚಾರದ ವ್ಯವಸ್ಥೆಯನ್ನು ಮಾಡಿದ್ದರು. ಅಂದು ಅಂಬೇಡ್ಕರ್ ಮುನ್ನಿ …

Read More »

ಸೋನಿಯಾ ಗಾಂಧಿ ಪ್ರಕರಣದಲ್ಲಿ ಪೊಲೀಸರ ಮೇಲೆ ಡಿಕೆಶಿ ಒತ್ತಡ ಆರೋಪ; ……….

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪೊಲೀಸರ ಮೇಲೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ. ಪೊಲೀಸರ  ತನಿಖೆಯಲ್ಲಿ ಮಧ್ಯ ಪ್ರವೇಶಿಸಿಸುವ ಯತ್ನ ಮಾಡುವ ಮೂಲಕ ಡಿಕೆಶಿ ಸೋನಿಯಾ ಗಾಂಧಿ ರಕ್ಷಣೆಗಾಗಿ ಪೊಲೀಸರ ಮೇಲೆ ಡಿಕೆಶಿ ಒತ್ತಡ ಹಾಕಿದ್ದಾರೆ ಎಂದು ವಕೀಲರಾದ ಯೋಗೇಂದ್ರ ಹೊಡಘಟ್ಟ ಹಾಗೂ ನರೇಂದ್ರ ಪಿ.ಆರ್ ಅವರು, ಸಿಎಂ, ಗೃಹ ಸಚಿವರು, ಡಿಜಿ/ಐಜಿಪಿ, ಬೆಂಗಳೂರು ಪೊಲೀಸ್ …

Read More »

ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಅವರ ಮಗ ನಿಖಿಲ್‌ಗೆ ಅನ್ವಯವಾಗಲ್ವ ಕಾನೂನು ?

ರಾಮನಗರ (ಜೂನ್‌ 03); ಕೊರೋನಾ ಪಿಡುಗು ಇಡೀ ರಾಷ್ಟ್ರವನ್ನೇ  ಭಯದ ವಾತಾವರಣಕ್ಕೆ ದೂಡಿದೆ. ಲಾಕ್‌ಡೌನ್‌ ಘೋಷಿಸಿಯೂ ಈ ಪೆಡಂಭೂತವನ್ನು ನಿಯಂತ್ರಿಸುವುದು ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಸರ್ಕಾರ ಜನರಲ್ಲಿ ಸಾಮಾಜಿಕ ಅಂತರದ ಕುರಿತು ಅರಿವು ಮೂಡಿಸುತ್ತಿದೆ. ಅಲ್ಲದೆ, ನಿಯಮವನ್ನೂ ರೂಪಿಸಲಾಗಿದೆ. ಆದರೆ, ಈ ನಿಯಮ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಅವರ ಮಗ ನಿಖಿಲ್‌ಗೆ ಅನ್ವಯವಾಗಲ್ವ? ಎಂಬ ಪ್ರಶ್ನೆ ಇದೀಗ ಮೂಡಿದೆ. ಚನ್ನಪಟ್ಟಣದಲ್ಲಿ ನಿನ್ನೆ ಮಾಜಿ ಸಿಎಂ ಕುಮಾರಸ್ವಾಮಿ ವಿವಿಧ ಕಾರ್ಯಕ್ರಮಗಳಲ್ಲಿ …

Read More »

ಸಿಎಂ ಸಂಧಿಸಿದ ಕತ್ತಿ; ಯಡಿಯೂರಪ್ಪ ಮೇಲಿನ ಮುನಿಸು ಮರೆತರಾ ಕತ್ತಿ?………..

ನಿನ್ನ ತಮ್ಮನಿಗೆ ರಾಜ್ಯಸಭೆಗೆ ಟಿಕೆಟ್ ಕೊಡುವುದು, ಬಿಡುವುದು ಪಕ್ಷದ ಹೈಕಮಾಂಡ್​ಗೆ ಬಿಟ್ಟಿದ್ದು. ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಿ ನಿನ್ನನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಾಗಿ ಉಮೇಶ್ ಕತ್ತಿಗೆ ಸಿಎಂ ಭರವಸೆ ನೀಡಿದ್ದಾರೆ. ಬೆಂಗಳೂರು(ಜೂನ್ 03): ಕಳೆದ ವಾರವಷ್ಟೇ ಶಾಸಕರನ್ನು ಸೇರಿಸಿಕೊಂಡು ಸರ್ಕಾರದ ವಿರುದ್ಧ ಸಭೆ ನಡೆಸಿದ್ದ ಬಿಜೆಪಿ ನಾಯಕ ಉಮೇಶ್ ಕತ್ತಿ ಇಂದು ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಅವರ ಜೊತೆ …

Read More »

ಆನ್‍ಲೈನ್ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ

ತಿರುವನಂತಪುರಂ: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಿಂದ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ಹೀಗಾಗಿ ಆನ್‍ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ. ಆದರೆ ಆನ್‍ಲೈನ್ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ವಾಲಂಚೇರಿ ಪಟ್ಟಣದ ನಿವಾಸಿ 14 ವರ್ಷದ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಮೃತ ವಿದ್ಯಾರ್ಥಿನಿ ಕುಟುಂಬದವರು ಬಡವರಾಗಿದ್ದು, ಯಾವುದೇ ಟಿವಿ ಅಥವಾ ಸ್ಮಾರ್ಟ್ ಫೋನ್ …

Read More »

BS Y ಭೇಟಿ ಯಾಗಿ ಅಭಿನಂದನೆ ಸಲ್ಲಿಸಿದ ಸಾಹುಕಾರರು ಹಾಗೂ, ಮಹೇಶಕುಮಟಳ್ಳಿ…..

ಬೆಂಗಳೂರು –  ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಜಲಸಂಪನ್ಮೂಲ ಸಚಿವ  ರಮೇಶ್ ಜಾರಕಿಹೊಳಿ‌ ಹಾಗೂ ಕೊಳಚೆ ನಿರ್ಮೂಲನಾ ಮಂಡಳಿಯ ನೂತನ ಅಧ್ಯಕ್ಷ ಮಹೇಶ ಕುಮಟಳ್ಳಿ ಬುಧವಾರ ಬೆಂಗಳೂರಿನಲ್ಲಿ  ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು  ಭೇಟಿಯಾಗಿ ತಮ್ಮ ನೇಮಕಕ್ಕೆ ಧನ್ಯವಾದ ಸಲ್ಲಿಸಿದರು. ಜಿಲ್ಲೆಯ ಸಮಗ್ರ ವಿಕಾಸಕ್ಕಾಗಿ ಹೆಚ್ಚಿನ ಅನುದಾನ ಸೇರಿದಂತೆ ಎಲ್ಲಾ ರೀತಿಯ ಸಹಕಾರ ಕೊಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು ಎಂದು ನಂತರ ರಮೇಶ ಜಾರಕಿಹೊಳಿ ತಿಳಿಸಿದರು. ಮುಖ್ಯಮಂತ್ರಿಗಳ ರಾಜಕೀಯ …

Read More »

ಮನೆಯಿಂದ ಹೊರ ಬರ್ತಿದ್ದಂತೆ ಬಿದ್ದ ಮರ- ವ್ಯಕ್ತಿ ಸಾವು

ಕಲಬುರಗಿ: ಮೈ ಮೇಲೆ ಮರ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕಲಬುರಗಿ ಹೊರವಲಯದಲ್ಲಿ ನಡೆದಿದೆ. ಕಲಬುರಗಿ ಹೊರವಲಯದ ಸೆಂಟ್ರಲ್ ಜೈಲು ಕ್ವಾರ್ಟರ್ಸ್‌ನಲ್ಲಿ ಈ ಘಟನೆ ನಡೆದಿದೆ. ಗೋವಿಂದ ಚೌವಾಣ್ (41) ಮೃತ ದುರ್ದೈವಿ. ಮೃತ ಗೋವಿಂದ ಚೌವಾಣ್ ಕಾರಾಗೃಹದ ಡಿ.ಗ್ರೂಪ್ ಮಹಿಳಾ ಸಿಬ್ಬಂದಿ ಪಾರುಬಾಯಿ ಪತಿ ಎಂದು ತಿಳಿದು ಬಂದಿದೆ. ಮೃತ ಗೋವಿಂದ ಚೌವಾಣ್ ಇಂದು ಬೆಳಗ್ಗೆ ಸುಮಾರು 5.30ಕ್ಕೆ ಕಸ ಚೆಲ್ಲಲು ಮನೆ ಹೊರಗೆ ಬಂದಿದ್ದಾರೆ. ಆಗ …

Read More »

ಕೊರೊನಾ ಕರ್ತವ್ಯ ಮರೆತು ಇಸ್ಪೀಟ್ ಆಟ- ಶಿಕ್ಷಣ ಇಲಾಖೆಯ 7 ಜನ ಸಿಬ್ಬಂದಿ ಅಮಾನತು

ದಾವಣಗೆರೆ: ಕೊರೊನಾ ಕರ್ತವ್ಯ ಮರೆತು ಇಸ್ಪೀಟ್ ಆಟ ಆಡಿದ್ದ ಉತ್ತರ ವಲಯದ ಬಿಇಒ ಕಚೇರಿಯ 7 ಜನ ಸಿಬ್ಬಂದಿಯನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆಯುಕ್ತ ಡಾ.ಕೆ.ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ಉತ್ತರ ವಲಯದ ಅಧೀಕ್ಷಕ ಎಚ್.ಎಸ್.ಬಸವರಾಜ್, ಪ್ರಥಮ ದರ್ಜೆ ಸಹಾಯಕ ಎಂ.ಸುಧಾಕರ್, ದ್ವಿತೀಯ ದರ್ಜೆ ಸಹಾಯಕ ಕೊಟ್ರೇಶ್, ದ್ವಿತೀಯ ದರ್ಜೆ ಸಹಾಯಕ ಬೆರಳಚ್ಚು ಗಾರ ಮಲ್ಲಿಕಾರ್ಜುನ್ ಮಠದ, ಶಿಕ್ಷಣ ಸಂಯೋಜಕ ಎಸ್.ಸೋಮಶೇಖರಪ್ಪ, ಡಿ.ಗ್ರೂಪ್ ನೌಕರ ಹರ್ಷವರ್ಧನ್, ಗುಮ್ಮನೂರು ಸರ್ಕಾರಿ ಹಿರಿಯ …

Read More »

ನಿಮ್ಮ ವಾಹನಗಳ ಆರ್‌ಸಿ ಹಾಗೂ ಇನ್ಸುರೆನ್ಸ್ ನಕಲಿಯಾಗಿರಬಹುದು ಹುಷಾರ್..!

ಬೆಂಗಳೂರು, ಜೂ.3- ನಿಮ್ಮ ವಾಹನಗಳ ಆರ್‍ಸಿ ಬುಕ್ ಅಸಲಿಯೇ? ನೀವು ಪಾವತಿಸುವ ವಾಹನ ತೆರಿಗೆ ನಕಲಿಯೇ ಎಂದು ಒಮ್ಮೆ ಪರೀಕ್ಷಿಸಿಕೊಳ್ಳಿ. ಏಕೆಂದರೆ, ನಕಲಿ ಆರ್‍ಸಿ ಮತ್ತು ಇನ್ಸುರೆನ್ಸ್ ಮಾಡಿಕೊಡುವ ಖದೀಮರಿದ್ದಾರೆ ಎಚ್ಚರ..! ಕೇವಲ 3000ರೂ.ಗಳಿಗೆ ನಕಲಿ ಆರ್‍ಸಿ ಕಾರ್ಡ್ ಮಾಡಿಕೊಡುವ ಹಾಗೂ 500 ರಿಂದ 1000ರೂ.ಗೆ ನಕಲಿ ಇನ್ಸೂರೆನ್ಸ್ ಮಾಡಿಕೊಡುತ್ತಿದ್ದ ಈ ಖದೀಮರು ಇದೀಗ ಸಿಸಿಬಿ ಪೆÇಲೀಸರ ಬಲೆಗೆ ಬಿದ್ದಿದ್ದಾರೆ. ಆರ್‍ಟಿಒ ಕಚೇರಿಯಲ್ಲಿ ಬ್ರೋಕರ್ ಆಗಿ ಕೆಲಸ ಮಾಡುತ್ತಿದ್ದ ಕೆಪಿ …

Read More »

ಕುವೈತ್‍ನಿಂದ ಬೆಂಗಳೂರಿಗೆ ಬಂದಿಳಿದ 80 ಪ್ರಯಾಣಿಕರು………….

ಬೆಂಗಳೂರು, ಜೂ.3- ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಕುವೈತ್ ನಿಂದ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 25ನೇ ಏರ್ ಇಂಡಿಯಾ ವಿಮಾನದಲ್ಲಿ 80 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ನಿನ್ನೆ ಸಂಜೆ 5 ಗಂಟೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 80 ಮಂದಿ ಪ್ರಯಾಣಿಕರಲ್ಲಿ 64 ಪುರುಷರು ಮತ್ತು 16 ಮಹಿಳೆಯರು ಇದ್ದಾರೆ. ಈ ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾರಲ್ಲೂ ಕೊರೋನಾ …

Read More »