Breaking News

Daily Archives: ಜೂನ್ 3, 2020

ಸೀಲ್‍ಡೌನ್ ಮಾಡಿದ್ರೂ ಕಳ್ಳದಾರಿಯಲ್ಲಿ ಓಡಾಟ- ಪ್ರಶ್ನಿಸಿದ ಗ್ರಾಮಸ್ಥರ ಮೇಲೆ ಹಲ್ಲೆ

ಶಿವಮೊಗ್ಗ: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ತಾಲೂಕಿನ ಹಸೂಡಿ ಸಮೀಪದ ಹಕ್ಕಿಪಿಕ್ಕಿ ಕ್ಯಾಂಪನ್ನು ಜಿಲ್ಲಾಡಳಿತ ಕಂಟೈನ್ಮೆಂಟ್ ವಲಯ ಎಂದು ಘೋಷಿಸಿ ಸೀಲ್‍ಡೌನ್ ಮಾಡಿದೆ. ಕಳೆದ 4 ದಿನಗಳ ಹಿಂದೆ ಪಂಜಾಬ್ ನಿಂದ ಆಗಮಿಸಿದ್ದ ಹಸೂಡಿ ಸಮೀಪದ ಹಕ್ಕಿಪಿಕ್ಕಿ ಕ್ಯಾಂಪ್ ನ ಮೂವರಿಗೆ ಕೊರೊನಾ ಪಾಸಿಟಿವ್ ಕಾಣಿಸಿತ್ತು. ಹಾಗಾಗಿ ಆ ಪ್ರದೇಶವನ್ನು ಸೀಲ್‍ಡೌನ್ ಮಾಡಲಾಗಿತ್ತು. ಹೀಗಾಗಿ ಗ್ರಾಮಸ್ಥರು ಮನೆಯಿಂದ ಹೊರಗೆ ಓಡಾಡದಂತೆ ಜಿಲ್ಲಾಡಳಿತ ಗ್ರಾಮಸ್ಥರಿಗೆ ಮನವಿ ಸಹ ಮಾಡಿದೆ. ಹೀಗಿದ್ದರೂ ಜಿಲ್ಲಾಡಳಿತ ಮನವಿ …

Read More »

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಹೆಬ್ಬಾವಿನ ಮರಿಯೊಂದು ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಮಾಡಿದೆ.

ಬೆಂಗಳೂರು: ಲಾಕ್‍ಡೌನ್‍ನಿಂದಾಗಿ ಕಳೆದ ಎರಡು ತಿಂಗಳಿನಿಂದ ಸಂಚಾರ ಬಂದ್ ಆಗಿತ್ತು. ಈಗ ಮತ್ತೆ ಬಸ್ ಸಂಚಾರ ಶುರು ಆಗಿದೆ. ಆದರೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಹೆಬ್ಬಾವಿನ ಮರಿಯೊಂದು ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಮಾಡಿದೆ. ಮಂಗಳೂರಿನಿಂದ ಕೆಎಸ್‌ಆರ್‌ಟಿಸಿ ಬಸ್ಸೊಂದು ಮಂಗಳವಾರ ರಾತ್ರಿ ಸುಮಾರು 10:30ರ ಸುಮಾರಿಗೆ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಪ್ರಯಾಣಿಕರ ಸಮೇತ ಬಂದಿತ್ತು. ಪ್ರಯಾಣಿಕರನ್ನ ಕೆಳಗಿಳಿಸಿ ಬಸ್ಸನ್ನು ಸ್ಯಾನಿಟೈಸರ್ ಮಾಡುವ ವೇಳೆ ಬಸ್ಸಿನ ಮೀಟರ್ ಬೋರ್ಡ್ ಬಳಿ ಹೆಬ್ಬಾವಿನ ಮರಿ ಕಾಣಿಸಿಕೊಂಡಿದೆ. …

Read More »

ಜುಲೈ 1ರಿಂದ ಹಂತ ಹಂತವಾಗಿ ಶಾಲೆಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಬೆಂಗಳೂರು: ಕೊರೊನಾ ಸ್ಫೋಟದ ಮಧ್ಯೆ, ರಾಜ್ಯದಲ್ಲಿ ಜುಲೈ 1ರಿಂದ ಹಂತ ಹಂತವಾಗಿ ಶಾಲೆಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಜೂನ್ 8ರಿಂದಲೇ ದಾಖಲಾತಿ ಪ್ರಕ್ರಿಯೆಗಳು ಶುರುವಾಗಲಿವೆ. ಮೊದಲು ರಾಜ್ಯದಲ್ಲಿ ಶಾಲೆ ಪ್ರಾರಂಭ ಮಾಡುವ ಸಂಬಂಧ ಜೂನ್ 10ರಿಂದ ಮೂರು ದಿನಗಳ ಕಾಲ ಎಲ್ಲ ಶಾಲೆಗಳಲ್ಲಿ ಪೋಷಕರ, ಎಸ್‍ಡಿಎಂಸಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಶಾಲೆಗಳ ಪ್ರಾರಂಭಕ್ಕೆ ಚಾಲನೆ ಕೊಟ್ಟಿರುವ ಸರ್ಕಾರ ಮೊದಲ ಹಂತವಾಗಿ ಶಾಲೆಗಳ ಕಚೇರಿ …

Read More »

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ……….

ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, …

Read More »