ಚಿಕ್ಕಮಗಳೂರು: ಸ್ಯಾಂಡಲ್‍ವುಡ್ ನಟರು ಹಾಗೂ ಸಹೋದರರು ಅದ ನಟ ಜಗ್ಗೇಶ್ ಹಾಗೂ ಕೋಮಲ್ ರಂಭಾಪುರಿ ಪೀಠಕ್ಕೆ ಭೇಟಿ ನೀಡಿ ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ಗ್ರಾಮದ ವಿನಯ್ ಗುರೂಜಿಯ ಭೇಟಿಗೆ ಬಂದು ಸ್ಯಾಂಡಲ್‍ವುಡ್ ಸಹೋದರರು ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಪಂಚಪೀಠಗಳಲ್ಲೇ ಮೊದಲನೇ ಪೀಠ ರಂಭಾಪುರಿ ಭೇಟಿ ನೀಡಿ ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.ಮಠದ ಆವರಣದಲ್ಲಿ ಸ್ವಲ್ಪ ಹೊತ್ತು ಕಾಲಕಳೆದ ಚಂದನವನದ ಸಹೋದರರು …
Read More »Daily Archives: ಜೂನ್ 4, 2020
ದ್ವಿತೀಯ ಪಿಯುಸಿ ವಿಜ್ಞಾನ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡದಿರಲು ಉಪನ್ಯಾಸಕರು ನಿರ್ಧಾರ
ಬೆಂಗಳೂರು: ಪಿಯುಸಿ ಮೌಲ್ಯಮಾಪನಕ್ಕೂ ಕೊರೊನಾ ಭೀತಿ ತಟ್ಟಿದ್ದು, ದ್ವಿತೀಯ ಪಿಯುಸಿ ವಿಜ್ಞಾನ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡದಿರಲು ಉಪನ್ಯಾಸಕರು ನಿರ್ಧಾರ ಮಾಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಮೌಲ್ಯಮಾಪನ ಕೇಂದ್ರಗಳನ್ನು ಆಯಾ ಜಿಲ್ಲೆಗಳಲ್ಲಿ ವಿಕೇಂದ್ರಿಕರಣಗೊಳಿಸುವಂತೆ ಉಪನ್ಯಾಸಕರ ಸಂಘ ಮನವಿ ಮಾಡಿತ್ತು. ಕೊರೊನಾ ಸಮುದಾಯಕ್ಕೆ ಹರಡುತ್ತಿದೆ ಎಂದು ಈ ಮನವಿ ಮಾಡಲಾಗಿತ್ತು. ಆದರೆ ಸರ್ಕಾರ ಉಪನ್ಯಾಸಕರ ಬೇಡಿಕೆಗೆ ಈಡೇರಿಸದ ಕಾರಣ ನಾಳೆಯಿಂದ ಪ್ರಾರಂಭವಾಗಬೇಕಿದ್ದ ವಿಜ್ಞಾನ ವಿಷಯದ ಮೌಲ್ಯಮಾಪನ ಮಾಡದೇ ಇರಲು ಉಪನ್ಯಾಸಕರ ಸಂಘದಿಂದ ನಿರ್ಧಾರ …
Read More »ಸಾಲ ಪಡೆದು ವಿದೇಶದಲ್ಲಿ ತಲೆಮರಿಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಶೀಘ್ರದಲ್ಲೇ ಭಾರತಕ್ಕೆ
ನವದೆಹಲಿ: ಭಾರತದ ಬ್ಯಾಂಕ್‍ಗಳಿಂದ 9 ಸಾವಿರ ಕೋಟಿ ರೂ. ಸಾಲ ಪಡೆದು ವಿದೇಶದಲ್ಲಿ ತಲೆಮರಿಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಕರೆತರಲಾಗುವುದು. ರಾಜತಾಂತ್ರಿಕ ರಂಗದಲ್ಲಿ ಭಾರತಕ್ಕೆ ಯಶಸ್ಸು ಸಿಕ್ಕಿದ್ದು, ವಿಜಯ್ ಮಲ್ಯ ಅವರನ್ನು ಹಸ್ತಾಂತರಿಸುವ ಬಗ್ಗೆ ಬ್ರಿಟಿಷ್ ನ್ಯಾಯಾಲಯ ಈಗಾಗಲೇ ಮುದ್ರೆ ಹಾಕಿದೆ. ವಿಜಯ್ ಮಲ್ಯ ಬ್ಯಾಂಕ್ ವಂಚನೆ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳನ್ನು ಎದುರಿಸುತ್ತಿದ್ದು, ಈ ಸಂಬಂಧ ಬ್ರಿಟನ್‍ನಲ್ಲಿ ಎಲ್ಲಾ ಕಾನೂನು ವಿಧಿವಿಧಾನಗಳು ಪೂರ್ಣಗೊಂಡಿವೆ. …
Read More »ಕೊರೊನಾ ಮಧ್ಯೆ ಶಾಲೆ ಆರಂಭ, ಸರ್ಕಾರಕ್ಕೆ 10 ‘ಪಬ್ಲಿಕ್’ ಪ್ರಶ್ನೆ – ಎಷ್ಟು ಮಕ್ಕಳಿಗೆ ಸೋಂಕು ಬಂದಿದೆ?
ಬೆಂಗಳೂರು: ಕೊರೋನಾ ತಾಂಡವವಾಡ್ತಿದೆ. ಖುದ್ದು ಕೇಂದ್ರ ಸರ್ಕಾರವೇ, ಮನೆಯಿಂದ ಹೊರಬರಬೇಡಿ ಎಂದು ಮಕ್ಕಳಿಗೆ, ವೃದ್ಧರಿಗೆ ಲಾಕ್‍ಡೌನ್ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಆದರೆ ಇದ್ಯಾವುದನ್ನು ಕಿವಿಗೆ ಹಾಕಿಕೊಳ್ಳದ ರಾಜ್ಯ ಸರ್ಕಾರ, ಜುಲೈ 1ರಿಂದ ಶಾಲೆಗಳನ್ನು ತೆರೆಯಲು ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. 4ರಿಂದ ಏಳನೇ ತರಗತಿಯ ಮಕ್ಕಳಿಗೆ ಜುಲೈ 1ರಿಂದ, 1ನೇ ತರಗತಿಯಿಂದ 3ನೇ ತರಗತಿವರೆಗಿನ ಮಕ್ಕಳಿಗೆ, 8ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಜುಲೈ 15ರಿಂದ ಶಾಲೆ ನಡೆಸಲು ಪ್ಲಾನ್ ಮಾಡ್ತಿದೆ. ಇನ್ನು …
Read More »ಲಾಕ್‌ಡೌನ್ ಕಾರಣದಿಂದಾಗಿ ರಾಜ್ಯ ಸಾರಿಗೆ ನಿಗಮಗಳಿಗೆ ಬರೋಬ್ಬರಿ 1,200 ಕೋಟಿಗೂ ಅಧಿಕ ನಷ್ಟ………
ಬೆಂಗಳೂರು; ಕೊರೋನಾ ಲಾಕ್‌ಡೌನ್ ಕಾರಣದಿಂದಾಗಿ ರಾಜ್ಯ ಸಾರಿಗೆ ನಿಗಮಗಳಿಗೆ ಬರೋಬ್ಬರಿ 1,200 ಕೋಟಿಗೂ ಅಧಿಕ ನಷ್ಟವಾಗಿದೆ ಎಂದು ಹೇಳಲಾಗುತ್ತಿದ್ದು, ಇದರ ಸುಧಾರಣೆ ಕುರಿತಂತೆ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಚರ್ಚೆ ನಡೆಸಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಾರಿಗೆ ಸಚಿವ ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಇಲಾಖೆಯ ಅಧಿಕಾರಿ ಗಳು ನಿಗಮದ ನಷ್ಟದ ಬಗ್ಗೆ ವಿವರಿಸಿದ್ದಾರೆ. ಸಾರಿಗೆ ನಿಗಮದಲ್ಲಿ 1 ಲಕ್ಷದ 17 …
Read More »