ವಾಷಿಂಗ್ಟನ್: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 3’ರ ಸ್ಪರ್ಧಿ ನೇಹಾ ಗೌಡ ತಾಯಿಯಾದ ಸಂತಸದಲ್ಲಿದ್ದು, ಇತ್ತೀಚೆಗಷ್ಟೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾವು ತಾಯಿಯಾಗಿರುವ ವಿಚಾರವನ್ನ ನೇಹಗೌಡ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಕುವ ಮೂಲಕ ಶೇರ್ ಮಾಡಿಕೊಂಡಿದ್ದಾರೆ. ನೇಹಾ ಗೌಡ ಪತಿಯೊಂದಿಗೆ ಅಮೆರಿಕಾದ ನಾರ್ತ್ ಕ್ಯಾಲಿಫೋರ್ನಿಯಾದಲ್ಲಿ ನೆಲೆಸಿದ್ದಾರೆ. ಪತಿ ಸೇರಿದಂತೆ ಕುಟುಂಬದವರು ತಮ್ಮ ಮನೆಗೆ ಹೊಸ ಸದಸ್ಯೆಯನ್ನು ಬರಮಾಡಿಕೊಂಡಿದ್ದಾರೆ. ನೇಹಾ ಗೌಡ ಸೀಮಂತ ಕಾರ್ಯಕ್ರಮ ಸರಳವಾಗಿ ನಡೆದಿದ್ದು, ಆಪ್ತರು, ಸ್ನೇಹಿತರು …
Read More »Monthly Archives: ಜೂನ್ 2020
ಲೈಟ್ ಆಫ್ ಮಾಡಿ ಕೊರೊನಾ ಸೋಂಕಿತೆಯ ಕೈ ಹಿಡಿದು ಎಳೆದಾಡಿದ ಕಾಮುಕ
ಕೋಲಾರ: ಕೋವಿಡ್-19 ಆಸ್ಪತ್ರೆಗೆ ನುಗ್ಗಿದ ವ್ಯಕ್ತಿ ಕೊರೊನಾ ಸೋಂಕಿತ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಭಾನುವಾರ ಘಟನೆ ನಡೆದಿದ್ದು, ಈ ಸಂಬಂಧ ಆಸ್ಪತ್ರೆಯ ರಕ್ಷಣಾಧಿಕಾರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಶ್ವನಾಥಾಚಾರಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ. ಈತ ನಗರದ ಬೆಸ್ತರ ಬೀದಿಯ ಗೆಲ್ಪೇಟ್ ನಿವಾಸಿ ಎಂದು ತಿಳಿದು ಬಂದಿದೆ. ಶ್ರೀನಿವಾಸಪುರ ತಾಲೂಕಿನ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಅರೋಗ್ಯ ಸಹಾಯಕನಾಗಿದ್ದಾನೆ ಎಂದು ತಿಳಿದು ಬಂದಿದೆ. …
Read More »ಐಎಎಸ್ ಅಧಿಕಾರಿವಿಜಯ್ ಶಂಕರ್ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರು: ಬಹುಕೋಟಿ ಐಎಂಎ ಹಗರಣದಲ್ಲಿ ಜೈಲು ವಾಸ ಅನುಭವಿಸಿದ್ದ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಇಂದು ಬೆಂಗಳೂರಿನ ಜಯನಗರದ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಮಾನತುಗೊಂಡಿದ್ದ ವಿಜಯ್ ಶಂಕರ್ 20 ದಿನಗಳ ಹಿಂದೆ ಕೆಲಸಕ್ಕೆ ಮರಳಿದ್ದರು. ಇಂದು ಬೆಳಗ್ಗೆ ಕಚೇರಿಯಲ್ಲಿ ಸಾಲು ಸಾಲು ಸಭೆ ನಡೆಸಿದ್ದು, ಲವಲವಿಕೆಯಿಂದಲೇ ಕೆಲಸ ಮಾಡಿದ್ದರು ಎಂದು ತಿಳಿದು ಬಂದಿದೆ. 1.5 ಕೋಟಿ ಲಂಚದ ಆರೋಪ: ಐಎಂಎ ಪ್ರಕರಣದಲ್ಲಿ 1.5 ಕೋಟಿ ರೂ. ಲಂಚ …
Read More »ನೆಮ್ಮದಿಯಿಂದ ಇದ್ದ ಜನರು ಈಗ ಭಯದ ವಾತಾವರಣದಲ್ಲೇ ಜೀವನಸ್ವಯಂಪ್ರೇರಿತವಾಗಿ ಚನ್ನಗಿರಿ ಲಾಕ್‍ಡೌನ್
ದಾವಣಗೆರೆ: ಬೆಣ್ಣೆ ನಗರಿಯ ಕೊರೊನಾ ಸೋಂಕಿನ ಜಾಡು ಇದುವರೆಗೂ ಕಂಡು ಹಿಡಿಯಲು ಆಗುತ್ತಿಲ್ಲ. ಇಷ್ಟು ದಿನ ಕೇವಲ ಸಿಟಿಗೆ ಮಾತ್ರ ಸೀಮಿತವಾಗಿದ್ದ ಕೊರೊನಾ ಅಟ್ಟಹಾಸ ಈಗ ತಾಲೂಕು ಮಟ್ಟಕ್ಕೆ ತಲುಪಿದೆ. ನೆಮ್ಮದಿಯಿಂದ ಇದ್ದ ಜನರು ಈಗ ಭಯದ ವಾತಾವರಣದಲ್ಲೇ ಜೀವನ ನಡೆಸುವಂತಾಗಿದೆ. ಇದಕ್ಕೆ ಅಲ್ಲಿನ ಜನತೆಯೇ ಮದ್ದನ್ನು ಕಂಡುಕೊಂಡಿದ್ದಾರೆ. ದಾವಣಗೆರೆಯಲ್ಲಿ ಕೊರೊನಾರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗ್ತಾನೆ ಇದೆ. ದಾವಣಗೆರೆ ನಗರಕ್ಕೆ ಮಾತ್ರ ಸೀಮಿತವಾಗಿದ್ದ ಕೊರೊನಾ ಮಹಾಮಾರಿ ಈ ಹಳ್ಳಿಗಳಿಂದ ತಾಲೂಕು …
Read More »ಕೊರೊನಾ ಭಯದ ಮಧ್ಯೆನಾಳೆಯಿಂದ SSLC ಪರೀಕ್ಷೆ……….
ಬೆಂಗಳೂರು: ಕೊರೊನಾ ಭಯದ ಮಧ್ಯೆ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಆತಂಕ ಶುರುವಾಗಿದೆ. ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡಿಕೆ ಸಾಧ್ಯವಿಲ್ಲ ಅಂತ ಶಿಕ್ಷಣ ಇಲಾಖೆ ಹೇಳಿದೆ. ಜೊತೆಗೆ ಸಿದ್ಧತೆ ಕೂಡ ನಡೆಸಿದೆ. ರಾಜ್ಯದಲ್ಲಿ ಕೊರೊನಾ ಹೆಮ್ಮಾರಿ ಆರ್ಭಟದ ನಡುವೆಯೂ ನಿಗದಿಯಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾಡಿಯೇ ತೀರಲು ಶಿಕ್ಷಣ ಇಲಾಖೆ ಪಣ ತೊಟ್ಟಿದೆ. ನಾಳೆಯಿಂದ ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭವಾಗಲಿದೆ. ಕೊರೊನಾ ಆತಂಕದ ನಡುವೆಯೇ 8.5 ಲಕ್ಷ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿದ್ದಾರೆ. …
Read More »ಕೊರೊನಾ ವಾರಿಯರ್ಸ್‍ಗಳಿಗೂ ಸೋಂಕುತಪಾಸಣೆ ಮಾಡೋ ಸಿಬ್ಬಂದಿಯಂತೂ ಕಾಳಜಿಯನ್ನೆ ವಹಿಸ್ತಿಲ್ಲ…..
ಹಾವೇರಿ: ಕೊರೊನಾ ವಾರಿಯರ್ಸ್‍ಗಳಿಗೂ ಸೋಂಕು ತಗುಲಿದೆ. ಆದರೆ ಆರೋಗ್ಯ ಇಲಾಖೆ ಸಿಬ್ಬಂದಿ ನಿಷ್ಕಾಳಜಿ ತೋರುತ್ತಿದೆ. ಅದರಲ್ಲೂ ಈ ಜಿಲ್ಲೆಯಲ್ಲಿನ ಕ್ವಾರಂಟೈನ್ ಕೇಂದ್ರಗಳಲ್ಲಿನ ಜನರ ತಪಾಸಣೆ ಮಾಡೋ ಸಿಬ್ಬಂದಿಯಂತೂ ಕಾಳಜಿಯನ್ನೆ ವಹಿಸ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ರಾಜ್ಯದಲ್ಲಿ ಕೊರೊನಾ ವಾರಿಯರ್ಸ್ ಆಗಿರೋ ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೋಂಕು ತಗುಲಿದೆ. ಅದರಲ್ಲೂ ಹಾವೇರಿ ಜಿಲ್ಲೆಯಲ್ಲಿ ದೃಢಪಟ್ಟಿರೋ ಬಹುತೇಕ ಪ್ರಕರಣಗಳು ಸಾಂಸ್ಥಿಕ ಕ್ವಾರಂಟೈನ್ ಆಗಿದ್ದವರು. ಹೀಗಿದ್ದರೂ ಕ್ವಾರಂಟೈನ್ ಕೇಂದ್ರಗಳಲ್ಲಿನ ಜನರ ತಪಾಸಣೆ …
Read More »ಮದುವೆಯಾದ 5 ದಿನಕ್ಕೆ ವರ ದುರ್ಮರಣ- ವಧು ಗಂಭೀರ……..
ಹೈದರಾಬಾದ್: ಮದುವೆಯಾದ ಐದು ದಿನದಲ್ಲೇ ಅಪಘಾತದಲ್ಲಿ ವರ ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ. ಹೊಲಗುಂಡ ಮಂಡಲದ ಸಮ್ಮತಗೇರಿ ಗ್ರಾಮದ ಮರೇಶ್ (23) ಮೃತ ನವವಿವಾಹಿತ. ಮೃತ ಮರೇಶ್ ಜೂನ್ 17 ರಂದು ಹೊಲಗುಂಡದ ವಧು ರೇಣುಕಾ ಜೊತೆ ಸರಳವಾಗಿ ವಿವಾಹವಾಗಿದ್ದನು. ಭಾನುವಾರ ಅಮಾವಾಸ್ಯೆಯ ನಂತರ ಅಂದರೆ ಸೋಮವಾರ ನೂತನ ದಂಪತಿ ಅಮೃತಪುರಂನಲ್ಲಿರುವ ದೇವಸ್ಥಾನಕ್ಕೆ ಹೋಗುತ್ತಿದ್ದರು. ಆದರೆ ಈ ವೇಳೆ ವೇಗವಾಗಿ ಬಂದ ಬೈಕ್ ನವಜೋಡಿ ಇದ್ದ …
Read More »ನವಜಾತ ಶಿಶುವಿಗೆ ರಕ್ತ ಸಿಗದಿದ್ದಕ್ಕೆ ನಗರದ ಯುವಕರ ಸಂಘವೊಂದು ಮಸೀದಿಯಲ್ಲೇ ರಕ್ತದಾನ ಶಿಬಿರ
ಧಾರವಾಡ: ನವಜಾತ ಶಿಶುವಿಗೆ ರಕ್ತ ಸಿಗದಿದ್ದಕ್ಕೆ ನಗರದ ಯುವಕರ ಸಂಘವೊಂದು ಮಸೀದಿಯಲ್ಲೇ ರಕ್ತದಾನ ಶಿಬಿರ ಆರಂಭಿಸಿ ಮಾನವೀಯತೆ ಮೆರೆದಿದೆ. ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ವೈರಸ್ ಭಯದಿಂದ ರಕ್ತದಾನ ಮಾಡುವುದಕ್ಕೆ ಜನರೇ ಬರುತ್ತಿಲ್ಲ. ಇತ್ತ ರಕ್ತದಾನ ಶಿಬಿರಗಳೇ ನಡೆಯದ ಕಾರಣ ರಕ್ತ ಭಂಡಾರಕ್ಕೆ ತುರ್ತು ರಕ್ತದ ಅವಶ್ಯಕತೆ ಎದುರಾಗಿತ್ತು. ಇದನ್ನು ಮನಗಂಡ ನಗರದ ಜಕಣೀಬಾವಿ ಬಳಿಯ ಮಹಮ್ಮದ್ ಮಸೀದಿಯ ಜಮಾತ್ ಅಹಲೆ ಹದೀಸ್ ಟ್ರಸ್ಟ್ ಕೈ ಜೋಡಿಸಿ ರಕ್ತದಾನ ಶಿಬಿರ ನಡೆಸಿದೆ. …
Read More »ನಿವೃತ್ತರಾದ 24 ದಿನದಲ್ಲೇ ಎಎಸ್‍ಐ ಆತ್ಮಹತ್ಯೆ………
ಮಡಿಕೇರಿ: ನಿವೃತ್ತಿ ಹೊಂದಿದ 24 ದಿನದಲ್ಲೇ ಎಎಸ್‍ಐ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಮಾದೇಗೋಡು ಗ್ರಾಮದಲ್ಲಿ ನಡೆದಿದೆ. ಎಂ.ಎಸ್.ಈರಪ್ಪ ಮೃತ ಸಹಾಯಕ ಸಬ್ ಇನ್ಸ್‌ಪೆಕ್ಟರ್. ಈರಪ್ಪ ಕಳೆದ ಒಂದು ವರ್ಷದಿಂದ ಶನಿವಾರಸಂತೆ ಪೋಲಿಸ್ ಠಾಣೆಯಲ್ಲಿ ಎಎಸ್‍ಐ ಆಗಿ ಸೇವೆ ಸಲ್ಲಿಸುತ್ತಿದ್ದರು. ಮೇ 30 ರಂದು ನಿವೃತ್ತಿ ಹೊಂದಿದ್ದರು. ಇಂದು ಬೆಳಗ್ಗೆ ಈರಪ್ಪ ತಮ್ಮ ಮನೆಯಲ್ಲೇ ಒಂಟಿ ನಳಿಕೆಯ ಬಂದೂಕು ಬಳಸಿ ಗುಂಡು ಹಾರಿಸಿಕೊಂಡು …
Read More »KSRTCಗೂ ಕಾಲಿಟ್ಟ ಕೊರೊನಾ- ಯಲ್ಲಾಪುರದಿಂದ ಬೆಂಗ್ಳೂರಿಗೆ ಬಂದ ಕಂಡಕ್ಟರ್‌ಗೆ ಪಾಸಿಟಿವ್
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಷ್ಟು ದಿನ ಹೊರ ದೇಶ ಹಾಗೂ ರಾಜ್ಯದಿಂದ ಬಂದವರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗುತ್ತಿತ್ತು. ಆದರೆ ಇದೀಗ ಅಂತರ್ ಜಿಲ್ಲಾ ಪ್ರಯಾಣ ಮಾಡಿದ ಬಸ್ ಕಂಡಕ್ಟರ್‌ಗೆ ಪಾಸಿಟಿವ್ ದೃಢವಾಗಿದ್ದು ಜಿಲ್ಲೆಯ ಜನತೆಯನ್ನು ಆತಂಕಕ್ಕೀಡು ಮಾಡಿದೆ. ಬೆಂಗಳೂರಿನ ಬಿಎಂಟಿಸಿ ಬಸ್ಸಿನಲ್ಲಿ ಸವಾರಿ ಮಾಡುತ್ತಿರುವ ಚೀನಾ ಮಾರಿ ಈಗ ಕೆಎಸ್‌ಆರ್‌ಟಿಸಿ ಬಸ್ಸಿಗೂ ಕಾಲಿಟ್ಟಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಿಂದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಬೆಂಗಳೂರಿಗೆ ಪ್ರಯಾಣಿಸಿದ್ದ ನಿರ್ವಾಹಕನಿಗೆ ಕೊರೊನಾ ಸೋಂಕು ದೃಢವಾಗಿದೆ. …
Read More »