ಚಂಡೀಗಢ: ಬಿಜೆಪಿ ಮುಖಂಡೆ, ಟಿಕ್‍ಟಾಕ್ ಸ್ಟಾರ್ ಸೋನಾಲಿ ಫೋಗಟ್ ಅವರು ಸರ್ಕಾರಿ ಅಧಿಕಾರಿಯೊಬ್ಬರಿಗೆ ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಫೋಗಟ್ ಶುಕ್ರವಾರ ಹಿಸಾರ್ ನ ಬಾಲ್ಸಮಂದ್ ಮಂಡಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಹಿಸಾರ್ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಸುಲ್ತಾನ್ ಸಿಂಗ್‍ರನ್ನು ಫೋಗಟ್ ಥಳಿಸಿದ್ದಾರೆ. ಕೆಲವು ರೈತರು ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳನ್ನು ಖರೀದಿಸುವ ವಿಚಾರದಲ್ಲಿ ಸಮಸ್ಯೆಗಳಿವೆ ಎಂದು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಫೋಗಟ್ ಮಂಡಿಯ …
Read More »Monthly Archives: ಜೂನ್ 2020
ಗೋವಾ ರಾಜ್ಯಕ್ಕೆ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು ಕೆಲ ಕಿಡಿಗೇಡಿಗಳು ವಾಹನಕ್ಕೆ ಬೆಂಕಿ ಹಚ್ಚಿ ಸುಡಲಾಗಿದೆ.
ಬೆಳಗಾವಿ: ಜಿಲ್ಲೆಯಿಂದ ಗೋವಾ ರಾಜ್ಯಕ್ಕೆ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆಲ ಕಿಡಿಗೇಡಿಗಳು ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ಕರ್ಲೇ- ಬೆಳವಟ್ಟಿ ಗ್ರಾಮದ ಮಧ್ಯೆ ನಡೆದಿದೆ. ಗೋವಾ ರಾಜ್ಯಕ್ಕೆ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು ಕೆಲ ಹಿಂದೂ ಸಂಘಟನೆ ಕಾರ್ಯಕರ್ತರು ವಾಹನಕ್ಕಗಿ ಕಾಯುತ್ತಾ ನಿಂತಿದ್ದರು. ಕರ್ಲೇಯಿಂದ ಒಂದು ಕಿ.ಮೀ. ಅಂತರದಲ್ಲಿ ವಾಹನ ಬರುತ್ತಿದ್ದಂತೆ ತಡೆದು ವಾಹನಕ್ಕೆ ಬೆಂಕಿ ಹಚ್ಚಿ ಸುಡಲಾಗಿದೆ. ವಾಹನದಲ್ಲಿ ಇದ್ದವರು ಓಡಿ ಹೋಗಿದ್ದಾರೆ. ಬೆಳವಟ್ಟಿ ಮಾರ್ಗದಿಂದ …
Read More »ಮಾನವೀಯತೆ ಮರೆತ ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ
ಬೆಂಗಳೂರು: ಹೊಟ್ಟೆನೋವು ಅಂತ ಆಸ್ಪತ್ರೆಗೆ ಬಂದ ರೋಗಿಗೆ ಚಿಕಿತ್ಸೆ ನೀಡದೇ ಆಸ್ಪತ್ರೆ ಸಿಬ್ಬಂದಿ ಕರ್ತವ್ಯದ ಜೊತೆ ಮಾನವೀಯತೆಯನ್ನು ಮರೆತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಕಳೆದ ರಾತ್ರಿ ಹೊಟ್ಟೆನೋವು ಅಂತ ಓರ್ವ ದೊಡ್ಡಬಳ್ಳಾಪುರ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದಾನೆ. ಈ ವೇಳೆ ವೈದ್ಯರಿಲ್ಲ ಅಂತ ಹೇಳಿ ಸಿಬ್ಬಂದಿ ರೋಗಿಯನ್ನು ಆಸ್ಪತ್ರೆಯೊಳಗೆ ಸಹ ಕರೆದುಕೊಂಡಿಲ್ಲ. ಹೊರಗೆ ನಿಲ್ಲಿಸಿ ಖಾಸಗಿ ಆಸ್ವತ್ರೆಗೆ ಹೋಗಿ …
Read More »ಉಡುಪಿಯಲ್ಲಿ ಕ್ವಾರಂಟೈನ್ ಮುಗಿಸಿ ಮಂಗಳೂರಿಗೆ ಬಂದವರಿಗೆ ಕೊರೊನಾ
ಮಂಗಳೂರು: ಉಡುಪಿಯಲ್ಲಿ ಕ್ವಾರಂಟೈನ್ ಮುಗಿಸಿ ಮಂಗಳೂರಿಗೆ ಬಂದ ಏಳು ಮಂದಿ ಇತರ ಒಬ್ಬ ಸಹಿತ ಸೇರಿ ಒಟ್ಟು 8 ಮಂದಿಗೆ ಇಂದು ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಬಂದು ಉಡುಪಿಯಲ್ಲಿ 7 ಮಂದಿ ಕ್ವಾರೆಂಟೈನ್ ಆಗಿದ್ದರು. ಕ್ವಾರಂಟೈನ್ ಅವಶಿ ಮುಗಿದ ನಂತರ ಅವರನ್ನು ಮನೆಗೆ ಕಳುಹಿಸಲಾಗಿತ್ತು. ಇದೀಗ ಮಂಗಳೂರಿನಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೊರೊನಾ ಇರುವುದು ಪತ್ತೆಯಾಗಿದೆ. ಬಂಟ್ವಾಳದ 60 ವರ್ಷದ ವೃದ್ಧೆಗೂ ಸೋಂಕು ತಗುಲಿದ್ದು, ಮೂಲ ಪತ್ತೆಯಾಗಿಲ್ಲ. …
Read More »ತಡರಾತ್ರಿವರೆಗೂ ಡಿಜೆ ಹಾಕಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಶಾಸಕನ ಆಪ್ತ
ಚಿಕ್ಕೋಡಿ/ಬೆಳಗಾವಿ: ಡೆಡ್ಲಿ ಕೊರೊನಾ ಮಧ್ಯೆಯೂ ಲಾಕ್‍ಡೌನ್ ನಿಯಮಗಳನ್ನು ಗಾಳಿಗೆ ತೂರಿ ಬಿಜೆಪಿ ಶಾಸಕನ ಆಪ್ತನೊಬ್ಬ ಡಿಜೆ ಹಾಕಿಕೊಂಡು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಲಜಿ ಗ್ರಾಮದಲ್ಲಿ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ.ರಾಜೀವ್ ಆಪ್ತ ಹಾಗೂ ಬಗರ ಹುಕುಂ ಸಮಿತಿ ಸದಸ್ಯ ನರಸು ತುಳಸಿಗೇರಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಸಂಜೆ 7 ನಂತರ ನಿಷೇಧಾಜ್ಞೆ ಇದ್ದರೂ ತಡರಾತ್ರಿವರೆಗೂ ಲಾಕ್‍ಡೌನ್ ನಿಯಮಗಳನ್ನ ಗಾಳಿಗೆ ತೂರಿ ಕೊರೊನಾ ನಡುವೆಯೂ ಡಿಜೆ …
Read More »ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿಯ ನಿರೀಕ್ಷೆಯಲ್ಲಿದ್ದ ಬಸವವಿಧಿವಶವಾಗಿದೆ.
ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿಯ ನಿರೀಕ್ಷೆಯಲ್ಲಿದ್ದ ಬಸವ ಇಂದು ವಿಧಿವಶವಾಗಿದೆ. ಮೈಸೂರು ಸಮೀಪದ ಕೆ.ಆರ್.ನಗರ ತಾಲೂಕಿನ ಕಾಳಮ್ಮನಕೊಪ್ಪಲು ಗ್ರಾಮದ ಬಸವನ ಅನಾರೋಗ್ಯದಿಂದ ನರಳುತ್ತಿತ್ತು. ಬಸವ ಬೇಗ ಚೇತರಿಸಿಕೊಳ್ಳಲಿ ಎಂದು ಗ್ರಾಮಸ್ಥರು ನಿತ್ಯ ಪೂಜೆ, ಪುನಸ್ಕಾರಗಳಲ್ಲಿ ತೊಡಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದೆ. ಕಾಳಮ್ಮನಕೊಪ್ಪಲು ಗ್ರಾಮಸ್ಥರಿಗೆ ಊರ ದೈವವೇ ಆಗಿದ್ದ ಬಸವ ಅನಾರೋಗ್ಯಕ್ಕೆ ತುತ್ತಾಗಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್ ಬಸವನನ್ನು ಭೇಟಿ ಮಾಡಿದ್ದರು. ಗ್ರಾಮಸ್ಥರೆಲ್ಲರೂ ದರ್ಶನ್ ಅವರು ಪುನಃ …
Read More »ದುಬಾರಿ ಕೋವಿಡ್- ರೋಗಿಯ ಜೇಬಿಗೆ ಕತ್ತರಿ ಹಾಕಲಿದೆಯಾ ಕೊರೊನಾ?
ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗ್ತಿದೆ. ಈ ನಡುವೆ ಕೊರೊನಾ ಚಿಕಿತ್ಸೆ ಮುಂದಿನ ದಿನಗಳಲ್ಲಿ ದುಬಾರಿಯಾಗಲಿದೆಯಾ ಅನ್ನೋ ಸುಳಿವು ಸಿಗುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಾ ಹೋದ್ರೆ ಉಚಿತ ಚಿಕಿತ್ಸೆ ದೊರೆಯುವ ಕಷ್ಟ ಎನ್ನಲಾಗುತ್ತಿದೆ. ಎಲ್ಲ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡೋದು ಅನುಮಾನ. ಹಾಗಾಗಿ ಸರ್ಕಾರ ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಿದೆ ಎಂದು ತಿಳಿದು ಬಂದಿದೆ. ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ಮುಂದಾಗಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಹ …
Read More »ಸರ್ಕಾರ ಅನುಮತಿ ನೀಡಿದ್ರೂ ಸದ್ಯಕ್ಕಿಲ್ಲ ಅನ್ನಪೂರ್ಣೇಶ್ವರಿ ದರ್ಶನ
ಚಿಕ್ಕಮಗಳೂರು: ಸರ್ಕಾರ ಜೂನ್ 8ರಿಂದ ರಾಜ್ಯಾದ್ಯಂತ ಎಲ್ಲಾ ದೇವಾಲಯಗಳಲ್ಲೂ ಭಕ್ತರ ಪ್ರವೇಶಕ್ಕೆ ಅನುವು ಮಾಡಿಕೊಟ್ಟರೂ ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನ ಸದ್ಯಕ್ಕಿಲ್ಲ. ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ ಭಕ್ತರ ದರ್ಶನಕ್ಕೆ ಬ್ರೇಕ್ ಹಾಕಿದೆ. ಭಕ್ತರ ಹಿತದೃಷ್ಟಿ ಹಾಗೂ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಈ ಕ್ರಮ ಕೈಗೊಂಡಿದೆ. ಹೊರನಾಡು ಸುಪ್ರಸಿದ್ಧ ಅನ್ನಪೂರ್ಣೇಶ್ವರಿ ದೇವರ ದರ್ಶನಕ್ಕೆ ಸದ್ಯಕ್ಕೆ ಬ್ರೇಕ್ ಹಾಕಿರುವ ಆಡಳಿತ ಮಂಡಳಿ ಭಕ್ತರು ಸಹಕರಿಸುವಂತೆ ಮನವಿ ಮಾಡಿದೆ. …
Read More »ಲಾಕ್‍ಡೌನ್ ಸಡಿಲಿಕೆಯಾಗುತ್ತಿದ್ದಂತೆ ತರಕಾರಿಗೆ ಹೆಚ್ಚಾದ ಡಿಮ್ಯಾಂಡ್………….
ಕೋಲಾರ: ಎರಡುವರೆ ತಿಂಗಳ ಕಾಲ ಕೊರೊನಾ ಲಾಕ್‍ಡೌನ್‍ನಿಂದಾಗಿ ಮಾರುಕಟ್ಟೆ ಇಲ್ಲದೆ ಟೊಮ್ಯಾಟೋ ಸೇರಿದಂತೆ ತರಕಾರಿಗಳಿಗೆ ಬೆಲೆ ಇಲ್ಲದೆ ಬೀದಿಗೆ ಸುರಿಯಲಾಗುತಿತ್ತು. ಆದರೆ ಲಾಕ್‍ಡೌನ್ ಸಡಿಲಿಕೆ ಅದೃಷ್ಟವನ್ನೇ ತಂದಿದ್ದು, ಕಂಗಾಲಾಗಿದ್ದ ರೈತ ಸಮುದಾಯ ಚೇತರಿಕೆಯತ್ತ ಹೆಜ್ಜೆ ಹಾಕುತ್ತಿದ್ದಾನೆ. ಬಯಲು ಸೀಮೆ ಕೋಲಾರ ಜಿಲ್ಲೆಯಲ್ಲಿ ಬಹುತೇಕ ರೈತರು ಟೊಮ್ಯಾಟೊ ಸೇರಿದಂತೆ ತರಕಾರಿಗಳನ್ನ ಬೆಳೆಯುತ್ತಾರೆ. ಆದರೆ ಅವರ ಶ್ರಮಕ್ಕೆ ತಕ್ಕಂತೆ ಬೆಲೆ ಸಿಗೋದು ಅಪರೂಪ. ಬೆಲೆ ಸಿಗದೇ ಬೆಳೆದ ಬೆಳೆಯನ್ನು ಬೀದಿಗೆ ಸುರಿದು ಕಣ್ಣೀರಾಕೋದು …
Read More »ಕೊರೊನಾ ಮಾಹಾಮಾರಿ ಈದೀಗ ವಾರಿಯರ್ ಗಳನ್ನು ಕಾಡುತ್ತಿದ್ದು, ಬೆಂಗಳೂರು ಪೊಲೀಸರು ಆತಂಕಕ್ಕೀಡಾಗಿದ್ದಾರೆ.
ಬೆಂಗಳೂರು: ಕೊರೊನಾ ಮಾಹಾಮಾರಿ ಈದೀಗ ವಾರಿಯರ್ ಗಳನ್ನು ಕಾಡುತ್ತಿದ್ದು, ಬೆಂಗಳೂರು ಪೊಲೀಸರು ಆತಂಕಕ್ಕೀಡಾಗಿದ್ದಾರೆ. ನಗರದಲ್ಲಿ ಕಳೆದ ಒಂದು ವಾರದಿಂದ ಐವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿದೆ. ಇದರ ಬೆನ್ನಲ್ಲೆ ಶುಕ್ರವಾರ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿನ ಅರೋಪಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿಂದೆ ಕೂಡ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಆರೋಪಿಯೊಬ್ಬರಿಗೆ ಪಾಸಿಟಿವ್ ಬಂದಿತ್ತು. ಇದೀಗ ಮತ್ತೊಬ್ಬ ಆರೋಪಿಗೆ ಸೋಂಕು ತಗುಲಿದೆ. ಒಂದು ಕಡೆ ಕಂಟೈನ್ಮೆಂಟ್ ಝೋನ್‍ಗಳಲ್ಲಿ ಕೆಲಸ …
Read More »