Breaking News

Monthly Archives: ಜೂನ್ 2020

ಸದ್ಯಕ್ಕೆ ಶಾಲೆ ಆರಂಭಿಸುವುದಿಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ : ಸುರೇಶ್ ಕುಮಾರ್

ಬೆಂಗಳೂರು: ಸದ್ಯಕ್ಕೆ ನಾವು ಶಾಲೆ ಆರಂಭಿಸುವುದಿಲ್ಲ. ಪೋಷಕರು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಫೇಸ್‍ಬುಕ್‍ನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮೇ 30 ರಂದು ಶಾಲೆಗಳನ್ನು ಆರಂಭಿಸುವ ಬಗ್ಗೆ ಪೋಷಕರ ಅಭಿಪ್ರಾಯವನ್ನು ಕೇಳಿ ಎಂದು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತ್ತು. ಈ ನಿಟ್ಟಿನಲ್ಲಿ ನಾವು ರಾಜ್ಯದಲ್ಲಿರುವ ಶಾಲೆಗಳಿಗೆ ಸುತ್ತೋಲೆ ಕಳುಹಿಸಿ ಪೋಷಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು ಇದೇ ಜೂನ್ …

Read More »

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರ ಮಗ ಕಡ್ಲೆಪುರಿ ತಿನ್ತಾ ಇದ್ದನಾ?- ಎಸ್.ಟಿ.ಸೋಮಶೇಖರ್

ಮೈಸೂರು: ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಅವರ ಮಗ ಕಡ್ಲೆಪುರಿ ತಿನ್ನುತ್ತಿದ್ದನಾ ಎಂದು ಸಚಿವ ಎಸ್.ಟಿ.ಸೋಮಶೇಖರ್ ಪ್ರಶ್ನೆ ಮಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ನಾನು ಸಚಿವನಾಗಿ ಮೂರು ತಿಂಗಳು ಆಗಿದೆ. ಇದುವರೆಗೂ ಸಿಎಂ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಆಡಳಿತ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ವಿಜಯೇಂದ್ರ ಅವರನ್ನು ಭೇಟಿ ಮಾಡಿ ಅಂತ ಸಿಎಂ ನಮಗೆ ಹೇಳಿಲ್ಲ. ಈ ಹಿಂದೆ ಸಿದ್ದರಾಮಯ್ಯನವರು 5 ವರ್ಷ ಸಿಎಂ ಆಗಿದ್ದಾಗ ಅವರ ಮಗ …

Read More »

ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್‌ಗೆ ಕೊರೊನಾ ಪಾಸಿಟಿವ್..!

ನವದೆಹಲಿ, ಜೂ.4- ಭಾರತದ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್‌ಗೆ ಮಹಾಮಾರಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ನಾಲ್ಕು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಅವರು ಹೋಂ ಕ್ವಾರಂಟೈನ್ನಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಅಜಯ್ ಕುಮಾರ್ ವರದಿ ನೆಗೆಟಿವ್ ಬರುವವರೆಗೆ ಹೋಂ ಕ್ವಾರಂಟೈನ್ನಲ್ಲಿ ಇರಲಿದ್ದಾರೆ ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಆದರೆ ಇದರ ಬಗ್ಗೆ ಮಾಹಿತಿ ನೀಡಿಲು ಕೇಂದ್ರ …

Read More »

ರೈತರ ಹಣ ಏರ್​ಟೆಲ್ ಅಕೌಂಟ್‌ಗೆ..! ಸರ್ಕಾರದ ಮಹಾ ಎಡವಟ್ಟು

ಬೆಂಗಳೂರು,ಜೂ.4- ಕೃಷಿ ಇಲಾಖೆಯ ಎಡವಟ್ಟಿನಿಂದಾಗಿ ರೈತರ ಖಾತೆಗೆ ಹೋಗಬೇಕಾಗಿದ್ದ ಹಣ ಏರ್‍ಟೆಲ್ ಪೇಮೆಂಟ್ ಬ್ಯಾಂಕ್‍ಗೆ ವರ್ಗಾವಣೆಯಾಗಿರುವ ಪ್ರಸಂಗ ನಡೆದಿದೆ. ಪತ್ರಿಕಾಗೋಷ್ಠಿಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರೇ ಖುದ್ದು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಜೊತೆಗೆ ಏರ್‍ಟೆಲ್ ಕಂಪನಿ ವಿರುದ್ಧ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಆಧುನಿಕ ತಂತ್ರಜ್ಞನದಲ್ಲಿ ಸ್ವಲ್ಪ ಯಾಮಾರಿದರೂ ಏನೆಲ್ಲ ಎಡವಟ್ಟುಗಳಾಗುತ್ತವೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ. ಏರ್‍ಟೆಲ್ ಕಂಪನಿ ಸಿಮ್ ಮಾರಾಟ ಮಾಡಬೇಕಾದರೆ ಆಧಾರ್ ಸಂಖ್ಯೆ ಪಡೆದುಕೊಳ್ಳುತ್ತದೆ. …

Read More »

ಛತ್ರಪತಿ ಶಿವಾಜಿ ಸ್ಟೈಲಲ್ಲಿ ಮೀಸೆ-ಗಡ್ಡ ಬೆಳೆಸಿ ಮೋದಿ ಮಿಂಚಿಂಗ್..!

ನವದೆಹಲಿ, ಜೂ.4-ಅತ್ಯಂತ ಸಂಕಷ್ಟ ಸಂದರ್ಭಗಳಲ್ಲಿ ಅತ್ಯಂತ ಜಣ್ಮೆ ಮತ್ತು ದೂರದೃಷ್ಟಿಯಿಂದ ಬಗೆಹರಿಸುವ ಮಹಾ ಚತುರ ಪ್ರಧಾನಿ ಮೋದಿ ಈಗ ಲೋಕಪ್ರಿಯ ನಾಯಕ. ವಿಶ್ವದ ನಂಬರ್ 1 ಖ್ಯಾತಿಯ ಅಗ್ರಮಾನ್ಯ ಧುರೀಣರಾಗಿದ್ದಾರೆ. ಪಾಕಿಸ್ತಾನ ಮತ್ತು ಚೀನಾದಂಥ ಕುತಂತ್ರಿ ದೇಶಗಳು ಬಾಲ ಮುದುರಿಕೊಳ್ಳುವಂತೆ ಮಾಡಿರುವ ನಮೋ ಈಗ ವಿಶ್ವದ ಅತ್ಯಂತ ಪ್ರಬಲ ದೇಶಗಳ ಪರಮಾಪ್ತ ಮಿತ್ರ ಜಗತಿಕ ವೇದಿಕೆಗಳಲ್ಲಿ ಮೋದಿ ಇರಲೇಬೇಕೆಂಬಷ್ಟು ಮಟ್ಟಿಗೆ ಅವರ ಲೋಕವಿಖ್ಯಾತಿ ಉತ್ತುಂಗಕ್ಕೇರಿದೆ. ಇದು ನರೇಂದ್ರ ಮೋದಿ ಅವರ …

Read More »

ಬೆಂಗಳೂರಿನಲ್ಲಿ ಬೆಳಗಾವಿ ಬಿಜೆಪಿ ನಾಯಕರು ಲಾಬಿಗೆ ಮುಂದಾಗಿದ್ದಾರೆ.

ಬೆಂಗಳೂರು: ರಾಜ್ಯಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜಧಾನಿ ಬೆಂಗಳೂರಿನಲ್ಲಿ ಬೆಳಗಾವಿ ಬಿಜೆಪಿ ನಾಯಕರು ಲಾಬಿಗೆ ಮುಂದಾಗಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆ ತಮ್ಮ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ಗಾಗಿ ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ. ನಿನ್ನೆಯಷ್ಟೇ ಯಡಿಯೂರಪ್ಪ ಅವರಿಗೆ ಭೇಟಿಯಾಗಿದ್ದ ಉಮೇಶ ಕತ್ತಿ ಅವರು ಇಂದು ಕೂಡ ಬೆಳ್ಳಂ ಬೆಳಿಗ್ಗೆ ಸಿಎಂ ನಿವಾಸಕ್ಕೆ ತೆರಳಿ ಅರ್ಧ ಗಂಟೆಗೂ ಹೆಚ್ಚು ಕಾಲ ಮತ್ತೆ ಚರ್ಚೆ ನಡೆಸಿದ್ದಾರೆ.  ಯಡಿಯೂರಪ್ಪನವರ ಸರ್ಕಾರಿ ನಿವಾಸ ಕಾವೇರಿಗೆ ತೆರಳಿರುವ …

Read More »

Bengaluru City ಏಕಾಏಕಿ ಕೆಲಸದಿಂದ ವಜಾ- ಕಂಪನಿ ಮುಂದೆ ಕಾರ್ಮಿಕರು ಕಣ್ಣೀರು

ಬೆಂಗಳೂರು: ಲಾಕ್‍ಡೌನ್ ಸಂದರ್ಭದಲ್ಲಿ ಸಿಲಿಕಾನ್ ಸಿಟಿಯ ಕಂಪನಿ ಯಾವುದೇ ಸೂಚನೆ ನೀಡದೆ ಏಕಾಏಕಿ ಕಾರ್ಮಿಕರನ್ನು ಕೆಲಸದಿಂದ ವಜಾ ಮಾಡಿರುವ ಆರೋಪ ಕೇಳಿಬಂದಿದ್ದು, ಕಾರ್ಮಿಕರು ಕಣ್ಣೀರಿಡುತ್ತಿದ್ದಾರೆ. ನಗರದ ಟಿ.ದಾಸರಹಳ್ಳಿಯ ಪೀಣ್ಯ ಕೈಗಾರಿಕಾ ಪ್ರದೇಶದ ಎಸ್.ಎ.ಪಿ.ಎಲ್ ಇಂಡಸ್ಟ್ರೀಸ್ ಪ್ರೈ.ಲಿ.ನ 1ನೇ ಯೂನಿಟ್‍ನಿಂದ ಸುಮಾರು 500ರಿಂದ 600 ಕಾರ್ಮಿಕರನ್ನು ಕೆಲಸದಿಂದ ವಜಾ ಮಾಡಿರುವ ಆರೋಪ ಕೇಳಿಬಂದಿದೆ. ಎರಡು ತಿಂಗಳು ಸಂಬಳವನ್ನೂ ನೀಡದೆ ಕೆಲಸದಿಂದ ತೆಗೆದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಕೂಡಲೇ ಸಂಬಳ ನೀಡಬೇಕು ಹಾಗೂ ಮರಳಿ …

Read More »

ರಾಜ್ಯಸಭೆ, ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಜೆಡಿಎಸ್ ಶಾಸಕಾಂಗ ಸಭೆ

ಬೆಂಗಳೂರು, ಜೂ.4-ರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಮಹತ್ವದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಂಸದರು, ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಆಹ್ವಾನ ನೀಡಲಾಗಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ನಾಳೆ ಮಧ್ಯಾಹ್ನ ಸಭೆ ನಡೆಯಲಿದೆ. ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸುವುದು, ಅಭ್ಯರ್ಥಿ ಆಯ್ಕೆ ಬಗ್ಗೆಯೂ ಚರ್ಚೆ …

Read More »

ಸುರೇಶ ಅಂಗಡಿಯವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಆಹಾರದ ಕಿಟ್ ವಿತರಿಸುವಂತೆ…ಒತ್ತಾಯ

ಬೆಳಗಾವಿ- ಒಂದು ವಾರದ ಹಿಂದೆ ನೂರಾರು ಜನ ನೇಕಾರ ಕೂಲಿ ಕಾರ್ಮಿಕರು,ಏಕಾ ಏಕಿ ಕೇಂದ್ರ ಸಚಿವ ಸುರೇಶ್ ಅಂಗಡಿಯವರ ಕಚೇರಿಗೆ ಮುತ್ತಿಗೆ ಹಾಕಿ ಆಹಾರ ಸಾಮುಗ್ರಿಗಳ ಕಿಟ್ ಕೊಡುವಂತೆ ಒತ್ತಾಯಿಸಿದ್ದರು. ಸುರೇಶ್ ಅಂಗಡಿ ಅವರು ಆಹಾರ ಸಾಮುಗ್ರಿಗಳ ಕಿಟ್ ಕೊಡುತ್ತಿದ್ದಾರೆ ಎಂಬ ಸುಳ್ಳು ವದಂತಿ ಹರಡಿಸಿದ ಹಿನ್ನಲೆಯಲ್ಲಿ ನೂರಾರು ಜನ ಕಾರ್ಮಿಕರು,ಕಾಡಾ ಕಚೇರಿಯಲ್ಲಿನ ಸುರೇಶ ಅಂಗಡಿಯವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಆಹಾರದ ಕಿಟ್ ವಿತರಿಸುವಂತೆ ಒತ್ತಾಯ ಮಾಡಿದ್ದರು. ಇದಕ್ಕೆ …

Read More »

ದೇಶದಲ್ಲಿ ಒಂದೇ ದಿನ ಗರಿಷ್ಠ 9,304 ಮಂದಿಗೆ ಕೊರೊನಾ- 260 ಜನ ಸಾವು

ನವದೆಹಲಿ: ದೇಶದಲ್ಲಿ ಡೆಡ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ಗರಿಷ್ಠ 9,304 ಮಂದಿಗೆ ಸೋಂಕು ದೃಢಪಟ್ಟಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದ 9,304 ಮಂದಿಗೆ ಸೋಂಕು ಪತ್ತೆಯಾದರೆ, 260 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 2,16,919ಕ್ಕೆ ಏರಿಕೆಯಾದರೆ, ಕೊರೊನಾಗೆ 6,075 ಮಂದಿ ಬಲಿಯಾಗಿದ್ದಾರೆ. …

Read More »