Breaking News

Daily Archives: ಜುಲೈ 6, 2020

ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲ- 2 ಗಂಟೆ ಅಂಬುಲೆನ್ಸ್‌ನಲ್ಲೇ ಸೋಂಕಿತ……..

ಹಾವೇರಿ: ಮಹಾಮಾರಿ ಕೊರೊನಾದಿಂದ ಅಂಬುಲೆನ್ಸ್, ಬೆಡ್ ಸಿಗುತ್ತಿಲ್ಲ ಎಂಬ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿವೆ. ಇದೀಗ ಜಿಲ್ಲಾ ಕೋವಿಡ್ 19 ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತನನ್ನು ಸೇರಿಸಿಕೊಳ್ಳದೆ ನಿರ್ಲಕ್ಷ್ಯ ತೋರಲಾಗಿದೆ. ಹಾವೇರಿ ಕೋವಿಡ್ ಆಸ್ಪತ್ರೆಯಲ್ಲಿ ಬೆಡ್ ಕೊರತೆ ಉಂಟಾಗಿದೆ. ಇದರಿಂದ ಸುಮಾರು ಎರಡು ಗಂಟೆ ಸಮಯ ಆಸ್ಪತ್ರೆ ಮುಂದೆ ನಿಂತಿದ್ದ ಅಂಬುಲೆನ್ಸ್‌ನಲ್ಲೇ ಕೊರೊನಾ ಸೋಂಕಿತ ಕುಳಿತಿದ್ದರು. ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲ. ಹೀಗಾಗಿ ಬೆಡ್ ಖಾಲಿ ಆಗುವರೆಗೂ ಕಾಯಿರಿ ಎಂದು ಆಸ್ಪತ್ರೆ …

Read More »

ಶ್ರೀ ಬಿ. ಎಲ್. ಸಂತೋಷ್ ಅವರ ಸಮಾರೋಪಜನಸಂವಾದ ಕಾರ್ಯಕ್ರಮ………..

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ. ಎಲ್. ಸಂತೋಷ್ ಅವರು ಇಂದು ಕರ್ನಾಟಕ ಜನಸಂವಾದ ಸಮಾರೋಪ ಕಾರ್ಯಕ್ರಮದಲ್ಲಿ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದರು. ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ವಾರ್ಡ್ ನಂಬರ್ 47 ಬಿಜೆಪಿ ಪದಾಧಿಕಾರಿಗಳು ವೀಕ್ಷಣೆ ಮಾಡಿದರು . ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚ ಉಪಾಧ್ಯಕ್ಷ ಮಹೇಂದ್ರ ಕೌತಾಳ , ಬಗರ್ ಹುಕುಂ ಸದಸ್ಯರಾದ ರಾಮು ಯಾದಗಿರಿ , ಸೀಳನ್ ಜೆವಿರ್ , ಧಾರವಾಡ ಜಿಲ್ಲಾ ಎಸ್ಸಿ …

Read More »

ಸಂಸದೆ ಸುಮಲತಾ ಅಂಬರೀಷ ಅವರಿಗೆ ಕೊರೊನಾ ಸೋಂಕು ದೃಢ

ಆತ್ಮೀಯರೆ, ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ. ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ …

Read More »

ಅನ್ಯ ರಾಜ್ಯಗಳಿಂದ ಬರುವವರಿಗೆ 14 ದಿನ ಕಡ್ಡಾಯವಾಗಿ ಹೋಮ್ ಕ್ವಾರಂಟೈನ್ ಜಾರಿ ಮಾಡಿದೆ.

ಬೆಂಗಳೂರು,ಜು.6-ರಾಜ್ಯದಲ್ಲಿ ಕೊರೊನಾ ಸೊಂಕಿನ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊನೆಗೂ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಅನ್ಯ ರಾಜ್ಯಗಳಿಂದ ಬರುವವರಿಗೆ 14 ದಿನ ಕಡ್ಡಾಯವಾಗಿ ಹೋಮ್ ಕ್ವಾರಂಟೈನ್ ಜಾರಿ ಮಾಡಿದೆ. ಮಹಾರಾಷ್ಟ್ರ ಸೇರಿದಂತೆ ಯಾವುದೇ ರಾಜ್ಯಗಳಿಂದ ಇನ್ನು ಮುಂದೆ ಕರ್ನಾಟಕಕ್ಕೆ ಆಗಮಿಸುವ ಪ್ರತಿಯೊಬ್ಬ ವ್ಯಕ್ತಿಯು ಕಡ್ಡಾಯವಾಗಿ 14 ದಿನ ಹೋಂ ಕ್ವಾರಂಟೈನ್‍ಗೆ ಒಳಗಾಗಬೇಕೆಂದು ಕಂದಾಯ ಇಲಾಖೆ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಮಂಜುನಾಥ್ ಪ್ರಸಾದ್ ಅವರು ಈ …

Read More »

ನಿಮ್ಹಾನ್ಸ್ ಗೂ ಕಾಲಿಟ್ಟ ಕೊರೊನಾ, ಆ್ಯಂಬುಲೆನ್ಸ್ ಡ್ರೈವರ್ ಹಾಗೂ 30 ಸಿಬ್ಬಂದಿಗೆ ಪಾಸಿಟಿವ್

ಬೆಂಗಳೂರು, ಜು.6-ನಿಮ್ಹಾನ್ಸ್ ಆಸ್ಪತ್ರೆಯ ಆ್ಯಂಬುಲೆನ್ಸ್ ಡ್ರೈವರ್ ಹಾಗೂ 30 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಿಮ್ಹಾನ್ಸ್ ಆಸ್ಪತ್ರೆಯ ವೈದ್ಯರು, ಸ್ಟಾಫ್ ನರ್ಸ್, ಚಾಲಕ ಹಾಗೂ ಸಿಬ್ಬಂದಿಗೆ ಕೊರೊನಾ ವೈರಸ್ ತಗುಲಿದೆ. ಸುಮಾರು 30 ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದು, ಇಲ್ಲಿ ಆತಂಕ ಹೆಚ್ಚಾಗಿದೆ. ಕೊರೊನಾ ಪಾಸಿಟಿವ್ ಆಗಿದ್ದ ವ್ಯಕ್ತಿಗಳನ್ನು ಕೆಲ ಸಿಬ್ಬಂದಿ ಐಸೊಲೇಷನ್ ಮಾಡಿದ್ದರು. ಹೀಗಾಗಿ ಅವರಿಗೂ ಸೋಂಕು ತಗುಲಿದೆ. ಆ್ಯಂಬುಲೆನ್ಸ್ ಡ್ರೈವರ್ ಮತ್ತು ಸಿಬ್ಬಂದಿ ಭೈರಸಂದ್ರದಲ್ಲಿರುವ ಕ್ವಾಟ್ರರ್ಸ್‍ನಲ್ಲಿ ವಾಸವಾಗಿದ್ದು, ಇದೀಗ …

Read More »

ಸಶಸ್ತ್ರ ಪಡೆಗಳ ಶೌರ್ಯವನ್ನು ಪ್ರಶ್ನಿಸಿ ರಾಷ್ಟ್ರವನ್ನು ನಿರಾಶೆಗೊಳಿಸಿದ್ದಾರೆಬಿಜೆಪಿ:ರಾಹುಲ್ ಗಾಂಧಿ

ನವದೆಹಲಿ,ಜು.6- ರಾಹುಲ್ ಗಾಂಧಿ ಅವರು ರಕ್ಷಣಾ ಸ್ಥಾಯಿ ಸಮಿತಿಯ ಒಂದೇ ಒಂದು ಸಭೆಯಲ್ಲೂ ಭಾಗವಹಿಸುವುದಿಲ್ಲ, ಜವಾಬ್ದಾರಿಯುತ ಪ್ರತಿಪಕ್ಷದ ನಾಯಕ ಏನು ಮಾಡಬಾರದೋ ಅದನ್ನೇ ಅವರು ಮಾಡುತ್ತಿದ್ದಾರೆ. ಸಶಸ್ತ್ರ ಪಡೆಗಳ ಶೌರ್ಯವನ್ನು ಪ್ರಶ್ನಿಸಿ ರಾಷ್ಟ್ರವನ್ನು ನಿರಾಶೆಗೊಳಿಸಿದ್ದಾರೆ ಎಂದು ಬಿಜೆಪಿ ತಿರುಗೇಟು ನೀಡಿದೆ. ಚೀನಾ-ಭಾರತದ ಗಡಿ ವಿವಾದ ಕುರಿತು ರಾಹುಲ್ ಗಾಂಧಿ ಸರ್ಕಾರದ ವಿರುದ್ಧದ ಆಕ್ರಮಣಕಾರಿ ಪ್ರಶ್ನೆ ಮುಂದುವರಿಸುತ್ತಿದ್ದಂತೆ, ಇದನ್ನೇ ಗುರಿಯಾಗಿಸಿಕೊಂಡಿರುವ ಬಿಜೆಪಿ, ಕಾಂಗ್ರೆಸ್ ನಾಯಕ ಸಂಸತ್ತಿನ ರಕ್ಷಣಾ ಸ್ಥಾಯಿ ಸಮಿತಿಯ ಒಂದೇ …

Read More »

ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚು ಶ್ರಮವಹಿಸಬೇಕು.:ಸತೀಶ ಜಾರಕಿಹೊಳಿ

ಚಿಕ್ಕೋಡಿ : ಕಾಂಗ್ರೆಸ್ ಪಕ್ಷವೂ ಹಿಂದಿನಿಗಿಂತಲ್ಲೂ ವಿಭಿನ್ನವಾಗಿ  ಮುನ್ನಡೆಯಲಿದೆ. ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚು ಶ್ರಮವಹಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸೋಮವಾರ ಭೇಟಿ ನೀಡಿ  ಅವರು ಮಾತನಾಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ತುಂಬಾ ಉತ್ಸಾಹಿ ಇದ್ದಾರೆ. ಪಕ್ಷವನ್ನು ಕಟ್ಟುವ ಛಲ ಅವರಲ್ಲಿದೆ. ಆದ ಕಾರಣ ಅವರೊಂದಿಗೆ ಮುನ್ನಡೆದರೆ ಮುಂದಿನ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೆ ಬರುತ್ತದೆ ಎಂದು …

Read More »

ಬಾಗಲಕೋಟೆಯಲ್ಲಿ ರಿಜಿಸ್ಟರ ಮ್ಯಾರೇಜಗೆ ಮಾತ್ರ ಅವಕಾಶ, ಮದುವೆ, ಸೀಮಂತ ಕಾರ್ಯಗಳಿಗೆ ಅನುಮತಿ ನಿಷೇಧ

ಬಾಗಲಕೋಟೆ : ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ನಡೆಯುವ ಮದುವೆ, ಸೀಮಂತ ಕಾರ್ಯಕ್ರಮಗಳನ್ನು ಮುಂದಿನ ಆದೇಶದ ವರೆಗೆ ನಿಷೇಧಿಸಲಾಗಿದ್ದು, ರಿಜಿಸ್ಟರ ಮದುವೆಗೆ ಮಾತ್ರ ಅವಕಾಶವಿರುವುದಾಗಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ನಡೆಯುತಿರುವ ಮದುವೆ ಸಮಾರಂಭಗಳಲ್ಲಿ ಹೆಚ್ಚು ಜನ ಭಾಗವಹಿಸುತ್ತಿದ್ದು, ಇದರ ಪರಿಣಾಮ ಕಾರ್ಯಕ್ರಮದಲ್ಲಿ ಭಾಗವಹಿಸಿದರಿಗೂ ಕೊರೊನಾ ಸೋಂಕು ಹರಡುತ್ತಿರುವುದನ್ನು ಗಮನಿಸಿದ ಜಿಲ್ಲಾ ಉಸ್ತುವಾರಿ …

Read More »

ಅತಿ ಕಡಿಮೆ ‘ಆಕ್ಟಿವ್ ಕೇಸ್’ ಹೊಂದಿರುವ ಕರ್ನಾಟಕದ ಐದು ಜಿಲ್ಲೆಗಳು..

ಬೆಂಗಳೂರು, ಜುಲೈ 6: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 23 ಸಾವಿರ ಗಡಿ ದಾಟಿದೆ. ದೇಶದಲ್ಲಿ ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಜ್ಯಗಳ ಪೈಕಿ ಟಾಪ್ ಹತ್ತರೊಳಗೆ ಕರ್ನಾಟಕ ಗುರುತಿಸಿಕೊಂಡಿದೆ. ಒಂದು ಹಂತದಲ್ಲಿ ಇತರೆ ರಾಜ್ಯಗಳಿಗೆ ಮಾದರಿ ಎನಿಸಿಕೊಂಡಿದ್ದ ಕರ್ನಾಟಕ ಈಗ ಗಂಭೀರ ಸ್ಥಿತಿ ತಲುಪಿತ್ತಿದೆ. ಈವರೆಗೂ ರಾಜ್ಯದಲ್ಲಿ 23,474 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಅದರಲ್ಲಿ 9847 ಜನರು ಗುಣಮುಖರಾಗಿದ್ದು, 13,251 ಕೇಸ್‌ಗಳು ಸಕ್ರಿಯವಾಗಿದೆ. ಈ ಪೈಕಿ ಬೆಂಗಳೂರು …

Read More »

ಅಂಬುಲೆನ್ಸ್‌ಗೆ ಕರೆ ಮಾಡಿದ್ರೆ ಬಂದಾಗ ಕಳಿಸ್ತೀವಿ ಅಂದ ಸಿಬ್ಬಂದಿ!

ಬೆಂಗಳೂರು: ಕೊರೊನಾ ಮಹಾಮಾರಿಯ ಅಟ್ಟಹಾಸ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲು ಕೆಲವರು ಅಂಬುಲೆನ್ಸ್ ಸಿಗದೆ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ. ಈ ಮಧ್ಯೆ ಅಪಘಾತ ಸಂಭವಿಸಿ ರೋಗಿ ಒದ್ದಾಡುತ್ತಿದ್ದರೂ ಅಂಬುಲೆನ್ಸ್ ಗಳು ಸಿಗುತ್ತಿಲ್ಲ. ಇದಕ್ಕೆ ಉದಾಹರಣೆ ಎಂಬಂತೆ ಸಿಲಿಕಾನ್ ಸಿಟಿಯಲ್ಲೊಂದು ಘಟನೆ ನಡೆದಿದೆ. ಹೌದು. ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬರು ಕುಸಿದು ಬಿದ್ದಿದ್ದಾರೆ. ಈ ವೇಳೆ ಅಂಬುಲೆನ್ಸ್ ಗೆ ಕರೆ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಘಟನೆಯಿಂದಾಗಿ ವ್ಯಕ್ತಿಯ ಕಾಲಿಗೆ …

Read More »