Breaking News

Daily Archives: ಜುಲೈ 14, 2020

400ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಕುಟುಂಬಗಳಿಗೆ ಸೋನು ಸೂದ್ ಆರ್ಥಿಕ ನೆರವು

ಮುಂಬೈ: ಬಾಲಿವುಡ್ ನಟ ಸೋನು ಸೂದ್ ಈಗಾಗಲೇ ಲಾಕ್‍ಡೌನ್ ವೇಳೆ ಸಂಕಷ್ಟದಲ್ಲಿದ್ದ ನೂರಾರು ಜನರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇದೀಗ ನಟ ಸೋನು ಸೂದ್ ಮತ್ತೊಮ್ಮೆ ಕೊರೊನಾ ಸಂಕಷ್ಟದಲ್ಲಿರುವ ಕುಟುಂಬದವರಿಗೆ ಸಹಾಯದ ಹಸ್ತ ಚಾಚಿದ್ದಾರೆ. ಕೊರೊನಾ ಪ್ರೇರಿತ ರಾಷ್ಟ್ರವ್ಯಾಪಿ ಲಾಕ್‍ಡೌನ್‍ನಿಂದಾಗಿ ಮೃತ ಮತ್ತು ಗಾಯಗೊಂಡಿರುವ ವಲಸೆ ಕಾರ್ಮಿಕರ 400ಕ್ಕೂ ಹೆಚ್ಚು ಕುಟುಂಬಗಳಿಗೆ ಆರ್ಥಿಕ ನೆರವು ನೀಡುವುದಾಗಿ ನಟ ಸೋನು ಸೂದ್ ಘೋಷಣೆ ಮಾಡಿದ್ದಾರೆ. ನಟ ಸೋನು ಸೂದ್ …

Read More »

ಬೆಂಗಳೂರಿನಿಂದ ಮುಂದುವರಿದ ವಲಸೆ- ಬೆಳ್ಳಂಬೆಳಗ್ಗೆ ವಾಹನ ದಟ್ಟಣೆ ಶುರು

ಬೆಂಗಳೂರು: ಇಂದು ರಾತ್ರಿ 8 ಗಂಟೆಯ ಬಳಿಕ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ಕೂಡ ಜನ ಬೆಂಗಳೂರು ತೊರೆಯುತ್ತಿದ್ದಾರೆ. ಕುಟುಂಬ ಸಮೇತ ಗಂಟು ಮೂಟೆ ಕಟ್ಟಿಕೊಂಡು ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ ಇವತ್ತು ಗುಳೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಮೆಜೆಸ್ಟಿಕ್‍ನಿಂದ ಗುಳೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಒಂದು ವಾರ ಲಾಕ್‍ಡೌನ್ ಇದೆ. ಹೀಗಾಗಿ ಊರಲ್ಲಿ ಇದ್ದು ಬರೋಣ …

Read More »

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ರಾಜ್ಯದ ಹಲವೆಡೆ ಮುಂಗಾರು ಮಳೆ ಚುರುಕುಗೊಂಡಿದ್ದು, ಇನ್ನೊಂದೆಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ …

Read More »

ಉ. ಕರ್ನಾಟಕ, ಮಲೆನಾಡು, ಕರಾವಳಿ ಭಾಗದ ಹಲವೆಡೆ ಮಳೆ………….

ಬೆಂಗಳೂರು: ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ಭಾಗದ ಹಲವೆಡೆ ಮಳೆ ಮುಂದುವರೆದಿದ್ದು, ಹಳ್ಳಕೊಳ್ಳಗಳು ತುಂಬುತ್ತಿವೆ. ಕೆಲವೆಡೆ ಪ್ರವಾಹ ಪರಿಸ್ಥಿತಿಯೂ ಕಂಡುಬರಲು ಶುರುವಾಗಿದೆ. ಈ ಬೆನ್ನಲ್ಲೇ ಸರ್ಕಾರ ಎಚ್ಚೆತ್ತಿದೆ. ಇಂದು ನಡೆದ ಡಿಸಿಗಳ ಸಭೆಯಲ್ಲಿ ಮಳೆ ಮತ್ತು ಪ್ರವಾಹ ಸಂಬಂಧ ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ, ಹೆಚ್ಚು ಮಳೆ ಆಗುತ್ತಿರುವ ಪ್ರದೇಶದಲ್ಲಿ ಜನರ ಸ್ಥಳಾಂತರಕ್ಕೆ ಮೊದಲೇ ಸ್ಥಳ ಗುರುತಿಸುವಂತೆ ಸೂಚಿಸಿದರು. ಮಹಾರಾಷ್ಟ್ರದ ಕೋಲ್ಹಾಪುರ ಡಿಸಿ ಜೊತೆ ಸತತ ಸಂಪರ್ಕದಲ್ಲಿದ್ದು, ಕೃಷ್ಣಾ …

Read More »