Breaking News

Daily Archives: ಜುಲೈ 17, 2020

ನಮಾಜ್‍ಗೆ ಅವಕಾಶ ಕೇಳಿದ ಮುಸ್ಲಿಂ ಮುಖಂಡರ ವಿರುದ್ಧ ಉಮೇಶ್ ಕತ್ತಿ ಗರಂ………..

ಚಿಕ್ಕೋಡಿ(ಬೆಳಗಾವಿ): ನಮಾಜ್ ಮಾಡಲು ಅವಕಾಶ ಕೇಳಿದ ಮುಸ್ಲಿಂ ಮುಖಂಡರ ಮೇಲೆ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಗರಂ ಆಗಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.   ಹುಕ್ಕೇರಿ ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಹುಕ್ಕೇರಿ ಪಟ್ಟಣದಲ್ಲಿ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ತುರ್ತು ಸಭೆ ನಡೆಸಿದ್ದಾರೆ. ಈ ವೇಳೆ ಅಭಿಪ್ರಾಯ ಸಂಗ್ರಹಿಸಿ ಒಂದು ವಾರ ಹುಕ್ಕೇರಿ ತಾಲೂಕು ಲಾಕ್‍ಡೌನ್ ಮಾಡಲು ತೀರ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ …

Read More »

ಪಾಸಿಟಿವ್ ಬಂದ ಕುಟುಂಬದವ್ರ ಜೊತೆ ಕ್ವಾರಂಟೈನ್‍ಗೆ ಪಂಚಾಯತ್ ಸದಸ್ಯ ವಿರೋಧ

ಬಾಗಲಕೋಟೆ: ಪಾಸಿಟಿವ್ ಬಂದ ಮನೆಯವರು ಹಾಗೂ ಪಕ್ಕದ ಮನೆಯವರನ್ನು ಒಂದೇ ಕಡೆ ಕ್ವಾರಂಟೈನ್ ಮಾಡಿರೋದಕ್ಕೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಇತರೆ ಎರಡು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಪ್ರಸಂಗ ನಡೆದಿದೆ. ಈ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ನಲ್ಲಿರುವ ಕ್ವಾರಂಟೈನ್ ಸೆಂಟರ್ ಆವರಣದಲ್ಲಿ ನಡೆದಿದೆ. ಕ್ವಾರಂಟೈನ್ ಸೆಂಟರ್ ಆವರಣದಲ್ಲಿ ಗುಡಿಸಲು ಹಾಕಿಕೊಂಡು ಕುಳಿತ ಕುಳಗೇರಿ ಕ್ರಾಸ್ ಗ್ರಾಪಂ ಸದಸ್ಯ ಹನುಮಂತ ನರಗುಂದ ಪ್ರಸನ್ನ ಹಾಗೂ ಮಂಜುನಾಥ …

Read More »

ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಅಮಾನವೀಯತೆಗೆ ವೃದ್ಧ ಬಲಿ……….

ಬೆಳಗಾವಿ: ಮಹಾಮಾರಿ ಕೊರೊನಾನಿಂದಾಗಿ ಬೆಡ್, ಅಂಬುಲೆನ್ಸ್, ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಅನೇಕರು ಸಾವನ್ನಪ್ಪುತ್ತಿರುವ ಅಮಾನವೀಯ ಘಟನೆ ಪ್ರತಿದಿನ ಬೆಳಕಿಗೆ ಬರುತ್ತಿವೆ. ಇದೀಗ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಅಮಾನವೀಯತೆಗೆ ವೃದ್ಧ ಬಲಿಯಾಗಿದ್ದಾರೆ. ಕೋವಿಡ್ ಕೇರ್ ಸೆಂಟರಿನಲ್ಲಿ ಕೊರೊನಾ ಸೋಂಕಿತ ವೃದ್ಧ ಬೆತ್ತಲೆಯಾಗಿ ನೆಲದ ಮೇಲೆ ಒದ್ದಾಡಿ ಸಾವನ್ನಪ್ಪಿದ್ದಾರೆ. ಜಿಲ್ಲೆ ಅಥಣಿ ತಾಲೂಕಿನ ರಡ್ಡೇರಟ್ಟಿ ಗ್ರಾಮದ 65 ವರ್ಷದ ಸೋಂಕಿತ  ಮೃತಪಟ್ಟಿದ್ದಾರೆ. ಸೋಮವಾರ ಬೆಳಗ್ಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ವೃದ್ಧ …

Read More »

3.5 ಲಕ್ಷ ಮೌಲ್ಯದ ಚಿನ್ನದ ಮಾಸ್ಕ್ ಧರಿಸಿ ಗಮನಸೆಳೆದ ಉದ್ಯಮಿ!

ಭುವನೇಶ್ವರ: ಕೊರೊನಾ ಮಹಾಮಾರಿ ದೇಶವನ್ನು ಒಕ್ಕರಿಸಿದ ಬಳಿಕ ಸ್ಯಾನಿಟೈಸರ್ ಬಳಕೆ ಹಾಗೂ ಮಾಸ್ಕ್ ಗೆ ತುಂಬಾನೆ ಪ್ರಾಮುಖ್ಯತೆ ಕೊಡಲಾಗುತ್ತಿದೆ. ಮಾಸ್ಕ್ ಇಲ್ಲದೆ ಹೊರಗಡೆ ಓಡಾಡುವಂತಿಲ್ಲ. ಕೆಲವೆಡೆ ಪೊಲೀಸರು ಆಸ್ಕ್ ಧರಿಸಿದ್ದಕ್ಕೆ ದಂಡ ವಿಧಿಸಿರುವ ಪ್ರಸಂಗಗಳೂ ಇವೆ. ಈ ಮಧ್ಯೆ ಮಾಸ್ಕ್ ನಲ್ಲೂ ಫ್ಯಾಶನ್ ಕಂಡುಕೊಂಡಿದ್ದು, ಉದ್ಯಮಿಗಳು ಚಿನ್ನದ ಮಾಸ್ಕ್ ಮೊರೆ ಹೋಗಿದ್ದಾರೆ.   ಹೌದು. ಪುಣೆ ವ್ಯಕ್ತಿಯ ಬಳಿಕ ಇದೀಗ ಒಡಿಶಾದ ಕತಕ್ ಮೂಲದ ಉದ್ಯಮಿ ಅಲೋಕ್ ಮೊಹಂತಿ 3.5 …

Read More »

ನಿಷೇದಾಜ್ಞೆ ಇದ್ದರುಚಾಮುಂಡಿ ಬೆಟ್ಟ ಏರಿದ ಶೋಭಾ ಕರಂದಾ ಜ್ಲೆ

ಮೈಸೂರು: ಆಷಾಢ ಮಾಸದ ಕೊನೆ ಶುಕ್ರವಾರ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಬರಿಗಾಲಲ್ಲಿ ಮೈಸೂರಿನ ಚಾಮುಂಡಿ ಬೆಟ್ಟ ಹತ್ತಿದ್ದಾರೆ. ಶೋಭಾ ಕರಂದ್ಲಾಜೆ ಅವರು ಪ್ರತಿ ಆಷಾಢ ಮಾಸದಲ್ಲೂ ಮೈಸೂರಿಗೆ ಬಂದು ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತುತ್ತಾರೆ. ಬಳಿಕ ತಾಯಿ ಚಾಮುಂಡಿಯ ದರ್ಶನ ಪಡೆದುಕೊಳ್ಳುತ್ತಾರೆ. ಅದರಂತೆಯೇ ಇಂದು ನಾಲ್ಕನೇ ಆಷಾಢ ಶುಕ್ರವಾರವಾದ ಹಿನ್ನೆಲೆಯಲ್ಲಿ ಈ ಬಾರಿಯೂ ಶೋಭಾ ಕರಂದ್ಲಾಜೆ ಮುಂಜಾನೆಯೇ ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ, ತಾಯಿಯ ದರ್ಶನ ಪಡೆದುಕೊಂಡಿದ್ದಾರೆ. ಆಷಾಢ …

Read More »

ಭಾರತ ದಲ್ಲಿ 10ಲಕ್ಷ ದಾಟಿದೆ ಸೋಂಕಿತ ರ ಸಂಖ್ಯೆ..

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಎಂಬ ಹೆಮ್ಮಾರಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಜನ ತತ್ತರಿಸಿ ಹೋಗಿದ್ದಾರೆ. ಭಾರತದಲ್ಲಿ ಕೊರೊನಾ ಸೋಂಕು ದಾಖಲೆ ಬರೆದಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷದ ಗಡಿ ದಾಟಿದೆ. ಗುರುವಾರ ಒಂದೇ ದಿನ 34,956 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 10,03,832ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 687 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನೂ 3,42,473 ಸಕ್ರೀಯ ಪ್ರಕರಣಗಳಿದ್ದು, …

Read More »

ಆಸ್ಪತ್ರೆಯ ಬಾತ್‍ರೂಮ್ ಕಿಟಕಿಯಲ್ಲಿ ನೇಣುಬಿಗಿದುಕೊಂಡು ರೋಗಿ ಆತ್ಮಹತ್ಯೆ

ನವದೆಹಲಿ: ಇಲ್ಲಿನ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬ ಆತ್ಮಹತ್ಯೆಗೆ ಶರಣಾದ ದುರಂತ ಘಟನೆ ನಡೆದಿದೆ. ಆತ್ಮಹತ್ಯೆಗೊಳಗಾದ ರೋಗಿಯನ್ನು ರಾಜ್‍ಮನಿ ಸತ್ತರ್ ಎಂದು ಗುರುತಿಸಲಾಗಿದೆ. ಈತ ಆಸ್ಪತ್ರೆಯ ಬಾತ್ ರೂಮಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಲವು ದಿನಗಳಿಂದ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಈ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದು ಈ ನಿರ್ಧಾರ ಕೈಗೊಂಡಿರಬಹುದು ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಸ್ಥಳದಲ್ಲಿ ಯಾವುದೇ ರೀತಿಯ ಡೆತ್ ನೋಟ್ ಪತ್ತೆಯಾಗಿಲ್ಲ. ಸಾಂದರ್ಭಿಕ ಚಿತ್ರ ಆಸ್ಪತ್ರೆ ಸಿಬ್ಬಂದಿ …

Read More »

ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು…………………

ಮೈಸೂರು: ಕತ್ತು ಕೊಯ್ದುಕೊಂಡು ಯುವ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡು ತಾಲೂಕಿನ ದುಗ್ಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಇವರಿಬ್ಬರು ಜುಲೈ 9 ರಂದು ಆತ್ಮತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜೊಂದರಲ್ಲಿ ಇಬ್ಬರು ವ್ಯಾಸಂಗ ಮಾಡುತ್ತಿದ್ದು, ಕಾಮರ್ಸ್ ವಿಭಾಗದಲ್ಲಿ ಕ್ಲಾಸ್‍ಮೇಟ್ಸ್ ಆಗಿದ್ದರು. ಕಾಲೇಜಿನಲ್ಲೇ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿದೆ. ಆದರೆ ಇಬ್ಬರ ಮದುವೆಗೆ ಜಾತಿ ಅಡ್ಡಿಯಾಗಿತ್ತು. ಅಲ್ಲದೆ ಇವರಿಬ್ಬರು ಅಪ್ರಾಪ್ತರು ಅನ್ನೋ ಹಿನ್ನೆಲೆ ಕೂಡ ಇತ್ತು. …

Read More »

‘ಮಹಾ’ ಪೊಲೀಸರಿಗೆ 25 ಸಾವಿರ ಫೇಸ್‍ಶೀಲ್ಡ್ ನೀಡಿದ ನಟ ಸೋನು ಸೂದ್

ಮುಂಬೈ: ಕೊರೊನಾ ಮಹಾಮಾರಿ ದೇಶವನ್ನು ಒಕ್ಕರಿಸಿದ ಬಳಿಕ ದಿನಬೆಳಗಾದರೆ ಸಾಕು ಅನೇಕ ಮಾನವೀಯ ಕಾರ್ಯಗಳು ಬೆಳಕಿಗೆ ಬರುತ್ತಲೇ ಇವೆ. ಅಂತೆಯೇ ಬಾಲಿವುಡ್ ನಟ ಸೋನು ಸೂದ್ ಕೂಡ ಲಾಕ್‍ಡೌನ್ ಸಂಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುತ್ತಲೇ ಬಂದಿದ್ದಾರೆ. ಇತ್ತೀಚೆಗಷ್ಟೇ ಕೊರೊನಾ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ್ದ ನಟ ಇದೀಗ ಮಹಾರಾಷ್ಟ್ರ ಪೊಲೀಸರ ಸಹಾಯಕ್ಕೆ ನಿಂತಿದ್ದಾರೆ. ಹೌದು. ಮಹಾರಾಷ್ಟ್ರ ಪೊಲೀಸರಿಗೆ ಸುಮಾರು 25 ಸಾವಿರ ಫೇಸ್ ಶೀಲ್ಡ್ ನೀಡುವ ಮೂಲಕ ಸೋನು …

Read More »