Breaking News

Daily Archives: ಜುಲೈ 19, 2020

8 ಗರ್ಭಿಣಿಯರಿಗೆ ಕೊರೊನಾ ಸೋಂಕು ದೃಢ : ಗೋಕಾಕ್ ಸರ್ಕಾರಿ ಆಸ್ಪತ್ರೆ ಸೀಲ್ ಡೌನ್….?

ಬೆಳಗಾವಿ : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲೂ ಕೊರೊನಾ ಹೆಚ್ಚುತ್ತಿದೆ. ಗೋಕಾಕ್ ನಲ್ಲಿ ಒಂದೇ ದಿನ 8 ಗರ್ಭಿಣಿಯರಲ್ಲಿ ಸೋಂಕು ದೃಢಪಟ್ಟಿದ್ದು, ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ. ಗೋಕಾಕ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಒಂದೇ ದಿನ 8 ಗರ್ಭಿಣಿಯಲ್ಲಿ ಮಾರಕ ಸೋಂಕು ಪಾಸಿಟಿವ್ ಬಂದಿದೆ. ಹೀಗಾಗಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ಸಿಬ್ಬಂದಿಯಲ್ಲೂ ಆತಂಕ …

Read More »

ಭಾನುವಾರ ಬಿಡುಗಡೆಯಾದ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಜಿಲ್ಲೆಯ 87 ಜನರಿಗೆ ಸೊಂಕು ದೃಡವಾಗಿದೆ.

ಬೆಳಗಾವಿ- ಕೊರೋನಾ ಚೆಲ್ಲಾಟ ಬೆಳಗಾವಿ ಜಿಲ್ಲೆಯ ಜನಜೀವನವನ್ನು ಬುಡಮೇಲು ಮಾಡಿದೆ ಬೆಳಗಾವಿ ಜಿಲ್ಲೆಯಲ್ಲಿ ಪ್ರತಿ ದಿನವೂ ಮಹಾಮಾರಿ ವೈರಸ್ ದಾಳಿ ಮಾಡುತ್ತಲೇ ಇದ್ದು ಇಂದು ಭಾನುವಾರ ಬಿಡುಗಡೆಯಾದ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಜಿಲ್ಲೆಯ 87 ಜನರಿಗೆ ಸೊಂಕು ದೃಡವಾಗಿದೆ. ಇಂದು ಸಂಡೇ ಲಾಕ್ ಡೌನ್ ನಡುವೆಯೂ ಬೆಳಗಾವಿ ಜಿಲ್ಲೆಯಲ್ಲಿ 87 ಸೊಂಕಿತರು ಪತ್ತೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಸಾವಿರ ಗಡಿ ದಾಟಿ 1013 ಕ್ಕೇ ಏರಿಕೆಯಾಗಿದೆ ಇಂದು …

Read More »

ಮೇಕಪ್ ಹಾಕಿದ ಫೀಲ್ ಹಂಚಿಕೊಂಡ ವಿಕ್ರಾಂತ್ ರೋಣ……..

ಹೈದರಾಬಾದ್: ಬಹುದಿನಗಳ ಬಳಿಕ ಕೆಲ ದಿನಗಳ ಹಿಂದೆ ಚಿತ್ರೀಕರಣಕ್ಕೆ ಸರ್ಕಾರ ಅನುಮತಿ ನೀಡಿದೆ. ಇದರಿಂದಾಗಿ ಕಲಾವಿದರಿಗೆ ಹೊಸ ಹುರುಪು ಬಂದಿದ್ದು, ಹಲವರು ತಮ್ಮ ಕಾಯಕದತ್ತ ಮರಳುತ್ತಿದ್ದಾರೆ. ಅಲ್ಲದೆ ಸುಧೀರ್ಘ ರಜೆ ಬಳಿಕ ಕೆಲಸಕ್ಕೆ ಹೋಗುತ್ತಿರುವ ಅನುಭವ ಸೆಲೆಬ್ರೆಟಿಗಳಿಗೆ ಆಗುತ್ತಿದೆ. ಈ ಕುರಿತು ನಟ ಕಿಚ್ಚ ಸುದೀಪ್ ಸಹ ಸುಧೀರ್ಘ ಸಮಯದ ಬಳಿಕ ಶೂಟಿಂಗ್‍ಗೆ ಮರಳಿದ ಅನುಭವವನ್ನು ಹಂಚಿಕೊಂಡಿದ್ದಾರೆ. ಲಾಕ್‍ಡೌನ್ ಹಿನ್ನೆಲೆ ತುಂಬಾ ದಿನಗಳ ಕಾಲ ಎಲ್ಲ ಸೆಲೆಬ್ರೆಟಿಗಳು ಚಿತ್ರೀಕರಣದಿಂದ ದೂರ …

Read More »

ವಾರಸುದಾರರಿಲ್ಲದ 34 ಜಾನುವಾರುಗಳು ಗೋಶಾಲೆಗೆ ರವಾನೆ………..

ರಾಯಚೂರು: ನಗರದ ರಸ್ತೆಗಳಲ್ಲಿ ತಿರುಗಾಡುತ್ತಿದ್ದ ಬೀಡಾಡಿ ದನಗಳನ್ನ ಹಿಡಿದು ಪೊಲೀಸರು ಗೋಶಾಲೆಗೆ ಬಿಟ್ಟಿದ್ದಾರೆ. ನಗರಸಭೆ ಮಾಡಬೇಕಾದ ಕೆಲಸವನ್ನ ರಾಯಚೂರು ಪೊಲೀಸರು ಮಾಡಿದ್ದಾರೆ ಲಾಕ್‍ಡೌನ್ ಹಿನ್ನೆಲೆ ಅನಾವಶ್ಯಕವಾಗಿ ರಸ್ತೆಯಲ್ಲಿ ಓಡಾಡುವವ ಬೈಕ್ ಜಪ್ತಿ ಮಾಡಿ ದಂಡ ಹಾಕುತ್ತಿರುವ ಪೊಲೀಸರು ಜಾನುವಾರುಗಳನ್ನ ಗೋಶಾಲೆಗೆ ತಲುಪಿಸಿದ್ದಾರೆ. ವಾರಸುದಾರರಿಲ್ಲದ ಒಟ್ಟು 34 ಜಾನುವಾರುಗಳನ್ನ ಹಿಡಿದು ಗೋಶಾಲೆಗೆ ಸಾಗಿಸಿದ್ದಾರೆ. ನಗರದ ಸಾರ್ವಜನಿಕರು ಸಾಕಷ್ಟು ಬಾರಿ ದೂರು ನೀಡಿದರು ನಗರಸಭೆ ತಲೆಕೆಡಿಸಿಕೊಂಡಿರಲಿಲ್ಲ. ಹೀಗಾಗಿ ಬೀಡಾಡಿ ದನಗಳು ರಸ್ತೆಯಲ್ಲೆ ಓಡಾಡುತ್ತಿದ್ದರಿಂದ …

Read More »

ಹಾಸನದಲ್ಲಿ ಮುಂದುವರಿದ ಸಾವಿನ ಸರಣಿ – ಓರ್ವ ಸಾವು, 41 ಜನರಿಗೆ ಕೊರೊನಾ

ಹಾಸನ: ಜಿಲ್ಲೆಯಲ್ಲಿ ಇಂದು ಒಬ್ಬರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ ಹಾಗೂ ಹೊಸದಾಗಿ 41 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 886ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ತಿಳಿಸಿದ್ದಾರೆ. ಇದುವರೆಗೆ 553 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 305 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 28 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 16 ಜನ ತೀವ್ರ …

Read More »

ಬೆಳಗಾವಿ ಜಿಲ್ಲೆಯ 87 ಜನರಿಗೆ ಸೊಂಕು………..

ಕೊರೋನಾ ಚೆಲ್ಲಾಟ ಬೆಳಗಾವಿ ಜಿಲ್ಲೆಯ ಜನಜೀವನವನ್ನು ಬುಡಮೇಲು ಮಾಡಿದೆ ಬೆಳಗಾವಿ ಜಿಲ್ಲೆಯಲ್ಲಿ ಪ್ರತಿ ದಿನವೂ ಮಹಾಮಾರಿ ವೈರಸ್ ದಾಳಿ ಮಾಡುತ್ತಲೇ ಇದ್ದು ಇಂದು ಭಾನುವಾರ ಬಿಡುಗಡೆಯಾದ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಜಿಲ್ಲೆಯ 87 ಜನರಿಗೆ ಸೊಂಕು ದೃಡವಾಗಿದೆ. ಇಂದು ಸಂಡೇ ಲಾಕ್ ಡೌನ್ ನಡುವೆಯೂ ಬೆಳಗಾವಿ ಜಿಲ್ಲೆಯಲ್ಲಿ 87 ಸೊಂಕಿತರು ಪತ್ತೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಸಾವಿರ ಗಡಿ ದಾಟಿ 1013 ಕ್ಕೇ ಏರಿಕೆಯಾಗಿದೆ ಇಂದು ಬೆಳಗಾವಿ …

Read More »

50 ವರ್ಷದ ಶಿಗ್ಗಾಂವಿಯ ತಹಶೀಲ್ದಾರರಿಗೆ ಸೇರಿದಂತೆ ಐದು ಜನ ಕುಟುಂಬ ಸದಸ್ಯರಿಗೂ ಸಹ ಕೊರೊನಾ ಸೋಂಕು ಧೃಡ

ಹಾವೇರಿ: ಜಿಲ್ಲೆಯಲ್ಲಿ 54 ಜನರಲ್ಲಿ ಮಹಾಮಾರಿ ಕೊರೊನಾ ಸೋಂಕು ಧೃಡಪಟ್ಟಿದೆ. ಶಿಗ್ಗಾಂವಿ ತಾಲೂಕಿನಲ್ಲಿ 30 ಜನರಿಗೆ ಸೋಂಕು ದೃಢಪಟ್ಟಿದ್ದು, 50 ವರ್ಷದ ಶಿಗ್ಗಾಂವಿಯ ತಹಶೀಲ್ದಾರರಿಗೆ ಸೇರಿದಂತೆ ಐದು ಜನ ಕುಟುಂಬ ಸದಸ್ಯರಿಗೂ ಸಹ ಕೊರೊನಾ ಸೋಂಕು ಧೃಡಪಟ್ಟಿದೆ. ಹಾವೇರಿ ತಾಲೂಕಿನಲ್ಲಿ 9 ಜನರಿಗೆ ವಕ್ಕರಿಸಿದ್ದು 44 ವರ್ಷದ ದಿನಪತ್ರಿಕೆಯ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಸಹ ಸೋಂಕು ಧೃಡಪಟ್ಟಿದೆ. ರಾಣೆಬೆನ್ನೂರು ತಾಲೂಕಿನ ಐವರಿಗೆ ವಕ್ಕರಿಸಿದ್ದು, ಆಸ್ಪತ್ರೆಯ 44 ವರ್ಷದ ಎಫ್.ಡಿ.ಸಿ ಹಾಗೂ 33 …

Read More »

ಕೋವಿಡ್ ಲ್ಯಾಬ್ ಆರಂಭಿಸಿ: ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪತ್ರ

ಬೆಳಗಾವಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತಲಿದ್ದು, ಸೋಂಕು ತಡೆಗಟ್ಟಲು ಅಗತ್ಯ ಸೌಲಭ್ಯಗಳ ಕಲ್ಪಿಸುವುದರ ಜತೆಗೆ ಹೋಬಳಿ ಮಟ್ಟದಲ್ಲಿಯೂ ಕೋವಿಡ್ ಕೇಂದ್ರಗಳನ್ನು ಆರಂಭಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.   ಸೋಂಕಿತರ ಸಂಖ್ಯೆ ಹೆಚ್ಚುತಲಿದೆ. ಬಿಮ್ಸ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಇಬ್ಬರು ನರಳಾಡಿ ಪ್ರಾಣ ಕಳೆದುಕೊಂಡಿದ್ದಾರೆ. ವ್ಯಾಪಕವಾಗಿ ಹಡರುತ್ತಿರುವ ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಂಡು …

Read More »

ರಾಜ್ಯದ ಯಾವ ಭಾಗದಲ್ಲೂ ಇನ್ಮುಂದೆ ಲಾಕ್ ಡೌನ್ ಇಲ್ಲ: ಸಚಿವ ಎಸ್ ಟಿ ಸೋಮಶೇಖರ್

ಮೈಸೂರು: ರಾಜ್ಯದ ಯಾವ ಭಾಗದಲ್ಲೂ ಇನ್ಮುಂದೆ ಲಾಕ್ ಡೌನ್ ಇಲ್ಲ. ಇದನ್ನು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಇನ್ನು ಮುಂದೆ ಪಾಸಿಟಿವ್ ಪ್ರಕರಣಗಳು ಕಂಡು ಬಂದರೆ ಆ ಮನೆಗಳನ್ನು ಮಾತ್ರ ಸೀಲ್ ಡೌನ್ ಮಾಡಲಾಗುವುದು ಇಲ್ಲವೇ ಬೀದಿಗಳನ್ನು ಸೀಲ್ ಡೌನ್ ಮಾಡಲಾಗುವುದು ಎಂದು ಸಹಕಾರಿ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಸಂಬಂಧ ಕೈಗೊಂಡ ಕ್ರಮಗಳ ಕುರಿತು ಪರಿಶೀಲನೆ ಸಭೆಯಲ್ಲಿ ಮಾತನಾಡಿ, ಯಾವುದೇ …

Read More »

ಪ್ರಭಾಸ್‍ಗೆ ಬಾಲಿವುಡ್ ಪದ್ಮಾವತಿ ದೀಪಿಕಾ ಜೋಡಿ……….

ಹೈದರಾಬಾದ್: ಬಾಹುಬಲಿ ಖ್ಯಾತಿಯ ಡಾರ್ಲಿಂಗ್ ಪ್ರಭಾಸ್ ಅವರಿಗೆ ಬಾಲಿವುಡ್ ಪದ್ಮಾವತಿ ದೀಪಿಕಾ ಪಡುಕೋಣೆ ಅವರು ನಾಯಕಿ ಆಗುತ್ತಾರಾ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿತ್ತು. ಇದೀಗ ಈ ವಿಚಾರ ಅಧಿಕೃತವಾಗಿ ಘೋಷಣೆಯಾಗಿದೆ. ಹೌದು.ಪ್ರಭಾಸ್ ಜೊತೆ ನಟಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. ತೆಲುಗು ಚಲನಚಿತ್ರ ನಿರ್ಮಾಣ ಸಂಸ್ಥೆ ‘ವೈಜಯಂತಿ ಮೂವೀಸ್’ ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ಪ್ರಭಾಸ್ ಮತ್ತು ದೀಪಿಕಾ ಒಟ್ಟಿಗೆ ಅಭಿನಯಿಸುತ್ತಿರುವ ವಿಚಾರವನ್ನು ಅಧಿಕೃತವಾಗಿ ಸೋಶಿಯಲ್ ಮೀಡಿಯಾದಲ್ಲಿ ಪ್ರಕಟಿಸಿದೆ. ಜೊತೆಗೆ …

Read More »