Breaking News

Daily Archives: ಜುಲೈ 22, 2020

ಐಸಿಯುನಲ್ಲಿದ್ದ ‘ಕೊರೊನಾ’ ರೋಗಿ ಸಾವು : ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಕುಟುಂಬಸ್ಥರ ಆಕ್ರೋಶ

ಬೆಳಗಾವಿ : ಕೊರೊನಾ ಸೋಂಕಿತ ರೋಗಿಯೊಬ್ಬರು ಚಿಕಿತ್ಸೆ ಸಿಗದೇ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಐಸಿಯುನಲ್ಲಿದ್ದ ಕೊರೊನಾ ರೋಗಿ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ್ದಾರೆ, ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಆಸ್ಪತ್ರೆ ಮುಂಭಾಗದ ಗಾಜು ಪುಡಿ ಪುಡಿ ಮಾಡಿದ್ದಾರೆ. ಬಳಿಕ ಆಸ್ಪತ್ರೆಯ ವೈದ್ಯರ ಮೇಲೂ ಕೂಡ ಹಲ್ಲೆ ನಡೆಸಲಾಗಿದೆ. ಘಟನೆ ನಡೆದ …

Read More »

ಮಹಾಮಳೆಗೆ ಮನೆ ಕಳೆದುಕೊಂಡು 2 ವರ್ಷವಾದ್ರೂ ಸೂರು ಕೊಡದ ಜಿಲ್ಲಾಡಳಿತ

ಮಡಿಕೇರಿ: ಸ್ವರ್ಗದಂತಹ ಸ್ಥಳವಾಗಿರುವ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮುಕ್ಕೋಡ್ಲು ಗ್ರಾಮದಲ್ಲಿ 2018ರ ಆಗಸ್ಟ್ ತಿಂಗಳಲ್ಲಿ ಕಂಡು ಕೇಳರಿಯದಂತಹ ಭೀಕರ ಭೂಕುಸಿತ ಮತ್ತು ಜಲಪ್ರಳಯ ಸಂಭವಿಸಿತ್ತು. ಈ ವೇಳೆ ಮುಕ್ಕೋಡ್ಲಿನ ಪರಮೇಶ್ವರ್ ನಾಯಕ್ ಮತ್ತು ಜಯಮ್ಮ ದಂಪತಿ ನೆಲೆಸಿದ್ದ ಮನೆಯ ಪಕ್ಕದಲ್ಲೇ ಹರಿಯುತ್ತಿದ್ದ ಹೊಳೆ ಸಂಪೂರ್ಣವಾಗಿ ಆವರಿಸಿಕೊಂಡಿತ್ತು. ಮನೆಯಿಂದ 30 ಅಡಿ ದೂರದಲ್ಲಿದ್ದ ಚಿಕ್ಕ ಹೊಳೆ ನೋಡನೋಡುತ್ತಿದ್ದಂತೆ ನದಿಯಾಗಿ ಪರಿವರ್ತನೆ ಆಗಿತ್ತು. ಇದರಿಂದ ಕಷ್ಟಪಟ್ಟು ಕಟ್ಟಿದ್ದ ಮನೆಯ ಒಂದೊಂದೇ ಭಾಗ …

Read More »

ಬೆಳಗಾವಿ ಯಲ್ಲಿ ಒಟ್ಟು 219 ಜನ ಸೊಂಕಿತರು ಪತ್ತೆ..

ಬೆಳಗಾವಿ ಜಿಲ್ಲೆಯಲ್ಲಿ ಇಂದು ಬುಧವಾರ ಶಾಕಿಂಗ್ ಸುದ್ಧಿ ಹೊರಬಿದ್ದಿದೆ ಇವತ್ತು ಒಂದೇ ದಿನ ಬೆಳಗಾವಿ ಜಿಲ್ಲೆಯಲ್ಲಿ ಬರೊಬ್ಬರಿ 219 ಜನ ಸೊಂಕಿತರು ಪತ್ತೆಯಾಗಿದ್ದಾರೆ. ಇಂದು ಬಿಡುಗಡೆಯಾದ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಒಟ್ಟು 219 ಜನ ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಡಬಲ್ ಸಂಚ್ಯುರಿ ಬಾರಿಸಿ 1315 ಕ್ಕೆ ಏರಿಕೆಯಾಗಿದೆ ಬೆಳಗಾವಿ ಜಿಲ್ಲೆಯ 859 ಜನರಲ್ಲಿ ಸೊಂಕು ಸಕ್ರೀಯವಾಗಿದೆ.

Read More »

ಕೊರೊನಾ ಅಧಿಕಾರಸ್ತರನ್ನು, ಮಂತ್ರಿಗಳನ್ನು ಬಲಿ ತೆಗೆದುಕೊಳ್ಳಲಿದೆ: ಕೋಡಿಶ್ರೀ ಭವಿಷ್ಯ

ಹಾಸನ: ಕೊರೊನಾದಿಂದಾಗಿ ಜಾಗತಿಕ ಮಟ್ಟದಲ್ಲಿ ರಾಜರಿಗೆ ರಾಜೀಕ ಭೀತಿ ಉಂಟಾಗಲಿದ್ದು, ರಾಜರಿಗೆ ತೊಂದರೆ, ನೋವು ಕಾಯಿಲೆ, ಅಪಮಾನ, ರಾಜಭೀತಿ ಉಂಟಾಗಲಿದೆ ಎಂದು ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ, ಕೋಡಿಮಠದಲ್ಲಿ ಮಾತನಾಡಿದ ಶಿವಯೋಗಿ ರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಜಗತ್ತಿನ ಎಲ್ಲಾ ರಾಷ್ಟ್ರಗಳಿಗೆ ರಾಜಭೀತಿ ಉಂಟಾಗಲಿದೆ. ಬರುವ ದಿನಗಳು ಹೆಚ್ಚು ಅಗೋಚರವಾಗಲಿದೆ ಭೂಮಿ ನಡುಗಲಿದೆ, ವಿಪರೀತ ಮಳೆಯಾಗಲಿದೆ ಎಂದು ಹೇಳಿದ್ದಾರೆ. ಈ ಕೊರೊನಾ ದೊಡ್ಡದೊಡ್ಡ ಜನರನ್ನು ಅಧಿಕಾರಸ್ತರನ್ನು ಮತ್ತು …

Read More »

ಭಾರತದಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಚಿನ್ನ – ಬೆಳ್ಳಿ ದರವೂ ಭಾರೀ ಏರಿಕೆ

ನವದೆಹಲಿ: ಭಾರತದಲ್ಲಿ ಚಿನ್ನದ ದರ ಸಾರ್ವಕಾಲಿಕ ದಾಖಲೆ ಬರೆದಿದೆ. ಇದೆ ಮೊದಲ ಬಾರಿಗೆ ಚಿನ್ನದ ಬೆಲೆ 50 ಸಾವಿರ ರೂ. ಗಡಿ ದಾಟಿದೆ. 10 ಗ್ರಾಂ 24 ಕ್ಯಾರೆಟ್‌ ಶುದ್ಧ ಚಿನ್ನದ ಬೆಲೆ ಬೆಂಗಳೂರಿನಲ್ಲಿ 50,720 ರೂ. ಆಗಿದ್ದರೆ ಚೆನ್ನೈನಲ್ಲಿ 51,380 ರೂ. ತಲುಪಿದೆ. 10 ಗ್ರಾಂ 22 ಕ್ಯಾರೆಟ್‌ ಚಿನ್ನದ ಬೆಲೆ ಬೆಂಗಳೂರಿನಲ್ಲಿ 46,520 ರೂ.ಗೆ ಏರಿಕೆ ಆಗಿದ್ದರೆ ಚೆನ್ನೈನಲ್ಲಿ 47,100 ರೂ. ತಲುಪಿದೆ. ಚಿನ್ನದ ಜೊತೆ ಬೆಳ್ಳಿ …

Read More »

ಭಗೀರಥ ಕಾಮೇಗೌಡರಿಗೆ ಕೊರೊನಾ ಪಾಸಿಟಿವ್……………

ಮಂಡ್ಯ: ಆಧುನಿಕ ಭಗೀರಥ ಎಂದೇ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಕಾಮೇಗೌಡರಿಗೆ ಕೊರೊನಾ ವೈರಸ್ ಬಂದಿದೆ. ಸ್ವತಃ ಖರ್ಚಿನಿಂದ ಕೆರೆಗಳನ್ನು ನಿರ್ಮಿಸಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಪ್ರಶಂಸೆ ಪಡೆದಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಾಮೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಇಂದು ಧೃಡವಾಗಿದೆ.ಕಾಮೇಗೌಡರು ಕಳೆದ 15 ದಿನಗಳಿಂದ ಕಾಲು ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಆರಂಭದಲ್ಲಿ ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ …

Read More »

ಕೊರೊನಾ ಗೆದ್ದು ಬಂದವರಿಂದ್ಲೇ ಜಾಗೃತಿ- ಜಿಲ್ಲಾಡಳಿತದಿಂದ ವಿನೂತನ ಪ್ರಯತ್ನ

ಹುಬ್ಬಳ್ಳಿ: ಕೊರೊನಾ ಭಯವನ್ನು ಹೋಗಲಾಡಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಆತ್ಮಸ್ಥೈರ್ಯ ಹೆಚ್ಚಿಸಲು ಜಿಲ್ಲಾಡಳಿತವು ಮಹಾನಗರ ಪಾಲಿಕೆ ಸಹಯೋಗದೊಂದಿಗೆ ವಿನೂತನ ಪ್ರಯತ್ನವನ್ನು ಕೈಗೆತ್ತಿಕೊಂಡಿದೆ. ಈ ಮೂಲಕ ಜನರಲ್ಲಿರುವ ಆತಂಕ ದೂರ ಮಾಡುವ ಮಾರ್ಗವಾಗಿದೆ. ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿ ಹೊರಬಂದವರ ವಿಶೇಷ ತಂಡಗಳನ್ನು ರಚಿಸಿ, ಎನ್‍ಜಿಒ ಸಹಭಾಗಿತ್ವದಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಹಾಗೂ ಆತ್ಮಸ್ಥೈರ್ಯ ಮೂಡಿಸುವ ಯೋಜನೆಯೊಂದನ್ನು ಜಿಲ್ಲಾಡಳಿತ ರೂಪಿಸಿದ್ದು, ಚಿಕಿತ್ಸೆ ಪಡೆದು ಗುಣಮುಖರಾಗಿ ಹೊರಗೆ ಬಂದವರೇ ಇದಕ್ಕೆ …

Read More »

ಬೆಳಗಾವಿ: ನಗರಕ್ಕೆ ಮತ್ತೊಂದು ಉಪ ನೋಂದಣಿ ಕಚೇರಿ ಮಂಜೂರಾಗಿದೆ.

ಬೆಳಗಾವಿ:  ನಗರಕ್ಕೆ ಮತ್ತೊಂದು ಉಪ ನೋಂದಣಿ ಕಚೇರಿ ಮಂಜೂರಾಗಿದೆ.  ದಕ್ಷಿಣ ಮತಕ್ಷೇತ್ರ ಶಾಸಕ ಅಭಯ ಪಾಟೀಲ್ ಅವರು ಮತ್ತೊಂದು  ಉಪ ನೋಂದಣಿ ಆರಂಭಿಸುವಂತೆ ಸಿಎಂ, ಕಂದಾಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಇದೀಗ ಸರ್ಕಾರ  ನೂತನ ಉಪ ನೋಂದಣಿ ಕಚೇರಿ ಪ್ರಾರಂಭಿಸಲು ಅನುಮತಿ ನೀಡಿದೆ.  ಶೀಘ್ರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿ ಕಚೇರಿ ಆರಂಭಿಸಲಾಗುವುದು ಎಂದು ಶಾಸಕ  ಅಭಯ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.  ಜಿಲ್ಲೆಯಲ್ಲಿ ಬೆಳಗಾವಿ ತಾಲೂಕು ದೊಡ್ಡದಾಗಿದೆ. ಪ್ರಸ್ತುತ ಡಿಸಿ ಕಚೇರಿ …

Read More »

ಬೆಳಗಾವಿ:  ಜಿಲ್ಲೆಯ ಪೊಲೀಸ್ ಪೇದೆಗಳಿಗೂ ಕೋವಿಡ್ ಕಾಟ ಆರಂಭ……….

ಬೆಳಗಾವಿ:  ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಪೊಲೀಸ್ ಪೇದೆಗಳಿಗೂ ಕೋವಿಡ್ ಕಾಟ ಆರಂಭವಾಗಿದೆ. ಮಚ್ಛೆಯಲ್ಲಿರುವ ಕೆಎಸ್‌ಆರ್‌ಪಿ 2 ನೇ ಪಡೆಯ ಓರ್ವ ಮಹಿಳಾ ಪೇದೆ ಸೇರಿ 12 ಕೆಎಸ್‌ಆರ್‌ಪಿ ಸಿಬ್ಬಂದಿಗೆ ಸೋಂಕು ತಗುಲಿದೆ. ಸೋಂಕು ತಗುಲಿದ ಸಿಬ್ಬಂದಿ ಎಲ್ಲರೂ  ಜಿಲ್ಲೆಯ ಗಡಿ ಭಾಗದ ಕಾಗವಾಡ ಮತ್ತು ಕಗನೊಳ್ಳಿ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ  ನಿಭಾಯಿಸಿದ್ರು. ಕೆಎಸ್ಆರ್ ಪಿ ಎರಡನೇ ಬೆಟಾಲಿಯನ್ ನಲ್ಲಿ 70 ಮಹಿಳಾ ಸಿಬ್ಬಂದಿ ಸೇರಿ …

Read More »

ಕೋವಿಡ್​ 19: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 37,724 ಪ್ರಕರಣ ಪತ್ತೆ, 648 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕೋವಿಡ್​ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ37,724 ಹೊಸ ಕೇಸ್​ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ11,92,915ಕ್ಕೆ ಏರಿಕೆಯಾದ್ರೆ, 648 ಮಂದಿ ಒಂದೇ ದಿನ ಬಲಿಯಾಗಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 28,732ಕ್ಕೆ ಬಂದು ನಿಂತಿದೆ. 11,18,043 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 7,53,050ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 411133 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ …

Read More »