ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 228 ಮಂದಿಗೆ ಕೋವಿಡ್-19 ದೃಢಪಟ್ಟಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ನೀಡಿರುವ ಮಾಹಿತಿ ಪ್ರಕಾರ, ಆಸ್ಪತ್ರೆಗೆ ದಾಖಲಾಗಿದ್ದ 6 ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅಥಣಿ ತಾಲ್ಲೂಕಿನ 58 ವರ್ಷದ ವ್ಯಕ್ತಿ, ಬೈಲಹೊಂಗಲದ 44 ವರ್ಷದ ಪುರುಷ, ಸವದತ್ತಿಯ 65 ವರ್ಷದ ಮಹಿಳೆ, ರಾಯಬಾಗ ತಾಲ್ಲೂಕಿನ ಕುಡಚಿಯ 55 ವರ್ಷದ ಮಹಿಳೆ ಹಾಗೂ 46 ವರ್ಷದ ಪುರುಷ ಹಾಗೂ ಬೆಳಗಾವಿ ತಾಲ್ಲೂಕಿನ 54 ವರ್ಷದ …
Read More »Daily Archives: ಜುಲೈ 29, 2020
ಕೋವಿಡ್-19: ಪ್ರತೀ ದಿನ ತನ್ನ ದಾಖಲೆಯನ್ನು ತಾನೇ ಮುರಿಯುತ್ತಿರುವ ಕರ್ನಾಟಕ, ಕೊರೋನಾ ಪಾಸಿಟಿವ್ ದುಪ್ಪಟ್ಟು!
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಅಬ್ಬರ ಹೆಚ್ಚಾಗುತ್ತಲೇ ಇದ್ದು, ಪ್ರತೀನಿತ್ಯ ಕರ್ನಾಟಕ ತನ್ನ ದಾಖಲೆಯನ್ನು ತಾನೇ ಮುರಿಯುತ್ತಿದೆ. ರಾಜ್ಯದಲ್ಲಿ ಸೋಂಕಿನ ಸರಾಸರಿ ಪಾಸಿಟಿವಿಟಿ ಪ್ರಮಾಣ ದುಪ್ಪಟ್ಟಾಗಿದೆ. ಕಳೆದ ಜು.10ರವರೆಗೆ ಪ್ರತಿ 100 ಪರೀಕ್ಷೆಗಳಲ್ಲಿ ಸರಾಸರಿ ಶೇ.4.18ರಷ್ಟಿದ್ದ ಪಾಸಿಟಿವಿಟಿ ದರ ಇದೀಗ ಶೇ.8.60ಕ್ಕೆ ಏರಿಕೆಯಾಗಿದೆ. ಅಲ್ಲದೆ, ಕಳೆದ 18 ದಿನಗಳಲ್ಲಿ ಪ್ರತಿ 100 ಪರೀಕ್ಷೆಗಳಲ್ಲಿ ಸರಾಸರಿ ಶೇ.16.88 ಮಂದಿಗೆ ಸೋಂಕು ದೃಢಪಡುವ ಮೂಲಕ ಆತಂಕ ಹೆಚ್ಚಾಗುವಂತೆ ಮಾಡಿದೆ. ರಾಜ್ಯದಲ್ಲಿ ಜು.10ರವರೆಗೆ ಪಾಸಿಟಿವಿಟಿ …
Read More »ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನಾ ವರದಿ ಅನುಷ್ಠಾನಕ್ಕೆ ಆಡಳಿತಾತ್ಮಕ ಒಪ್ಪಿಗೆ ನೀಡಿದ ಸರ್ಕಾರ
ಬೆಳಗಾವಿ: ಉತ್ತರ ಕರ್ನಾಟಕದ ಮಹತ್ವಾಕಾಂಕ್ಷೆಯ ಕುಡಿಯುವ ನೀರಿನ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಒಪ್ಪಿಗೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ ನದಿಗೆ ಅಣೆಕಟ್ಟು ನಿರ್ಮಾಣ ಮಾಡಿ. ಕಾಲುವೆ ಮುಖಾಂತರ 1.72 ಟಿಎಂಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ ಕಳಸಾ ನಾಲಾ ತಿರುವು ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನೆರಸೆ ಗ್ರಾಮದ ಬಳಿ ಬಂಡೂರ …
Read More »ಕೋವಿಡ್ ಸೋಂಕಿತರಿಗೆ ದಿನಬಳಕೆ-ಮೆಡಿಕಲ್ ಕಿಟ್ ವಿತರಣೆ
ಗೋಕಾಕ: ಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ಚಾಚುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ ಎಂದು ಹಿರಿಯ ತಜ್ಞ ವೈದ್ಯ ಡಾ| ಆರ್.ಎಸ್. ಬೆಣಚಿನಮರಡಿ ಹೇಳಿದರು. ಮಂಗಳವಾರ ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊರೊನಾ ರೋಗಿಗಳಿಗೆ ಕೊಡಮಾಡಿದ ದಿನಬಳಕೆಯ ಮತ್ತು ಮೆಡಿಕಲ್ ಕಿಟ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಲಾಕ್‌ಡೌನ್ ಸಮಯದಲ್ಲಿ ಅರಭಾವಿ ಕ್ಷೇತ್ರದ ಪ್ರತಿ ಕುಟುಂಬಕ್ಕೆ ದಿನಸಿ ಕಿಟ್ ವಿತರಿಸಿದ್ದ ಶಾಸಕರು ಈಗ …
Read More »ಇಂದು ಹಾಪ್ ಸೆಂಚುರಿ ಬಾರಿಸಿದ ಕೊರೋನಾ: ನಗರದ ಒಂದೇ ಕುಟುಂಬದ ಹತ್ತು ಜನರಿಗೆ ತಗುಲಿದ ಸೋಂಕು
ಗೋಕಾಕ: ಗೋಕಾಕ ತಾಲೂಕಿನಲ್ಲಿ ಮಾರಣಾಂತಿಕ ಕೊರೋನಾ ಸೋಂಕು ಪ್ರಥಮ ಬಾರಿಗೆ ಹಾಪ್ ಸೆಂಚುರಿ ಬಾರಿಸಿದ್ದು ಒಂದೇ ಕುಟುಂಬದ 10 ಜನರಿಗೆ ಕೊರೋನಾ ಧೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯ ಅಧಿಕಾರಿ ಜಗದೀಶ ಜಿಂಗಿ ಮಾಹಿತಿ ನೀಡಿದ್ದಾರೆ. ಗೋಕಾಕ ತಾಲೂಕಿನಲ್ಲಿ ಇಂದು ಒಟ್ಟು 57 ಪ್ರಕರಣಗಳು ವರದಿಯಾಗಿದ್ದು ಗೋಕಾಕ ನಗರದಲ್ಲಿಯೆ 24 ಸೋಂಕಿತರು ಪತ್ತೆಯಾಗಿದ್ದಾರೆ. ನಗರದ ವಿದ್ಯಾನಗರದ ಒಂದೇ ಕುಟುಂಬದ 10 ಜನರಿಗೆ ಕೊರೋನಾ ತಗುಲಿದ್ದು ಆತಂಕ ಹೆಚ್ಚಿಸಿದೆ. ಉಳಿದಂತೆ ಗೋಕಾಕ …
Read More »ನಾನುಸಿಎಂ ಆಗಿಯೇ ಆಗ್ತೀನಿ: ಕತ್ತಿ
ಚಿಕ್ಕೋಡಿ(ಬೆಳಗಾವಿ): ಇನ್ನೂ 20 ವರ್ಷ ನಾನು ರಾಜಕಾರಣದಲ್ಲಿ ಇರುತ್ತೇನೆ. ಈ 20 ವರ್ಷದ ಒಳಗೆ ನಾನು ಮುಖ್ಯಮಂತ್ರಿ ಆಗಿಯೇ ಆಗುತ್ತೆನೆ ಎಂದು ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದ ಈಶ್ವರಲಿಂಗ ಸಮುದಾಯ ಭವನದ ಶೀಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಡಿಯೂರಪ್ಪ ಯಾವತ್ತೂ ನಮ್ಮ ನಾಯಕರು. ಅದರಲ್ಲಿ ಎರಡು ಮಾತಿಲ್ಲ. ಅತಿವೃಷ್ಟಿ, ಅನಾವೃಷ್ಟಿ ಕೋವಿಡ್ ಸೇರಿದಂತೆ ಎಂತಹ ಪರಿಸ್ಥಿತಿ ಬಂದರೂ ನಿಭಾಯಿಸುವ ಶಕ್ತಿ …
Read More »ಪಂಜಾಬ್ ಸರ್ಕಾರ ಶೀಘ್ರದಲ್ಲೇ 11 ಮತ್ತು 12ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್ ವಿತರಿಸಲಿದೆ.
ಚಂಡೀಗಡ: ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಸರ್ಕಾರ ಶೀಘ್ರದಲ್ಲೇ 11 ಮತ್ತು 12ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್ ವಿತರಿಸಲಿದೆ. ಈಗಾಗಲೇ ಒಟ್ಟು 50 ಸಾವಿರ ಸ್ಮಾರ್ಟ್‌ಫೋನ್‌ಗಳು ಪಂಜಾಬಿಗೆ ಆಗಮಿಸಿದ್ದು, ಯಾರ ಬಳಿ ಫೋನ್ ಇಲ್ಲವೋ ಆ ವಿದ್ಯಾರ್ಥಿನಿಯರಿಗೆ ಈ ಫೋನ್‌ಗಳನ್ನು ನೀಡಲಾಗುವುದು. ಕೋವಿಡ್ 19 ಸಂಕಷ್ಟದ ಸಮಯದಲ್ಲಿ ಈ ಫೋನ್‌ಗಳು ಸಹಾಯವಾಗಲಿದೆ ಎಂದು ಸಿಎಂ ಅಮರಿಂದರ್ ಸಿಂಗ್ ತಿಳಿಸಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಜನತೆಗೆ …
Read More »ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿ- ದಿಢೀರ್ ದೆಹಲಿಗೆ ದೌಡಾಯಿಸಿದ ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು: ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಚುರುಕಾಗಿದೆ. ಇದರ ನಡುವೆಯೇ ನಿಗಮ ಮಂಡಳಿಗಳ ನೇಮಕ ಮಾಡಿ ಆದೇಶ ನೀಡಿದ್ದ ಸಿಎಂ ಪರೋಕ್ಷವಾಗಿ ಸಚಿವ ಸಂಪುಟ ಪುನಾರಚನೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು. ಇದರ ನಡುವೆಯೇ ಸಚಿನ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ದೆಹಲಿಗೆ ಭೇಟಿ ನೀಡಿದ್ದಾರೆ. ನಿನ್ನೆ ರಾತ್ರಿಯೇ ದೆಹಲಿಗೆ ಭೇಟಿ ನೀಡಿರುವ …
Read More »ಅನುಷ್ಕಾಳನ್ನು ಭೇಟಿಯಾಗದಿದ್ದರೆ ನಾನು ಬದಲಾಗುತ್ತಿರಲಿಲ್ಲ: ಪತ್ನಿಯನ್ನು ಹಾಡಿಹೊಗಳಿದ ವಿರಾಟ್
ನವದೆಹಲಿ: ಅನುಷ್ಕಾಳನ್ನು ಭೇಟಿಯಾಗದಿದ್ದರೆ ಜೀವನದಲ್ಲಿ ನಾನು ಬದಲಾಗುತ್ತಿರಲಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಹೇಳಿದ್ದಾರೆ. ಕೊರೊನಾ ಲಾಕ್‍ಡೌನ್ ನಂತರ ಭಾರತ ಕ್ರಿಕೆಟ್ ತಂಡ ಯಾವುದೇ ಕ್ರಿಕೆಟ್ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಮನೆಯಲ್ಲೇ ಉಳಿದಿರುವ ಆಟಗಾರರು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿ ಇದ್ದಾರೆ. ಈಗ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ಜೊತೆ ‘ಓಫನ್ ನೆಟ್ಸ್ ವಿತ್ ಅಗರ್ವಾಲ್’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿರುವ ವಿರಾಟ್, ಪತ್ನಿಯನ್ನು ಹಾಡಿಹೊಗಳಿದ್ದಾರೆ …
Read More »ರೈಲಿನಡಿ ಸಿಲುಕ್ತಿದ್ದ ವ್ಯಕ್ತಿಯನ್ನ ರಕ್ಷಿಸಿದ ಭದ್ರತಾ ಸಿಬ್ಬಂದಿ………..
ಮುಂಬೈ: ರೈಲಿನಡಿ ಸಿಲುಕುತ್ತಿದ್ದ ವ್ಯಕ್ತಿಯನ್ನ ಭದ್ರತಾ ಸಿಬ್ಬಂದಿ ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಮುಂಬೈ ಕಲ್ಯಾಣ್ ರೈಲ್ವೇ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ಮಧ್ಯಾಹ್ನ 52 ವರ್ಷದ ದಿಲೀಪ್ ಮಂಡಗೆ ಎಂಬವರು ಚಲಿಸುತ್ತಿದ್ದ ರೈಲಿನಿಂದ ಹೊರಗೆ ಜಿಗಿಯಲು ಪ್ರಯತ್ನಿಸಿದ್ದರು. ಈ ವೇಳೆ ಆಯತಪ್ಪಿದ ದಿಲೀಪ್ ಅವರನ್ನು ಪ್ಲಾಟ್‍ಫಾರಂನಲ್ಲಿ ಕರ್ತವ್ಯನಿರತ ಭದ್ರತಾ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ದಿಲೀಪ್ ಮಗನೊಂದಿಗೆ ಮುಂಬೈನಿಂದ ಕಯಾಮತಿ ಎಕ್ಸ್ ಪ್ರೆಸ್ ಮೂಲಕ ಮಧ್ಯಪ್ರದೇಶದ ಬುರಹಾನಪುರಕ್ಕೆ ಹೊರಟಿದ್ದರು. …
Read More »