Breaking News

Monthly Archives: ಜುಲೈ 2020

ನರಗುಂದದಲ್ಲಿ 20 ಅಡಿಯಷ್ಟು ಭೂಮಿ ಕುಸಿತ- ಜನರಲ್ಲಿ ಆತಂಕ

ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮನೆಯ ಮುಂದೆ ಭೂ ಕುಸಿತವಾಗಿದ್ದು, ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ್ ತವರಲ್ಲೇ ಭೂ ಕುಸಿತ ಸಂಭವಿಸಿದೆ. ಜಿಲ್ಲೆಯ ನರಗುಂದದ ಶಂಕರಲಿಂಗ ಕಾಲೋನಿಯ ಅಂಬೋಜಿ ಪೇಟೆಯವರ ಮನೆ ಮುಂದೆ ಭೂಮಿ ಕುಸಿದಿದೆ. ಬೆಳಗ್ಗೆ ಈ ಘಟನೆ ನಡೆದಿದ್ದು, ಕ್ಷಣಾರ್ಧದಲ್ಲಿ ಬಾರಿ ಅನಾಹುತ ತಪ್ಪಿದೆ. ಸುಮಾರು 20 ಅಡಿಯಷ್ಟು ಭೂಮಿ ಕುಸಿತವಾಗಿದೆ. ಇದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಅಂತರ್ಜಲ ಹೆಚ್ಚಳ, ನರಗುಂದ …

Read More »

ಆರ್.ಅಶೋಕ್ ಹುಟ್ಟುಹಬ್ಬದ ನೆಪದಲ್ಲಿ ಸಚಿವರ ಡಿನ್ನರ್ ಪಾರ್ಟಿ

ಚಿಕ್ಕಮಗಳೂರು: ಕಂದಾಯ ಸಚಿವ ಆರ್ ಅಶೋಕ್ ಅವರ ಹುಟ್ಟುಹಬ್ಬ ಬುಧವಾರವಿದ್ದು, ಈ ಹಿನ್ನೆಲೆಯಲ್ಲಿ ಸಚಿವರೇ ರಾತ್ರಿ ಕರ್ಫ್ಯೂ ಉಲ್ಲಂಘಿಸಿ ಪಾರ್ಟಿ ಆಯೋಜನೆ ಮಾಡಿದ್ದಾರೆ. ಹೌದು. ಚಿಕ್ಕಮಗಳೂರಿನ ಕೈಮರ ಸಮೀಪ ಇರುವ ಖಾಸಗಿ ಹೋಟೆಲಿನಲ್ಲಿ ಬರ್ತ್ ಡೇ ಪಾರ್ಟಿ ಆಯೋಜಿಸಿದ್ದಾರೆ. ನೈಟ್ ಪಾರ್ಟಿಯಿಂದ ಸೋಂಕು ಹೆಚ್ಚುತ್ತೆ ಅಂದವರೇ ಪಾರ್ಟಿ ಮಾಡಿರುವುದು ಇದೀಗ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಆರ್.ಅಶೋಕ್ ಹುಟ್ಟುಹಬ್ಬದ ನೆಪದಲ್ಲಿ ಸಚಿವರ ಡಿನ್ನರ್ ಪಾರ್ಟಿ ಆಯೋಜಿಸಿದ್ದು, ಪಾರ್ಟಿಯಲ್ಲಿ ಶೆಟ್ಟರ್, ಸಿ.ಟಿ.ರವಿ, …

Read More »

ತಿಂಗಳೊಳಗೆ ಸರ್ಕಾರಿ ಬಂಗಲೆ ಖಾಲಿ ಮಾಡಲು ಪ್ರಿಯಾಂಕಾ ಗಾಂಧಿಗೆ ಸೂಚನೆ

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಭದ್ರತೆಯನ್ನು ಕಡಿಮೆ ಮಾಡಿದ್ದ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದ್ದು, ದೆಹಲಿಯ ಲೋಧಿ ರೋಡ್‍ನಲ್ಲಿ  ಪ್ರಿಯಾಂಕಾ ವಾಸ ಮಾಡುತ್ತಿರುವ ನಂ.35 ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಪ್ರಿಯಾಂಕಾ ಗಾಂಧಿ ಅವರಿಗೆ ಜುಲೈ 1ರಂದು ಮನೆ ಖಾಲಿ ಮಾಡುವಂತೆ ನೋಟಿಸ್ ನೀಡಿದೆ. ಎಸ್‍ಪಿಜಿ ಭದ್ರತೆ ಇಲ್ಲದ ಕಾರಣ ಮನೆ ಖಾಲಿ ಮಾಡುವಂತೆ …

Read More »

ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಯಾವ ದಿನ, ಏನು ಆಹಾರ?

ಬೆಂಗಳೂರು: ಕೊರೊನಾ ಸೋಂಕಿತ ರೋಗಿಗಳಿಗೆ ಯಾವ ದಿನ, ಯಾವ ಆಹಾರ ನೀಡಬೇಕು ಎಂಬುದರ ಕುರಿತು ಸರ್ಕಾರ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲ ಜಿಲ್ಲೆಯ ಕೊರೊನಾ ಆಸ್ಪತ್ರೆಗಳಲ್ಲಿ ಮೆನು ಪ್ರಕಾರ ಆಹಾರ ನೀಡುವಂತೆ ಸೂಚಿಸಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಹಾಗೂ ಪೌಷ್ಠಿಕಾಂಶಯುಕ್ತ ಆಹಾರ ನೀಡಲಾಗುತ್ತಿಲ್ಲ. ಸೂಕ್ತ ಆಹಾರವಿಲ್ಲದೆ ಕೊರೊನಾ ರೋಗಿಗಳು ನರಳುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆ ಸರ್ಕಾರ ತಜ್ಞರ ಜೊತೆ ಚರ್ಚಿಸಿ ಪ್ರತಿ …

Read More »

ನಟ ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಸಿನಿಮಾ 777 ಚಾರ್ಲಿಯಸಖತ್ ಸದ್ದು

ಬೆಂಗಳೂರು: ನಟ ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಸಿನಿಮಾ 777 ಚಾರ್ಲಿ ಸಖತ್ ಸದ್ದು ಮಾಡುತ್ತಿದ್ದು, ಇತ್ತೀಚೆಗೆ ಗೋವಾ ಸೇರಿದಂತೆ ವಿವಿಧ ಭಾಗಗಳಲ್ಲಿ ಚಿತ್ರೀಕರಣ ನಡೆಯುತ್ತಿರುವ ಕುರಿತು ಚಿತ್ರ ತಂಡ ಅಪ್‍ಡೇಟ್ ನೀಡಿತ್ತು. ಇದೀಗ ಮತ್ತೊಂದು ಸಂತಸದ ವಿಚಾರವನ್ನು ಹಂಚಿಕೊಂಡಿದೆ. ರಕ್ಷಿತ್ ಶೆಟ್ಟಿ ಅಭಿನಯದಲ್ಲಿ ಮೂಡಿಬರುತ್ತಿರುವ 777 ಚಾರ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದ್ದು, ಈಗಾಗಲೇ ಸಿನಿಮಾದ ಬಹುಭಾಗ ಚಿತ್ರೀಕರಣ ಪೂರ್ಣಗೊಂಡಿದೆ. ಗೋವಾ, ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. …

Read More »

ಮೂವರು ಆರೋಪಿಗಳಿಗೆ ಸೋಂಕು- ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸೀಲ್‍ಡೌನ್

ಬೆಂಗಳೂರು: ಮೂವರು ಕೊಲೆ ಆರೋಪಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಸಿಲಿಕಾನ್ ಸಿಟಿಯ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸೀಲ್‍ಡೌನ್ ಮಾಡಲು ರೆಡಿಯಾಗಿದೆ. ಈ ಮೂಲಕ ಬೆಂಗಳೂರು ಪಶ್ಚಿಮ ವಿಭಾಗದಲ್ಲಿ ಮತ್ತೊಂದು ಸ್ಟೇಷನ್ ಸೀಲ್‍ಡೌನ್‍ಗೆ ಸಿದ್ಧತೆ ನಡೆದಿದೆ. ಪಶ್ಚಿಮ ವಿಭಾಗದ ಪೊಲೀಸರಿಗೆ ಕೊರೊನಾ ಕಂಟಕವಾಗಿದೆ. ಡಿಸಿಪಿ ಕಚೇರಿ, ಎಸಿಪಿ ಕಚೇರಿ, ಉಪ್ಪಾರಪೇಟೆ, ಮಾರ್ಕೆಟ್, ಕಲಾಸಿಪಾಳ್ಯ, ಚಾಮರಾಜಪೇಟೆ, ಜೆಜೆ ಆರ್ ನಗರ, ಕಾಮಾಕ್ಷಿಪಾಳ್ಯ, ಕೆಪಿ ಅಗ್ರಹಾರ, ಕೆಂಗೇರಿ ಪೊಲೀಸ್ ಠಾಣೆಗಳು ಸೀಲ್ …

Read More »

ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಟ, ನಿಖಿಲ್ ಕುಮಾರಸ್ವಾಮಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ನಿಖಿಲ್ ಕುಮಾರಸ್ವಾಮಿ ಅನ್ನದಾತರ ಬಗ್ಗೆ ಬರೆದುಕೊಂಡಿದ್ದಾರೆ. ನಮ್ಮ ದೇಶ ಕೃಷಿ ಪ್ರಧಾನವಾದ ದೇಶವಾಗಿದ್ದು ರೈತ ಈ ದೇಶದ ಬೆನ್ನೆಲುಬು ಎಂದು ಗೌರವ ಸಲ್ಲಿಸುತ್ತೇವೆ. ಆದರೆ ರೈತರ ಮಕ್ಕಳು ರೈತರಾಗಿ ಅವರ ಕೃಷಿಭೂಮಿಯಲ್ಲಿ ದುಡಿಯಲು ಹಿಂಜರಿದು ನಗರದ ಕಡೆಗೆ ವಲಸೆ ಬಂದು ಬದುಕು ಕಟ್ಟಿಕೊಳ್ಳಲು ಹವಣಿಸುವವರ ಸಂಖ್ಯೆಯೇ ಹೆಚ್ಚು. ತಾವು ಕಲಿತ …

Read More »

ಹಾಸ್ಯನಟ ಮಿಮಿಕ್ರಿ ರಾಜ್‍ಗೋಪಾಲ್ ಇನ್ನಿಲ್ಲ

ಬೆಂಗಳೂರು: ಹಾಸ್ಯನಟ ಮಿಮಿಕ್ರಿ ರಾಜ್‍ಗೋಪಾಲ್ ಅವರು ಇಂದು ತಮ್ಮ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ. ಇಡೀ ರಾಜ್ಯವೇ ಕೊರೊನಾ ವೈರಸ್ ಕಾಟದಿಂದ ತತ್ತರಿಸಿ ಹೋಗುತ್ತಿದೆ. ಈ ನಡುವೆ ಸಾಲು ಸಾಲು ನಟರು ಸಾವನ್ನಪ್ಪುತ್ತಿರುವುದು ಚಿತ್ರರಂಗಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಇತ್ತೀಚೆಗಷ್ಟೇ ಸಾವನ್ನಪ್ಪಿದ ಯುವ ನಟ ಚಿರಂಜೀವಿ ಸರ್ಜಾ ಸಾವಿನ ಸುದ್ದಿ ಮರೆಯುವ ಮುನ್ನವೇ ಹಿರಿಯ ಹಾಸ್ಯನಟ ರಾಜ್‍ಗೋಪಾಲ್ ಅವರು ನಮ್ಮನ್ನು ಅಗಲಿದ್ದಾರೆ. ಕಳೆದ ಕೆಲ ದಿನಗಳಿಂದ ಕಿಡ್ನಿ ಸಮಸ್ಯೆ ಮತ್ತು ಅಸ್ತಮಾ ಸಮಸ್ಯೆಯಿಂದ …

Read More »

ಜುಲೈ ಅಂತ್ಯಕ್ಕೆ ಬೆಂಗ್ಳೂರಲ್ಲಿ 40 ಸಾವಿರ ಕೇಸ್- ತಜ್ಞರಿಂದ ಸರ್ಕಾರಕ್ಕೆ ಡೆಡ್ಲಿ ವಾರ್ನಿಂಗ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮಹಾಸ್ಫೋಟವೇ ಆಗ್ತಿದೆ. ಅದರಲ್ಲೂ ಕೊರೊನಾ ಬೆಂಗಳೂರಿಗೆ ಮಹಾಕಂಟಕ ತಂದೊಡ್ಡುತ್ತೆ ಎಂದು ತಜ್ಞರು ಡೆಡ್ಲಿ ವಾರ್ನಿಂಗ್ ಕೊಟ್ಟಿದ್ದಾರೆ. ಹೌದು. ಬೆಂಗಳೂರು ಈಗಾಗಲೇ ಕೊರೊನಾ ಸೋಂಕಿಗೆ ತತ್ತರಿಸಿದೆ. ಆದರೆ ಇದರ ನಡುವೆ ಮತ್ತೊಂದು ಆತಂಕಕಾರಿ ವಿಚಾರ ಹೊರಬಿದ್ದಿದೆ. ಜುಲೈ ಅಂತ್ಯದ ವೇಳೆಗೆ ಬೆಂಗಳೂರಿನಲ್ಲಿ ಬರೋಬ್ಬರಿ 30 ಸಾವಿರದಿಂದ 40 ಸಾವಿರ ಸೋಂಕು ದಾಖಲಾಗಬಹುದು ಅಂತ ತಜ್ಞ ವೈದ್ಯರಾದ ಸುದರ್ಶನ್ ಬಲ್ಲಾಳ್ ಎಚ್ಚರಿಕೆ ಕೊಟ್ಟಿದ್ದಾರೆ. ಅಲ್ಲದೇ ಮುಂದಿನ 15 …

Read More »

ಸರ್ ಎಂ.ವಿಶ್ವೇಶ್ವರಯ್ಯ ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಸ್ಥಾಪಿಸಿದ್ದ ಮೈಸೂರು ಪೇಪರ್ ಮಿಲ್ ಹಲವು ಕಾರಣಗಳಿಂದ ಸ್ಥಗಿತ

ಶಿವಮೊಗ್ಗ: ಮೈಸೂರು ದಿವಾನರಾಗಿದ್ದ ದಿವಂಗತ ಸರ್ ಎಂ.ವಿಶ್ವೇಶ್ವರಯ್ಯ ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಸ್ಥಾಪಿಸಿದ್ದ ಮೈಸೂರು ಪೇಪರ್ ಮಿಲ್ ಹಲವು ಕಾರಣಗಳಿಂದ ಸ್ಥಗಿತಗೊಂಡಿತ್ತು. ಕಾರ್ಖಾನೆ ಸ್ಥಗಿತಗೊಂಡಿದ್ದರಿಂದ ಸಾವಿರಾರು ಮಂದಿ ಕಾರ್ಮಿಕರು ಅತಂತ್ರರಾಗಿದ್ದರು. ಸರ್ಕಾರ ಕೂಡ ಈ ಹಿಂದೆ ಕಾರ್ಖಾನೆಗೆ ಮರುಜೀವ ನೀಡಲು ಹಲವು ಬಾರಿ ಪ್ರಯತ್ನ ನಡೆಸಿತ್ತು. ಕಾರ್ಖಾನೆ ಆರಂಭಿಸುವಂತೆ ಕಾರ್ಮಿಕರು ಸಹ ಹಲವು ಬಾರಿ ಸರಕಾರಕ್ಕೆ ಮನವಿ ಮಾಡಿದ್ದರು. ಆದರೂ ಕಾರ್ಖಾನೆ ಪುನರ್ ಆರಂಭವಾಗಲೇ ಇಲ್ಲ. ಜಿಲ್ಲೆಯ ಜನಪ್ರತಿನಿಧಿಗಳು …

Read More »