ನವದೆಹಲಿ : ಕರ್ನಾಟಕದಲ್ಲಿ ಕೊರೊನಾ ವೈರಸ್ ಅಬ್ಬರ ಮುಂದುವರೆದಿದ್ದು, ದೇಶದ ಮಹಾನಗರಗಳ ಪೈಕಿ ಬೆಂಗಳೂರು, ಮಹಾರಾಷ್ಟ್ರದ ಪುಣೆ ಮತ್ತು ತೆಲಂಗಾಣದ ಹೈದರಾಬಾದ್ ನಗರಗಳು ಇದೀಗ ಕೊರೊನಾ ಹಾಟ್ ಸ್ಪಾಟ್ ನಗರಳಾಗಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಂದು ತಿಂಗಳಲ್ಲಿ ಕೊರೊನಾದ ಹೊಸ ಪ್ರಕರಣಗಳು ನಿತ್ಯವೂ ಸರಾಸರಿ ಶೇ. 12.90 ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಜೊತೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ ಶೇ. 8.90 ರಷ್ಟು ಹೆಚ್ಚಳವಾಗಿದೆ. ಹೀಗಾಗಿ ಬೆಂಗಳೂರು ದೇಶದಲ್ಲಿ ಸದ್ಯ ಹೊಸ …
Read More »Monthly Archives: ಜುಲೈ 2020
ಹುಬ್ಬಳ್ಳಿ-ಧಾರವಾಡದ 45ಕ್ಕೂ ಹೆಚ್ಚು ಪೊಲೀಸರಿಗೆ ಕೊರೋನಾ
ಹುಬ್ಬಳ್ಳಿ: ನಗರದ ಕಸಬಾಪೇಟೆ ಠಾಣೆ ಪೊಲೀಸರಿಗೆ ಕೊರೋನಾ ಕಾಟ ಮುಂದುವರಿದಿದ್ದು, ಶನಿವಾರ ಮತ್ತೆ ಆರು ಸಿಬ್ಬಂದಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ಇಲ್ಲಿನ ಒಟ್ಟಾರೆ 17 ಪೊಲೀಸರಿಗೆ ಸೋಂಕು ತಗಲಿದ್ದು, ಇನ್ನೂ ಏಳು ಜನ ಹೋಮ್ ಕ್ವಾರಂಟೈನ್‌ನಲ್ಲಿದ್ದಾರೆ. ಆದರೂ ಠಾಣೆಯನ್ನು ಸೀಲ್‌ಡೌನ್ ಮಾಡದಿರುವುದು, ಸ್ಯಾನಿಟೈಸಿಂಗ್ ನಡೆಸದಿರುವುದು ಇನ್ನುಳಿದ ಸಿಬ್ಬಂದಿಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಕಸಬಾಪೇಟೆ ಠಾಣೆಯಲ್ಲಿ ಒಬ್ಬ ಇನಸ್ಪೆಕ್ಟರ್, ಒಬ್ಬ ಸಬ್ ನಸ್ಪೆಕ್ಟರ್, 8 ಎಎಸ್‌ಐ, 17 ಹೆಡ್‌ಕಾನ್‌ಸ್ಟೇಬಲ್, ಇಬ್ಬರು ಮಹಿಳಾ …
Read More »ಕಸ ತುಂಬಿದ ಲಾರಿ ಡಿವೈಡರ್ ಗೆ ಡಿಕ್ಕಿ ವಾಹನ ಚಾಲಕನ ಸಾವು
ಬೆಳಗಾವಿ- ಬೆಳಗಾವಿಯ ಗಲ್ಲಿಗಲ್ಲಿ ಗಳಲ್ಲಿ ಕಸ ತುಂಬಿಕೊಂಡು ತುರಮರಿ ಕಚರಾ ಡಿಪೋಗೆ ಹೊರಟಿದ್ದ ಟಿಪ್ಪರ್ ಗಾಂಧೀ ನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೆಳಗಿನ ಜಾವ ಟಿಪ್ಪರ್ ಡಿವೈಡರ್ ಗೆ ಡಿಕ್ಕಿ ಹೊಡೆದ ಬಳಿಕ ವಾಹನ ಚಾಲಕ ಟಿಪ್ಪರ್ ನಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಜ್ಯೋತಿ ನಗರದ ನಿವಾಸಿ 35 ವರ್ಷದ ಜಿತೇಂದ್ರ ಬಾಬು ಢಾವಾಳೆ ಮತ ಪಟ್ಟ ದುರ್ದೈವಿಯಾಗಿದ್ದಾನೆ ಲಾಕ್ …
Read More »ಆಸ್ಪತ್ರೆ ವರೆಗೆ ಬಂದರೂ ಸೋಂಕಿತನನ್ನು ಅಡ್ಮಿಟ್ ಮಾಡಿಕೊಳ್ಳದ ಜಿಮ್ಸ್ ಸಿಬ್ಬಂದಿ ; ಆರೋಗ್ಯ ಇಲಾಖೆ ನಿರ್ಲಕ್ಷ್ಯ ಬಟಾಬಯಲು
ಕಲಬುರ್ಗಿ: ಕಲಬುರ್ಗಿಯಲ್ಲಿ ಕೊರೋನಾ ದಿನೇ ದಿನೇ ವ್ಯಾಪಕಗೊಳ್ಳಲು ಆರೋಗ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯವೂ ಕಾರಣವಾಗುತ್ತಿದೆ. ಕಲಬುರ್ಗಿ ನಗರಗಲ್ಲಿ ಆರೋಗ್ಯ ಇಲಾಖೆ ನಿರ್ಲಕ್ಷ್ಯ ಎಷ್ಟರಮಟ್ಟಿಗೆ ಇದೇ ಎನ್ನುವುದು ಬಟಾಬಯಲಾಗಿದೆ. ವ್ಯಕ್ತಿಗೆ ಸೋಂಕು ದೃಢವಾಗಿ ಒಂದು ದಿನವಾದ್ರೂ ಕೇರ್ ಮಾಡದ ಸಿಬ್ಬಂದಿ. ಮೊನ್ನೆ ಸೋಂಕು ಬಂದ್ರು ಆಸ್ಪತ್ರೆಗೆ ಕರೆದೊಯ್ಯದೆ ಸಿಬ್ಬಂದಿ ನಿರ್ಲಕ್ಷ್ಯ. ಆಸ್ಪತ್ರೆಗೆ ಬಂದರೂ ಅಡ್ಮಿಟ್ ಮಾಡಿಕೊಳ್ಳದೆ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಕೊರೋನಾ ಸೋಂಕಿತನನ್ನು ಮನೆಯಿಂದ ಕರೆದೊಯ್ಯದ ಆರೋಗ್ಯ ಇಲಾಖೆ ಸಿಬ್ಬಂದಿ. ಕೊನೆಗೆ …
Read More »ನೇಮಕಾತಿ ಮಾಡಿಕೊಳ್ಳಲು ವೈದ್ಯರು ಬರುತ್ತಿಲ್ಲ, ವೇತನ ಹೆಚ್ಚಿಸಿ: ಪಾಲಿಕೆ
ಬೆಂಗಳೂರು: ಬೆಂಗಳೂರಲ್ಲಿ ಕೊರೋನಾ ಚಿಕಿತ್ಸಾ ಕಾರ್ಯಕ್ಕೆ ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳುವ ಸೂಚಿಸಿರುವ ವೈದ್ಯರು ಹಾಗೂ ಇತರೆ ಸಿಬ್ಬಂದಿಯ ಸಂಭಾವನೆ ಹೆಚ್ಚಳ ಮಾಡುವಂತೆ ಬಿಬಿಎಂಪಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ನಗರದಲ್ಲಿ ಕೊರೋನಾ ಚಿಕಿತ್ಸೆಗೆ ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ 300 ವೈದ್ಯರು, 600 ನರ್ಸ್‌ಗಳು ಸೇರಿ 1700 ವೈದ್ಯಕೀಯ ಸಿಬ್ಬಂದಿ ಹಾಗೂ ಡಿ ಗ್ರೂಪ್ ನೌಕರರನ್ನು 6 ತಿಂಗಳ ಅವಧಿಗೆ ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ನಿಗದಿತ ಮೊತ್ತದ ವೇತನ ಗೊತ್ತುಪಡಿಸಿ ಅನುಮತಿ …
Read More »ದುಂದುವೆಚ್ಚ ಬಿಡಿ; ಆರೋಗ್ಯ ಸೌಕರ್ಯಕ್ಕೆ ಒತ್ತು ಕೊಡಿ: ಪಾಲಿಕೆ ಸದಸ್ಯ ಸಲಹೆ
ಬೆಂಗಳೂರು: ಕೊರೊನಾ ಸೋಂಕು ಹಬ್ಬುತ್ತಿರುವ ಈ ಸಂದರ್ಭದಲ್ಲಿ ಬಿಬಿಎಂಪಿ ದುಂದುವೆಚ್ಚಕ್ಕೆ ಕಡಿವಾಣ ಹಾಕಬೇಕು. ಆರೋಗ್ಯ ಸೌಕರ್ಯ ಹೆಚ್ಚಿಸಲು ಆದ್ಯತೆ ನೀಡಬೇಕು ಎಂದು ಪಾಲಿಕೆ ಸದಸ್ಯ ಎಂ.ಶಿವರಾಜು ಸಲಹೆ ನೀಡಿದರು. ಶಂಕರಮಠ ವಾರ್ಡ್‌ನಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಅವರು ಮಾತನಾಡಿದರು. * ವಾರ್ಡ್‌ನಲ್ಲಿ ಕೊರೊನಾ ಸೊಂಕು ನಿಯಂತ್ರಣಕ್ಕೆ ಏನು ಕ್ರಮ ಕೈಗೊಳ್ಳಲಾಗಿದೆ? ಎಲ್ಲ ಬಡಾವಣೆಗಳ ಪ್ರಮುಖ ರಸ್ತೆ ಗಳಿಗೆ ಸೊಂಕು ನಿವಾರಕ ಸಿಂಪಡಿಸಿದ್ದೇವೆ. ಕೋವಿಡ್ ಪ್ರಕರಣ ಪತ್ತೆಯಾದವರ ಮನೆಗೆ, …
Read More »ಮೃತರಿಗೆ ಲ್ಯಾಬ್ ಬದಲು ಆಯಂಟಿಜನ್ ಟೆಸ್ಟ್: ಸ್ವಂತ ಜಮೀನಿನಲ್ಲೇ ಸೋಂಕಿತರ ಅಂತ್ಯಕ್ರಿಯೆ
ಬೆಂಗಳೂರು: ಕೊರೋನಾ ಸೋಂಕಿನಿಂದ ಮೃತಪಟ್ಟಪಾರ್ಥಿವ ಶರೀರದ ಅಂತ್ಯಸಂಸ್ಕಾರ ನಿರ್ದಿಷ್ಟಅವಧಿಯೊಳಗೆ ಪೂರ್ಣಗೊಳ್ಳುವಂತೆ ಕಾಲಾವಧಿ ನಿಗದಿ ಮಾಡುವ ಹಾಗೂ ಪರೀಕ್ಷಾ ಫಲಿತಾಂಶ ತ್ವರಿತವಾಗಿ ಪಡೆಯಲು ಮೃತ ದೇಹಕ್ಕೂ ಆಯಂಟಿಜನ್ ಪರೀಕ್ಷೆ ನಡೆಸಲು ಬಿಬಿಎಂಪಿ ನಿರ್ಧರಿಸಿದೆ. ಸ್ವಯಂ ಜಮೀನಿನಲ್ಲಿಯೂ ಅಂತ್ಯಕ್ರಿಯೆಗೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಸ್ಕಾರಕ್ಕೆ ಸಂಬಂಧಿಸಿದ ಮಾರ್ಗಸೂಚಿಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಪ್ರಮುಖವಾಗಿ ಕೊರೋನಾ ಸೋಂಕಿತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ ಇನ್ನು ಮುಂದೆ ಬಿಬಿಎಂಪಿ ಅಧಿಕಾರಿ ಹೋಗಿ ದೃಢಿಕರಿಸುವ …
Read More »ಬೆಸ್ಕಾಂ 8 ಸಿಬ್ಬಂದಿಗೆ ಸೋಂಕು, 1912 ಸಹಾಯವಾಣಿ ಸಿಗಲ್ಲ, ಈ ನಂಬರ್‌ಗೆ ವಾಟ್ಸಾಪ್ ಮಾಡಿ
ಬೆಂಗಳೂರು: ಬೆಸ್ಕಾಂ ಸಹಾಯವಾಣಿ ಕೇಂದ್ರದಲ್ಲಿ ಕೆಲಸ ಮಾಡುವ ಎಂಟು ಮಂದಿ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಹಾಯವಾಣಿ ಕೇಂದ್ರವನ್ನೇ 48 ಗಂಟೆಗಳ ಕಾಲ ಸೀಲ್‌ಡೌನ್ ಮಾಡಲಾಗಿದೆ. ಹೀಗಾಗಿ ಬೆಸ್ಕಾಂ ವಿದ್ಯುತ್ ಅಡಚಣೆ ಜತೆಗೆ ಕೊರೋನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಪ್ರವೇಶ ನಿರಾಕರಣೆ, ಹಾಸಿಗೆ ಸಿಗದಿರುವ ಬಗ್ಗೆ ದೂರು ಕೊಡಲೂ ಸಹ ಅವಕಾಶ ಮಾಡಿಕೊಟ್ಟಿದ್ದ 1912 ಸಹಾಯವಾಣಿ ಮುಂದಿನ 48 ಗಂಟೆಗಳ ಕಾಲ ಲಭ್ಯವಿರುವುದಿಲ್ಲ. ಸಿಲಿಂಡರ್‌ನೊಂದಿಗೆ ಆಸ್ಪತ್ರೆಗಳಿಗೆ ಅಲೆದ ರೋಗಿ ಹೀಗಾಗಿ …
Read More »ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ಸಿಎಂ ಬಿ.ಎಸ್. ಯಡಿಯೂರಪ್ಪಗೆ ಪತ್ರ ಬರೆದ ಸಿದ್ದರಾಮಯ್ಯ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಆಶಾ ಕಾರ್ಯಕರ್ತರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಆಶಾ ಕಾರ್ಯಕರ್ತೆಯರು ಪ್ರಾಣ ಲೆಕ್ಕಿಸದೇ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಲ್ಲಿ ಅನೇಕ ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇವರಿಗೆ ನೀಡುತ್ತಿರುವ ಮಾಸಿಕ ವೇತನ 4,000 ರೂ ಕೆಲವರಿಗೆ 6,000 ರೂ ನೀಡಲಾಗುತ್ತಿದೆ. ಆದರೆ ಸರ್ಕಾರ ಬಜೆಟ್ ನಲ್ಲಿ 8 ರಿಂದ 9 …
Read More »ಆಸ್ಪತ್ರೆ ವರೆಗೆ ಬಂದರೂ ಸೋಂಕಿತನನ್ನು ಅಡ್ಮಿಟ್ ಮಾಡಿಕೊಳ್ಳದ ಜಿಮ್ಸ್ ಸಿಬ್ಬಂದಿ ; ಆರೋಗ್ಯ ಇಲಾಖೆ ನಿರ್ಲಕ್ಷ್ಯ ಬಟಾಬಯಲು
ನವದೆಹಲಿ : ವಿಶ್ವದಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಕೊರನಾ ವೈರಸ್ ಗೆ ಈಗಾಗಲೇ ವಿಶ್ವದ ಹಲವು ರಾಷ್ಟ್ರಗಳು ಔಷಧಿ ಕಂಡುಹಿಡಿಯಲು ಪ್ರಯತ್ನ ನಡೆಸಿವೆ. ಈ ನಡುವೆ ಭಾರತ್ ಬಯೋಟೆಕ್ ಮತ್ತು ಜಿಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿರುವ ಕೋವಿಡ್ ಲಸಿಕೆ ಕೊವಾಕ್ಸಿನ್ ನ ಮಾನವ ಕ್ಲಿನಿಕಲ್ ಪ್ರಯೋಗವು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಾಳೆ ನಡೆಯಲಿದೆ. ನಾಳೆಯಿಂದ ಏಮ್ಸ್ ನಲ್ಲಿ ಕೋವಿಡ್ ಲಸಿಕೆ ಕೊವಾಕ್ಸಿನ್ ಮಾನವ ಕ್ಲಿನಿಕಲ್ ಪ್ರಯೋಗ ನಡೆಯಲಿದ್ದು, ಆರೋಗ್ಯವಂತ ಮತ್ತು …
Read More »