ಅಯೋಧ್ಯೆ: ಬುಧವಾರ ರಾಮ ದೇವಾಲಯದ ಭೂಮಿ ಪೂಜೆಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮೊದಲು ಹನುಮಂತನ ದೇವಾಲಯಕ್ಕೆ ತೆರಳಿ ಆಂಜನೇಯನಿಗೆ ಪೂಜೆ ಮಾಡಲಿದ್ದಾರೆ. ಬುಧವಾರ ಬೆಳಗ್ಗೆ 11.15ಕ್ಕೆ ಸಾಕೇತ್ ಕಾಲೇಜ್‍ನ ಹೆಲಿಪ್ಯಾಡ್‍ಗೆ ಮೋದಿ ದೆಹಲಿಯಿಂದ ಆಗಮಿಸಲಿದ್ದಾರೆ. ಬಳಿಕ ಹೆಲಿಪ್ಯಾಡ್‍ನಿಂದ ನೇರವಾಗಿ ಹನುಮಂತ ದೇವಾಲಯಕ್ಕೆ ತೆರಳಲಿದ್ದಾರೆ. ಇಲ್ಲಿ 7 ನಿಮಿಷಗಳ ಕಾಲ ಪೂಜೆಯಲ್ಲಿ ಭಾಗಿಯಾದ ಬಳಿಕ ರಾಮಜನ್ಮಭೂಮಿಗೆ ಗೇಟ್ ನಂ.3ರ ಮೂಲಕ ಆಗಮಿಸಲಿದ್ದಾರೆ.ಕಾರ್ಯಕ್ರಮ ಆಯೋಜನೆಗೊಂಡಿರುವ ಸ್ಥಳಕ್ಕೆ ನೇರವಾಗಿ ಮೋದಿ ತೆರಳಬಹದುಲ್ಲವೇ ಎಂಬ …
Read More »Daily Archives: ಆಗಷ್ಟ್ 4, 2020
ಹಾವೇರಿಯಲ್ಲಿ ಚಿಕಿತ್ಸೆ ಸಿಗದೆ ರಾತ್ರಿಯಿಡಿ ರೋಗಿಯ ಪರದಾಟ
ಹಾವೇರಿ: ಹಾವೇರಿಯಲ್ಲಿ ಚಿಕಿತ್ಸೆ ಸಿಗದೆ ರಾತ್ರಿಯಿಡಿ ರೋಗಿಯ ಪರದಾಟ ನಡೆಸಿದ ಘಟನೆ ಜಿಲ್ಲಾಸ್ಪತ್ರೆ ಬಳಿ ಇರೋ ಕೋವಿಡ್ 19 ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಶಿವಬಸವ ನಗರದ ನಿವಾಸಿ 38 ವರ್ಷದ ವ್ಯಕ್ತಿ ಜ್ವರ, ಕೆಮ್ಮು ಮತ್ತು ನೆಗಡಿಯಿಂದ ಬಳಲ್ತಿದ್ದ ವ್ಯಕ್ತಿಗೆ ಚಿಕಿತ್ಸೆ ಪರದಾಡಿದ್ದಾನೆ. ಸೋಮವಾರ ಖಾಸಗಿ ಆಸ್ಪತ್ರೆ ವೈದ್ಯರ ಸಲಹೆ ಮೇರೆಗೆ ಜಿಲ್ಲಾಸ್ಪತ್ರೆಗೆ ಹೆಸ್ಕಾಂ ಸಮುದಾಯ ಭವನದಲ್ಲಿನ ಕೋವಿಡ್ 19 ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಸ್ಪತ್ರೆ ಸಿಬ್ಬಂದಿ ಕಳಿಸಿದ್ದರು. ರಾತ್ರಿ ಹತ್ತು …
Read More »ಸಿದ್ದರಾಮಯ್ಯನವರು ಬೇಗ ಗುಣಮುಖರಾಗಲಿ:ಸತೀಶ್ ಜಾರಕಿಹೊಳಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೊರೊನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹಾರೈಸಿದ್ದಾರೆ. ನಮ್ಮ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಲಕ್ಷಣಗಳು ಕಂಡು ಬರದೆ ಇದ್ದರು. ಸೋಂಕು ದೃಢಪಟ್ಟಿದೆ. ಆದ ಕಾರಣ ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಮ್ಮ ನಾಯಕ ಕೊರೊನಾ ಸೋಂಕಿನಿಂದ ಶೀಘ್ರದಲ್ಲೇ ಗುಣಮುಖರಾಗಲಿ, ಉತ್ತಮ ಆರೋಗ್ಯದೊಂದಿಗೆ ಮತ್ತೆ ಎಂದಿನಂತೆ …
Read More »ಸಿದ್ದರಾಮಯ್ಯ ಅವರಿಗೆ ಕೋವಿಡ್19 ಸೋಂಕು ತಗುಲಿರುವ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ನೋವಾಗಿದೆ: ರಮೇಶ ಜಾರಕಿಹೊಳಿ
ಬೆಂಗಳೂರು: ಕರ್ನಾಟಕ ವಿಧಾನ ಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೋವಿಡ್19 ಸೋಂಕು ತಗುಲಿರುವ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ನೋವಾಗಿದೆ ಎಂದು ಜಲಸಂನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆಎಂದು ಅವರು ಹಾರೈಸಿದ್ದಾರೆ
Read More »ರಾಜ್ಯ ಕಾಂಗ್ರೆಸ್ ಘಟಕದ ರಾಜಕೀಯ ನಾಯಕತ್ವ ಮತ್ತು ಆಡಳಿತ ಅಕಾಡೆಮಿಯ ಅಧ್ಯಕ್ಷರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ರಾಜ್ಯ ಕಾಂಗ್ರೆಸ್ ಘಟಕದ ರಾಜಕೀಯ ನಾಯಕತ್ವ ಮತ್ತು ಆಡಳಿತ ಅಕಾಡೆಮಿಯ ಅಧ್ಯಕ್ಷರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಡರ್ ಬೇಸ್ ಪಕ್ಷವನ್ನಾಗಿ ಪರಿವರ್ತಿಸಲು ಇದು ಪ್ರಥಮ ಮಹತ್ವದ ಹೆಜ್ಜೆಯಾಗಿದ್ದು ಡಿ.ಕೆ.ಶಿವುಕುಮಾರ ಅವರ ಜೊತೆ ಈ ಸಮಿತಿ ಮೇಲೆ ಮಹತ್ವದ ಜವಾಬ್ದಾರಿ ವಹಿಸಿಲಾಗಿದೆ.ರಾಜಕೀಯ ನಾಯಕತ್ವ ಮತ್ತು ಪಕ್ಷದ ಇತಿಹಾಸ, ನೀತಿ ಮತ್ತು ಕಾರ್ಯಕ್ರಮಗಳನ್ನು ಕೇಡರ್ ಮಟ್ಟದಿಂದಲೇ ಕಾರ್ಯಕರ್ತರನ್ನು ಸಜ್ಜುಗೊಳಿಸಲು …
Read More »ತನ್ನ ಮಗುವಿನೊಂದಿಗೆ ಕರ್ತವ್ಯಕ್ಕೆ ಹಾಜರಾದ ನರ್ಸ
ಧಾರವಾಡ(ಆ.03): ರಾಜ್ಯದಲ್ಲಿ ಕೊರೋನಾ ವೈರಸ್ನ ಅಟ್ಟಹಾಸ ಮುಂದುವರೆದಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದಕ್ಕೆ ಧಾರವಾಡ ಜಿಲ್ಲೆ ಸಹ ಹೊರತಾಗಿಲ್ಲ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ನಾಲ್ಕು ಸಾವಿರ ಗಡಿ ದಾಟಿದೆ. ಇದರಿಂದ ಜಿಲ್ಲೆಯ ನಗರ ಪ್ರದೇಶದಲ್ಲಿ ಆ್ಯಂಟಿಜನ್ ಟೆಸ್ಟ್ ವಾಹನದ ಮೂಲಕ ಕೊರೋನಾ ಟೆಸ್ಟ್ ಮಾಡಲಾಗುತ್ತಿದೆ. ಆದರೆ ಈ ಆ್ಯಂಟಿಜನ್ ಟೆಸ್ಟ್ ಮಾಡಲು ನರ್ಸ್ ತನ್ನ ಪುಟ್ಟ ಮಗಳೊಂದಿಗೆ ಕರ್ತವ್ಯಕ್ಕೆ ಹಾಜರಾಗಿದ್ದಾಳೆ. ಧಾರವಾಡ ನಗರದ ವಿವಿಧ …
Read More »ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ.
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಟೆಸ್ಟ್ ಮಾಡಿಸಿದ್ದು ಪಾಸಿಟಿವ್ ಬಂದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಪುತ್ರ ಯತೀಂದ್ರ, ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆಂಟಿಜೆನ್ ಟೆಸ್ಟ್ ಮಾಡಲಾಗಿದ್ದು ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು …
Read More »17 ಐಪಿಎಸ್ ಅಧಿಕಾರಿಗಳ ವರ್ಗಾವಣೆ………….
ಬೆಂಗಳೂರು : ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಿಗಿಗೊಳಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ನಡೆಸಲಾಗಿದ್ದು,17 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ವಿಶೇಷ ಎಂದರೆ,ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಹಲವರಿಗೆ ಕೊರೋನಾ ದೃಢಪಟ್ಟಿದ್ದು ಅವರೆಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲೇ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಗೃಹ ಇಲಾಖೆಯ ಕಾರ್ಯದರ್ಶಿ ಆಗಿದ್ದ ಎಡಿಜಿಪಿ ಉಮೇಶ್‌ಕುಮಾರ್ ಅವರನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಅವರ ಜಾಗಕ್ಕೆ ಡಿ.ರೂಪಾ ಅವರು ವರ್ಗವಾಗಿದ್ದಾರೆ. ಕಲಬುರ್ಗಿ …
Read More »ವೀಕೆಂಡ್ ಬಂತು ಅಂದ್ರೆ ಈ ಏರಿಯಾದಲ್ಲಿ ನೈಟ್ ಪಾರ್ಟಿ; ನೈಜೀರಿಯಾ ಪ್ರಜೆಗಳಿಂದ ಬೇಸತ್ತು ಹೋಗಿರುವ ಜನ
ಬೆಂಗಳೂರು(): ವಿದೇಶಗಳಿಂದ ಭಾರತಕ್ಕೆ ಯಾರೇ ಬಂದ್ರೂ ಅತಿಥಿ ದೇವೋ ಭವ ಅಂತ ನಮ್ಮವರು ನಡೆಸಿಕೊಳ್ತಾರೆ. ಅದರಲ್ಲೂ ಕರ್ನಾಟಕದ ಮಂದಿ ಬಂದವರ ಜೊತೆ ಬೆರೆತು ಹೋಗ್ತಾರೆ. ಅಂತಹ ಕನ್ನಡಿಗರ ಕಣ್ಣಿಗೆ ಒಂದಷ್ಟು ವಿದೇಶಿಯರು ಈಗ ವಿಲನ್ಗಳಾಗಿದ್ದಾರೆ. ಅರೇ ಯಾರವರು ಅಂತೀರಾ ಸ್ಟೋರಿ ಓದಿ. ಹೌದು, ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನೈಜಿರಿಯನ್ ಪ್ರಜೆಗಳ ಕಿರಿಕ್ ಇದೇನು ಮೊದಲೇನಲ್ಲ. ಸದಾ ಒಂದಿಲ್ಲೊಂದು ಕಿರಿಕ್ ಮಾಡ್ತಾನೆ ಇರ್ತಾರೆ. ಆದ್ರೆ ಇವ್ರ ಕಿರಿಕ್ ನ್ನು ಪದೇ ಪದೇ …
Read More »ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಸಿದ್ದರಾಮಯ್ಯ
ಬೆಂಗಳೂರು(ಆ. 04): ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂತ್ರಕೋಶ ಸೋಂಕಿನ ಹಿನ್ನೆಲೆಯಲ್ಲಿ ರಾತ್ರಿ 3:30ರ ಸುಮಾರಿಗೆ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. 15 ದಿನಗಳ ಹಿಂದೆ ಅವರಿಗೆ ಮೂತ್ರಕೋಶ ಸೋಂಕು ಕಾಣಿಸಿಕೊಂಡಿತ್ತು. ಮನೆಯಲ್ಲೇ ಮನೆಮದ್ದಾಗಿ ದಿನಕ್ಕೆ ಮೂರು ಬಾರಿ ಬಾರ್ಲಿ ಗಂಜಿ ಕುಡಿಯುತ್ತಿದ್ದರು. ಆದರೆ, ನಿನ್ನೆ ರಾತ್ರಿ ಅವರಿಗೆ ಮತ್ತೆ ನೋವು ಕಾಣಿಸಿಕೊಂಡಿದೆ. ಮಗ …
Read More »