Breaking News

Daily Archives: ಆಗಷ್ಟ್ 6, 2020

ಕೋವಿಡ್ ಕೇರ್ ಸೆಂಟರ್ ಆಗಿ ಬದಲಾಯ್ತು ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣ

ಬೆಂಗಳೂರು, ಆ.5- ಪೀಣ್ಯದಲ್ಲಿರುವ ಶ್ರೀ ಬಸವೇಶ್ವರ ಬಸ್ ನಿಲ್ದಾಣವನ್ನು ಸಾರಿಗೆ ಇಲಾಖೆ ಕೋವಿಡ್ ಆರೈಕೆ ಕೇಂದ್ರವನ್ನಾಗಿ ಪರಿವರ್ತಿಸಿದೆ.ಪ್ರಾಥಮಿಕ ಹಂತದಲ್ಲಿ 200 ಹಾಸಿಗೆಗಳ ಈ ಕೇಂದ್ರವನ್ನು ಇಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸಿದರು. ನಾಳೆಯಿಂದ ಕೇಂದ್ರದಲ್ಲಿ ದಾಖಲಾತಿ ಆರಂಭಗೊಳ್ಳಲಿದೆ. ತುಮಕೂರು ಮಾರ್ಗವಾಗಿ ಬರುವ ಬಸ್‍ಗಳು ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಬರುವುದರಿಂದ ಉಂಟಾಗುವ ಸಂಚಾರ ದಟ್ಟಣೆಯನ್ನು ತಪ್ಪಿಸಲು ಪಿಣ್ಯ ಬಳಿ ಬಸವೇಶ್ವರ ಬಸ್ ನಿಲ್ದಾಣ ಮತ್ತು ಬಹುಮಹಡಿಗಳ ಸಂಕೀರ್ಣವನ್ನು …

Read More »

ಕೋವಿಡ್ ಕೇರ್ ಸೆಂಟರ್ ನಲ್ಲಿ ಇರಲು ಸಾಧ್ಯವಾಗುತ್ತಿಲ್ಲ ನಮ್ಮನ್ನ ಮನೆಗೆ ಬಿಡಿ

ರಾಯಚೂರು: ನಗರದ ಹೊರವಲಯದ ಯರಮರಸ್ ಬಳಿಯ ಕೋವಿಡ್ ಕೇರ್ ಸೆಂಟರ್ ನಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿದ್ದು ಕೊರೊನಾ ಸೊಂಕಿತರು ಕತ್ತಲಲ್ಲೇ ಕಾಲ ಕಳೆಯಬೇಕಾಗಿದೆ. ವಿದ್ಯುತ್ ಇಲ್ಲದಿರುವುದರಿಂದ ನಾನಾ ಸಮಸ್ಯೆಗಳ ಕೊರೋನಾ ಸೋಂಕಿತರು ಎದುರಿಸುತ್ತಿದ್ದಾರೆ. ಮುಖ್ಯವಾಗಿ ನೀರಿನ ಸಮಸ್ಯೆ ಎದುರಾಗಿದ್ದು ಶೌಚಕ್ಕೂ ಹೋಗಲು ಆಗದೇ ಪರದಾಡುವಂತಾಗಿದೆ. ಸೊಳ್ಳೆ ಕಾಟದಿಂದ ನಿದ್ದೆ ಮಾಡಲು ಆಗದ ಪರಸ್ಥಿತಿಗೆ ಸೋಂಕಿತರು ಹೆದರಿದ್ದಾರೆ. ನಿನ್ನೆಯಿಂದಲೂ ವಿದ್ಯುತ್ ಸಮಸ್ಯೆಯಿದ್ದು ಜೆಸ್ಕಾಂ ಅಧಿಕಾರಿಗಳು ಸರಿಯಾಗಿ ಸ್ಪಂದಿಸಿಲ್ಲ. ಹೀಗಾಗಿ ಇಲ್ಲಿ ಇರಲು …

Read More »

ಉತ್ತರಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ.

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ. ಕರಾವಳಿ ತಾಲೂಕುಗಳ ಅನೇಕ ಹಳ್ಳಿಗಳು ಜಲಾವೃತವಾಗಿವೆ.ಜಿಲ್ಲೆಯ ಅಂಕೋಲಾ, ಕುಮಟಾ, ಹೊನ್ನಾವರ ಯಲ್ಲಾಪುರ ತಾಲೂಕಿನ ತಗ್ಗು ಪ್ರದೇಶಗಳಿಗೆ ಗಂಗಾವಳಿ, ಅಘನಾಶಿನಿ, ಬೇಡ್ತಿ ನದಿ ನೀರು ನುಗ್ಗಿದೆ. ಗಂಗಾವಳಿ ನದಿ ಪ್ರವಾಹದಿಂದ ಅಂಕೋಲಾ ತಾಲೂಕಿನ ವಾಸರಕುದ್ರಗಿ ಹಳ್ಳಿ ಸಂಪೂರ್ಣ ಜಲಾವೃತವಾಗಿದ್ದು, 150 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಗ್ರಾಮದ ಜನರನ್ನು ದೋಣಿ ಮೂಲಕ ರಕ್ಷಣೆ ಮಾಡಲಾಗುತ್ತಿದೆ. ಹಲವು ಮನೆಗಳಲ್ಲಿ ಪೀಠೋಪಕರಣಗಳು, ಎಲೆಕ್ಟ್ರಾನಿಕ್ ವಸ್ತುಗಳು, …

Read More »

ಚಾರ್ಮಾಡಿಯಲ್ಲಿ ರಸ್ತೆ ಮೇಲೆ ಬೀಳುತ್ತಿವೆ ಬಂಡೆಗಳು

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಂತೂ ಕಳೆದ 2 ದಿನಗಳಿಂದ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಯಿಂದ ಚಾರ್ಮಾಡಿ ಘಾಟ್‍ನಲ್ಲಿ ಮತ್ತೆ ಗುಡ್ಡ ಕುಸಿದಿದೆ. ರಸ್ತೆಯ ಮೇಲೆ ಬೃಹತ್ ಬಂಡೆಗಳು ಉರುಳಿ ಬೀಳುತ್ತಿದ್ದು, ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗಳ ಸಂಪರ್ಕ ಬಂದ್ ಆಗಿದೆ. ಈಗ ಮೂಡಿಗೆರೆ ತಾಲೂಕಿನ ಕುದ್ರೆಗುಂಡಿ ಬಳಿ ರಸ್ತೆಗೆ ಮರ ಬಿದ್ದ ಪರಿಣಾಮ ಚಿಕ್ಕಮಗಳೂರು-ಮೂಡಿಗೆರೆ ಸಂಚಾರವೂ ಬಂದ್ ಆಗಿದೆ. ರಾತ್ರಿ ಮೂರು ಗಂಟೆಯಿಂದ ವಾಹನಗಳು ನಿಂತಲ್ಲೇ ಇದೆ. ಶೃಂಗೇರಿ, ಕೆರೆಕಟ್ಟೆ, ಕಿಗ್ಗಾ …

Read More »

ಆ ಪ್ರಧಾನ ಮಂತ್ರಿಯನ್ನು ಶ್ರೀರಾಮನೆ ಕಾಪಾಡಲಿ: ರಮೇಶ್ ಕುಮಾರ್

ಕೋಲಾರ: ದೇಶದಲ್ಲಿ ಕೊರೊನಾ ತಾಂಡವವಾಡುತ್ತಿದ್ದರೆ, ಪ್ರಧಾನ ಮಂತ್ರಿಗಳು ಅಯೋಧ್ಯೆಯಲ್ಲಿ ಪೂಜೆ ಮಾಡುತ್ತಿದ್ದಾರೆಂದು ಮಾಜಿ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ಟೀಕಿಸಿದ್ದಾರೆ. ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರೆಯಲಾಗಿದ್ದ ಕೋವಿಡ್ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿಗಳು ಈ ದೇಶವನ್ನು ಲಾಕ್‍ಡೌನ್ ಮಾಡಿದಾಗ ನಮ್ಮಲ್ಲಿ ಪ್ರಕರಣ 524 ಇತ್ತು. 21 ದಿನದಲ್ಲಿ ಎಲ್ಲವೂ ನಿರ್ನಾಮ ಆಗುತ್ತೆ ಎಂದರು. ಆದರೆ ಈಗ ಕೊರೊನಾ ಸೋಂಕು 14 ಲಕ್ಷಕ್ಕೆ ಬಂದಿದೆ ಎಂದು ವ್ಯಂಗವಾಡಿದರು. …

Read More »

ಎದೆ ಮಟ್ಟದ ನೀರಿನಲ್ಲಿ ತೆರಳಿ ವಿದ್ಯುತ್ ಸಂಪರ್ಕ ಸರಿಪಡಿಸಿದ ಪವರ್ ಮ್ಯಾನ್

ಹಾಸನ: ಎದೆ ಮಟ್ಟದ ನೀರಿನಲ್ಲಿ ತೆರಳಿ ವಿದ್ಯುತ್ ಸಂಪರ್ಕವನ್ನು ಪವರ್ ಮ್ಯಾನ್ ಸರಿಪಡಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.ಮಳೆಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಗ್ರಾಮಸ್ಥರಿಗೆ ಸಹಾಯವಾಗಲಿ ಎಂದು ಪವರ್ ಮ್ಯಾನ್ ಅಮಿತ್ ಎದೆಮಟ್ಟದವರೆಗೆ ನಿಂತಿದ್ದ ನೀರಿನಲ್ಲೇ ಸುಮಾರು 500 ಮೀಟರ್ ತೆರಳಿ ವಿದ್ಯುತ್ ಸಂಪರ್ಕ ಸರಿಪಡಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನಲ್ಲಿ ಕಳೆದ 3 ದಿನದಿಂದ ಸತತವಾಗಿ ಮಳೆ ಆರ್ಭಟ ಜೋರಾಗಿದ್ದು, ರಾಮನಾಥಪುರ ವ್ಯಾಪ್ತಿಯ ತೋಟವೊಂದರಲ್ಲಿ …

Read More »

ತನ್ನ ಮಗಳು ಶಿಕ್ಷಣಕ್ಕಾಗಿ ತಾಯಿಯೊಬ್ಬಳು ಕಿವಿಯೊಲೆ ಮಾರಿದ ಕಣ್ಣೀರಿನ ಕಥೆ ಬೆಳಗಾವಿಯಲ್ಲಿ

ಬೆಳಗಾವಿ: ತನ್ನ ಮಗಳು ಎಸ್‍ಎಸ್‍ಎಲ್‍ಸಿ ಆನ್‍ಲೈನ್ ಶಿಕ್ಷಣಕ್ಕಾಗಿ ತಾಯಿಯೊಬ್ಬಳು ಕಿವಿಯೊಲೆ ಮಾರಿದ ಕಣ್ಣೀರಿನ ಕಥೆ ಬೆಳಗಾವಿಯಲ್ಲಿ ನಡೆದಿದೆ. ಮಹಾನಗರದ ಕ್ಲಬ್ ರಸ್ತೆಯಲ್ಲಿರುವ ತಗಡಿನ ಶೆಡ್‍ನಲ್ಲಿ ವಾಸವಿರುವ ದೇವದಾಸಿ ಜೋಗಮ್ಮ ಸರೋಜಿನಿ ಬೇವಿನಕಟ್ಟಿ ಮಕ್ಕಳಿಗಾಗಿ ಕಿವಿಯೊಲೆ ಮಾರಿ ಮೊಬೈಲ್ ತಂದುಕೊಟ್ಟಿದ್ದಾರೆ.ಜೋಗ ಬೇಡಿ ತುತ್ತಿನ ಚೀಲ ತುಂಬಿಸಿಕೊಳ್ಳುತ್ತಿದ್ದ ಈ ಜೋಗಮ್ಮನ ಕುಟುಂಬಕ್ಕೆ ಕೊರೊನಾ ಬರಸಿಡಿಲು ಬಡಿದಂತಾಗಿದೆ. ಕಳೆದ ಐದು ತಿಂಗಳಿಂದ ತಾಯಿ ಸರೋಜಾಗೆ ಕೆಲಸ ಕೂಡ ಇಲ್ಲ ಇತ್ತ ಇದ್ದೊಬ್ಬ ಮಗ ಅಪಘಾತದಲ್ಲಿ …

Read More »