ಬಾಗಲಕೋಟೆ: ಹಳ್ಳಿಗಳಲ್ಲಿ ಎಂಎಸ್‌ಐಎಲ್ ಮಳಿಗೆ ಆರಂಭಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ನಾವು ಮದ್ಯದ ಅಂಗಡಿ ತೆರೆಯುವವರಲ್ಲ. ಅವುಗಳನ್ನು ಮುಚ್ಚುವವರು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ. ಮುಧೋಳದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳ್ಳಿ ಹಳ್ಳಿಗಳಲ್ಲೂ ಸರ್ಕಾರಿ ಸ್ವಾಮ್ಯದ ಎಂಎಸ್‌ಐಎಲ್ ಮದ್ಯದ ಅಂಗಡಿ ಆರಂಭಿಸಲಾಗುತ್ತದೆ ಎನ್ನುವುದು ಸುಳ್ಳು. ಆ ರೀತಿ ನಾವು ಮಾಡುವುದಿಲ್ಲ. ನಾವು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿನ್ನೆಲೆಯುಳ್ಳವರು. ಮದ್ಯದ ಅಂಗಡಿ ಮುಚ್ಚುವುದು ಬಿಜೆಪಿಯ ನೀತಿಯಲ್ಲೊಂದು …
Read More »Daily Archives: ಆಗಷ್ಟ್ 9, 2020
ಕೈಗಾರಿಕೋದ್ಯಮಿಗಳ ಸಮಸ್ಯೆಗಳನ್ನು ಶೀಘ್ರ ಪರಿಹರಿಸಿ- ಶೆಟ್ಟರ್ ಸೂಚನೆ
ನೆಲಮಂಗಲ: ಕೈಗಾರಿಕಾ ಪ್ರದೇಶಗಳಲ್ಲಿ ಕೈಗಾರಿಕೋದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಿ ಎಂದು ಬೃಹತ್ ಮತ್ತು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ತಿಳಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಡಾಬಸ್‍ಪೇಟೆಯ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯ ವತಿಯಿಂದ ಅಭಿವೃದ್ಧಿ ಪಡಿಸಲಾಗಿರುವ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳಿಗೆ ಶನಿವಾರ ಭೇಟಿ ನೀಡಿ ಸಚಿವರು ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಿದರು. ಡಾಬಸ್‍ಪೇಟೆ ಇಂಡಸ್ಟ್ರೀಸ್ ಅಸೋಸಿಯೇಷನ್ ಸದಸ್ಯರು ನೀಡಿದ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ …
Read More »ಭಾರತದಲ್ಲಿ ಕೊರೊನಾಗೆ 196 ವೈದ್ಯರ ಸಾವು – ಪ್ರಧಾನಿ ಮೋದಿಗೆ ಐಎಂಎ ಪತ್ರ
ನವದೆಹಲಿ: ಕೊರೊನಾ ಸೋಂಕಿನಿಂದ ಈವರೆಗೂ ಭಾರತದಲ್ಲಿ 196 ವೈದ್ಯರು ಪ್ರಾಣ ಕಳೆದುಕೊಂಡಿದ್ದು, ಈ ವಿಚಾರದ ಬಗ್ಗೆ ಗಮನ ಹರಿಸುವಂತೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ. ಐಎಂಎ ಬರೆದ ಪತ್ರದಲ್ಲಿ ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ವೈದ್ಯರ ಸಾವುಗಳು ಹೆಚ್ಚುತ್ತಿರುವ ಬಗ್ಗೆ ಕಳವಳಗಳ ವ್ಯಕ್ತಪಡಿಸಲಾಗಿದೆ. ಕೊರೊನಾದಿಂದಾಗಿ ವೈದ್ಯರು ಸೋಂಕಿಗೆ ಒಳಗಾಗುವ ಮತ್ತು ಪ್ರಾಣ ಕಳೆದುಕೊಳ್ಳುವ ಪ್ರಕರಣಗಳು ಹೆಚ್ಚುತ್ತಿವೆ. ಅವರಲ್ಲಿ ಅನೇಕ ಸಾಮಾನ್ಯ ವೈದ್ಯರಿದ್ದಾರೆ ಎಂದು …
Read More »ಪ್ರಾಣದ ಹಂಗು ತೊರೆದು ಕೊಚ್ಚಿ ಹೋಗುತ್ತಿದ್ದ ಕಾಲು ಸೇತುವೆ ಕಟ್ಟಿ, ಗಟ್ಟಿಗೊಳಿಸಿದ ಗ್ರಾಮಸ್ಥ
ಮಂಗಳೂರು: ಪಶ್ಚಿಮ ಘಟ್ಟ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಜಿಲ್ಲೆಯ ಎಲ್ಲ ಜೀವನದಿಗಳು ಉಕ್ಕಿ ಹರಿಯುತ್ತಿವೆ. ಮಳೆ, ಪ್ರವಾಹದಿಂದ ಜನ ತಮ್ಮ ಬದುಕು ಕಟ್ಟಿಕೊಳ್ಳಲು ಹರ ಸಾಹಸ ಪಡುತ್ತಿದ್ದಾರೆ. ಅದೇ ರೀತಿ ಕೊಚ್ಚಿ ಹೋಗುತ್ತಿದ್ದ ಸೇತುವೆಯನ್ನು ಪ್ರಾಣದ ಹಂಗು ತೊರೆದು ಗ್ರಾಮಸ್ಥರೊಬ್ಬರು ಕಟ್ಟಿ ನಿಲ್ಲಿಸಿದ್ದಾರೆದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ದಿಡುಪೆಯಲ್ಲಿ ಜನರೇ ನಿರ್ಮಿಸಿದ್ದ ಕಾಲು ಸೇತುವೆಯನ್ನು ಉಳಿಸಿಕೊಳ್ಳಲು ಗ್ರಾಮಸ್ಥರೊಬ್ಬರು ತಮ್ಮ ಪ್ರಾಣವನ್ನೇ ಒತ್ತೆ ಇಟ್ಟಿದ್ದಾರೆ. ರಭಸವಾಗಿ …
Read More »ಅತ್ಯಾಚಾರಕ್ಕೊಳಗಾಗಿ ಆತ್ಮಹತ್ಯೆಗೆ ಶರಣಾದ ಬಾಲಕಿಯ ಗ್ರಾಮಕ್ಕೆ ತೆರಳಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ
ಧಾರವಾಡ: ಅತ್ಯಾಚಾರಕ್ಕೊಳಗಾಗಿ ಆತ್ಮಹತ್ಯೆಗೆ ಶರಣಾದ ಬಾಲಕಿಯ ಗ್ರಾಮಕ್ಕೆ ತೆರಳಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೆರಳಿ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್‍ರ ಸಚಿವರು, ಬಾಲಕಿಗೆ ನ್ಯಾಯ ಕೊಡಿಸಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಆರೋಪಿಯನ್ನು ಪೊಲೀಸ್ ಇಲಾಖೆ ಬಂಧಿಸಿದೆ. ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಸಂತ್ರತ್ತೆಯ ಕುಟುಂಬಕ್ಕೆ ಪರಿಹಾರ ಧನ ನೀಡಲು ನಿಯಮಾವಳಿಗಳನ್ನು ಪರಿಶೀಲಿಸಲಾಗುವುದು, …
Read More »ನಟ ಸಂಜಯ್ ದತ್ ಆಸ್ಪತ್ರೆಗೆ ದಾಖಲು-
ಮುಂಬೈ: ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಟ ಸಂಜಯ್ ದತ್ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಸಂಜಯ್ ದತ್ ಅವರನ್ನು ತೀವ್ರನಿಘಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಸಂಜಯ್ ದತ್ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಸಂಜಯ್ ದತ್ ಅವರನ್ನು ಆಂಟಿಜಿನ್ ಕಿಟ್ ಬಳಸಿ ಕೊರೊನಾ ಪೆರೀಕ್ಷೆಗೆ ಒಳಪಡಿಸಲಾಗಿತ್ತು. ವರದಿ ನೆಗೆಟಿವ್ ಬಂದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಜುಲೈ …
Read More »ವಿಮಾನ ದುರಂತದಲ್ಲಿ ಮಡಿದ ಪೈಲಟ್‍ಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಸಿಬ್ಬಂದಿ ಅಂತಿಮ ನಮನ
ದೆಹಲಿ/ಲಕ್ನೋ: ಕೇರಳದ ಕೋಯಿಕ್ಕೋಡ್ ಕರಿಪುರ ವಿಮಾನ ದುರಂತದಲ್ಲಿ ಮಡಿದ ಪೈಲಟ್‍ಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಸಿಬ್ಬಂದಿ ಅಂತಿಮ ನಮನ ಸಲ್ಲಿಸಿದರು.ಶುಕ್ರವಾರ ರಾತ್ರಿ ನಡೆದ ದುರಂತದಲ್ಲಿ ಪೈಲಟ್ ಅಖಿಲೇಶ್ ಕುಮಾರ್ ಮೃತಪಟ್ಟಿದ್ದರು. ಶನಿವಾರ ರಾತ್ರಿ ಏರ್ ಇಂಡಿಯಾ ಸಿಬ್ಬಂದಿ ಅಂತಿಮ ನಮನ ಸಲ್ಲಿಸಿ, ಮೃತದೇಹ ಇಂದು ಬೆಳಗ್ಗೆ ಹುಟ್ಟೂರು ಉತ್ತರ ಪ್ರದೇಶದ ಮಥುರಾಗೆ ತಲುಪಿದೆ. ಕೊರೊನಾ ವೈರಸ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ದುಬೈನಲ್ಲಿ ಸಿಲುಕಿದ್ದ ಭಾರತೀಯರನ್ನು ಶುಕ್ರವಾರ ಏರ್ ಇಂಡಿಯಾ ವಿಮಾನ …
Read More »