ಬೆಂಗಳೂರು: ಕೋವಿಡ್ 19 ನಿಯಂತ್ರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರ ಜೊತೆಗಿನ ಸಭೆಯಲ್ಲಿ ಕರ್ನಾಟಕ ಸರ್ಕಾರ ಪ್ರಮುಖವಾಗಿ 4 ಬೇಡಿಕೆಯನ್ನು ಸಲ್ಲಿಸಿದೆ.ವಿಡಿಯೋ ಸಂವಾದದಲ್ಲಿ ಉಪಮುಖ್ಯಮಂತ್ರಿ ಅಶ್ವಥ್‍ನಾರಾಯಣ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಕೋವಿಡ್ ನಿರ್ವಹಣೆಯ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ಒದಗಿಸಿದರು.ಸಭೆಯಲ್ಲಿ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳನಾಡು, ಬಿಹಾರ್, ಗುಜರಾತ್, ಪಂಜಾಬ್, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ತೆಲಂಗಾಣ ರಾಜ್ಯಗಳ …
Read More »Daily Archives: ಆಗಷ್ಟ್ 11, 2020
ಗೋಕಾಕ: ಚಾಲಕನ ನಿಯಂತ್ರಣ ತಪ್ಪಿ 407 ವಾಹನ ಪಲ್ಟಿ
ಗೋಕಾಕ: ಚಾಲಕನ ನಿಯಂತ್ರಣ ತಪ್ಪಿ 407 ವಾಹನ ಪಲ್ಟಿಯಾಗಿ ಸುಮಾರು ಹತ್ತು ಕಿಂತ ಹೆಚ್ಚು ಜನ ಗಾಯಗೊಂಡ ಘಟನೆ ನಗರ ಹೊರ ವಲಯದಲ್ಲಿ ಮಂಗಳವಾರ ಸಂಜೆ ನಡೆದಿದೆ. ಕೂಲಿ ಕಾರ್ಮಿಕರನ್ನು ತುಂಬಿಕೊಂಡು ನಗರದಿಂದ ನಲ್ಲಾನಟ್ಟಿ ಕಡೆ ಹೊರಟಿದ್ದ 407 ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದರಿಂದ ಈ ಅವಘಡ ಸಂಭವಿಸಿದ್ದು ಪ್ರಾಣಹಾನಿಯಾಗಿಲ್ಲ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಕಾಕ ಶಹರ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://youtu.be/9IZb29JPrXQ
Read More »ಚಿಕ್ಕೋಡಿ -ಸದಲಗಾ ಶಾಸಕ ಗಣೇಶ ಹುಕ್ಕೇರಿ ಮಂಗಳವಾರ ಸೋಲಾರ್ ಲ್ಯಾಂಪ್ ಹಾಗೂ ಸೋಲಾರ್ ವಾಟರ್ ಹೀಟರ್ ವಿತರಿಸಿದರು.
ಚಿಕ್ಕೋಡಿ – ಚಿಕ್ಕೋಡಿ -ಸದಲಗಾ ಶಾಸಕ ಗಣೇಶ ಹುಕ್ಕೇರಿ ಮಂಗಳವಾರ ಸೋಲಾರ್ ಲ್ಯಾಂಪ್ ಹಾಗೂ ಸೋಲಾರ್ ವಾಟರ್ ಹೀಟರ್ ವಿತರಿಸಿದರು. ಅರಣ್ಯ ಇಲಾಖೆಯ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯ ಅಡಿಯಲ್ಲಿ ವಿಶೇಷ ಪ್ರಯತ್ನ ಮಾಡಿ ಗಣೇಶ ಹುಕ್ಕೇರಿ ಬಡ ಜನರಿಗೆ ಈ ಸೌಲಭ್ಯ ಕೊಡಿಸಿದ್ದಾರೆ. ಸರಕಾರ ಯಾವುದೇ ಇರಲಿ, ಕ್ಷೇತ್ರದ ಜನರಿಗೆ ಎಲ್ಲ ರೀತಿಯ ಸೌಲಭ್ಯ ಕೊಡಿಸಲು ನಾನು ಮತ್ತು ಮಾಜಿ ಸಚಿವ ಪ್ರಕಾಶ ಹುಕ್ಕೇರಿ ನಿರಂತರವಾಗಿ ಪ್ರಯತ್ನ …
Read More »ಕೋವಿಡ್ ಚಿಕಿತ್ಸೆಗೆ ಮುಂದಾಗುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಅಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸಿ ಮಾರ್ಗಸೂಚಿ ಪ್ರಕಾರ ತಕ್ಷಣವೇ ಅನುಮತಿ ನೀಡಬೇಕು ಎಂದು ಶಶಿಕಲಾ ಜೊಲ್ಲೆ ತಿಳಿಸಿದರು.
ಬೆಳಗಾವಿ,): ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಗೆ ಮುಂದಾಗುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಅಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸಿ ಮಾರ್ಗಸೂಚಿ ಪ್ರಕಾರ ತಕ್ಷಣವೇ ಅನುಮತಿ ನೀಡಬೇಕು ಎಂದು ಶಶಿಕಲಾ ಜೊಲ್ಲೆ ತಿಳಿಸಿದರು. ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ(ಆ.11) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರ್ಯಾಪಿಡ್ ಟೆಸ್ಟ್ ಗೆ ಹೆಚ್ಚಿನ ಆದ್ಯತೆ ನೀಡಬೇಕು. ಏನಾದರೂ ಕೊರತೆ ಕಂಡುಬಂದರೆ ಉಸ್ತುವಾರಿ ಸಚಿವರು ಅಥವಾ ತಮ್ಮ ಗಮನಕ್ಕೆ ತರಬೇಕು. ಖಾಸಗಿ …
Read More »70 ಕೊರೊನಾ ಸೋಂಕಿತರ ಯಶಸ್ವಿ ಹೆರಿಗೆ ಮಾಡಲಾಗಿದೆ:ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ
ಬೆಳಗಾವಿ-ಬೆಳಗಾವಿಯ ಭೀಮ್ಸ್ ಆಸ್ಪತ್ರೆಯಲ್ಲಿ, ಈವರೆಗೂ 70 ಕೊರೊನಾ ಸೋಂಕಿತರ ಯಶಸ್ವಿ ಹೆರಿಗೆ ಮಾಡಲಾಗಿದೆ ಎಂದು ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಬಿಮ್ಸ್ ಆಸ್ಪತ್ರೆಯಲ್ಲಿ ಈವರೆಗೂ 70 ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಲಾಗಿದೆ. ಈ ಪೈಕಿ 34 ಸೀಜರಿನ್ ಹಾಗೂ 36 ನಾರ್ಮಲ್ ಡಿಲಿವರಿ ಆಗಿವೆ,ಎಂದು ದಾಸ್ತಿಕೊಪ್ಪ ಮಾಹಿತಿ ನೀಡಿದ್ದಾರೆ. ಹೆರಿಗೆಯಾದ 5 ಅಥವಾ 7ನೇ ದಿವಸಕ್ಕೆ ನವಜಾತ ಶಿಶುವಿನ ಸ್ವ್ಯಾಬ್ ಟೆಸ್ಟ್ …
Read More »ಕಣಕುಂಬಿ ಅರಣ್ಯ ಪ್ರದೇಶದಲ್ಲಿರೈತನ ಮೇಲೆ ಕರಡಿಯೊಂದು ದಾಳಿ
ಬೆಳಗಾವಿ- ಖಾನಾಪೂರ ತಾಲ್ಲೂಕಿನ ಕಣಕುಂಬಿ ಅರಣ್ಯ ಪ್ರದೇಶದಲ್ಲಿ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿಯೊಂದು ದಾಳಿ ಮಾಡಿ ಮಾರಣಾಂತಿಕ ಹಲ್ಲೆ ಮಾಡಿದೆ. ಚಿಕಲೆ ಗ್ರಾಮದ 60 ವರ್ಷದ ಶಂಕರ ಗವಸ್ ಎಂಬ ರೈತ ಹೊಲದಲ್ಲಿ ಕೆಲಸ ಮಾಡುವಾಗ ಕರಡಿ ದಾಳಿ ಮಾಡಿ ಗಾಯಪಡಿಸಿದ್ದು ಗಾಯಾಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಎಂದು ಅರಣ್ಯ ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ.
Read More »S.S.L.C. ಪರೀಕ್ಷೆಯ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೆ ಸಿಎಂ ಕೃತಜ್ಞತೆ
ಬೆಂಗಳೂರು, ಆ.11 : ಸವಾಲುಗಳ ನಡುವೆ ಯಶಸ್ವಿಯಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲು ಕಾರಣರಾದ ಎಲ್ಲರಿಗೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಕೊರೋನಾ ಸವಾಲುಗಳ ನಡುವೆ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅಡ್ಡಿಯಾಗಬಾರದು ಎಂದು ರಾಜ್ಯ ಸರ್ಕಾರ ಟೊಂಕಕಟ್ಟಿ ನಿಂತು, ಈ ವರ್ಷದ ಜೂನ್ 25 ರಿಂದ ಜುಲೈ 3 ರವರೆಗೆ, ಅತ್ಯಂತ ಯಶಸ್ವಿಯಾಗಿ ನಡೆಸಿದ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಫಲಿತಾಂಶ ನಿನ್ನೆ ಪ್ರಕಟವಾಗಿದೆ. ಶೇಕಡಾ 71.80 ರಷ್ಟು ಮಕ್ಕಳು …
Read More »ಸ್ವಾತಂತ್ರ್ಯೋತ್ಸವಕ್ಕೆ ಪರೇಡ್, ಸೆಲ್ಯೂಟ್ ಇರುವುದಿಲ್ಲ: ಬಸವರಾಜ ಬೊಮ್ಮಾಯಿ
ಉಡುಪಿ: ಆಗಸ್ಟ್ 15ರ ಸ್ವಾತಂತ್ರ್ಯೋತ್ಸವಕ್ಕೆ ಕೇಂದ್ರದಿಂದ ಕಟ್ಟುನಿಟ್ಟಿನ ಆದೇಶ ಬಂದಿದೆ. ಕೊರೊನಾ ನಡುವೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನದಂದು ಕಮಾಂಡರ್ಸ್ ಇರುತ್ತಾರೆ. ಆದರೆ ಪರೇಡ್ ಇರುವುದಿಲ್ಲ. ತಂಡ ತಂಡಗಳು ಬಂದು ಸೆಲ್ಯೂಟ್ ಮಾಡ ಇರುವುದಿಲ್ಲ. ಕೇಂದ್ರದ ನಿಯಮಾವಳಿ ಪ್ರಕಾರ ಹಬ್ಬ ಆಚರಣೆ ನಡೆಸಬೇಕು. ಎಲ್ಲರೆದುರಲ್ಲೇ ಧ್ವಜಾರೋಹಣ ಮಾಡಲಾಗುತ್ತದೆ. ಆದರೆ ಮೈದಾನಗಳಿಗೆ ಸಾರ್ವಜನಿಕರಿಗೆ ಪ್ರವೇಶ ಇಲ್ಲ ಎಂದರು. …
Read More »ಶ್ರೀಕೃಷ್ಣನ ಊರು ಉಡುಪಿಯಲ್ಲಿ ಈ ಬಾರಿ ಅಷ್ಟಮಿ ಆಚರಣೆ ನಡೆದಿಲ್ಲ.
ಉಡುಪಿ: ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯ ಆಚರಣೆ ನಡೆಯುತ್ತಿದೆ. ಕಡೆಗೋಲು ಶ್ರೀಕೃಷ್ಣನ ಊರು ಉಡುಪಿಯಲ್ಲಿ ಈ ಬಾರಿ ಅಷ್ಟಮಿ ಆಚರಣೆ ನಡೆದಿಲ್ಲ. ಉಡುಪಿ ಮಠದಲ್ಲಿ ಸೌರಮಾನ ಪದ್ಧತಿ ಆಚರಣೆ ಮಾಡುವುದರಿಂದ, ಮುಂದಿನ ತಿಂಗಳು ಶ್ರೀಕೃಷ್ಣಜನ್ಮಾಷ್ಟಮಿ ನಡೆಯಲಿದೆ. ದೇಶದಲ್ಲಿ ಆಚರಣೆ ಇರುವುದರಿಂದ ಉಡುಪಿ ಕಡೆಗೋಲು ಕೃಷ್ಣನಿಗೆ, ವಿಶೇಷ ಅಲಂಕಾರ ಮಾಡಲಾಗಿದೆ. ಗೋಪಾಲಕೃಷ್ಣ ನಾಗಿ ಕಡೆಗೋಲು ಕೃಷ್ಣ ದರ್ಶನ ಕೊಟ್ಟಿದ್ದಾನೆ.ಚಾಂದ್ರಮಾನ ಪದ್ಧತಿಯಲ್ಲಿ ಹಬ್ಬಗಳನ್ನು ಆಚರಿಸುವ ಸಮುದಾಯಗಳು ಉಡುಪಿಯಲ್ಲಿದೆ. ಅವರೆಲ್ಲಾ ಅಷ್ಟಮಿ ಆಚರಣೆಯನ್ನು ಮಾಡಿದ್ದಾರೆ. ಈ …
Read More »ನನ್ನ ಹೆಸರನ್ನು ಬಳಸಿಕೊಂಡು ಯಾರು ಕೂಡ ಅಭಿಮಾನಿಗಳ ಬಳ, ಸಂಘ ಸಂಸ್ಥೆಗಳನ್ನು, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಂದು ಸ್ಪಷ್ಟ ಪಡಿಸಿದ್ದಾರೆ.
ಬೆಂಗಳೂರು: ನನ್ನ ಹೆಸರನ್ನು ಬಳಸಿಕೊಂಡು ಯಾರು ಕೂಡ ಅಭಿಮಾನಿಗಳ ಬಳ, ಸಂಘ ಸಂಸ್ಥೆಗಳನ್ನು, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಂದು ಸ್ಪಷ್ಟ ಪಡಿಸಿದ್ದಾರೆ. ಈಗಾಗಲೇ ಅಸ್ತಿತ್ವದಲ್ಲಿರುವ ಎಂ.ಎಸ್. ಅಂಗಡಿ ನೇತೃತ್ವದ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘಟನೆ ಹೊರತು ಪಡಿಸಿ, ಈ ಕ್ಷಣದಿಂದಲೇ ಉಳಿದ ಸಂಘಟನೆಗಳನ್ನು ವಿಸರ್ಜಿಸುವಂತೆ ಸೂಚನೆ ನೀಡಿದ್ದಾರೆ. ಯಾರಾದರು ತಮ್ಮ ಹಾಗೂ ಸಹೋದರ ಡಿ.ಕೆ. ಸುರೇಶ ಅವರ ಹೆಸರಲ್ಲಿ ಸಂಘಟನೆಗಳನ್ನು ನಡೆಸಿದರೆ …
Read More »