ಬೆಂಗಳೂರು: ಪ್ರವಾದಿ ನಿಂದನೆಯ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ತಾನೇ ಅಪಲೋಡ್ ಮಾಡಿರುವುದಾಗಿ ಗಿ ಡಿ.ಜೆ.ಹಳ್ಳಿ ಗಲಭೆಗೆ ಕಾರಣನಾದ ಆರೋಪಿ ನವೀನ್ ತಪ್ಪೊಪ್ಪಿಕೊಂಡಿದ್ದಾನೆ. ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣದ ಆರೋಪಿ ನವೀನ್ ಅನ್ನು ಪೂರ್ವ ವಿಭಾಗದ ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ, ತಾನು ಫೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿ ಕಮೆಂಟ್ ಜತೆಗೆ ವಿವಾದಾತ್ಮಕ ಪೋಸ್ಟ್ ಶೇರ್ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. 7 ಗಂಟೆ ಸುಮಾರಿಗೆ …
Read More »Daily Archives: ಆಗಷ್ಟ್ 14, 2020
ವರ್ಷ ಕಳೆದರೂ ತಪ್ಪಿಲ್ಲ ಬೆಳಗಾವಿ ಪ್ರವಾಹ ಸಂತ್ರಸ್ತರ ಸಂಕಟ!
ಬೆಳಗಾವಿ: ಪ್ರವಾಹಕ್ಕೆ ನಲುಗಿ ಒಂದು ವರ್ಷ ಕಳೆದರೂ ಜಿಲ್ಲೆಯ ಎಲ್ಲ ಸಂತ್ರಸ್ತರಿಗೆ ಇನ್ನೂ ಪರಿಹಾರ ದೊರೆತಿಲ್ಲ. ಪರಿಹಾರ ಕೊಡುವಂತೆ ಒತ್ತಾಯಿಸಿ, ಈಗಲೂ ಅಲ್ಲೊಂದು, ಇಲ್ಲೊಂದು ಪ್ರತಿಭಟನೆಗಳು ನಡೆಯುತ್ತಲೇ ಇವೆ. ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ ಸೇರಿದಂತೆ ಬಹುತೇಕ ಎಲ್ಲ ನದಿಗಳಲ್ಲಿ ಪ್ರವಾಹ ಕಾಣಿಸಿಕೊಂಡಿತ್ತು. ಇದರ ಜೊತೆ ಅತಿವೃಷ್ಟಿಯೂ ಕೂಡಿಕೊಂಡು ಅಪಾರ ಹಾನಿಯನ್ನುಂಟು ಮಾಡಿತ್ತು. ಬೆಳಗಾವಿ, ಖಾನಾಪುರ, ಚಿಕ್ಕೋಡಿ, ಅಥಣಿ, ಗೋಕಾಕ, ರಾಮದುರ್ಗ, ಸವದತ್ತಿ, ರಾಯಬಾಗ, ಹುಕ್ಕೇರಿ …
Read More »ವಿದ್ಯುತ್ ತಗುಲಿ ತಂದೆ ಮಗ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ರಾತ್ರಿ ನಡೆದಿದೆ.
ರಾಯಚೂರು: ವಿದ್ಯುತ್ ತಗುಲಿ ತಂದೆ ಮಗ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ರಾತ್ರಿ ರಾಯಚೂರಿನ ದಿನ್ನಿ ಗ್ರಾಮದಲ್ಲಿ ನಡೆದಿದೆ. ಮಹೇಶ (47), ನವೀನ್ (16) ಮೃತರು. ಮನೆ ಪಕ್ಕದಲ್ಲಿದ್ದ ಮರಕ್ಕೆ ವಿದ್ಯುತ್ ವೈರ್ ತಾಕಿದೆ. ಇದೇ ಮರಕ್ಕೆ ಬಟ್ಟೆ ನೇತಾಕಲು ವೈರ್ ಕಟ್ಟಲಾಗಿತ್ತು. ಜಿಟಿ ಜಿಟಿ ಮಳೆ ಸುರಿಯುತ್ತಿರುವ ಪರಿಣಾಮ ಮರಕ್ಕೆ ವಿದ್ಯುತ್ ಪ್ರವಹಿಸಿ ತಂತಿಗೂ ಅರ್ಥಿಂಗ್ ಆಗಿದೆ. ಬಟ್ಟೆ ತೆಗೆಯಲು ಹೋದ ತಂದೆ ಶಾಕ್ ನಿಂದ ಮೃತಪಟ್ಟಿದ್ದಾನೆ. ತಂದೆ …
Read More »ಬುಡರಕಟ್ಟಿಯಲ್ಲಿ ಬಸವೇಶ್ವರ ಮೂರ್ತಿ ಲೋಕಾರ್ಪಣೆ
ಬೈಲಹೊಂಗಲ: ಬುಡರಕಟ್ಟಿ ಗ್ರಾಮದಲ್ಲಿ ಗುರುವಾರ ಜಗಜ್ಯೋತಿ ಬಸವೇಶ್ವರರ ಆಶ್ವಾರೂಢ ಕಂಚಿನ ಪುತ್ಥಳಿ ಪ್ರತಿಷ್ಠಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಶ್ವಾರೂಢ ಬಸವೇಶ್ವರರ ಮೂರ್ತಿ ಮೆರವಣಿಗೆ ಮಾಡಿ ಗ್ರಾಮದ ಬಸವ ವೃತ್ತದಲ್ಲಿ ನಾಡಿನ ಹಲವು ಶ್ರೀಗಳು, ಗಣ್ಯರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ನಂತರ ನಡೆದ ಕಾರ್ಯಕ್ರಮದಲ್ಲಿ ಗದಗ-ಡಂಬಳದ ತೋಂಟದಾರ್ಯ ಮಠದ ತೋಂಟದ ಡಾ. ಸಿದ್ಧರಾಮ ಶ್ರೀಗಳು ಮಾತನಾಡಿ, ಅಸಮಾನತೆ, ಮೌಡ್ಯತೆ, ಶೋಷಣೆಯಿಂದ ನಲುಗಿದ್ದ ಸಮಾಜಕ್ಕೆ ಬೆಳಕಾಗಿ ಬಂದವರು ಬಸವೇಶ್ವರರು. …
Read More »ಪ್ರಶಾಂತ ಭೂಷನ್ ತಪ್ಪಿತಸ್ಥಎಂದು ಸುಪ್ರೀಂ ಕೋರ್ಟ್ ತೀರ್ಪು
ಹೊಸದಿಲ್ಲಿ: ನ್ಯಾಯಾಂಗ ನಿಂದನೆ ಕೇಸ್ನಲ್ಲಿ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಸಿಜೆಐ ಎಸ್.ಎ.ಬೋಬಡೆ ವಿರುದ್ಧ ಎರಡು ಟ್ವೀಟ್ ಮಾಡಿ ಪೇಚಿಗೆ ಸಿಲುಕಿದ್ದ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಕೊರೊನಾ ಲಾಕ್ಡೌನ್ ವೇಳೆ ಸುಪ್ರೀಂಕೋರ್ಟ್ ಸಿಜೆಐ ಎಸ್.ಎ.ಬೋಬಡೆ ಅವರು ತಮ್ಮ ಸ್ವಂತ ಊರಾದ ಮಹಾರಾಷ್ಟ್ರದ ನಾಗಪುರದಲ್ಲಿದ್ದರು. ಆಗ ಹರ್ಲೆ ಡೇವಿಡ್‌ಸನ್ ಬೈಕ್ ಮೇಲೆ ಕುಳಿತು ಫೋಟೋಗೆ ಪೋಸ್ ನೀಡಿದ್ದರು. ಇದಕ್ಕೆ ಸಂಬಂಧಪಟ್ಟಂತೆ …
Read More »ಬೆಳಗಾವಿ: ಜಿಲ್ಲೆಯಲ್ಲಿ ಕೊರನಾ ಸೋಂಕಿಗೆ6 ಜನರು ಸಾವಿಗೀಡಾಗಿದ್ದಾರೆ.
ಬೆಳಗಾವಿ: ಜಿಲ್ಲೆಯಲ್ಲಿ ಕೊರನಾ ಸೋಂಕಿಗೆ ಬಲಿಯಾಗುತ್ತಿರುವವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತಲಿದ್ದು, ಇಂದು ಕೂಡ 6 ಜನರು ಸಾವಿಗೀಡಾಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಸಂಜೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ ನೀಡಿದ್ದು,ಬೆಳಗಾವಿ, ಹೊಸದಾಗಿ 288 ಮಂದಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಹುಕ್ಕೇರಿ ತಾಲೂಕು ಸೇರಿ ಜಿಲ್ಲೆಯಲ್ಲಿ ಆರು ಜನರ ಸಾವನ್ನಪ್ಪಿದ್ದಾರೆ. ಈವರೆಗೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 113 ತಲುಪಿದೆ. ಒಟ್ಟು 6640 …
Read More »ಶಾಲಾ ಕೊಠಡಿ ಕಾಮಗಾರಿಗಿ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಲವು ಕಾಮಗಾರಿಗಳಿಗೆ ಶಾಸಕ ಮಹೇಶ್ ಕುಮಟಳ್ಳಿ ಭೂಮಿಪೂಜೆ
ಅಥಣಿ: ಶಾಲಾ ಕೊಠಡಿ ಕಾಮಗಾರಿಗಿ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಲವು ಕಾಮಗಾರಿಗಳಿಗೆ ಶಾಸಕ ಮಹೇಶ್ ಕುಮಟಳ್ಳಿ ಭೂಮಿಪೂಜೆ ನೆರವೇರಿಸಿದರು. ತಾಲೂಕಿನ ಬಡಕಂಬಿತೋಟ, ಸಿಂಡ್ ಫಾರ್ಮ್, ಮುರಗುಂಡಿ, ಮಸರಗುಪ್ಪಿ, ಹೊಸಟ್ಟಿ, ದೇವರಡ್ಡೆರಹಟ್ಟಿ, ಅಥಣಿ ಪಟ್ಟಣದ ಲಿಡಕರ ಕಾಲೋನಿ, ಬಡಚಿ, ಕಟಗೇರಿ, ಬುರ್ಲಟ್ಟಿ, ಗ್ರಾಮಗಳಲ್ಲಿ ಹೆಚ್ಚುವರಿ ಶಾಲೆ ಕೊಠಡಿಗಳನ್ನು ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಗ್ರಾಮಸ್ಥರ ಕುಂದು ಕೊರತೆಗಳ ಆಲಿಸಿದರು. ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ 105 ಶಾಲೆ ಕೊಠಡಿಗಳನ್ನು ನಿರ್ಮಾಣಕ್ಕೆ ಸರ್ಕಾರ …
Read More »ಕೃಷಿ ಇಲಾಖೆಯಿಂದ ಮೊಬೈಲ್ ಆಯಪ್ | ಬೆಳೆ ಸಮೀಕ್ಷೆ; ರೈತರಿಗೇ ಜವಾಬ್ದಾರಿ
ಚಾಮರಾಜನಗರ: ಕೃಷಿ ಇಲಾಖೆಯು 2020-21ನೇ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಮಾಡುವ ಜಾವಾಬ್ದಾರಿಯನ್ನು ರೈತರಿಗೇ ನೀಡಿದೆ. ಇದೇ ಉದ್ದೇಶಕ್ಕಾಗಿ ಕೃಷಿ ಇಲಾಖೆಯು ಬೆಳೆ ‘ಸಮೀಕ್ಷೆ ಆಯಪ್ (farmers crop survey app 2020-21) ಅನ್ನು ಅಭಿವೃದ್ಧಿ ಪಡಿಸಿದ್ದು, ಆಯಂಡ್ರಾಯ್ಡ್ ಸ್ಮಾರ್ಟ್‌ಗಳಲ್ಲಿ ಲಭ್ಯವಿದೆ. ಈ ಯೋಜನೆ ಅಡಿಯಲ್ಲಿ ರೈತರು, ಈ ಆಯಪ್ ಮೂಲಕ ತಾವು ಬೆಳೆದಿರುವ ಬೆಳೆಗಳ ಮಾಹಿತಿ, ಚಿತ್ರಗಳನ್ನು ಅಪ್‌ಲೋಡ್ ಮಾಡಬೇಕು. ಆಗಸ್ಟ್ 10ರಂದು ಈ ಯೋಜನೆಗೆ ಚಾಲನೆ ಸಿಕ್ಕಿದ್ದು, ಸಮೀಕ್ಷೆ …
Read More »74 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ:ಸತೀಶ ಜಾರಕಿಹೊಳಿ
ಬೆಳಗಾವಿ: ದೇಶದ ಸಮಸ್ತ ನಾಗರೀಕರಿಗೆ ನಾಳೆ ದೇಶ್ಯಾದ್ಯಂತ ಆಚರಿಸಲಿರುವ 74 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೋರಿದ್ದಾರೆ. ನಮ್ಮ ದೇಶದ ಜನರು ಸ್ವಾತಂತ್ರ್ಯವಾಗಿ ಸಮಾನತೆಯಿಂದ ಮತ್ತು ಸಹ ಬಾಳ್ವೆಯಿಂದ ಬದುಕಬೇಕು ಎಂದು ಬಯಸಿದ್ದ ಹಿರಿಯರು ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟಿದ್ದಾರೆ. ಅವರ ಹಾಕಿಕೊಟ್ಟ ಹಾದಿಯಲ್ಲಿ ನಾವು ಸಾಗಲು ಪ್ರಯತ್ನ ಮಾಡೋಣ ಎಂದ ಸತೀಶ ಜಾರಕಿಹೊಳಿ ಅವರು ಮಹಾನ ನಾಯಕರು ಕಂಡ ಕನಸನ್ನು ನಾವು …
Read More »ಚಾಮರಾಜನಗರ | ಕೊರೊನಾ ಸೈನಿಕ ಎಎಸ್‌ಐ ಸಾವು
ಚಾಮರಾಜನಗರ: ಜಿಲ್ಲೆಯ ಠಾಣೆಯೊಂದರ ಎಎಸ್‌ಐಯೊಬ್ಬರು ಸೇರಿದಂತೆ ಇಬ್ಬರು ಕೋವಿಡ್ ಸೋಂಕಿತರು ಗುರುವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೈನಿಕರೊಬ್ಬರು ಮೃತಪಟ್ಟ ಮೊದಲ ಪ್ರಕರಣ ಇದು. ಗುರುವಾರ ವರದಿಯಾದ ಎರಡೂ ಸಾವಿನ ಪ್ರಕರಣಗಳನ್ನು ಜಿಲ್ಲಾಡಳಿತವು ಕೋವಿಡ್‌ಯೇತರ ಕಾರಣದಿಂದ ಮೃತಪಟ್ಟವರ ಪಟ್ಟಿಗೆ ಸೇರಿಸಿದೆ. 56 ವರ್ಷದ ಎಎಸ್‌ಐ ಅವರು (ರೋಗಿಸಂಖ್ಯೆ 1,35,728) ಜುಲೈ 30ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. 15 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಟೈಫಾಯ್ಡ್‌ನಿಂದಲೂ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಐಸಿಯುನಲ್ಲಿ …
Read More »