ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಿಡಕಲ್ ಜಲಾಶಯವು ಸಂಪೂರ್ಣ ಭರ್ತಿಯಾಗಿದ್ದು, ಈಗಾಗಲೇ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಹರಿಸಿದ್ದರಿಂದ ನದಿ ತೀರದ ಗ್ರಾಮಗಳ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಸೋಮವಾರ ಸಂಜೆ ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ …
Read More »Daily Archives: ಆಗಷ್ಟ್ 17, 2020
ಕೊತ್ತಂಬರಿ, ಕರಿಬೇವಿನ ಸೊಪ್ಪು ತರೋಕೆ ಹೋದವ್ರ ಲಿಸ್ಟ್ ಇದೆ: ಅಶೋಕ್
ಬೆಂಗಳೂರು: ಕೊತ್ತಂಬರಿ, ಕರಿಬೇವಿನ ಸೊಪ್ಪು ತರೋಕೆ ಹೋದವರ ಲಿಸ್ಟ್ ಎಲ್ಲಾ ಇದೆ. ಯಾವ ಯಾವ ಕಾಂಗ್ರೆಸ್ ನಾಯಕರ ಕೈಲಿ ಕೊತ್ತಂಬರಿ, ಕರಿಬೇವಿನ ಸೊಪ್ಪು ಇದೆ ಅಂತ ಮಾಹಿತಿ ಇದೆ ಎಂದು ಕಂದಾಯ ಸಚಿವ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ, ಅಖಂಡ ಶ್ರೀನಿವಾಸ ಮೂರ್ತಿಯವರನ್ನು ಸೆಳೆಯಲು ಬಿಜೆಪಿ ಒತ್ತಡ ಹಾಕ್ತಿದೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಅಖಂಡ ಶ್ರೀನಿವಾಸ ಮೂರ್ತಿಯವರನ್ನು ಬಿಜೆಪಿಗೆ ಕರೆಯೋದೇ ಇಲ್ಲ. …
Read More »ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ
ಬೈಂದೂರು: ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಿಯುಸಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮರವಂತೆಯ ಕಿಶನ್ ಖಾರ್ವಿ(17) ಮೃತಪಟ್ಟ ಬಾಲಕ. ಈತ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿಯಾಗಿದ್ದು, ಬೆಳಗ್ಗೆ ದ್ವಿತೀಯ ಪಿಯುಸಿ ಪ್ರವೇಶ ದಾಖಲಾತಿಗಾಗಿ ಕಾಲೇಜಿಗೆ ಬಂದಿದ್ದನು. ದಾಖಲಾತಿ ಪ್ರಕ್ರಿಯೆ ಮುಗಿಸಿ ವಾಪಸ್ ಮನೆಗೆ ಹೋಗಲು ರಸ್ತೆ ದಾಟುತ್ತಿದ್ದ …
Read More »ಕರದಂಟು ನಾಡಿನ ಪ್ರಸಿದ್ದ ಗೋಕಾಕ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ.
ಗೋಕಾಕ: ಪಶ್ಚಿಮಘಟ್ಟ, ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆ ಕರದಂಟು ನಾಡಿನ ಪ್ರಸಿದ್ದ ಗೋಕಾಕ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಭಾರತ ನಯಾನಗರ ಜಲಪಾತ ಎಂದೇ ಖ್ಯಾತಿ ಪಡೆದಿರುವ ಗೋಕಾಕ ಫಾಲ್ಸ್, ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ 40 ಸಾವಿರ ಸಾವಿರ ಕ್ಯೂಸೆಕ್ಸ್ ನೀರು ಹರಿ ಬಿಡಲಾಗಿದೆ. ಹೀಗಾಗಿ ಫಾಲ್ಸ್ ನೀರಿನ ಮಟ್ಟ ಹೆಚ್ಚಿದ್ದು, ಬಂಡೆಗಳ ಮೇಲಿಂದ ನೀರು ಧುಮುಕುವ ಮನೋಹರ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತಿದೆ. …
Read More »ಆ. 21 ವರೆಗೂ ಭಾರೀ ಮಳೆಯಾಗುವ ಸಾಧ್ಯತೆಬೆಳಗಾವಿ ಸೇರಿ 6 ಜಿಲ್ಲೆಗಳಲ್ಲಿಮುನ್ನಚ್ಚರಿಕೆ
ಬೆಂಗಳೂರು: ಬೆಳಗಾವಿ, ಧಾರವಾಡ ಸೇರಿ ಕರಾವಳಿ ಭಾಗದಲ್ಲಿ ಆ. 21 ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜನರು ಮುನ್ನಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಕಲಬುರಗಿ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕೈದು ದಿನಗಳ ಕಾಲ ಭಾರೀ ಮಳೆ ಸುರಿಯಬಹುದು. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಉತ್ತರ ಒಳನಾಡುಗಳಲ್ಲಿ ಚದುರಿದಂತೆ ಇಂದು ಮತ್ತು ನಾಳೆ …
Read More »ಖಾನಾಪುರ ತಾಲೂಕಿನ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಡಿತ
ಖಾನಾಪುರ: ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಸೇತುವೆಯೊಂದು ಜಲಾವೃತವಾದ ಹಿನ್ನೆಲೆಯಲ್ಲಿ ಖಾನಾಪುರ ತಾಲೂಕಿನ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ಸಾತಾಳಿ ಗ್ರಾಮದ ತೂಗು ಸೇತುವೆ ಜಲಾವೃತವಾಗಿದೆ. ಈ ಸೇತುವೆ ಮೂಲಕ ಸಾತನಾಳಿ, ಮಾಚಾಳಿ ಸೇರಿದಂತೆ ನಾಲ್ಕೈದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿತ್ತು. ನದಿ ನೀರಿನ ಮಟ್ಟ ಹೆಚ್ಚಿ ಸೇತುವೆ ಜಲಾವೃತವಾದರಿಂದ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದೆ
Read More »ಪುತ್ರನ ನಿಶ್ಚಿತಾರ್ಥದಲ್ಲಿ ನಿಯಮ ಉಲ್ಲಂಘಿಸಿದ ಲಕ್ಷ್ಮಿ ಹೆಬ್ಬಾಳ್ಕರ್
ಶಿವಮೊಗ್ಗ: ತಮ್ಮ ಮಗನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೊರೊನಾ ನಿಯಮವನ್ನು ಉಲ್ಲಂಘಿಸಿದ್ದಾರೆ. ಹೌದು. ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹಾಗೂ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ಸಹೋದರ ಬಿ.ಕೆ ಶಿವಕುಮಾರ್ ಪುತ್ರಿ ಹಿತಾ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು. ಕೊರೊನಾ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳಲ್ಲಿ 50ಕ್ಕಿಂತ ಹೆಚ್ಚು ಜನರು ಸೇರಬಾರದೆಂಬ ನಿಯಮವಿದ್ದರೂ, ಸಮಾರಂಭದಲ್ಲಿ 50ಕ್ಕಿಂತ ಹೆಚ್ಚು ಜನರು ಭಾಗಿಯಾಗಿದ್ದಾರೆ. ಈ ಮೂಲಕ ಶಾಸಕಿ ಕೊರೊನಾ ನಿಯಮವನ್ನು …
Read More »ಆಸ್ತಿಗಾಗಿ ಸಂಬಂಧಿಕರೇ ಮಹಿಳೆಯನ್ನು ಬರ್ಬರವಾಗಿ ಕೊಲೆ
ಮೈಸೂರು: ಆಸ್ತಿಗಾಗಿ ಸಂಬಂಧಿಕರೇ ಮಹಿಳೆಯನ್ನು ಬರ್ಬರವಾಗಿ ಕೊಲೆಗೈದ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಘಟನೆ ನಡೆದಿದೆ.ಹತ್ಯೆಯಾದ ಮಹಿಳೆಯನ್ನು ಬೆಟ್ಟದಪುರ ಗ್ರಾಮದ ಗಂಗಮ್ಮ (45) ಎಂದು ಗುರುತಿಸಲಾಗಿದೆ. ಆರೋಪಿಗಳು ಗಂಗಮ್ಮರನ್ನು ಕೊಲೆ ಮಾಡಿ ಬಳಿಕ ಮೃತದೇಹವನ್ನು ಕಾವೇರಿ ನದಿಗೆ ಎಸೆದಿದ್ದಾರೆ. ಮೃತ ಗಂಗಮ್ಮಗೆ ಮಕ್ಕಳಿಲ್ಲ. ಗಂಡ ಸತ್ತು ಹೋಗಿದ್ದಾರೆ. ಆಗಸ್ಟ್ 7 ರಿಂದ ಗಂಗಮ್ಮ ನಾಪತ್ತೆಯಾಗಿದ್ದರು. ಕೊಲೆ ಆರೋಪಿಗಳು ಮದ್ಯದ ಅಮಲಿನಲ್ಲಿ ಹತ್ಯೆ ಬಗ್ಗೆ ಮಾತನಾಡಿದ್ದಾರೆ. ವಿಚಾರ ತಿಳಿದು …
Read More »ಒನ್ ಸೈಡ್ ಲವ್ – 16 ವರ್ಷದ ಹುಡುಗ ನೇಣಿಗೆ ಶರಣು
ಮುಂಬೈ: 16 ವರ್ಷದ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ಮುಂಬೈನ ಸಂತಾಕ್ರೂಜ್ ನ ಕೊಲಿವೆರಿಯಲ್ಲಿ ನಡೆದಿದೆ. ವಿದ್ಯಾರ್ಥಿ ಆತ್ಮಹತ್ಯೆಗೂ ಮುನ್ನ ತಾನು ಪ್ರೀತಿಸುತ್ತಿದ್ದ ಗೆಳತಿಗೆ ಗುಡ್ ಬೈ ಮೆಸೇಜ್ ಕಳುಹಿಸಿದ್ದಾನೆ. 12ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಒನ್ ಸೈಡ್ ಪ್ರೀತಿಯಲ್ಲಿದ್ದನು. ಶುಕ್ರವಾರ ಪೋಷಕರು ಕೆಲಸಕ್ಕೆ ಹೋದಾಗ ಮನೆಯನ್ನು ಲಾಕ್ ಮಾಡಿಕೊಂಡಿದ್ದಾನೆ. ನೆರೆ ಮನೆಯ ಮಹಿಳೆ ಬಾಗಿಲು ತಟ್ಟಿದ್ದಾರೆ. ಬಾಗಿಲು ತೆಗೆಯದಿದ್ದಾಗ, ಮಹಿಳೆ ಕಿಟಕಿಯಲ್ಲಿ ಇಣುಕಿ ನೋಡಿದ್ದಾರೆ. ವಿದ್ಯಾರ್ಥಿ …
Read More »ಡಿಜೆ ಹಳ್ಳಿ, ಕೆಜಿಹಳ್ಳಿಗೆ ಇಂದು ಕಟೀಲ್ ನೇತೃತ್ವದ ನಿಯೋಗ ಭೇಟಿ
ಬೆಂಗಳೂರು,ಆ.17- ರಾಜ್ಯಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ರಾಜಧಾನಿ ಬೆಂಗಳೂರಿನ ಡಿಜೆ ಹಳ್ಳಿ, ಕೆಜಿಹಳ್ಳಿ ಗಲಭೆ ಪ್ರಕರಣದ ಘಟನಾ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದ ನಿಯೋಗ ಇಂದು ಸಂಜೆ ಭೇಟಿ ನೀಡಲಿದೆ. ಬಿಜೆಪಿ ಮುಖಂಡರ ನಿಯೋಗದ ಜೊತೆಗೆ ನಳಿನ್ ಕುಮಾರ್ ಕಟೀಲ್ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಿದ್ದು, ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ನಿವಾಸಕ್ಕೂ ಭೇಟಿ ನೀಡುವರು. ಇದಕ್ಕೂ ಮುನ್ನ ಗೃಹ ಸಚಿವರ …
Read More »