ಬೆಂಗಳೂರು, : ರಾಜ್ಯದಲ್ಲಿ ಸಂಸ್ಕಾರಕ್ಕೆ ಸ್ಮಶಾನ ಸ್ಥಳವಿಲ್ಲದ ಕಡೆ ಅಗತ್ಯ ಜಮೀನು ಮಂಜೂರು ಮಾಡುವ ಕುರಿತ ನ್ಯಾಯಾಲಯದ ಆದೇಶ ಪಾಲಿಸದ ಸರಕಾರದ ವಿರುದ್ಧ ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಈ ಕುರಿತು ಬೆಂಗಳೂರು ನಿವಾಸಿ ಮುಹಮ್ಮದ್ ಇಕ್ಬಾಲ್ ಎಂಬುವರು ಸಲ್ಲಿಸಿದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದಕುಮಾರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ …
Read More »Monthly Archives: ಆಗಷ್ಟ್ 2020
ನೆಲಮಂಗಲ ಬಳಿ ಲಾರಿಗೆ ಕಾರು ಡಿಕ್ಕಿ: ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ ಮೂವರ ದುರ್ಮರಣ
ನೆಲಮಂಗಲ: ನಿಯಂತ್ರಣ ತಪ್ಪಿದ ಕಾರು ಪಕ್ಕದ ರಸ್ತೆಗೆ ನುಗ್ಗಿ ಗ್ಯಾಸ್ ಲ್ಯಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲ-ಕುಣಿಗಲ್ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬೆಂಗಳೂರು ಪೀಣ್ಯಾ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ್ ನಗರದ ಪುರುಷೋತ್ತಮ್ ,ಚಂದು ಮತ್ತು ನವೀನ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ತುಮಕೂರು ಜಿಲ್ಲೆಯ ತಿಪಟೂರು ನಿವಾಸಿ ಆದಿತ್ಯ ಎಂಬುವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚೇತನ್, ನವೀನ್, ಚಂದು ಮತ್ತು ಆದಿ ಇಟಿಯೋಸ್ ಕಾರಿನಲ್ಲಿ …
Read More »ನಕಲಿ ಕಾರ್ಮಿಕರ ಕಾರ್ಡ್ ದಂಧೆ ವಿರುದ್ಧ ಕಠಿಣ ಕ್ರಮ: ಸಚಿವ ಶಿವರಾಮ್ ಹೆಬ್ಬಾರ್
ಬೆಳಗಾವಿ: ರಾಜ್ಯದಲ್ಲಿ ನಕಲಿ ಕಾರ್ಮಿಕರ ಕಾರ್ಡು ಮಾಡುವ ಜಾಲ ತಡೆಯಲು ವ್ಯವಸ್ಥಿತ ಕಾರ್ಯಕ್ರಮ ರೂಪಿಸಲಾಗುತ್ತದೆ ಎಂದು ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು. ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಅಧ್ಯಯನ ಸಂಸ್ಥೆಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಿಜವಾದ ಕಾರ್ಮಿಕರ ಬಗ್ಗೆ ಪರಿಶೀಲನೆ ನಡೆಸಿ ಬೇರೆ ರೀತಿಯಲ್ಲಿ ಕಾರ್ಮಿಕ ಕಾರ್ಡ್ ನೀಡುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು. ಕಾರ್ಮಿಕ ಕಾರ್ಡ್ ಗಳ ದುರುಪಯೋಗ ಆಗುವುದರಿಂದ ಅರ್ಹ ಕಾರ್ಮಿಕರಿಗೆ ಮೋಸ …
Read More »11 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ
ಬೆಳಗಾವಿ: ‘ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಶೇ 99ರಷ್ಟು ಬಿಲ್ ಪಾವತಿಸಲಾಗಿದೆ’ ಎಂದುಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 318 ಮಂದಿಗೆ ಕೋವಿಡ್-19 ಸೋಂಕಿ ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 11ಸಾವಿರದ (11,153) ಗಡಿ ದಾಟಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ನಾಲ್ವರು ಹಾಗೂ ಬೈಲಹೊಂಗಲ ತಾಲ್ಲೂಕಿನ ಒಬ್ಬರು ಸೇರಿ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಲ್ಲಿ ಒಬ್ಬರು 32 ವರ್ಷದವರು. …
Read More »ಬೆಂಗಳೂರಿನಲ್ಲಿ ಟಗರು ಬೆಟ್ಟಿಂಗ್ ಭರಾಟೆ ಜೋರು- ಹಳ್ಳಿ ಕ್ರೇಜ್ ಸಿಟಿಗೆ ಶಿಫ್ಟ್
ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಸಮಯದಲ್ಲೇ ಟಗರು ಆಟ ಜೋರಾಗಿದೆ. ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿದ್ದ ಟಗರು ಬೆಟ್ಟಿಂಗ್ ಕ್ರೇಜ್ ಈಗ ನಗರಕ್ಕೆ ಶಿಫ್ಟ್ ಆಗಿದೆ. ಕೆಲಸ ಇಲ್ಲದ ಯುವಕರು ಟಗರು ಆಟದ ಮೂಲ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಜಯನಗರ ಸೇರಿದಂತೆ ನಗರದ ಹಲವು ಕಡೆ ಈಗ ಟಗರು ಕಾಳಗ ಸಖತ್ ಕ್ರೇಜ್ ಸೃಷ್ಟಿಸಿದೆ. ಹೊಡಿ ಮಗಾ ಅನ್ನೋ ಟೀಂ ಇದ್ರಲ್ಲಿ ಸಕ್ರೀಯ ಆಗಿದೆ. ಆದರೆ …
Read More »ಭಿಕ್ಷುಕನ ಬಳಿ ಇದ್ದ ಕೊಳಕು ಬಟ್ಟೆ ಗಂಟು ಎಸೆಯುವಾಗ ಕಂತೆ ಕಂತೆ ಹಣ ಪತ್ತೆ
ಬೆಂಗಳೂರು: ಅಂಗವಿಕಲ ಭಿಕ್ಷುಕನ ಬಳಿ ಇದ್ದ ಕೊಳಕು ಬಟ್ಟೆ ಗಂಟು ಎಸೆಯುವಾಗ ಕಂತೆ ಕಂತೆ ಹಣ ಪತ್ತೆಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಬರದಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರತಿದಿನ ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದ ಅಂಗವಿಕಲ ರಂಗಸ್ವಾಮಯ್ಯ ಬಳಿ ಹಣ ಪತ್ತೆಯಾಗಿದೆ. ರಂಗಸ್ವಾಮಯ್ಯ ಭಿಕ್ಷೆ ಬೇಡಿದ ಹಣ ಹಾಗೂ ಅಂಗವಿಕಲ ವೇತನವನ್ನೂ ಬಳಸದೆ ಹಣವನ್ನು ಕೂಡಿಟ್ಟಿದ್ದು, ಸುಮಾರು 60 ಸಾವಿರ ರೂ. ಗಂಟಿನಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಹಲವು ತಿಂಗಳುಗಳಿಂದ ಸಾನ್ನವಿಲ್ಲದೇ …
Read More »2 ದಿನ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಸಮ್ಮತಿ
ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಗೆ 2 ದಿನಗಳ ಕಾಲ ಬಳ್ಳಾರಿಗೆ ತೆರಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿಯ ಪುಣ್ಯ ತಿಥಿಯಲ್ಲಿ ಪಾಲ್ಗೊಳ್ಳಲು ಆಗಸ್ಟ್ 30 ಮತ್ತು 31 ರಂದು ಬಳ್ಳಾರಿಗೆ ತೆರಳು ಜನಾರ್ದನ ರೆಡ್ಡಿಗೆ ಅನುಮತಿ ನೀಡಲಾಗಿದೆ. ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಮತ್ತು ನ್ಯಾ.ಬಿ.ಆರ್ ಗವಾಯಿ ಮತ್ತು ನ್ಯಾ.ಕೃಷ್ಣ ಮುರಾರಿ ಅವರನ್ನು …
Read More »ಎರಡು ಗುಂಪುಗಳ ನಡುವೆ ಗ್ಯಾಂಗ್ ವಾರ್ಯುವಕನ ಮೇಲೆ ದಾಳಿ ಮಾಡಿ ಕೊಚ್ಚಿ ಕೊಲೆ
ಕೋಲಾರ: ಎರಡು ಗುಂಪುಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ಸಿನಿಮಾದಲ್ಲಿ ಹೊಡೆಯುವ ರೀತಿಯಲ್ಲೇ ಯುವಕನ ಮೇಲೆ ದಾಳಿ ಮಾಡಿ ಕೊಚ್ಚಿ ಕೊಲೆ ಮಾಡಲಾಗಿದೆ.ಕೋಲಾರದ ಕೆಜಿಎಫ್ ನಗರದ ಚಾಮರಾಜಪೇಟೆ ವೃತ್ತದಲ್ಲಿ ಘಟನೆ ನಡೆದಿದ್ದು, ಹುಟ್ಟುಹಬ್ಬದ ಶೋಕಿ ಹಾಗೂ ಏರಿಯಾಗಳ ನಡುವಿನ ಗ್ಯಾಂಗ್ ವಾರ್ ಟ್ರೆಂಡ್ ಕ್ರಿಯೇಟ್ ಮಾಡಿ, ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಯುವಕ ಸ್ಟಾಲಿನ್ ಮೃತ ಪಟ್ಟಿದ್ದಾನೆ. ಯುವಕನನ್ನು ಕಳೆದುಕೊಂಡ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. …
Read More »ಕರ್ನಾಟಕದ ಪಡಿತರ ಅಕ್ಕಿ ಕೇರಳಕ್ಕೆ- ಐವರು ಖದೀಮರ ಅರೆಸ್ಟ್
ಉಡುಪಿ: ಕರ್ನಾಟಕದ ಉಚಿತ ಪಡಿತರ ಅಕ್ಕಿಯನ್ನು ಸಂಗ್ರಹಿಸಿ ಕೇರಳಕ್ಕೆ ಸಾಗಿಸುವ ದಂಧೆಯ ಮೇಲೆ ಉಡುಪಿ ಡಿಸಿಐಬಿ ಪೊಲೀಸರು ದಾಳಿ ಮಾಡಿದ್ದಾರೆ. ಸರ್ಕಾರ ಉಚಿತವಾಗಿ ಬಡವರಿಗೆ ಕೊಡುವ ಉಚಿತ ಅಕ್ಕಿಯನ್ನು ಕೇರಳಕ್ಕೆ ಸಾಗಿಸುವ ಐವರು ಚೋರರ ಬಂಧನವಾಗಿದೆ. ಬಡವರು ಹಸಿದಿರಬಾರದು. ಮೂರೊತ್ತು ಊಟ ಮಾಡಬೇಕೆಂದು ಸರ್ಕಾರ ಉಚಿತ ಅಕ್ಕಿ ವಿತರಿಸುತ್ತಿದೆ. ಆದ್ರೆ ಸರ್ಕಾರದ ಅಕ್ಕಿ ಪಡೆದು ಕೆಲವರು ಅದನ್ನು ದಂಧೆಕೋರರಿಗೆ ಮಾರಾಟ ಮಾಡಿ ದ್ರೋಹ ಬಗೆಯುತ್ತಿದ್ದಾರೆ. ಇಂತಹ ಘಟನೆ ಉಡುಪಿಯಲ್ಲಿ ಬೆಳಕಿಗೆ …
Read More »ಪೀರನವಾಡಿಯಲ್ಲಿ ರಾತ್ರೋ ರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ
ಬೆಳಗಾವಿ: ರಾಯಣ್ಣ ಪ್ರತಿಮೆ ವಿವಾದ ತೀವ್ರ ಸ್ವರೂಪ ಪಡೆದಿದೆ. ಬೆಳಗಾವಿಯ ಪೀರನವಾಡಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಕನ್ನಡಪರ ಹೋರಾಟಗಾರರು ಮತ್ತು ರಾಯಣ್ಣನ ಅಭಿಮಾನಿಗಳು ಪೀರನವಾಡಿಗೆ ತೆರಳಿ ಪ್ರತಿಮೆ ಸ್ಥಾಪನೆ ಮಾಡಿ, ರಾಯಣ್ಣನಿಗೆ ಜೈಕಾರ ಹಾಕಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ನಿನ್ನೆ ರಾಯಣ್ಣ ಅಭಿಮಾನಿಗಳು ಬೆಳಗಾವಿ ಚಲೋ ಹಮ್ಮಿಕೊಂಡಿದ್ದರು. ಆದರೆ ಪೊಲೀಸರು ಇದಕ್ಕೆ ಅವಕಾಶ ನೀಡಿರಲಿಲ್ಲ. ನಿನ್ನೆ …
Read More »