Breaking News

Monthly Archives: ಆಗಷ್ಟ್ 2020

ಮಾರ್ಕಂಡೇಯ ನದಿ ಪ್ರವಾಹಕ್ಕೆ 5 ಸಾವಿರ ಹೆಕ್ಟೇರ್ ಜಲಾವೃತ, ಕಬ್ಬು ಮತ್ತು ಭತ್ತ ಹಾನಿ

ಬೆಳಗಾವಿ: ಮಾರ್ಕಂಡೇಯ ನದಿ ಪ್ರವಾಹಕ್ಕೆ ಮತ್ತೆ ಬೆಳೆ ಕಳೆದುಕೊಂಡು ಬೆಳಗಾವಿ ತಾಲೂಕಿನ ರೈತರು ಕಂಗಾಲಾಗಿದ್ದಾರೆ. ನದಿ ಪಾತ್ರದ ಐದು ಸಾವಿರ ಹೆಕ್ಟೇರ್​ಗೂ ಅಧಿಕ ಬೆಳೆ ಜಲಾವೃತಗೊಂಡಿದೆ. ಅತೀ ಹೆಚ್ಚು ಕಬ್ಬು ಮತ್ತು ಭತ್ತದ ಬೆಳೆ ಹಾನಿಯಾಗಿದೆ. ಕಳೆದ ವರ್ಷವೂ ಇದೇ ಭಾಗದ ರೈತರು ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರು. ಈ ವರ್ಷ ಕೂಡ ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಬೆಳಗಾವಿ ತಾಲೂಕಿನ ಅಂಬೇವಾಡಿ, ಕಡೋಲಿ, ಯಳ್ಳೂರ, ಹಲಗಾ ಗ್ರಾಮದ ಜಮೀನುಗಳು ಹೆಚ್ಚು ಹಾನಿಗೊಳಗಾಗಿವೆ. …

Read More »

ಮಳೆ ಹಾನಿ ಪ್ರದೇಶಗಳಲ್ಲಿ ಮಂಗಳವಾರ ಸಿಎಂ ವೈಮಾನಿಕ ಸಮೀಕ್ಷೆ

ಬೆಂಗಳೂರು: ಆಗಸ್ಟ್ 25ರಂದು (ಮಂಗಳವಾರ) ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಈ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಂಗಳವಾರ ಬೆಳಗ್ಗೆ 9 ಗಂಟೆಗೆ ಹೆಚ್‌ಎಎಲ್‌ನಿಂದ ಪ್ರಯಾಣ ಬೆಳೆಸಲಿರುವ ಮುಖ್ಯಮಂತ್ರಿ ಬೆಳಿಗ್ಗೆ 10.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ, ಧಾರವಾಡ ಜಿಲ್ಲೆಗಳ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ಮಳೆ ಹಾನಿ ಸಂಬಂಧ ಸಭೆ ನಡೆಸಿ ಸಮಾಲೋಚನೆ ನಡೆಸಲಿದ್ದಾರೆ. ಕಾರ್ಯಕರ್ತೆಯರಿಗಷ್ಟೇ ಪ್ರೋತ್ಸಾಹಧನ ಕೊಡಬೇಕಿದೆ: ಎಸ್..ಟಿ. ಸೋಮಶೇಖರ್ 11.15 …

Read More »

ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ಡಿಕೆಶಿ.

ಬೆಳಗಾವಿ: ರಮೇಶ್ ಜಾರಕಿಹೊಳಿಗೆ ಠಕ್ಕರ್ ನೀಡಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ಲ್ಯಾನ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಕ್ಕೆ ಡಿಕೆಶಿ ಭೇಟಿ ನೀಡಲಿದ್ದು, ಸೋಮವಾರ ಆಗಸ್ಟ್ 24 ರಂದು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿ.ಕೆ ಶಿವಕುಮಾರ್ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಮತ್ತು ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಹೆಚ್ಚು ಹಾನಿಯಾಗಿದೆ. ಆದ್ರೂ ಅತೀ ಹೆಚ್ಚು ಹಾನಿಯಾದ ಪ್ರದೇಶ ಬಿಟ್ಟು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿಕೆಶಿ ಪ್ರವಾಸ …

Read More »

ಸರ್ಕಾರದ ನಿರ್ಲಕ್ಷ್ಯ 2 ಲಕ್ಷದ 50 ಸಾವಿರದ ಗಡಿ ದಾಟಿದೆ.. ಕೊರೊನಾ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾಕ್ಷಸಿ ಕೊರೊನಾ 1 ಲಕ್ಷದ ಗಡಿ ದಾಟಿದೆ. ಕೊರೊನಾ ತಡೆಗೆ ಮಾದರಿ ಆಗಿದ್ದ ಕರ್ನಾಟಕದಲ್ಲಿ ಆಗಸ್ಟ್ ನಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಆಗಸ್ಟ್ ನಲ್ಲೇ ಅರ್ಧ ಲಕ್ಷದಷ್ಟು ಹೊಸ ಸೋಂಕಿತರು ಪತ್ತೆ ಆಗಿದ್ದಾರೆ.ಇಡೀ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷದ 50 ಸಾವಿರದ ಗಡಿ ದಾಟಿ ಈಗ 3 ಲಕ್ಷದತ್ತ ಹೋಗುತ್ತಿದೆ. ಆರಂಭದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ ಎಂದಿದ್ದ ಸರ್ಕಾರ ಆಮೇಲೆ ದೇವರ ಮೇಲೆ …

Read More »

ದೇಶದೆಲ್ಲೆಡೆ ವಿಘ್ನ ವಿನಾಯಕನಿಗೆ ಪೂಜೆ ಪುನಸ್ಕಾರ

ಬೆಂಗಳೂರು: ಇಂದು ಗಣೇಶ ಚತುರ್ಥಿ ಹಿನ್ನೆಲೆ ದೇಶದೆಲ್ಲೆಡೆ ವಿಘ್ನ ವಿನಾಯಕನಿಗೆ ಪೂಜೆ ಪುನಸ್ಕಾರಗಳು ನಡೆದಿವೆ. ಜನರು ಗಣೇಶನ ವಿಗ್ರಹ ತಂದು ಮನೆಯಲ್ಲಿ ಪ್ರತಿಷ್ಠಾಪನೆ ಮಾಡಿ ವಿಘ್ನಗಳನ್ನು ನಿವಾರಿಸುವ ಎಂದು ಪ್ರಾರ್ಥಿಸುತ್ತಿದ್ದಾರೆ. ಕೊರೊನಾ ಗಣೇಶ ಹಬ್ಬದ ಅರ್ಧಕ್ಕಿಂತ ಹೆಚ್ಚು ಸಂಭ್ರಮವನ್ನು ಕಿತ್ತುಕೊಂಡಿದೆ. ಕೊರೊನಾ ಹಿನ್ನೆಲೆ ಭಕ್ತಾದಿಗಳು ಸರಳವಾಗಿ ಗಣೇಶ ಹಬ್ಬವನ್ನ ಆಚರಿಸುತ್ತಿದ್ದಾರೆ. ದೇವಸ್ಥಾನಗಳು ತೆರೆದಿದ್ರೂ ಭಕ್ತರ ಸಂಖ್ಯೆ ಅಷ್ಟಿಲ್ಲ. ಹಬ್ಬದ ದಿನಗಳಲ್ಲಿ ಭಕ್ತರಿಂದ ತುಂಬಿರುತ್ತಿದ್ದ ದೇವಸ್ಥಾನಗಳು ಖಾಲಿ ಖಾಲಿ ಅನ್ನಿಸುತ್ತಿವೆ. ಕೊರೊನಾ …

Read More »

ಕೃಷ್ಣಾ ನದಿಯಲ್ಲಿ ನಾಪತ್ತೆಯಾಗಿದ್ದ ನಾಲ್ವರು ಶವವಾಗಿ ಪತ್ತೆ……….

ರಾಯಚೂರು: ಆಗಸ್ಟ್ 17ರಂದು ಕೃಷ್ಣ ನದಿಯಲ್ಲಿ ತೆಪ್ಪ ಮುಳುಗಿ ನಾಪತ್ತೆಯಾಗಿದ್ದ ರಾಯಚೂರಿನ ನಡುಗಡ್ಡೆ ಗ್ರಾಮ ಕುರ್ವಕಲಾದ ನಾಲ್ಕು ಜನ ಕೊನೆಗೆ ಶವವಾಗಿ ಪತ್ತೆಯಾಗಿದ್ದಾರೆ.ತೆಲಂಗಾಣದ ಪಂಚದೇವಪಾಡಗೆ ದಿನಸಿ ತರಲು ಹೋಗಿದ್ದವರು ಕುರ್ವಾಕುಲಕ್ಕೆ ಮರಳುವಾಗ ತೆಪ್ಪ ಮುಳುಗಿತ್ತು. ಮೊದಲಿಗೆ ಇಬ್ಬರು, ಬಳಿಕ ಒಬ್ಬರು ಒಟ್ಟು ಮೂರು ಜನ ತೆಲಂಗಾಣದ ಜುರಾಲಾ ಇಂದಿರಾ ಪ್ರಿಯದರ್ಶಿನಿ ಜಲಾಶಯದ ಬಳಿ ಶವವಾಗಿ ಪತ್ತೆಯಾಗಿದ್ದರು. ಇಂದು ಬಾಲಕಿ ರೋಜಾ ಸಹ ಜಲಾಶಯ ಬಳಿ ಶವವಾಗಿ ದೊರಕಿದ್ದಾಳೆ. ಸುಮಲತಾ, ನರಸಮ್ಮ, …

Read More »

ಜೀವನಾಧಾರವಾಗಿದ್ದ 2 ಎಮ್ಮೆಗಳನ್ನು ಕಳೆದುಕೊಂಡ ಬಡ ಕುಟುಂಬದ ನೆರವಿಗೆ ಸೋನು ಸೂದ್

ಪಾಟ್ನಾ: ಕೊರೊನಾ ಮಹಾಮಾರಿ ಸೃಷ್ಟಿಸಿರುವ ಸಂದಿಗ್ಧ ಬಿಕ್ಕಟ್ಟಿನ ಸಂದರ್ಭದಲ್ಲಿ ಹಲವು ಕುಟುಂಬಗಳಿಗೆ ನಟ ಸೋನು ಸೂದ್ ನೆರವಾಗುತ್ತಿದ್ದಾರೆ. ಸದ್ಯ ಪ್ರವಾಹದಲ್ಲಿ ಕುಟುಂಬದ ಜೀವನಾಧಾರವಾಗಿದ್ದ 2 ಎಮ್ಮೆಗಳನ್ನು ಕಳೆದುಕೊಂಡ ಬಡ ಕುಟುಂಬದ ನೆರವಿಗೆ ಸೋನು ಸೂದ್ ಧವಿಸಿದ್ದಾರೆ. ಬಿಹಾರದ ಚಂಪರನ್ ಪ್ರದೇಶದ ಭೋಲಾ ಗ್ರಾಮದ ಕುಟುಂಬ ಭೀಕರ ಪ್ರವಾಹದಲ್ಲಿ ಪುತ್ರ ಹಾಗೂ ಜೀವನಾಧರವಾಗಿದ್ದ ಎಮ್ಮೆಯನ್ನು ಕಳೆದುಕೊಂಡಿತ್ತು. ಈ ಕುರಿತ ಮಾಹಿತಿ ಪಡೆದ ಸೋನು ಸೂದ್ ಮತ್ತೊಂದು ಎಮ್ಮೆಯನ್ನು ಖರೀದಿ ಮಾಡಿ ಕುಟುಂಬಕ್ಕೆ …

Read More »

ನಿಮ್ಮ ಫೋನ್ ಕದ್ದಾಲಿಕೆ ಮಾಡುವ ದರಿದ್ರ ನಮ್ಮ ಸರ್ಕಾರಕ್ಕೆ ಬಂದಿಲ್ಲ: ಸುಧಾಕರ್

ಬೆಂಗಳೂರು: ನನ್ನ ಫೋನ್ ಟ್ಯಾಪಿಂಗ್ ಆಗ್ತಿರೋದು ನಿಜ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಎರಡು ಟ್ವೀಟ್ ಮಾಡಿರುವ ಸಚಿವರು, ಡಿಕೆ ಶಿವಕುಮಾರ್ ಅವರೇ, ನೀವು ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದಾಗ ಧರ್ಮ-ಸಂಸ್ಕೃತಿಯ ಪ್ರತೀಕ, ಪವಿತ್ರವಾದ ಮನಸ್ಸುಳ್ಳ ಆದಿಚುಂಚನಗಿರಿ, ರಂಭಾಪುರಿ, ಸಿದ್ಧಗಂಗಾ ಮಠದ, ಸಿರಿಗೆರೆ ಮಠ, ಸುತ್ತೂರು ಮಠ ಶ್ರೀಗಳು ಸೇರಿದಂತೆ 7 ಸ್ವಾಮೀಜಿಗಳ …

Read More »

ಅಪಹರಣವಾದ ಮಗುವನ್ನು 48 ಗಂಟೆಯೊಳಗೆ ರಕ್ಷಿಸಿದ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ

ನೆಲಮಂಗಲ: 18 ತಿಂಗಳ ಮಗುವನ್ನು ಹಣಕ್ಕಾಗಿ ಅಪಹರಿಸಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಎರಡು ದಿನದ ಹಿಂದೆ ಮನೆ ಮುಂದೆ ಇದ್ದ ಮಗುವನ್ನು ಇಬ್ಬರು ವ್ಯಕ್ತಿಗಳು ಅಪಹರಿಸಿದ್ದರು. ಇಂದು ಪ್ರಕರಣ ಭೇದಿಸಿದ ಪೊಲೀಸರು ಪೋಷಕರಿಗೆ ಮಗುವನ್ನು ಹಸ್ತಾಂತರಿಸಿ ಪ್ರಕರಣವನ್ನು ಸುಖಾಂತ್ಯಗೊಳಿಸಿದ್ದಾರೆ. ಬೆಂಗಳೂರು ಹೊರವಲಯ ಮಾಗಡಿ ರಸ್ತೆಯ ಕಡಬಗೆರೆ ಬಳಿ ಮಗು ಅಪಹರಣವಾಗಿತ್ತು. ಮಾಚೋಹಳ್ಳಿಯ ರವಿ ದಂಪತಿಯ 18 ತಿಂಗಳ ಹೆಣ್ಣು ಮಗುವನ್ನು ಅಪಹರಣ ಮಾಡಿದ್ದರು. ಅಪಹರಣವಾದ ಮಗುವನ್ನು 48 …

Read More »

ಆಗಸ್ಟ್ 22ರಿಂದ ಮದ್ಯ ಮಾರಾಟ ನಿಷೇಧ: d.c…

ಧಾರವಾಡ: ಅಗಸ್ಟ್ 22ರಿಂದ ಸೆಪ್ಟಂಬರ್ 4ರವರೆಗೆ ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಧಾರವಾಡ ಜಿಲ್ಲೆಯ ನಗರ ಮತ್ತು ಗ್ರಾಮಗಳಲ್ಲಿ ಗಣೇಶ ವಿಗ್ರಹಗಳ ವಿಸರ್ಜನಾ ನಡೆಯುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(1) ಕಾಯ್ದೆಯಡಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಸಮಾರಂಭ, …

Read More »