ನವದೆಹಲಿ: ಕೆಲವೇ ತಿಂಗಳಲ್ಲಿ ಕೋವಿಡ್19ಗೆ ಲಸಿಕೆ ಬರಬಹುದು ಎಂಬ ನಿರೀಕ್ಷೆಗಳ ನಡುವೆ ಕೇಂದ್ರ ಸರ್ಕಾರ 50 ಲಕ್ಷದಷ್ಟು ಕೊರೊನಾ ಲಸಿಕೆಯನ್ನು ಖರೀದಿಸಬಹುದು ಎಂದು ವರದಿಯಾಗಿದೆ.ಮೊದಲ ಹಂತದಲ್ಲಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಸಿಬ್ಬಂದಿಗೆ, ಸೈನಿಕರಿಗೆ ಲಸಿಕೆಯನ್ನ ನೀಡಲಾಗುತ್ತದೆ. ಹಿರಿಯ ನಾಗರಿಕರು, ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಲಸಿಕೆಯನ್ನು ನೀಡುವ ನಿರೀಕ್ಷೆ ಇದೆ. ನೀತಿ ಆಯೋಗ, ಆರೋಗ್ಯ ಸಚಿವಾಲಯ ಮತ್ತು ಔಷಧ ಕಂಪನಿಗಳ ಜೊತೆಗೆ ಸೋಮವಾರ ಸಭೆ ನಡೆದಿತ್ತು. ಕೊರೊನಾ ಲಸಿಕೆಯ ಉತ್ಪಾದನಾ …
Read More »Monthly Archives: ಆಗಷ್ಟ್ 2020
12 ವಿದ್ಯಾರ್ಥಿಗಳಿಗೆ ಶ್ರೀ ಸಾಯಿ ಫೌಂಡೇಶನ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ
ನೆಲಮಂಗಲ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ಕ್ಷೇತ್ರದ ಗೌರವ ಹೆಚ್ಚಿಸಿರುವ 12 ವಿದ್ಯಾರ್ಥಿಗಳಿಗೆ ಶ್ರೀ ಸಾಯಿ ಫೌಂಡೇಶನ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ ಮಾಡಿ ಸನ್ಮಾನಿಸಿ ಗೌರವಿಸಲಾಯಿತು.ಈ ವೇಳೆ ಮಾತನಾಡಿದ ಟಿ.ದಾಸರಹಳ್ಳಿಯ ಮಾಜಿ ಶಾಸಕ ಮುನಿರಾಜು, ಗುರುಗಳಿಂದ ಕಲಿತ ವಿದ್ಯೆಯಿಂದ ಜ್ಞಾನ ಸಂಪಾದನೆ ಮಾಡಿಕೊಂಡು ಭವಿಷ್ಯದಲ್ಲಿ ಹೆತ್ತ ತಂದೆ-ತಾಯಿ ಹಾಗೂ ನಾಡಿಗೆ ಕೀರ್ತಿ ತರಬೇಕು ಎಂದರು. ಶೆಟ್ಟಿಹಳ್ಳಿಯ ಬಿ. ಸುರೇಶ್ ಅವರು ಶ್ರೀ ಸಾಯಿ …
Read More »ರೌಡಿಶೀಟರ್ ಪ್ರೂಟ್ ಇರ್ಫಾನ್ ಹತ್ಯೆ ಪ್ರಕರಣ- ಭೂಗತ ಪಾತಕಿ ಬಚ್ಚಾಖಾನ್ ಸಹಚರರ ಬಂಧನ
ಹುಬ್ಬಳ್ಳಿ: ರೌಡಿಶೀಟರ್ ಫ್ರೂಟ್ ಇರ್ಫಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೆ ಹುಬ್ಬಳ್ಳಿ ಠಾಣೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರಿಂದ ಬಂಧಿತರ ಸಂಖ್ಯೆ ಏಳಕ್ಕೇರಿದಂತಾಗಿದೆ. ಬಂಧಿತರಿಬ್ಬರು ಬಚ್ಚಾಖಾನ್ ಸಹಚರರೆಂದು ಪೊಲೀಸ್ ಮೂಲಗಳು ತಿಳಿಸಿವೆ. ಮೈಸೂರಿನ ಶಿವರಾತ್ರಿ ಶೇಶ್ವನಗರದ ಬನ್ನಿಮಂಟಪ ಲೇಔಟ್ ನ ಶಹಜಾನ ಆಶ್ರಫ್. ಕೆ (24) ಹಾಗೂ ಮೈಸೂರು ಗಾಂಧಿನಗರದ ಸೈಯದ್ ಸೋಹೈಲ್ ಪೀರ್ ಸೈಯದ ಆಜೀಮ್ ಪೀರ್ (22) ಬಂಧಿತರು. ಆರೋಪಿಗಳಿಂದ ಎರಡು ಮೊಬೈಲಗಳನ್ನು ವಶಕ್ಕೆ ಪಡೆಯಲಾಗಿದೆ. …
Read More »ದಕ್ಷ ಅಧಿಕಾರಿಯನ್ನು ಏಜೆಂಟ್ ಎಂದಿರೋದನ್ನ ಖಂಡಿಸ್ತೀನಿ :ಬೊಮ್ಮಾಯಿ ಎಚ್ಚರಿಕೆ
ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿ ಕಮಲ್ ಪಂಥ್ ಅವರನ್ನು ಡಿ.ಕೆ ಶಿವಕುಮಾರ್ ಅವರು ಏಜೆಂಟ್ ಎಂದಿರುವುದನ್ನು ಗೃಹ ಮಂತ್ರಿ ಬಸವರಾಜ್ ಬೊಮ್ಮಾಯಿ ಬಲವಾಗಿ ಖಂಡಿಸುತ್ತೇನೆ.ದೇವರಾಜ್ ಅರಸರ ಜನ್ಮದಿನದಂದೇ `ಬಿಜೆಪಿ ವಿರುದ್ಧ ಕಾಂಗ್ರೆಸ್ ಜನಧ್ವನಿ’ ಹೆಸರಲ್ಲಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿದೆ. ಈ ವೇಳೆ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಮಾತನಾಡಿದ ಡಿಕೆಶಿ, ಮಿಸ್ಟರ್ ಪೊಲೀಸ್ ಕಮೀಷನರ್ ಬೆಂಗಳೂರಿನಲ್ಲಿ ನಡೆದ ಗಭೆಯಲ್ಲಿ ನೀವು ಬಿಜೆಪಿ …
Read More »ನಾಳೆಯಿಂದ ನಾವು ಕೆಲಸಕ್ಕೆ ಬರುವುದಿಲ್ಲ ಎಂದು ಮೈಸೂರು ಆರೋಗ್ಯ ಇಲಾಖೆ ವೈದ್ಯರು ಸುಧಾಕರ್‌ಗೆ ಎಚ್ಚರಿಕೆ
ಮೈಸೂರು: ಆತ್ಮಹತ್ಯೆ ಮಾಡಿಕೊಂಡ ನಂಜನಗೂಡಿನ ಟಿಹೆಚ್‍ಒ ಅವರ ಅಂತಿಮ ದರ್ಶನಕ್ಕೆ ಹೋಗಿದ್ದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರಿಗೆ ಮಹಿಳಾ ವೈದ್ಯೆಯೊಬ್ಬರು ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ.ಆರೋಗ್ಯಾಧಿಕಾರಿ ನಾಗೇಂದ್ರ ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ನಾಗೇಂದ್ರ ಅವರು ಮೈಸೂರಿನ ಆಲನಹಳ್ಳಿ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು. ಅವರು ಕಳೆದ ಒಂದು ವರ್ಷದಿಂದ ನಂಜನಗೂಡಿನಲ್ಲಿ ತಾಲೂಕು ಆರೋಗ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಾಗೇಂದ್ರ ಅವರ ಅಂತಿಮ ದರ್ಶನ …
Read More »ಮಳೆ ಕಡಿಮೆ ಆಗಿದ್ರೂ ಉತ್ತರ ಕರ್ನಾಟಕವನ್ನು ಪ್ರವಾಹ ಬಿಟ್ಟುಬಿಡದಂತೆ ಕಾಡುತ್ತಿದೆ.
ಬೆಂಗಳೂರು: ಮಹಾ ಮಳೆ ಕಡಿಮೆ ಆಗಿದ್ರೂ ಉತ್ತರ ಕರ್ನಾಟಕವನ್ನು ಪ್ರವಾಹ ಬಿಟ್ಟುಬಿಡದಂತೆ ಕಾಡುತ್ತಿದೆ. ಬೆಳಗಾವಿ, ಬಾಗಲಕೋಟೆ, ರಾಯಚೂರು, ಯಾದಗಿರಿ, ಗದಗ, ಧಾರವಾಡ, ಕೊಪ್ಪಳ ಸೇರಿ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ ಆಗ್ತಿದೆ. ಸರ್ಕಾರ ಈ ಕಡೆ ಕಿಂಚಿತ್ತೂ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಬೇರೆಯದ್ದೇ ರಾಜಕಾರಣದಲ್ಲಿ ಮುಳುಗಿಬಿಟ್ಟಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಆರು ಹಳ್ಳಿಗಳು ಜಲಾವೃತವಾಗಿವೆ. 20ಕ್ಕೂ ಹೆಚ್ಚು ಹಳ್ಳಿಗಳಿಗೆ ಪ್ರವಾಹ ಆತಂಕ ಶುರುವಾಗಿದೆ. ಹೊಳೆ ಬಸವೇಶ್ವರ ದೇವಸ್ಥಾನ ಜಲಾವೃತಗೊಂಡಿದೆ. …
Read More »ಡಿಜೆ ಹಳ್ಳಿ ಗಲಭೆಗೆ ಪ್ರಚೋದನೆ ಕೊಟ್ಟಿದ್ದ ಎಸ್‍ಡಿಪಿಐ ಕಾರ್ಯಕರ್ತ ಖಾಲಿದ್ ಅರೆಸ್ಟ್
ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ಆರೋಪಿ, ಎಸ್‍ಡಿಪಿಐ ಕಾರ್ಯಕರ್ತ ಖಾಲಿದ್‍ನನ್ನು ಪೊಲೀಸರು ಬಂಧಿಸಿದ್ದಾರೆ.ಡಿಜೆ ಹಳ್ಳಿಯ ರೋಷನ್ ನಗರ ನಿವಾಸಿಯಾಗಿದ್ದ ಖಾಲಿದ್ ಇತರೇ ಆರೋಪಿಗಳಾಗಿದ್ದ ಮುಜಾಮಿಲ್, ಅಯಾಜ್, ಆಫ್ನಾನ್ ಜೊತೆಗೂಡಿ ಕೃತ್ಯದಲ್ಲಿ ಭಾಗಿಯಾಗಿದ್ದ. ಖಾಲಿದ್ ಎಸ್‍ಡಿಪಿಐ ಕಾರ್ಯಕರ್ತರನ್ನು ಒಗ್ಗೂಡಿಸಿ ಗಲಭೆ ಮಾಡಿಸಿದ್ದ ಎಂಬ ಮಾಹಿತಿ ಲಭಿಸಿದೆ. ತಡರಾತ್ರಿ ಪೊಲೀಸರು ಆರೋಪಿ ಖಾಲಿದ್‍ನನ್ನು ವಶಕ್ಕೆ ಪಡೆದು ಕರೆತಂದು ವಿಚಾರಣೆ ನಡೆಸಿದ್ದಾರೆ. ಖಾಲಿದ್ ಜೊತೆ ಹಲವು ಪ್ರಮುಖ …
Read More »ಮಹಾರಾಷ್ಟ್ರದ ಖ್ಯಾತ ಚಿತ್ರಕಲಾವಿದ ಮತ್ತು ಫೋಟೋಗ್ರಾಫರ್ ರಾಮ್ ಇಂದ್ರನಿಲ್ ಕಾಮತ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಮುಂಬೈ: ಮಹಾರಾಷ್ಟ್ರದ ಖ್ಯಾತ ಚಿತ್ರಕಲಾವಿದ ಮತ್ತು ಫೋಟೋಗ್ರಾಫರ್ ರಾಮ್ ಇಂದ್ರನಿಲ್ ಕಾಮತ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮುಂಬೈ ಮೂಲದ ಪ್ರಸಿದ್ಧ ಕಲಾವಿದ ರಾಮ್ ಇಂದ್ರನಿಲ್ ಕಾಮತ್ (41) ಅವರು ತನ್ನ ತಾಯಿಯೊಂದಿಗೆ ಮುಂಬೈನ ತಮ್ಮ ಮನೆಯಲ್ಲಿ ವಾಸಿಸುತ್ತಿದ್ದರು. ಅವರು ಬುಧವಾರ ತಮ್ಮ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮುಂಬೈ ಪೊಲೀಸರು ಗುರುವಾರ ತಿಳಿಸಿದ್ದಾರೆ. ಕಾಮತ್ ಅವರು ಜನಪ್ರಿಯ ವರ್ಣಚಿತ್ರಕಾರರಾಗಿದ್ದರು. ಜೊತೆಗೆ ಫೋಟೋಗ್ರಾಫರ್ ಆಗಿ ಕೂಡ ಕೆಲಸ ಮಾಡುತ್ತಿದ್ದರು. ಅವರು ಬುಧವಾರ ಮಧ್ಯಾಹ್ನ …
Read More »ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ6 ವರ್ಷದ ಬಾಲಕಿ ರೋಜಾಳಿಗಾಗಿ ಶೋಧ ಕಾರ್ಯ
ರಾಯಚೂರು: ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಪತ್ತೆಯಾಗಿದ್ದ ನಾಲ್ವರ ಪೈಕಿ ಮೂವರು ಮಹಿಳೆಯರ ಶವ ಪತ್ತೆಯಾಗಿದ್ದು, 6 ವರ್ಷದ ಬಾಲಕಿ ರೋಜಾಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಆ.17 ದಿನಸಿ ತರಲು ರಾಯಚೂರು ಜಿಲ್ಲೆಯ ಕುರ್ವಕುಲಾ ಗ್ರಾಮದಿಂದ ತೆಲಂಗಾಣದ ಪಂಚದೇವಪಾಡಕ್ಕೆ ಹೋಗಿದ್ದ ನಾಲ್ವರು ಮರಳಿ ಬರುವಾಗ ತೆಪ್ಪ ಮುಗುಚಿ ನೀರು ಪಾಲಾಗಿದ್ದರು. ನಿನ್ನೆ ಇಬ್ಬರ ಮಹಿಳೆಯರ ಶವ ಪತ್ತೆಯಾಗಿದ್ದು, ಇಂದು ಬೆಳಗ್ಗೆ ಮತ್ತೊಬ್ಬ ಮಹಿಳೆ ಮೃತದೇಹ ತೊರೆತಿದೆ. ಜುರುಲಾ ಜಲಾಶಯದ ಬಳಿ …
Read More »ಆರೋಗ್ಯಾಧಿಕಾರಿ ಆತ್ಮಹತ್ಯೆ- ಕೊರೊನಾ ವಾರಿಯರ್ಸ್‍ಗಳಲ್ಲಿ ಸುಧಾಕರ್ ಮನವಿ
ಬೆಂಗಳೂರು/ಮೈಸೂರು: ಅರಮನೆ ನಗರಿಯಲ್ಲಿ ಕೊರೊನಾ ವಾರಿಯರ್ ಆಗಿದ್ದ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಕೊರೊನಾ ವಾರಿಯರ್ಸ್ ಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.ಆರೋಗ್ಯಾಧಿಕಾರಿಯನ್ನು ನಾಗೇಂದ್ರ ಎಂದು ಗುರುತಿಸಲಾಗಿದ್ದು, ಇವರು ಮೈಸೂರಿನ ಆಲನಹಳ್ಳಿ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ನಾಗೇಂದ್ರ ಅವರು ಕಳೆದ ಒಂದು ವರ್ಷದಿಂದ ನಂಜನಗೂಡಿನಲ್ಲಿ ತಾಲೂಕು ಆರೋಗ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ. ಸುಧಾಕರ್ ಮನವಿ: …
Read More »