Breaking News

Monthly Archives: ಆಗಷ್ಟ್ 2020

ನೀರಿನ ರಬಸಕ್ಕೆ ಕಸ ಕಡ್ಡಿಗಳು ಸೇತುವೆ ಮೇಲೆ ಬಂದಿವೆ. ಸೇತುವೆಗೆ ಸ್ವಲ್ಪ ಮಟ್ಟಿಗೆ ಹಾನಿ

ಗೋಕಾಕ: ಕಳೆದ ಎರಡು ದಿನಗಳಿಂದ‌ ಮಳೆ‌ ಪ್ರಮಾಣದಲ್ಲಿ ಕಡಿತವಾಗಿರುವದರಿಂದ‌ ಘಟಪ್ರಭಾ ನದಿಯ ನೀರಿನ‌ ಮಟ್ಟ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸೋಮವಾರದಿಂದ ಬಂದ್ ಆಗಿದ್ದ ಲೋಳಸುರ ಸೇತುವೆ ಈಗ ಮುಕ್ತವಾಗಿದೆ. ಆದ್ರೆ ನೀರಿನ ರಬಸಕ್ಕೆ ಕಸ ಕಡ್ಡಿಗಳು ಸೇತುವೆ ಮೇಲೆ ಬಂದಿವೆ. ಸೇತುವೆಗೆ ಸ್ವಲ್ಪ ಮಟ್ಟಿಗೆ ಹಾನಿಯಾಗಿದ್ದು ಜನರು ಸಂಚರಿಸುತ್ತಿದ್ದಾರೆ. ಗೋಕಾಕ ನಗರಕ್ಕೆ ಮಹಾರಾಷ್ಟ್ರ ಮತ್ತು ವಿಜಯಪುರಕ್ಕೆ ರಸ್ತೆ ಕಲ್ಪಿಸುವ ಲೋಳಸುರ ಸೇತುವೆ ಬಂದ್ ಆಗಿದ್ದರಿಂದ ನಿತ್ಯ ಸಂಚರಿಸುವ ಜನರು ಪರದಾಡುವಂತಾಗಿತ್ತು. …

Read More »

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜಯಂತಿ- ತಂದೆಯ ಬಗ್ಗೆ ರಾಹುಲ್ ಗಾಂಧಿ ಭಾವನಾತ್ಮಕ ಮಾತು

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 75ನೇ ಜಯಂತಿ. ಈ ದಿನದಂದು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ತಂದೆಯ ಬಗ್ಗೆ ಭಾವನಾತ್ಮಕವಾಗಿ ಕೆಲ ಸಾಲುಗಳನ್ನು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.ರಾಜೀವ್ ಗಾಂಧಿ ಅವರು ಓರ್ವ ದೂರ ದೃಷ್ಟಿಯುಳ್ಳ ನಾಯಕಾರಗಿದ್ದರು. ಭವಿಷ್ಯದ ದೃಷ್ಟಿಕೋನದಲ್ಲಿ ಕೆಲಸ ಮಾಡುವ ವ್ಯಕ್ತಿಯಾಗಿದ್ದರು. ಇದೆಲ್ಲಕ್ಕಿಂತ ಮಿಗಿಲಾಗಿ ಉದಾರ ಮತ್ತು ಪ್ರೀತಿಯ ಸ್ನೇಹ ಜೀವಿಯಾಗಿದ್ದರು. ಅವರನ್ನ ತಂದೆಯಾಗಿ ಪಡೆದ ನಾನಯ ಅದೃಷ್ಟವಂತ ಹಾಗೂ ಹೆಮ್ಮೆ ಪಡುತ್ತೇನೆ. ಪ್ರತಿದಿನ …

Read More »

ಕೆ.ಎಲ್.ರಾಹುಲ್ ಮಾಡಿರುವ ಕಮೆಂಟ್ ಗೆ ಅಭಿಮಾನಿಗಳು ಫುಲ್ ಕನ್ಫ್ಯೂಸ್

ಬೆಂಗಳೂರು: ಗೆಳತಿ, ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಫೋಟೋಗೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಮಾಡಿರುವ ಕಮೆಂಟ್ ಗೆ ಅಭಿಮಾನಿಗಳು ಫುಲ್ ಕನ್ಫ್ಯೂಸ್ ಆಗಿದ್ದಾರೆ. ರಾಹುಲ್ ಕಮೆಂಟ್‍ಗೆ ಪ್ರತಿಕ್ರಿಯೆ ನೀಡಿರುವ ಫ್ಯಾನ್ಸ್, ಅಣ್ಣ ಈ ಪದದ ಅರ್ಥ ಏನು ಎಂದು ಪ್ರಶ್ನೆ ಮಾಡಿದ್ದಾರೆ.ಬುಧವಾರ ಆಥಿಯಾ ಶೆಟ್ಟಿ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಮಿರರ್ ಸೆಲ್ಫಿ ಹಾಕಿಕೊಂಡಿದ್ದರು. ಇತ್ತ ನಟಿ ಫೋಟೋ ಅಪ್ಲೋಡ್ ಮಾಡುತ್ತಿದ್ದಂತೆ ಕೆ.ಎಲ್.ರಾಹುಲ್, ಜೆಫಾ ಎಂದು ಕಮೆಂಟ್ ಮಾಡಿದ್ದಾರೆ. ಬಹುತೇಕರು ಜೆಫಾ ಅರ್ಥ ಹುಡುಕಲು …

Read More »

ಶ್ರೀರಾಮನ ಬಗ್ಗೆ ಅವಹೇಳನಕಾರಿ ಪೋಸ್ಟ್ – ಆರೋಪಿ ಬಂಧನದಿಂದ ಶಾಂತವಾದ ದೇವದುರ್ಗ

ರಾಯಚೂರು: ಶ್ರೀ ರಾಮಚಂದ್ರನ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಿನ್ನೆಲೆ ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಉಂಟಾಗಿದ್ದ ಬಿಗುವಿನ ವಾತಾವರಣ ಆರೋಪಿಯ ಬಂಧನ ಹಿನ್ನೆಲೆ ಸದ್ಯ ಶಾಂತವಾಗಿದೆ. ಜಹೀರ್ ಎಂಬ ಯುವಕ ಶ್ರೀರಾಮನ ಬಗ್ಗೆ ಅವಹೇಳನಕಾರಿ ವಾಟ್ಸಪ್ ಸ್ಟೇಟಸ್ ಹಾಕಿದ್ದ. ಇದರಿಂದ ಆಕ್ರೋಶಗೊಂಡ ನೂರಾರು ಜನ ಹಿಂದೂ ಪರ ಸಂಘಟನೆ ಕಾರ್ಯಕರ್ತರು ರಾತ್ರೋ ರಾತ್ರಿ ದೇವದುರ್ಗ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದರು. ಆರೋಪಿಯನ್ನ ಕೂಡಲೇ ಬಂಧಿಸುವಂತೆ ಆಗ್ರಹಿಸಿ ಹೆಚ್ಚು ಜನ ಸೇರಿದ್ದರಿಂದ ಬಿಗುವಿನ …

Read More »

ನಮ್ಮದೇನಿದ್ದರೂ ಏಕ್ ಮಾರ್ ದೋ ತುಕ್ಡಾ ಕ್ರಮ:ಸಿಟಿ ರವಿ

ಬೆಂಗಳೂರು: ಎಸ್‍ಡಿಪಿಐ ನಿಷೇಧ ವಿಚಾರ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದರು.ವಿಧಾನಸೌಧದ ಬಳಿ ಮಾತನಾಡಿದ ಸಿಟಿ ರವಿ ಅವರು, ಯಾವುದೇ ಒಂದು ಘಟನೆ ಮೇಲೆ ನಿಷೇಧದಂತಹ ನಿರ್ಧಾರ ಮಾಡಲು ಸಾಧ್ಯವಿಲ್ಲ. ಆದರೆ ಈ ಹಿಂದೆ ನಡೆದಿರುವ ಹಲವಾರು ಸಮಾಜ ಘಾತುಕ ಘಟನೆಗಳ ಬಗ್ಗೆ ಕೂಡ ಸಾಕ್ಷಾಧಾರ ಕಲೆ ಹಾಕುವ ಕೆಲಸ ಆಗುತ್ತಿದೆ. ಯಾವುದೇ ಸಮಾಜ ಘಾತುಕ ಶಕ್ತಿಗಳನ್ನು ಸಹಿಸಿಕೊಳ್ಳುವ ಪ್ರಶ್ನೆ ಇಲ್ಲ. ನಾಳೆ …

Read More »

ದೇಶದಲ್ಲಿ ಕೊರೊನಾ ದಾಖಲೆ- ಒಂದೇ ದಿನ 69,652 ಮಂದಿಗೆ ಸೋಂಕು

-ಗುಣಮುಖ ಪ್ರಮಾಣ ಶೇ.73.90ಕ್ಕೆ ಏರಿಕೆ ನವದೆಹಲಿ: ದೇಶದಲ್ಲಿಂದು ಮಹಾಮಾರಿ ಕೊರೊನಾ ವೈರಸ್ ದಾಖಲೆ ಬರೆದಿದೆ. ಕಳೆದ 24 ಗಂಟೆಯಲ್ಲಿ 69,952 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 28,36,926ಕ್ಕೆ ಏರಿಕೆಯಾಗಿದೆ. ಜೊತೆ ಕೊರೊನಾದಿಂದ ಗುಣಮುಖರಾಗುತ್ತಿರುವ ಪ್ರಮಾಣ ಶೇ.73.90ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.ಇದುವರೆಗೂ 20.96 ಲಕ್ಷ ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಕೊರೊನಾಗೆ 977 ಸಾವಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 53,866ಕ್ಕೆ ಏರಿಕೆ ಕಂಡಿದೆ.ಮಹಾರಾಷ್ಟ್ರ, ಆಂಧ್ರ …

Read More »

ಘಟಪ್ರಭಾ, ಮಲಪ್ರಭಾ ಜೊತೆಗೆ ಕೃಷ್ಣಾ ನದಿ ಪ್ರವಾಹದ ಭೀತಿ- ನಡುಗಡ್ಡೆ ಜನ ಸ್ಥಳಾಂತರ

ಬಾಗಲಕೋಟೆ: ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಕೊಂಚ ಬಿಡುವು ನೀಡಿದರೂ, ಪ್ರವಾಹ ಮಾತ್ರ ತಗ್ಗುತ್ತಿಲ್ಲ. ಇದರಿಂದಾಗಿ ನಡುಗಡ್ಡೆ ಜನರು ತೀವ್ರ ಆತಂಕಗೊಂಡಿದ್ದು, ಸ್ಥಳಾಂತರ ಕಾರ್ಯ ಮುಂದುವರಿದಿದೆಜಮಖಂಡಿ ತಾಲೂಕಿನಲ್ಲಿ ಆತಂಕ ಹೆಚ್ಚಾಗಿದ್ದು, ಮುತ್ತೂರು ನಡುಗಡ್ಡೆ ಜನರಿಗೆ ಕಳೆದ ಪ್ರವಾಹದ ಕಹಿ ನೆನಪು ಕಣ್ಮುಂದೆ ಬರುತ್ತಿದೆ. ಇಲ್ಲಿನ ಜನ ಸದ್ಯ ನಡುಗಡ್ಡೆ ತೊರೆದು ತುಬಚಿ ಗ್ರಾಮಕ್ಕೆ ಸ್ಥಳಾಂತರಗೊಂಡಿದ್ದಾರೆ. ಶೂರ್ಪಾಲಿ, ತುಬಚಿ, ಮುತ್ತೂರು ಕಂಣವಾಡಿ ಗ್ರಾಮಗಳ ಕೆಲ ಪ್ರದೇಶಗಳು ನಡುಗಡ್ಡೆಯಾಗಿವೆ. ಈ ಬಾರಿಯೂ ಪ್ರವಾಹದ ಆತಂಕ …

Read More »

ಧೋನಿಗೆ ವಿದಾಯ ಪಂದ್ಯ – ಬಿಸಿಸಿಐ ಹೇಳಿದ್ದೇನು?

ಮುಂಬೈ: ನಿವೃತ್ತಿ ಘೋಷಣೆ ಮಾಡಿದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿಯವರಿಗೆ ವಿದಾಯ ಪಂದ್ಯವನ್ನು ಆಡಿಸಬೇಕು ಎಂಬ ಮಾತು ಎಲ್ಲೆಡೆ ಕೇಳಿಬರುತ್ತದೆ.ಅಗಸ್ಟ್ 15ರಂದು ಸಂಜೆ ಎಂಎಸ್ ಧೋನಿಯವರು ಕೇವಲ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ವಿದಾಯ ಹೇಳಿದ್ದರು. ಈ ಮೂಲಕ ಮತ್ತೆ ಧೋನಿಯವರನ್ನು ನೀಲಿ ಜೆರ್ಸಿಯಲ್ಲಿ ನೋಡಾ ಬಯಸಿದ್ದ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು. ಜೊತೆಗೆ ವಿದಾಯ ಪಂದ್ಯವಾಡದೇ ಧೋನಿ ನಿವೃತ್ತಿ ಹೊಂದಿದ್ದು, ಅವರ ಅಭಿಮಾನಿಗಳಿಗೆ ಬೇಸರ ತರಿಸಿತ್ತು. …

Read More »

ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ 40 ಶವಗಳು ಅನಾಥವಾಗಿವೆ.

ತುಮಕೂರು: ಮಹಾಮಾರಿ ಕೊರೊನಾ ಮನುಷ್ಯತ್ವದ ಪರೀಕ್ಷೆ ಮಾಡ್ತಿದೆ. ಕೊರೊನಾದಿಂದ ತಮ್ಮವರೇ ತಮ್ಮ ಜೊತೆಗಿದ್ದವರೇ ತಮಗೆ ಬೇಕಾದವರೇ ಮೃತಪಟ್ಟರೂ ಅವರ ಅಂತ್ಯಸಂಸ್ಕಾರಕ್ಕೆ ಸಂಬಂಧಿಕರು ಹಿಂದೇಟು ಹಾಕುತ್ತಿದ್ದಾರೆ. ಇಂಥದ್ದೊಂದು ವಿಚಿತ್ರ ಸನ್ನಿವೇಶಕ್ಕೆ ತುಮಕೂರು ಸಾಕ್ಷಿ ಆಗಿದೆ.ಸಂಬಂಧಿಕರು ಬರದೇ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ 40 ಶವಗಳು ಅನಾಥವಾಗಿವೆ. ಇದುವರೆಗೂ ಜಿಲ್ಲೆಯಲ್ಲಿ 3,470 ಜನರಿಗೆ ಸೋಂಕು ದೃಢವಾಗಿದೆ. ಇವರಲ್ಲಿ 108 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇವುಗಳಲ್ಲಿ 40 ಶವಗಳನ್ನು ಸಂಬಂಧಿಕರು ಸ್ವೀಕರಿಸಿಯೇ ಇಲ್ಲ. ಹೀಗಾಗಿ ಸ್ವಯಂಸೇವಕರ ಸಹಕಾರದೊಂದಿಗೆ …

Read More »

ಮಾರಕವಾಗುವ ತ್ಯಾಜ್ಯ ವಸ್ತುಗಳನ್ನು ಇನ್ನು ಮುಂದೆ ನದಿಗೆ ಬಿಟ್ಟರೆ ಕಾರ್ಖಾನೆಯ ವಿರುದ್ಧ ಕಠಿಣ ಕ್ರಮ:

ಗೋಕಾಕ : ನಗರದ ಹೊರವಲಯದಲ್ಲಿರುವ ರಾಕೇಟ್ ಇಂಡಿಯಾ ಲಿ., ಕಾರ್ಖಾನೆಯು ರಾಸಾಯನಿಕಗಳಿಂದ ಕೂಡಿದ ಹಾನಿಕಾರಕ ತ್ಯಾಜ್ಯ ವಸ್ತುಗಳನ್ನು ಮಾರ್ಕಂಡೇಯ ನದಿಗೆ ಬಿಡುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ನದಿ ತೀರದ ಜಮೀನುಗಳಲ್ಲಿ ರೈತರು ಬೆಳೆದ ಬೆಳೆಗಳು ಹಾನಿಯಾಗುತ್ತವೆ. ಮಾರಕವಾಗುವ ತ್ಯಾಜ್ಯ ವಸ್ತುಗಳನ್ನು ಇನ್ನು ಮುಂದೆ ನದಿಗೆ ಬಿಟ್ಟರೆ ಕಾರ್ಖಾನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಎಚ್ಚರಿಕೆ ನೀಡಿದ್ದಾರೆ. …

Read More »