Breaking News

Monthly Archives: ಆಗಷ್ಟ್ 2020

ಇಂದಿನಿಂದ 5 ದಿನ ತೆರೆದಿರುತ್ತೆ ಶಬರಿಮಲೆ ಅಯ್ಯಪ್ಪ ದೇವಸ್ಥಾನ

ಪಟ್ಟಣಂತಿಟ್ಟ, ಆ.17- ವಿಶ್ವವಿಖ್ಯಾತ ಶಬರಿ ಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲನ್ನು ಐದು ದಿನಗಳ ಮಾಸಿಕ ವಿಶೇಷ ಪೂಜೆಗಾಗಿ ಇಂದು ಬೆಳಗ್ಗೆ ತೆರೆಯಲಾಗಿದೆ. ಮಲೆಯಾಳಂ ಪಂಚಾಂಗದ ಪ್ರಕಾರ ಇಂದಿನಿಂದ ಆಗಸ್ಟ್ 21ರ ವರೆಗೆ ಅಯ್ಯಪ್ಪ ಸ್ವಾಮಿಗೆ ಮಾಸಿಕ ವಿಶೇಷ ಪೂಜೆ ನೆರವೇರಿಸಲಾಗುತ್ತದೆ ಎಂದು ಟ್ರವಾಂಕುರ್ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಎನ್.ವಾಸು ತಿಳಿಸಿದ್ದಾರೆ.ದೇವಸ್ಥಾನಕ್ಕೆ ಭೇಟಿ ನೀಡುವವರು ಕಡ್ಡಾಯವಾಗಿ ಕೊರೊನಾ ನೆಗೆಟಿವ್ ಪ್ರಮಾಣ ಪತ್ರ ಹಾಜರುಪಡಿಸಬೇಕು. ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇವಸ್ಥಾನವು ಕಟ್ಟುನಿಟ್ಟಿನ …

Read More »

ರಾಯಚೂರಿನಲ್ಲಿ ನಾಲ್ಕು ದಿನಗಳಿಂದ ಸತತ ಮಳೆ: ಮನೆ ಕುಸಿದು ಮಹಿಳೆ ಸಾವು

ರಾಯಚೂರು: ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿ ಹಲವು ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ಭಾರೀ ಮಳೆಯಿಂದಾಗಿ ಮನೆ ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ.ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ದೇವದುರ್ಗ ತಾಲೂಕಿನ ರಾಮದುರ್ಗ ಗ್ರಾಮದಲ್ಲಿ ಮಣ್ಣಿನ ಮನೆ ಕುಸಿದು ಬಿದ್ದಿದ್ದು, 32 ವರ್ಷದ ಮಹಿಳೆ ಶಕುಂತಲಾ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿ ಮನೆಯಲ್ಲಿ ಐದು ಜನ ಮಲಗಿದ್ದರು. ಈ ವೇಳೆ ಸತತ …

Read More »

ಜಿಲ್ಲಾಡಳಿತದ ವಿರುದ್ಧ ಗರಂ ಆದ ಜಿಲ್ಲಾ ಉಸ್ತುವಾರಿ ಸಚಿವರು…

ಬೆಳಗಾವಿ:  ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಕೊರೊನಾ ಶಂಕಿತ ವೃದ್ಧನ ಶವವನ್ನು ಕುಟುಂಬಸ್ಥರು ಸೈಕಲ್ ಮೇಲೆ ಸಾಗಿಸಿ ಅಂತ್ಯಸಂಸ್ಕಾರ ನೆರೆವೆರಿಸಿದ್ದರು. ಇದಕ್ಕೆ  ಸಚಿವರು ಕಳವಳ ವ್ಯಕ್ತ ಪಡಿಸಿದ್ದು, ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು  ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ. ಮೃತವ್ಯಕ್ತಿಯೊಬ್ಬರ ಶವವನ್ನು ಕುಟುಂಬಸ್ಥರು ಭಾನುವಾರ ಸೈಕಲ್ ಮೇಲೆ ತೆಗೆದುಕೊಂಡು ಹೋಗಿ ಶವಸಂಸ್ಕಾರ ಮಾಡಿರುವ ವರದಿಯನ್ನು ಗಮನಿಸಿದ್ದೇನೆ. ನಾಗರಿಕ ಸಮಾಜದಲ್ಲಿರುವ ನಾವು ಸದಾ ಹೃದಯವಂತಿಕೆಯಿಂದ ಜೀವಿಸಬೇಕು. ಮೃತರ ಸಂಸ್ಕಾರವನ್ನೂ ಗೌರವಯುತವಾಗಿ ಮಾಡಬೇಕು. ಕೊರೊನಾ …

Read More »

ವೃದ್ಧನ ಶವವನ್ನು ಕುಟುಂಬಸ್ಥರು ಸೈಕಲ್ ನಲ್ಲಿ ಸಾಗಿಸಿ ಅಂತ್ಯ ಸಂಸ್ಕಾರ ಮಾಡಿದ ಘಟನೆಗೆ ಕುರಿತು, ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರ ವಿರುದ್ಧ ಕಿಡಿ

ಬೆಂಗಳೂರು: ಬೆಳಗಾವಿ ಜಿಲ್ಲೆ ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಕೊರೊನಾ ಶಂಕಿತ ವೃದ್ಧನ ಶವವನ್ನು ಕುಟುಂಬಸ್ಥರು ಸೈಕಲ್ ನಲ್ಲಿ ಸಾಗಿಸಿ ಅಂತ್ಯ ಸಂಸ್ಕಾರ ಮಾಡಿದ ಘಟನೆಗೆ ಕುರಿತು, ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರ ವಿರುದ್ಧ ಕಿಡಿ ಕಾರಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ, ಎಲ್ಲಿದೆ ನಿಮ್ಮ ಸರ್ಕಾರ ?. ಅವರಿಗೆ ಏಕೆ ಆ್ಯಂಬುಲೇನ್ಸ್ ಒದಗಿಸಲಿಲ್ಲ. ?  ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಿಲು ಸರ್ಕಾರ ಸಂಪೂರ್ಣ …

Read More »

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಸರ್ಕಾರವೇ ಪ್ರತಿಷ್ಠಾಪನೆ ಮಾಡಬೇಕು

ಬೆಳಗಾವಿ:  ಪೀರನವಾಡಿ ಗ್ರಾಮದಲ್ಲಿ  ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಸರ್ಕಾರವೇ ಪ್ರತಿಷ್ಠಾಪನೆ ಮಾಡಬೇಕೆಂದು ಆಗ್ರಹಿಸಿ ರಾಯಣ್ಣನ ಸಾವಿರಾರು ಅಭಿಮಾನಿಗಳು ಬೆಳಗಾವಿಯಲ್ಲಿ ಬೃೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ.‌ ಬೆಳಗಾವಿಯ ಕಾಂಗ್ರೆಸ್ ರಸ್ತೆಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ಹೊರಡಿಸಿರುವ ಸಾವಿರಾರು ಅಭಿಮಾನಿಗಳು,ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಿದ್ದಾರೆ. ಪೀರನವಾಡಿಯಲ್ಲಿ,ರಾಯಣ್ಣನ ಮೂರ್ತಿಯನ್ನು ಸರ್ಕಾರವೇ ಪ್ರತಿಷ್ಠಾಪನೆ ಮಾಡಬೇಕು,ಇಲ್ಲವಾದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಲು ಅಭಿಮಾನಿಗಳಿಗೆ ಅನುಮತಿ ನೀಡಬೇಕೆಂದು ಸಾವಿರಾರು ಅಭಿಮಾನಿಗಳು ಇಂದು ಬೆಳಗಾವಿ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲಿದ್ದಾರೆ ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ …

Read More »

ಮೂರು ಕಾರಣಗಳಿಗೆ ಹೊತ್ತಿ ಉರಿಯಿತು ಬೆಂಗಳೂರು

ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಾಟೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳು ಕೆಲ ವಿಚಾರಗಳನ್ನು ಬಾಯಿ ಬಿಟ್ಟಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿ ದೊಂಬಿ ಎಬ್ಬಿಸಿದ್ದಕ್ಕೆ ಕಾರಣಗಳನ್ನ ಕೊಟ್ಟಿದ್ದಾರೆ. ಮೂರು ಕಾರಣಗಳಿಂದಾಗಿ ಬೆಂಗಳೂರು ಹೊತ್ತಿ ಉರಿದಿದೆ ಎಂದು ತಿಳಿದು ಬಂದಿದೆ. ಬೆಂಗಳೂರಲ್ಲಿ ದೊಂಬಿ ಎಬ್ಬಿಸಿದ್ದಕ್ಕೆ ಕಾರಣ ಕೊಟ್ಟ ಕಿರಾತಕರು! 1. ಎನ್‍ಆರ್ ಸಿ ಸಿಟ್ಟೇ ಬೆಂಗಳೂರು ಗಲಭೆಗೆ ಕಾರಣವಂತೆ 2. ‘ನಮ್ಮನ್ನು ದೇಶ ಬಿಟ್ಟು ಓಡಿಸ್ತಾರೆ, ನಾವು ಹುಟ್ಟಿದ್ದು ಇಲ್ಲೇ’ 3. …

Read More »

ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಸ್ಥಿತಿ,ಬೆಳಗಾವಿ-ಗೋವಾ ರಸ್ತೆ ಬಂದ್

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಸ್ಥಿತಿ ಏರ್ಪಟ್ಟಿದೆ. ಒಂದು ಕಡೆ ಉತ್ತರ ಕರ್ನಾಟಕದಲ್ಲಿ ಮಳೆ ಚುರುಕು ಪಡೆದಿದ್ದು, ಅತ್ತ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆರೆಂಜ್ ಅಲಟ್ ಘೋಷಿಸಲಾಗಿದೆ. ಪುಣೆ, ಸತಾರಾದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 20ರವರೆಗೂ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ಭಾರೀ ಮಳೆ ಆಗುವ ಮುನ್ನೆಚ್ಚರಿಕೆ ನೀಡಲಾಗಿದೆ.ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ …

Read More »

ಬಾಗಲಕೋಟೆ/ಬೆಳಗಾವಿ: 34 ಹಳ್ಳಿಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ.

ಬಾಗಲಕೋಟೆ/ಬೆಳಗಾವಿ: ಮಲಪ್ರಭಾ ನದಿಗೆ 25 ಸಾವಿರ ಕ್ಯೂಸೆಕ್ ನೀರು ಬಿಡುತ್ತಿರುವ ಹಿನ್ನೆಲೆ ನದಿ ತೀರ 34 ಹಳ್ಳಿಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಇನ್ನೊಂದೆಡೆ ಕೃಷ್ಣಾ ನದಿಯ ನೀರಿನ ಮಟ್ಟ 4 ಅಡಿಗಳಷ್ಟುಇ ಹೆಚ್ಚಾಗಿದ್ದು, ರಾಜ್ಯ ಹೆದ್ದಾರಿಯ ಕುಡಚಿ-ಉಗಾರ ಮಧ್ಯದ ಸೇತುವೆ ಮುಳುಗಡೆಯಾಗಿದೆ. ಭಾರೀ ಮಲೆ ಸುರಿಯುತ್ತಿರುವ ಹಿನ್ನೆಲೆ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಲೇ ಇದೆ. ಹೀಗಾಗಿ ನದಿ ಪಾತ್ರದ ಜನತೆ ತೀವ್ರ ಆತಂಕಗೊಂಡಿದ್ದಾರೆ. ಮಲಪ್ರಭಾ ನದಿಗೆ 25 ಸಾವಿರ ಕ್ಯೂಸೆಕ್ …

Read More »

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ನಿಶ್ಚಿತಾರ್ಥ ಸಮಾರಂಭ……….

ಶಿವಮೊಗ್ಗ: ಇಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹ ನಿಶ್ಚಿತಾರ್ಥ ಸಮಾರಂಭ ಜಿಲ್ಲೆಯಲ್ಲಿ ನಡೆಯಲಿದೆ.ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹಾಗೂ ಡಾ. ಹಿತಾ ವಿವಾಹ ನಿಶ್ಚಿತಾರ್ಥ ಇಂದು ನಡೆಯಲಿದೆ. ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಮ್ಮಿ ಹೆಬ್ಬಾಳ್ಕರ್ ಪುತ್ರನಿಗೆ ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಸಹೋದರ ಶಿವಕುಮಾರ್ ಪುತ್ರಿ ಜೊತೆ ನಿಶ್ಚಿತಾರ್ಥ ನಡೆಯಲಿದೆ.     ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹಾಗೂ ಡಾ. ಹಿತಾ ವಿವಾಹ …

Read More »

ರೌಡಿಶೀಟರ್ ಇರ್ಫಾನ್ ಹತ್ಯೆ- ಐವರು ಆರೋಪಿಗಳು ಅರೆಸ್ಟ್‌

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯನ್ನು ಬೆಚ್ಚಿಬೀಳಿಸಿದ ಶೂಟೌಟ್ ಪ್ರಕರಣವನ್ನು ಬೆನ್ನಟ್ಟಿದ ಹು-ಧಾ ಮಹಾನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಪೊಲೀಸರು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಧಾರವಾಡ ಫ್ರೂಟ್ ಇರ್ಫಾನ್ ಎಂಬುವ ರೌಡಿಶೀಟರ್ ಅನ್ನು ಹಳೇ ಹುಬ್ಬಳ್ಳಿ ಅಲ್ತಾಜ್ ಸಭಾ ಭವನ ಬಳಿ ಆಗಸ್ಟ್ 6ರಂದು ಗುಂಡಿನ ಮಳೆಗೆರೆದು ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣದಲ್ಲಿ ಎಸ್ಕೇಪ್ ಆಗಲು ನೆರವಾಗಿದ್ದ ಮತ್ತು ಕೃತ್ಯದಲ್ಲಿ ಭಾಗಿಯಾಗಿದ್ದ ಐವರನ್ನು …

Read More »