Breaking News

Monthly Archives: ಆಗಷ್ಟ್ 2020

ಕೊಯ್ನಾ, ನವಿಲುತೀರ್ಥ ಡ್ಯಾಂಗಳಿಂದ ನೀರು ಬಿಡುಗಡೆ: ನದಿ ತೀರದ ಜನರಿಗೆ ಎಚ್ಚರಿಕೆ

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಕೊಯ್ನಾ ಜಲಾಶಯ ಭರ್ತಿಯಾಗಿದ್ದು ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಒಟ್ಟು 105 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 86.93 ಟಿಎಂಸಿ ನೀರು ಸಂಗ್ರಹವಾಗಿದೆ. ಕೊಯ್ನಾ ಜಲಾಶಯದ 6 ಗೇಟ್​​​ಗಳ ಮೂಲಕ 9,360 ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಹಾಗೂ ವಿದ್ಯುತ್ ಉತ್ಪಾದನೆಗೆ 1050 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಈ ನೀರಿನಿಂದ ಕರ್ನಾಟಕದಲ್ಲಿ ಕೃಷ್ಣಾ ನದಿ ನೀರಿನ ಮಟ್ಟ ಹೆಚ್ಚಳವಾಗುವ ಸಾಧ್ಯತೆ …

Read More »

ಕೋವಿಡ್: 404 ಮಂದಿ ಗುಣಮುಖ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 358 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಇವರಲ್ಲಿ ನಾಲ್ವರು ಬೆಳಗಾವಿ ಹಾಗೂ ಒಬ್ಬರು ಗೋಕಾಕ ತಾಲ್ಲೂಕಿನವರು. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು’ ಎಂದು ಜಿಲ್ಲಾಡಳಿತ ತಿಳಿಸಿದೆ. ‘ಜಿಲ್ಲೆಯಲ್ಲಿ ಮಾದರಿ ಸಂಗ್ರಹ ಸಂಖ್ಯೆ 61,752ರ ಗಡಿ ದಾಟಿದೆ. ಈ ಪೈಕಿ 52,779 ಮಂದಿಯ ವರದಿ ನೆಗೆಟಿವ್ ಬಂದಿದೆ. ಇನ್ನೂ 818 …

Read More »

ಬೆಳಗಾವಿ | ಕುಸಿದ ಹಳೆ ಮನೆ: 12 ಮಂದಿ ರಕ್ಷಣೆ

ಬೆಳಗಾವಿ: ಇಲ್ಲಿನ ಗೊಂದಳಿ ಗಲ್ಲಿಯಲ್ಲಿ ಶನಿವಾರ ರಾತ್ರಿ ಹಳೆ ಮನೆಯೊಂದು ಪಕ್ಕದ ಮನೆಯ ಮೇಲೆ ದಿಢೀರ್‌ ಕುಸಿದು ಬಿದ್ದಿದ್ದರಿಂದ, ಒಳಗೆ ಸಿಲುಕಿದ್ದ ಬಾಲಕ ಮತ್ತು ಬಾಲಕಿ ಸೇರಿದಂತೆ 12 ಮಂದಿಯನ್ನು ರಕ್ಷಿಸಲಾಗಿದೆ. ಘಟನೆಯಿಂದಾಗಿ ಸುತ್ತಮುತ್ತಲಿನ ಮನೆಗಳವರು ಆತಂಕಗೊಂಡಿದ್ದರು. ಡಾ.ಕೋಟೂರು ಎನ್ನುವವರಿಗೆ ಸೇರಿದ ಮನೆಯ ಗೋಡೆ ಕುಸಿದಿದೆ. ಹಳೆಯದಾಗಿದ್ದ ಆ ಕಟ್ಟಡ ಸತತ ಮಳೆಯಿಂದಾಗಿ ಮತ್ತಷ್ಟು ಶಿಥಿಲಗೊಂಡಿತ್ತು. ಅದಕ್ಕೆ ಹೊಂದಿಕೊಂಡಂತೆ ಇದ್ದ ಗೋಡೆಯು ನಗರಪಾಲಿಕೆ ಮಾಜಿ ಸದಸ್ಯೆ ಶಶಿಕಲಾ ಸುರೇಕರ ಅವರ ಮನೆಯ …

Read More »

ಅಖಂಡ ಶ್ರೀನಿವಾಸಮೂರ್ತಿ ಮೇಲೆ ಬಿಜೆಪಿ ಸರ್ಕಾರ ಒತ್ತಡ ಹೇರುತ್ತಿದೆ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ

ಬೆಂಗಳೂರು: ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಇಂಥಾದ್ದೇ ಹೇಳಿಕೆ ಕೊಡಿ ಅಂತಾ ನಮ್ಮ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮೇಲೆ ಬಿಜೆಪಿ ಸರ್ಕಾರ ಒತ್ತಡ ಹೇರುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಗಲಭೆಗೆ ಕಾಂಗ್ರೆಸ್ಸಿನಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳೇ ಕಾರಣ ಎಂದಿದ್ದ ಗೃಹ ಸಚಿವರನ್ನು ಏಕ ವಚನದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಮಾತು ಹೇಳಲು ಬೊಮ್ಮಾಯಿ ಯಾರು, ಅವರೇನು ಇನ್ಸ್‍ಪೆಕ್ಟರ್ರಾ..? ಆಯೋಗನಾ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಯವರ ಒಳ ತಂತ್ರದಿಂದಲೇ …

Read More »

ಗಲಭೆ ಪ್ರಕರಣ – 10 ಮಂದಿ ಫೇಸ್‍ಬುಕ್ ಲೈವ್, ಸಾವಿರಾರು ಜನರಿಗೆ ಆಮಂತ್ರಣ

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಸಿಸಿಬಿ ಪೊಲೀಸರಿಗೆ ಹೊಸ ಹೊಸ ಸಾಕ್ಷ್ಯಗಳು ಸಿಗುತ್ತಿವೆ. ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ಗಲಭೆಗೆ 10 ಮಂದಿ ಫೇಸ್‍ಬುಕ್ ಲೈವ್ ಮಾಡುವ ಮೂಲಕ ಸಾವಿರಾರು ಜನರಿಗೆ ಆಮಂತ್ರಣ ನೀಡಲಾಗಿದೆ ಎಂಬುದು ತಿಳಿದುಬಂದಿದೆ.ಡಿಜೆ ಹಳ್ಳಿ ದೊಂಬಿ ಗಲಾಟೆಗೆ ಪುಂಡರನ್ನ ಸೇರಿಸಲು ಫೇಸ್‍ಬುಕ್ ಟ್ರಿಕ್ ಬಳಸಲಾಗಿದೆ. ಗಲಾಟೆ ಶುರುವಾಗೋದಕ್ಕೂ ಮೊದಲೇ 10 ಮಂದಿ ಫೇಸ್‍ಬುಕ್ ಲೈವ್ ಮಾಡಿದ್ದರು. …

Read More »

ನಾನು ಶಿರಾ ಉಪಚುನಾವಣೆಯ ಅಭ್ಯರ್ಥಿಯಾಗುವ ಕನಸು ಕಂಡವನಲ್ಲ

ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ನಿಂದ ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡ್ತಾರಾ ಅನ್ನೋ ಚರ್ಚೆ ಕೆಲ ದಿನಗಳಿಂದ ಆರಂಭಗೊಂಡಿತ್ತು. ಈ ಎಲ್ಲ ಊಹಾಪೋಹಗಳಿಗೆ ಸ್ವತಃ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಪತ್ರಿಕಾ ಪ್ರಕಟನೆ: ಇಂತಹ ಕಪೋಲಕಲ್ಪಿತ ಸುದ್ದಿ- ವದಂತಿಗಳನ್ನು ಯಾರು ಹಬ್ಬಿಸುತ್ತಾರೋ? ಯಾಕೆ ಹಬ್ಬಿಸುತ್ತಾರೋ? ಇದರಿಂದ ಕುತ್ಸಿತ ಮನಸುಗಳಿಗೆ ಆಗುವ ಲಾಭ ಏನೆಂಬುದು ನನಗೆ ತಿಳಿಯದಾಗಿದೆ. ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ …

Read More »

ಸೋಂಕಿತರಿಗೆ ಊಟ ನೀಡುವ ಸ್ಥಳದಲ್ಲಿಯೇ ಮೃತದೇಹವನ್ನ ಪ್ಯಾಕ್ ಮಾಡಿ ಇಡಲಾಗಿತ್ತು

ರಾಯಚೂರು: ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ವ್ಯಕ್ತಿಯ ಮೃತದೇಹವನ್ನ ಕೂಡಲೇ ಶವಾಗಾರಕ್ಕೆ ಸಾಗಿಸಬೇಕು. ಆದರೆ ರಾಯಚೂರಿನ ಕೋವಿಡ್ ಆಸ್ಪತ್ರೆಯಲ್ಲಿ ಸುಮಾರು ಗಂಟೆಗಳ ಕಾಲ ಸೋಂಕಿತರ ಪಕ್ಕದಲ್ಲೇ ಶವವನ್ನು ಇಡಲಾಗಿತ್ತು. ಸೋಂಕಿತರಿಗೆ ಊಟ ನೀಡುವ ಸ್ಥಳದಲ್ಲಿಯೇ ಮೃತದೇಹವನ್ನ ಪ್ಯಾಕ್ ಮಾಡಿ ಇಡಲಾಗಿತ್ತು. ಹೀಗಾಗಿ ಊಟ ತೆಗೆದುಕೊಂಡು ಹೋಗಲು, ಬರುವ ಪ್ರತಿಯೊಬ್ಬರು ಮೃತದೇಹದ ಪಕ್ಕದಲ್ಲೇ ನಿಂತುಕೊಂಡು ಊಟ ತೆಗೆದುಕೊಳ್ಳಬೇಕಾದ ಅವ್ಯವಸ್ಥೆಗೆ ಜನರನ್ನು ಹೈರಾಣಾಗಿಸಿದೆ.   ಸಾಮಾಜಿಕ ಅಂತರ ಕಾಪಾಡಲು ಹೇಳುವ ವೈದ್ಯರೇ ಈ ರೀತಿಯ …

Read More »

ಮನೆಯ ಮೇಲೆ ಕುಸಿದ ಗೋಡೆ- ನಾಲ್ವರ ರಕ್ಷಣೆ

ಬೆಳಗಾವಿ: ಮನೆಯ ಮೇಲೆ ಗೋಡೆ ಕುಸಿದು ಅವಶೇಷಗಳಡಿ ಸಿಲುಕಿದ್ದ ನಾಲ್ವರನ್ನು ರಕ್ಷಣೆ ಮಾಡಿರುವ ಘಟನೆ ಬೆಳಗಾವಿಯ ಗೋಂದಳಿ ಗಲ್ಲಿಯಲ್ಲಿ ನಡೆದಿದೆ.ಡಾಕ್ಟರ್ ಕೋಟೂರು ಎಂಬವರಿಗೆ ಸೇರಿದ ಹಳೆಯ ಮನೆ ನಿರಂತರ ಮಳೆಯಿಂದಾಗಿ ಮತ್ತಷ್ಟು ಶಿಥಿಲಾವಸ್ಥೆಗೊಂಡಿತ್ತು. ಶನಿವಾರ ಬೆಳಗ್ಗೆಯಿಂದ ಸುರಿದ ನಿರಂತರ ಮಳೆಯಿಂದಾಗಿ ಶಿಥಿಲಾವಸ್ಥೆಯಲ್ಲಿದ್ದ ಗೋಡೆ ಕುಸಿದಿದ್ದರಿಂದ ಮನೆಯಲ್ಲಿಯೇ ನಾಲ್ಕಕ್ಕೂ ಹೆಚ್ಚು ಜನರು ಸಿಲುಕಿದ್ದರು.   ತಕ್ಷಣ ಸ್ಥಳಕ್ಕೆ ಆಗಮಿಸಿದ ಎಸ್‍ಡಿಆರ್‍ಎಫ್, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಮನೆಯಲ್ಲಿದ್ದ ಎಲ್ಲರನ್ನೂ ರಕ್ಷಿಸಿದ್ದಾರೆ. ಅದೃಷ್ಟವಶಾತ್ …

Read More »

ಬ್ರೇಕ್​​ ಜಾಮ್​ ಆಗಿ ಉರುಳಿಬಿದ್ದ KSRTC ಬಸ್, ಮುಂದೇನಾಯ್ತು?

ಬಾಗಲಕೋಟೆ:ಬ್ರೇಕ್ ಲೈನರ್ ಜಾಮ್ ಆಗಿ, ಚಲಿಸುತ್ತಿದ್ದ KSRTC ಬಸ್ ಉರುಳಿ ಬಿದ್ದಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ಪಟ್ಟಣದ ಅಂಗಡಿ ಲೇಔಟ್ ಬಳಿ ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಬಸ್ಸಿನಲ್ಲಿ ಒಟ್ಟು 20 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಬಸ್ ಕಂಡಕ್ಟರ್ ಹಾಗೂ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ …

Read More »

ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಮಹೇಂದ್ರ ಸಿಂಗ್‌ ಧೋನಿ ನೀವೃತ್ತಿ

ಭಾರತದ ಕ್ರಿಕೆಟ್‌ ಕಂಡ ಅತ್ಯಂತ ಯಶಸ್ವಿ ನಾಯಕರಲ್ಲೊಬ್ಬರಾದ ಮಹೇಂದ್ರ ಸಿಂಗ್‌ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನೀವೃತ್ತಿಯಾಗಿದ್ದಾರೆ. 90 ಟೆಸ್ಟ್‌, 350 ಏಕದಿನ ಪಂದ್ಯಗಳು ಮತ್ತು 98 ಟಿ20 ಪಂದ್ಯಗಳನ್ನಾಡಿರುವ ಮಾಹೀ, ತಮ್ಮ ನಾಯಕತ್ವದಲ್ಲಿ ಟಿ20 ವಿಶ್ವಕಪ್‌, ಏಕದಿನ ವಿಶ್ವಕಪ್‌ ಹಾಗೂ ಚಾಂಪಿಯನ್ಸ್‌ ಟ್ರೋಫಿ ಗೆದ್ದಿದ್ದಾರೆ. ಟೆಸ್ಟ್‌ನಲ್ಲೂ ಭಾರತ ನಂಬರ್‌ ಒನ್‌ ಱಂಕ್‌ ಆದಾಗ ಧೋನಿಯೇ ನಾಯಕರಾಗಿದ್ದರು. ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕನಾಗಿ ಮೂರು ಬಾರಿ ಐಪಿಎಲ್‌ ಟ್ರೋಫಿ …

Read More »