Breaking News

Monthly Archives: ಆಗಷ್ಟ್ 2020

ಹುಬ್ಬಳ್ಳಿಯ ಹುಡುಗನ ಜೊತೆಗೆ ಶಾಸಕಿ ಲಕ್ಷ್ಮೀ ಹಬ್ಬಾಳ್ಕರ್ ಪುತ್ರಿಯ ನಿಶ್ಚಿತಾರ್ಥ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರಿಗೊಂದಿಗೆ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರಿಯ ವಿವಾಹ ನಿಶ್ಚಿತಾರ್ಥ ನೆರವೇರಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಮುಖಂಡ ದಿವಂಗತ ವಿಶ್ವಪ್ರಕಾಶ್ ಉಳ್ಳಾಗಡ್ಡಿಮಠದ ಪುತ್ರ, ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರೊಂದಿಗೆ ನನ್ನ ಪುತ್ರಿಯ ಮದುವೆ ನಿಶ್ಚಿತಾರ್ಥ ನೆರವೇರಿಸಲಾಗಿದೆ. ರಜತ ನನ್ನ ಅಳಿಯನಲ್ಲ, …

Read More »

ರಾಯಚೂರಿನ ಮುದಗಲ್ ಮೊಹರಂ ಆಚರಣೆಯನ್ನ ರದ್ದು ಮಾಡಿದ್ದರೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದರ್ಗಾಕ್ಕೆ

ರಾಯಚೂರು: ಕೊರೊನಾ ಹಿನ್ನೆಲೆ ಐತಿಹಾಸಿಕ ಪ್ರಸಿದ್ಧ ರಾಯಚೂರಿನ ಮುದಗಲ್ ಮೊಹರಂ ಆಚರಣೆಯನ್ನ ರದ್ದು ಮಾಡಿದ್ದರೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದರ್ಗಾಕ್ಕೆ ಬರುತ್ತಲೇ ಇದ್ದಾರೆ. ಇಂದು ಮೊಹರಂ ಒಂಬತ್ತನೆಯ ದಿನವಾದ್ದರಿಂದ ಸಾವಿರಾರು ಭಕ್ತರು ಆಗಮಿಸುತ್ತಲೇ ಇದ್ದಾರೆ. ರಾಜ್ಯದ ವಿವಿಧೆಡೆಯಿಂದ ಬಂದ ಭಕ್ತರು ದೀರ್ಘದಂಡ ನಮಸ್ಕಾರ ಹಾಕಿ ಹರಕೆ ಸಲ್ಲಿಸುತ್ತಿದ್ದಾರೆ. ಕೋವಿಡ್ ಭೀತಿಯನ್ನ ಮರೆತು ಭಕ್ತರು ತ್ಯಾಗಬಲಿದಾನದ ಸಂಕೇತವಾದ ಮೊಹರಂನ್ನ ಆಚರಿಸುತ್ತಿದ್ದಾರೆ. ಪ್ರತಿ ವರ್ಷ ಮುದಗಲ್ ಮೊಹರಂಗೆ ದಕ್ಷಿಣ ಭಾರತದ ಹಲವು ಕಡೆಯಿಂದ …

Read More »

ಬೆಂಗ್ಳೂರಿಂದ ಸೊಲ್ಲಾಪುರಕ್ಕೆ ಇಂದಿನಿಂದ ರೋ ರೋ ರೈಲು

ಬೆಂಗಳೂರು : ನೈಋುತ್ಯ ರೈಲ್ವೆಯು ಬೆಂಗಳೂರು ಸಮೀಪದ ನೆಲಮಂಗಲದಿಂದ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಬಾಳೆಗೆ ಆರಂಭಿಸಿರುವ ‘ರೋಲ್‌ ಆನ್‌ ರೋಲ್‌ ಆಫ್‌’ (ರೋ ರೋ) ಎಂಬ ಸರಕು ತುಂಬಿದ ಟ್ರಕ್‌ ಅಥವಾ ಲಾರಿಗಳ ಸಾಗಣೆಯ ರೈಲು ಸೇವೆಯ ಪ್ರಾಯೋಗಿಕ ಸಂಚಾರಕ್ಕೆ ಇಂದು(ಭಾನುವಾರ) ಚಾಲನೆ ನೀಡಲಾಗುತ್ತಿದೆ. ಈ ಮೂಲಕ ನೈಋುತ್ಯ ರೈಲ್ವೆ ವಲಯ ಪ್ರಥಮ ಬಾರಿಗೆ ಈ ಸೇವೆ ಆರಂಭಿಸುತ್ತಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬೆಳಗ್ಗೆ 9.15ಕ್ಕೆ ವೀಡಿಯೋ ಲಿಂಕ್‌ ಮೂಲಕ …

Read More »

ವ್ಹೀಲಿಂಗ್ ಮಾಡಿ, ವಿಡಿಯೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಾಕುತ್ತಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಬೆಂಗಳೂರು: ವ್ಹೀಲಿಂಗ್ ಮಾಡಿ, ವಿಡಿಯೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಾಕುತ್ತಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಹಗಲು, ರಾತ್ರಿ ಎನ್ನದೆ ವ್ಹೀಲಿಂಗ್ ಮಾಡುತ್ತಿದ್ದ ಆರೋಪಿಯನ್ನು ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮತ್ತಿಕೆರೆ ನಿವಾಸಿ ಶೇಖ್ ಸಮೀರ್ ಬಂಧಿತ ಆರೋಪಿ, ಕೊಡಿಗೇಹಳ್ಳಿ ಜಂಕ್ಷನ್ ಹತ್ತಿರ ವ್ಹೀಲಿಂಗ್ ಮಾಡುತ್ತಿದ್ದಾಗ ಆರೋಪಿಯನ್ನು ಬಂಧಿಸಲಾಗಿದೆ. ಘಟನೆ ಸಂಬಂಧ ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೆಬ್ಬಾಳ ಸಂಚಾರಿ ಠಾಣಾ ಇನ್ಸ್‍ಪೆಕ್ಟರ್ ಫೈರೋಜ್ ನೇತೃತ್ವದ ತಂಡ ಆರೋಪಿಯನ್ನು …

Read More »

ಕೋಲಾರದ ಚಿನ್ನದ ಗಣಿಯಲ್ಲಿ ಇಂಡಸ್ಟ್ರಿಯಲ್ ಪಾರ್ಕ್ ಸ್ಥಾಪಿಸಲು ನಿರ್ಧಾರ; ಸಚಿವ ಜಗದೀಶ್ ಶೆಟ್ಟರ್ ಮಾಹಿತಿ

ಕೋಲಾರ  : ಕೋಲಾರ ಜಿಲ್ಲೆಯ ಕೆಜಿಎಫ್​ನ ಬಿಜಿಎಂಎಲ್​ನ ಕೋಲಾರ ಗೋಲ್ಡ್ ಫೀಲ್ಡ್ಸ್ ಒಡೆತನದ ಬಳಕೆಯಾಗದ ಪ್ರದೇಶದಲ್ಲಿ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸಲು ಮುಂದಾಗಿದೆ. ಚಿನ್ನದ ಗಣಿಯು 12 ಸಾವಿರ ಎಕರೆ ವಿಶಾಲವಾದ ಪ್ರದೇಶದಲ್ಲಿದ್ದು, ಇಲ್ಲಿ ಇದುವರೆಗೂ ಬಳಸದ 3,200 ಎಕರೆ ಜಾಗದಲ್ಲಿ ಇಂಡಸ್ಟ್ರಿಯಲ್ ಪಾರ್ಕ್ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ, ಈ ಸ್ಥಳ ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿ ಇರುವುದರಿಂದ ಕೇಂದ್ರದ ಸಮ್ಮತಿ ಅತ್ಯಗತ್ಯವಾಗಿದೆ. ಶನಿವಾರ ಬೃಹತ್ ಕೈಗಾರಿಕಾ ಸಚಿವ ಜಗದೀಶ್ …

Read More »

ಮಳೆಯನ್ನ ಲೆಕ್ಕಿಸದೇ ಕೆಲಸ ನಿರ್ವಹಿಸಿದ ಟ್ರಾಫಿಕ್ ಪೊಲೀಸ್

ಹುಬ್ಬಳ್ಳಿ: ಮಳೆಯನ್ನ ಲೆಕ್ಕಿಸದೇ ಕೆಲಸ ನಿರ್ವಹಿಸಿದ ಟ್ರಾಫಿಕ್ ಪೊಲೀಸ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಶಂಬು ರೆಡ್ಡಿ ಮಳೆಯ ನಡುವೆ ಕರ್ತವ್ಯ ಪಾಲನೆ ಮಾಡಿದ ಟ್ರಾಫಿಕ್ ಪೊಲೀಸ್. ಹುಬ್ಬಳ್ಳಿ ನಗರದ ಚಿಟಗುಪ್ಪಿ ಆಸ್ಪತ್ರೆಯ ಸರ್ಕಲ್ ನಲ್ಲಿ ಕಾರ್ ಮತ್ತು ಟಿಪ್ಪರ್ ನಡುವೆ ಅಪಘಾತ ಉಂಟಾಗಿದ್ದರಿಂದ ಸ್ಥಳದಲ್ಲಿ ಟ್ರಾಫಿಕ್ ಆಗಿತ್ತು. ಜೋರು ಮಳೆ ಸುರಿಯುತ್ತಿದ್ದರೂ ಶಂಬು ರೆಡ್ಡಿ ಟ್ರಾಫಿಕ್ ಕ್ಲಿಯರ್ ಮಾಡುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.  

Read More »

ಅಂಗನವಾಡಿ- ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 13 ಅಂಗನವಾಡಿ ಕಾರ್ಯಕರ್ತೆ ಹಾಗೂ 50 ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಹತೆ, ವಯೋಮಿತಿಯನ್ನು ಹೊಂದಿರುವ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕಡೆ ದಿನ 05.09.2020 ಆಗಿದ್ದು, ಹೆಚ್ಚಿನ ಮಾಹಿತಿಗೆ anganwadirecruit.kar.nic.inಗೆ ಸಂಪರ್ಕಿಸಬಹುದು.  

Read More »

38ರ ಆಂಟಿಯೊಬ್ಬಳು 22 ವರ್ಷದ ಯುವಕನನ್ನ ಆರನೇ ಗಂಡನಾಗಿ ಕೈಹಿಡಿದಿದ್ದಾಳೆ.

ಚಿಕ್ಕಮಗಳೂರು: 38ರ ಆಂಟಿಯೊಬ್ಬಳು 22 ವರ್ಷದ ಯುವಕನನ್ನ ಆರನೇ ಗಂಡನಾಗಿ ಕೈಹಿಡಿದಿದ್ದಾಳೆ. ಆಕೆಗೆ ಇತನೇ ಬೇಕು ಎನ್ನುವುದು ಮುಖ್ಯವಲ್ಲ. ಆದರೆ ಈತ ಇವಳೇ ಬೇಕು, ಬಾಳು ಕೊಡುತ್ತೇನೆ ಎನ್ನುವುದು ವಿಶೇಷದಲ್ಲಿ ವಿಶೇಷ. ಕಂಬಿಹಳ್ಳಿ ಚಂದ್ರುಗೂ ಈಕೆ ಹೆಂಡತಿ. ಹನಿಕೆ ಬಸವರಾಜನ ಪ್ರೇಮಿಯೂ ಈಕೆ. ಬೆಂಗಳೂರಿನ ಬೇಕರಿಯ ಕಿರಣನ ಮನದರಸಿಯೂ ಹೌದು. ರಮೇಶನ ರಾಧೆಯೂ ಇವಳೇ. ತುಕಾರಂನ ಮಡದಿಯೂ ಇದೇ ಗಟ್ಟಿಗಿತ್ತಿ. ಈಗ ರಂಗೇನಹಳ್ಳಿ ಚಂದ್ರುವಿನ ಚಕೋರಿ.   38ರ ಅಸುಪಾಸಿಗೆ …

Read More »

ಬೆಂಗಳೂರು ಉಗ್ರ ಡಾ| ಶಬೀಲ್ ದಿಲ್ಲಿಯಲ್ಲಿ ಬಂಧನ!

ನವದೆಹಲಿ : 2007ರಲ್ಲಿ ನಡೆದಿದ್ದ ಬ್ರಿಟನ್‌ನ ಗ್ಲಾಸ್ಗೋ ಏರ್‌ಪೋರ್ಟ್‌ ದಾಳಿಯಲ್ಲಿ ಪಾತ್ರ ವಹಿಸಿದ್ದ ಬೆಂಗಳೂರು ಮೂಲದ ಲಷ್ಕರ್‌ ಎ ತೊಯ್ಬಾ ಭಯೋತ್ಪಾದಕನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ. 2010-11ರಲ್ಲಿ ಬೆಂಗಳೂರಿನಿಂದ ಸೌದಿ ಅರೇಬಿಯಾಗೆ ಪರಾರಿಯಾಗಿದ್ದ ಈತನನ್ನು ಸ್ವದೇಶಕ್ಕೆ ವಾಪಸ್‌ ಕರೆಸಿಕೊಂಡು ಬಂಧಿಸಲಾಗಿದೆ. ಶಬೀಲ್‌ ಅಹ್ಮದ್‌ ಎಂಬಾತನೇ ಬಂಧಿತ. ಶುಕ್ರವಾರ ರಾತ್ರಿ ಭಾರತಕ್ಕೆ ಮರಳಿದ ನಂತರ ಈತನನ್ನು ಎನ್‌ಐಎ ತನ್ನ ವಶಕ್ಕೆ ತೆಗೆದುಕೊಂಡಿದೆ. ವೈದ್ಯಕೀಯ ಪದವೀಧರನಾಗಿರುವ ಶಬೀಲ್‌ ಅಹ್ಮದ್‌, ಗ್ಲಾಸ್ಗೋ …

Read More »

ಆಫ್‌ಲೈನ್‌ ಪರೀಕ್ಷೆ ಕುರಿತು ಸ್ಪಷ್ಟನೆ ನೀಡಿ: ಕೃಷಿ ವಿವಿಗೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ತನ್ನ ವ್ಯಾಪ್ತಿಯ ಕೃಷಿ ಕಾಲೇಜುಗಳಲ್ಲಿನ ವಿವಿಧ ಕೋರ್ಸ್‌ಗಳಿಗೆ ‘ಆನ್‌ಲೈನ್‌ ಪರೀಕ್ಷೆ’ಗಳ ಬದಲಿಗೆ ‘ಆಫ್‌ಲೈನ್‌ ಪರೀಕ್ಷೆ’ ನಡೆಸುವ ಕುರಿತು ವಿವರವಾಗಿ ಸ್ಪಷ್ಟಪಡಿಸುವಂತೆ ಬೆಂಗಳೂರು ಕೃಷಿ ವಿವಿಗೆ ಹೈಕೋರ್ಟ್‌ ಸೂಚಿಸಿದೆ. ಕೃಷಿ ವಿಶ್ವವಿದ್ಯಾಲಯದ ಬಿಎಸ್‌ಸಿ (ಕೃಷಿ) ಕೋರ್ಸ್‌ನ ಸದಾನಂದ ಮತ್ತಿತರ ವಿದ್ಯಾರ್ಥಿಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ, ಕೃಷಿ …

Read More »