ಬೆಂಗಳೂರು: ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಕಳೆದ ಅಗಸ್ಟ್ 25ರಂದು ಡಿಕೆ ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ ಅವರು ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ವೈದ್ಯರ ಸಲಹೆ ಮೇರೆಗೆ ಇನ್ನೂ ಕೆಲ ದಿನಗಳು ನಾನು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ. ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಪಿಸಿಸಿ …
Read More »Daily Archives: ಸೆಪ್ಟೆಂಬರ್ 5, 2020
ಈ ಶಿಕ್ಷಕ, ಶ್ರೇಷ್ಠ ತತ್ವಜ್ಞಾನಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್
ಭಾರತದ ಮೊದಲ ಉಪರಾಷ್ಟ್ರಪತಿಯಾಗಿ, ರಾಷ್ಟ್ರಪತಿಗಳಾಗಿ, ರಷ್ಯಾದ ರಾಯಭಾರಿಯಾಗಿ, ಇನ್ನೂ ಮೊದಲಾದ ದೇಶದ ಅತ್ಯುನ್ನತ ಹುದ್ದೆಗಳನ್ನು, ಉನ್ನತ ಹುದ್ದೆಗೆ ಏರಿದವರು ಈ ಶಿಕ್ಷಕ, ಶ್ರೇಷ್ಠ ತತ್ವಜ್ಞಾನಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರು. ಅವರು ಓರ್ವ ಶಿಕ್ಷಕರಾಗಿ ಶಿಕ್ಷಕ ಸ್ಥಾನದ ಘನತೆಯನ್ನು ಆಧುನಿಕ ಕಾಲ ಘಟ್ಟದಲ್ಲಿ ಮೇಲ್ಮಟ್ಟಕ್ಕೆ ಕೊಂಡೊಯ್ದವರು. ಅವರ ಹುಟ್ಟಿದ ದಿನ ಸೆಪ್ಟಂಬರ್ 5ನ್ನು ದೇಶದ ತುಂಬೆಲ್ಲಾ ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುವಂತೆ ಮಾಡಿದರು. ಪ್ರಾಚೀನ ಕಾಲದಿಂದಲೂ ಗುರುವಿನ ಮಹಿಮೆ ತಿಳಿಯದವರಾರೂ ಇಲ,್ಲ ನಮ್ಮ …
Read More »ಮಹಾನಾಯಕ’ ಧಾರಾವಾಹಿ ಪ್ರಸಾರ ನಿಲ್ಲಿಸಲು ಖಾಸಗಿ ವಾಹಿನಿ ಮೇಲೆ ಒತ್ತಡ
ಬೆಂಗಳೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜೀವನದ ಗಾಥೆಯ ಕುರಿತಾದ ಮಹಾನಾಯಕ ಧಾರವಾಹಿ ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದು, ಇದೀಗ ಈ ಧಾರವಾಹಿಯ ಪ್ರಸಾರವನ್ನು ನಿಲ್ಲಿಸುವಂತೆ ಖಾಸಗಿ ವಾಹಿನಿ ಮೇಲೆ ಕೆಲವರು ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಮಹಾನಾಯಕ ಧಾರವಾಹಿ ನಿಲ್ಲಿಸುವಂತೆ ಹಲವಾರು ದೂರವಾಣಿ ಕರೆಗಳು ಬರುತ್ತಿವೆ. ಮಧ್ಯರಾತ್ರಿ ಕರೆ ಮಾಡಿ ಧಾರವಾಹಿ ನಿಲ್ಲಿಸುವಂತೆ ಕೆಲವರು ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಘವೇಂದ್ರ …
Read More »ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕಾಗಿ ‘ಅರಿವು’ ಯೋಜನೆಯಡಿ ಅರ್ಜಿ ಆಹ್ವಾನ
ಶಿವಮೊಗ್ಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಪ್ರಸಕ್ತ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಬೌದ್ಧ, ಸಿಖ್, ಪಾರ್ಸಿ ಹಾಗೂ ಆಂಗ್ಲೋ-ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ನೀಡಲಿದೆ. ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಂದ ಸಾಲ ಸೌಲಭ್ಯಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್ www.kmdc.kar.nic.in/arivu2 ನಲ್ಲಿ ಅರ್ಜಿ ಸಲ್ಲಿಸಿ, ಭರ್ತಿ ಮಾಡಿದ ಅರ್ಜಿಯ ಪ್ರಿಂಟೌಟ್‍ನೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸೆಪ್ಟಂಬರ್ …
Read More »ಕೊಲೆ, ಸುಲಿಗೆ, ಅಕ್ರಮ ಚಟುವಟಿಕೆಗಳೇ ತುಂಬಿದ್ದ ಗ್ರಾಮದಲ್ಲಿ ಈಗ ಶಿಕ್ಷಣ ಕ್ರಾಂತಿ, ಯಾವೂರದು?
ಬೆಳಗಾವಿ : ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂಬ ದಾಸವಾಣಿ ಇದೆ.. ಈ ಮಾತು ನಿಜಕ್ಕೂ ಸತ್ಯ. ಜೀವನ ಅರ್ಥ ತಿಳಿಯಲು, ಗುರಿ ಸಾಧಿಸಲು ಗುರು ಬೇಕೆ ಬೇಕು. ಶಿಕ್ಷಕರು ಪ್ರತಿಯೊಬ್ಬರ ಜೀವನದಲ್ಲಿ ಮುಖ್ಯ ಪಾತ್ರ ವಹಿಸುತ್ತಾರೆ. ಅಂತಹ ಶಿಕ್ಷಕರ ತವರು ಎಂದು ಈ ಗ್ರಾಮ ಖ್ಯಾತಿ ಪಡೆದಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನಲ್ಲಿರುವ ಈ ಇಂಚಲ ಗ್ರಾಮ ಶಿಕ್ಷಕರಿಂದಲೇ ರಾಜ್ಯದಲ್ಲಿ ಹೆಸರುವಾಸಿಯಾಗಿದೆ. ಈ ಗ್ರಾಮದಲ್ಲಿ ಮನೆಗೆ ಒಬ್ಬರಂತೆ ಶಿಕ್ಷಕರಿದ್ದಾರೆ. …
Read More »ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ನಟಿ ಸಂಯುಕ್ತ ಹೆಗ್ಡೆ
ಬೆಂಗಳೂರು: ಕಿರಿಕ್ ಪಾರ್ಟಿ ಸಿನಿಮಾ ಖ್ಯಾತಿಯ ನಟಿ ಸಂಯುಕ್ತ ಹೆಗ್ಡೆಯವರು ಮತ್ತೆ ವಿವಾದದಲ್ಲಿ ಸಿಲುಕಿಕೊಂಡಿದ್ದು, ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ.ತುಂಡು ಬಟ್ಟೆ ತೊಟ್ಟು ಡ್ಯಾನ್ಸ್ ಮಾಡಿದ್ದಕ್ಕೆ ಸ್ಥಳೀಯರು ಮತ್ತು ಹಿರಿಯ ನಾಗರಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಆಗ ಸಾರ್ವಜನಿಕರ ವಿರುದ್ಧ ನಟಿ ಸಂಯುಕ್ತ ಕಿರುಚಾಡಿ ರಂಪ ಮಾಡಿದ್ದಾರೆ. ಈ ವೇಳೆ ಸಾರ್ವಜನಿಕರು ನಟಿಯ ವಿರುದ್ಧ ಧಿಕ್ಕಾರ ಕೂಗಿ, ನಂತರ ಪಾರ್ಕ್ ಗೇಟನ್ನು ಲಾಕ್ ಮಾಡಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಈ ವೇಳೆ ಗೇಟ್ …
Read More »ಗೋವಾಕ್ಕೆ ಬಸ್ ಸಂಚಾರ ಆರಂಭ
ಗೋವಾಕ್ಕೆ ತೆರಳುವ ಬಸ್ಸುಗಳು ಗೋಕುಲ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಲಾಕ್‍ಡೌನ್ ಪೂರ್ವದಲ್ಲಿ ಹುಬ್ಬಳ್ಳಿಯಿಂದ ಪ್ರತಿದಿನ ಪಣಜಿಗೆ ಒಂದು ರಾಜಹಂಸ ಮತ್ತು 8 ವೇಗಧೂತ, ವಾಸ್ಕೋಗೆ ಮತ್ತು ಮಡಗಾಂವಗೆ ತಲಾ 1 ಬಸ್ಸು ಸೇರಿ ಒಟ್ಟು 11 ಬಸ್ಸುಗಳು ಗೋವಾ ರಾಜ್ಯಕ್ಕೆ ಸಂಚರಿಸುತ್ತಿದ್ದವು. ಮೊದಲ ಹಂತದಲ್ಲಿ ಪಣಜಿಗೆ ನಾಲ್ಕು (1 ರಾಜಹಂಸ, 3 ವೇಗಧೂತ) ಹಾಗೂ ವಾಸ್ಕೋ ಮತ್ತು ಮಡಗಾಂವಗೆ …
Read More »ಜಮೀನು ವಿಚಾರದಲ್ಲಿ ರೈತರು ಪರಸ್ಪರ ಹೊಡೆದಾಡಿಕೊಂಡ ಘಟನೆ
ಮೈಸೂರು: ಜಮೀನು ವಿಚಾರದಲ್ಲಿ ರೈತರು ಪರಸ್ಪರ ಹೊಡೆದಾಡಿಕೊಂಡ ಘಟನೆ ನಂಜನಗೂಡು ತಾಲೂಕು ಇಮ್ಮಾವು ಗ್ರಾಮದಲ್ಲಿ ನಡೆದಿದೆ.ರಘು ಹೆಸರಿನಲ್ಲಿದ್ದ ಅರ್ಧ ಎಕರೆ ಜಮೀನನ್ನು ಚಂದ್ರಶೇಖರ್ ಉಳುಮೆ ಮಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ಜಮೀನು ಬಿಡಿಸಿಕೊಳ್ಳಲು ರಘು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯ ರಘು ಪರ ತೀರ್ಪು ನೀಡಿತ್ತು. ಆದರೆ ತೆರವುಗೊಳಿಸುವ ಆದೇಶ ಇನ್ನೂ ನೀಡಿರಲಿಲ್ಲ. ಇತ್ತ ತೀರ್ಪಿನ ಅನ್ವಯದಂತೆ ರಘು ಜಮೀನು ತೆರುವುಗೊಳಿಸುವಂತೆ ಒತ್ತಡ ಹೇರಿದ್ದ. ಹೀಗಾಗಿ ಕೆಲವು ರೈತರನ್ನ ಕರೆದುಕೊಂಡು ಹೋಗಿ …
Read More »ಊಟ, ಬಟ್ಟೆ ಎಲ್ಲವನ್ನು ವಾಪಸ್ ಊಟ ಕೊಡಲು ಪೊಲೀಸರು ಅವಕಾಶ ನೀಡಲಿಲ್ಲ
ಬೆಂಗಳೂರು: ಡ್ರಗ್ಸ್ ಮಾಫಿಯಾಗೆ ಸಂಬಂಧಿಸಿದಂತೆ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಮಹಿಳಾ ಸಾಂತ್ವನ ಕೇಂದ್ರದಲ್ಲಿರಿಸಿದ್ದಾರೆ. ಹೀಗಾಗಿ ಮಧ್ಯರಾತ್ರಿ ಮಗಳನ್ನು ನೋಡಲು ನಟಿ ರಾಗಿಣಿ ಪೋಷಕರು ಹೋಗಿದ್ದರು.ಮಧ್ಯರಾತ್ರಿಯಲ್ಲಿ ರಾಗಿಣಿ ಭೇಟಿ ಮಾಡಲು ಪೋಷಕರು ದೌಡಾಯಿಸಿದ್ದು, ಮಹಿಳಾ ಸಾಂತ್ವನ ಕೇಂದ್ರಕ್ಕೆ ಬಂದು ಗೇಟ್‍ನಲ್ಲಿ ಕಾದು ನಿಂತಿದ್ದರು. ನಟಿ ರಾಗಿಣಿ ತಾಯಿ ರೋಹಿಣಿ ದ್ವಿವೇದಿ ಮತ್ತು ತಂದೆ ರಾಕೇಶ್ ದ್ವಿವೇದಿ ಸಾಂತ್ವನ ಕೇಂದ್ರಕ್ಕೆ ಭೇಟಿ ಕೊಟ್ಟಿದ್ದರು. ಅಲ್ಲದೇ ಮಗಳು ರಾಗಿಣಿಗಾಗಿ ಊಟಕ್ಕಾಗಿ ಪಾಸ್ತಾ, …
Read More »ಸ್ವಾಮೀಜಿಯವರ ನಿಸ್ವಾರ್ಥ ಸೇವೆಯಿಂದ ಗ್ರಾಮದ ಮನೆಯಲ್ಲೊಬ್ಬರು ಶಿಕ್ಷಕರಿದ್ದಾರೆ.ಈ ಗ್ರಾಮದಲ್ಲಿ
ಬೆಳಗಾವಿ: ಹಿಂದುಳಿದ ತಾಲೂಕಿನಲ್ಲಿ ಅದೊಂದು ಕುಗ್ರಾಮ. ಶಿಕ್ಷಣದ ಬದಲು ಈ ಗ್ರಾಮದಲ್ಲಿ ಕೊಲೆ ಸುಲಿಗೆ, ಮಚ್ಚುಲಾಂಗು ಅಬ್ಬರ ಜಾಸ್ತಿಯಾಗಿತ್ತು. ಹೀಗಿದ್ದ ಗ್ರಾಮದಲ್ಲಿ ಇದೀಗ ಶಿಕ್ಷಣದ ಕಂಪು ಪಸರಿಸಿ ಮನಗೊಬ್ಬರಂತೆ ಶಿಕ್ಷಕರಿದ್ದಾರೆ. ಸ್ವಾಮೀಜಿಯವರ ನಿಸ್ವಾರ್ಥ ಸೇವೆಯಿಂದ ಗ್ರಾಮದ ಮನೆಯಲ್ಲೊಬ್ಬರು ಶಿಕ್ಷಕರಿದ್ದಾರೆ. ಗ್ರಾಮವನ್ನ ಇದೀಗ ರಾಜ್ಯದಲ್ಲಿ ಶಿಕ್ಷಕರ ತವರೂರು ಎಂದೇ ಗುರುತಿಸಲಾಗುತ್ತಿದೆ.ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮ ಇದೀಗ ರಾಜ್ಯದಲ್ಲೇ ಹೆಸರುವಾಸಿಯಾಗಿರುವ ಗ್ರಾಮ. ಈ ಗ್ರಾಮದಲ್ಲಿ ಮನಗೆ ಒಬ್ಬರಂತೆ ಶಿಕ್ಷರಿದ್ದಾರೆ ಅಂದ್ರೆ …
Read More »