ಹುಬ್ಬಳ್ಳಿ : ಕೋವಿಡ್ ಹಿನ್ನೆಲೆಯಲ್ಲಿ ಅತ್ಯಂತ ವಿಶಿಷ್ಟ ಪರಿಸ್ಥಿತಿಯಲ್ಲಿ ಈ ಬಾರಿ ಸಂಸತ್ ಅಧಿವೇಶನ ನಡೆಯಲಿದೆ. ಚರ್ಚೆಯೇ ಇಲ್ಲದೆ ಕೇರಳ, ರಾಜಸ್ತಾನ, ಪಶ್ಚಿಮ ಬಂಗಾಳದಲ್ಲಿ ಅಧಿವೇಶನ ಪೂರ್ಣಗೊಳಿಸಿದವರು ನಮ್ಮ ವಿರುದ್ಧ ಹೇಳಿಕೆ ನೀಡುತ್ತಿರುವುದು ವಿಚಿತ್ರ ವರ್ತನೆ ಎಂದು ಎಂದು ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಗಣಿ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅತ್ಯಂತ ವಿಶಿಷ್ಟಪರಿಸ್ಥಿತಿಯಲ್ಲಿ ಈ ಬಾರಿ ಸಂಸತ್ ಅಧಿವೇಶನ ನಡೆಯಲಿದೆ. …
Read More »Daily Archives: ಸೆಪ್ಟೆಂಬರ್ 7, 2020
ನಟಿ ರಾಗಿಣಿಗೆ ಚಿತ್ರರಂಗದಿಂದ ನಿಷೇಧ?
ಬೆಂಗಳೂರು : ಡ್ರಗ್ಸ್ ಆರೋಪ ಸಾಬೀತಾದರೆ ನಟಿ ರಾಗಿಣಿ ಅವರಿಗೆ ಚಿತ್ರರಂಗದಿಂದ ನಿಷೇಧ ಶಿಕ್ಷೆ ಎದುರಾಗುವ ಸಾಧ್ಯತೆ ಇದೆ. ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚರ್ಚೆ ಆಗಿದೆ ಎನ್ನಲಾಗಿದ್ದು, ಡ್ರಗ್ಸ್ ಜಾಲದಲ್ಲಿ ರಾಗಿಣಿ ಪಾತ್ರ ಇರುವುದು ಸಾಕ್ಷ್ಯಸಮೇತ ಸಾಬೀತಾದರೆ ಅವರನ್ನು ಚಿತ್ರರಂಗದಿಂದ ದೂರ ಇಡುವ ನಿರ್ಧಾರ ಕೈಗೊಳ್ಳಲು ನಿರ್ಧರಿಸಲಾಗಿದೆ. ಆದರೆ, ಈ ಕುರಿತು ಪ್ರತಿಕ್ರಿಯೆ ನೀಡಲು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್.ಜೈರಾಜ್ ನಿರಾಕರಿಸಿದ್ದು, ಈ ಹಂತದಲ್ಲಿ …
Read More »ವಿಶ್ವದಾದ್ಯಂತ ಈವರೆಗೆ 2.7 ಕೋಟಿ ಕೊರೊನಾ ಪ್ರಕರಣ : ಅಮೆರಿಕಾ ನಂ.1, ಭಾರತ ನಂ 2
ವಾಷಿಂಗ್ಟನ್ : ವಿಶ್ವದಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಈವರೆಗೆ ಕೊರೊನಾ ಸೋಂಕಿತರ ಸಂಖ್ಯೆ 2.7 ಕೋಟಿಗೆ ಏರಿಕೆಯಾಗಿದ್ದು, 8.83 ಲಕ್ಷ ಮಂದಿ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ. ವಿಶ್ವದಲ್ಲಿ ಅತೀ ಹೆಚ್ಚು ಕೊರೊನಾ ವೈರಸ್ ಸೋಂಕಿತ ದೇಶಗಳ ಪಟ್ಟಿಯಲ್ಲಿ ಅಮೆರಿಕಾ ಮೊದಲ ಸ್ಥಾನದಲ್ಲಿದ್ದು, ಈವರೆಗೆ 62.75 ಲಕ್ಷ ಕೊರೊನಾ ಪ್ರಕರಣಗಳು ವರದಿಯಾಗಿದೆ. 2 ನೇ ಸ್ಥಾನದಲ್ಲಿರುವ ಭಾರತದಲ್ಲಿ ನಿನ್ನೆ ಒಂದೇ ದಿನ 90,000 ಕ್ಕೂ ಹೆಚ್ಚು ಹೊಸ ಪ್ರಕರಣಗಳ ಹೊರತಾಗಿ, …
Read More »ಕೊರೊನಾದಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುಣಮುಖ
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಇದೀಗ ಕಟೀಲ್ ಅವರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನಳೀನ್ ಕುಮಾರ್ ಕಟೀಲ್, ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಫಲವಾಗಿ ಕೊರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್ ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ. …
Read More »2.71 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಶಂಕುಸ್ಥಾಪನೆ
ಬೆಂಗಳೂರು : ಮುಧೋಳ್ ತಾಲ್ಲೂಕಿನ 2.71 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಶಂಕುಸ್ಥಾಪನೆ ನೆರವೇರಿಸಿದರು. ಮುಧೋಳ ತಾಲ್ಲೂಕಿನ ಸೊರಗಾಂವ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ 15ಲಕ್ಷ ರೂ. ವೆಚ್ಚದ ಸಿಸಿ ರಸ್ತೆ, ಹಲಗಲಿ ಗ್ರಾಮದಲ್ಲಿ 1.40 ಕೋಟಿ ರೂ ವೆಚ್ಚದ ಕಾಗವಾಡ- ಕಲಾದಗಿ ರಾಜ್ಯ ಹೆದ್ದಾರಿ ಕಾಮಗಾರಿ, ಮಾಚಕನೂರು ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ 63ಲಕ್ಷ ರೂ ವೆಚ್ಚದ ಮೂಲಭೂತ ಸೌಕರ್ಯಗಳ …
Read More »ಸೋಂಕಿತರ ಸಂಖ್ಯೆ 4 ಲಕ್ಷಕ್ಕೆ : ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖ
ಬೆಂಗಳೂರು : ರಾಜ್ಯದಲ್ಲಿ ಭಾನುವಾರ ದಾಖಲೆಯ ಸಂಖ್ಯೆಯಲ್ಲಿ ಕೋವಿಡ್ ರೋಗಿಗಳು ಗುಣಮುಖರಾಗಿದ್ದರೆ, ಮತ್ತೆ 9,319 ಮಂದಿ ಕೊರೋನಾ ಸೋಂಕಿತರಾಗುವ ಮೂಲಕ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ ಒಂದು ಲಕ್ಷದ ಸಮೀಪಕ್ಕೆ ಬಂದಿದೆ. ರಾಜ್ಯದಲ್ಲಿ ಶನಿವಾರವಷ್ಟೆ9,102 ಮಂದಿ ಕೊರೋನಾ ಸೋಂಕಿನಿಂದ ಮುಕ್ತರಾಗಿ ದಾಖಲೆ ನಿರ್ಮಾಣವಾಗಿತ್ತು. ಭಾನುವಾರ ಆ ದಾಖಲೆ ಇನ್ನಷ್ಟುಉತ್ತಮಗೊಂಡು 9,575 ಮಂದಿ ಕೊರೋನಾವನ್ನು ಜಯಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಈವರೆಗೆ ಕೊರೋನಾ ಗೆದ್ದವರ ಸಂಖ್ಯೆ 2.92 ಲಕ್ಷಕ್ಕೇರಿದೆ. ಇದೇ ವೇಳೆ ಮತ್ತೆ …
Read More »ನೆರೆ ಹಾನಿ ಅಧ್ಯಯನಕ್ಕೆ ಕೇಂದ್ರ ತಂಡ ಆಗಮನ
ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾನಿ ಸಂಬಂಧ ಅಧ್ಯಯನಕ್ಕಾಗಿ ಕೇಂದ್ರದ ಅಧಿಕಾರಿಗಳ ತಂಡ ಸೋಮವಾರ ರಾಜ್ಯಕ್ಕೆ ಆಗಮಿಸಲಿದೆ. ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಕೆ.ವಿ. ಪ್ರತಾಪ್ ಅವರ ನೇತೃತ್ವದ ಎನ್‌ಡಿಆರ್‌ಎಫ್ ತಂಡ ಎರಡು-ಮೂರು ದಿನಗಳ ಕಾಲ ರಾಜ್ಯದಲ್ಲೇ ಉಳಿದುಕೊಂಡು ನೆರೆಯಿಂದ ಉಂಟಾದ ಹಾನಿ ಬಗ್ಗೆ ಅಧ್ಯಯನ ನಡೆಸುವ ಸಾಧ್ಯತೆ ಇದೆ. ಸೋಮವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳು …
Read More »ಕೊರೋನಾ ಹೊಡೆತಕ್ಕೆ ಕುಸಿದ ಹೊಸ ಕಟ್ಟಡ ನಿರ್ಮಾಣ
ಬೆಂಗಳೂರು : ಕೊರೋನಾ ಸೋಂಕಿನ ಹೊಡೆತಕ್ಕೆ ಬೆಂಗಳೂರಿನಲ್ಲಿ ಹೊಸ ಕಟ್ಟಡಗಳ ನಿರ್ಮಾಣ ಕ್ಷೇತ್ರ ಸಂಪೂರ್ಣವಾಗಿ ಕುಸಿದಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೇವಲ 13 ಹೊಸ ಕಟ್ಟಡಗಳ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಪಡೆಯಲಾಗಿದೆ. ಮಹಾಮಾರಿ ಕೊರೋನಾ ಸೋಂಕಿನ ಭೀತಿಗೆ ಕಟ್ಟಡ ನಿರ್ಮಾಣಕ್ಕೆ ನೆಲಕಚ್ಚಿದೆ. ಇದರಿಂದ ಬಿಬಿಎಂಪಿಗೆ ಸಂಪನ್ಮೂಲ ಕ್ರೋಢಿಕರಣದ ಮೇಲೆಯೂ ಭಾರೀ ಹೊಡೆದ ಬಿದ್ದಿದ್ದು, ಪ್ರತಿ ವರ್ಷ ಬಿಬಿಎಂಪಿ ನಗರದಲ್ಲಿ ಸುಮಾರು 130ಕ್ಕೂ ಹೆಚ್ಚು ಕಟ್ಟಡಗಳ ನಿರ್ಮಾಣಕ್ಕೆ ನಕ್ಷೆ …
Read More »ಕೊರೋನಾ ಮಧ್ಯೆ ಇಂದಿನಿಂದ ಮೆಟ್ರೋ ಸಂಚಾರ ಶುರು
ಬೆಂಗಳೂರು : ಬರೋಬ್ಬರಿ ಐದು ತಿಂಗಳ ನಂತರ ನಮ್ಮ ಮೆಟ್ರೋ ರೈಲು ಸಂಚಾರ ಸೋಮವಾರ ಮತ್ತೆ ಆರಂಭವಾಗಲಿದೆ. ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಮೆಟ್ರೋ ರೈಲು ಸಂಚಾರ ಮತ್ತೆ ಆರಂಭಿಸಲು ಪ್ರಯಾಣಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಕೇಂದ್ರದ ಮಾರ್ಗಸೂಚಿಯಂತೆ ಬಿಎಂಆರ್‌ಸಿಲ್ ಸಕಲ ಸಿದ್ಧತೆ ಮಾಡಿಕೊಂಡಿದೆ. ಕೇಂದ್ರ ಸರ್ಕಾರ ಮೆಟ್ರೋ ಸೇವೆ ಆರಂಭಿಸಲು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಸತತ ಐದು ದಿನಗಳಿಂದ ನಮ್ಮ ಮೆಟ್ರೋ ರೈಲುಗಳನ್ನು ರಾಸಾಯನಿಕ ಬಳಸಿ ಸ್ವಚ್ಛತಾ ಮತ್ತು ಸ್ಯಾನಿಟೈಸರ್ ಸಿಂಪಡಣೆ …
Read More »ಅರ್ಜಿ ಹಾಕಿದ್ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: 1,40 ಲಕ್ಷ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶುರು
ನವದೆಹಲಿ, : ಭಾರತೀಯ ರೈಲ್ವೆಯಲ್ಲಿನ ನೇಮಕಾತಿ ಪ್ರಕ್ರಿಯೆ ಡಿಸೆಂಬರ್ 15ರಿಂದ ಮೊದಲ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ನಡೆಸಲು ಪ್ರಾರಂಭಿಸಲಿದೆ. ಈ ಕುರಿತು ರಾಷ್ಟ್ರೀಯ ಸಾರಿಗೆ ಮಂಡಳಿಯ ಅಧ್ಯಕ್ಷ ವಿ.ಕೆ. ಯಾದವ್ ತಿಳಿಸಿದ್ದಾರೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 1,40,640 ಹುದ್ದೆಗಳಿಗೆ ಕೊರೋನಾ ಭೀತಿ ಶುರುವಾಗುವ ಮುನ್ನ ಅರ್ಜಿ ಆಹ್ವಾನಿಸಲಾಗಿತ್ತು. ಬಳಿಕ ಕೊರೋನಾ ಸಂಕಷ್ಟದಿಂದಾಗಿ ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿತ್ತು. ಇದೀಗ ಅವುಗಳ ನೇಮಕಾತಿ ಪ್ರಕ್ರಿಯೆ ಇದೇ ಡಿ.15ರಿಂದ ಆರಂಭವಾಗಲಿದೆ. …
Read More »