ಬೆಂಗಳೂರು : ರಾಜ್ಯ ಸರ್ಕಾರವು ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ದಡಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 14,252 ವಿವಿಧ ಹುದ್ದೆಗಳಿಗೆ ವಿಶೇಷ ಹೆಚ್ಚುವರಿ ಭತ್ಯೆ ನೀಡಲು ಸರ್ಕಾರ ಆದೇಶಿಸಿದೆ. ಆಯುಷ್ ಮತ್ತು ಎಂಬಿಬಿಎಸ್ ವೈದ್ಯರು ಹಾಗೂ ತಜ್ಞರಿಗೆ 10 ಸಾವಿರ ರೂ. ಶುಶ್ರೂಷಕಿಯರಿಗೆ ಎ.ಎನ್. ಎಂ ಲ್ಯಾಬ್ ಟೆಕ್ನೀಷಿಯನ್ ಹಾಗೂ ಫಾರ್ಮಾಸಿಸ್ಟ್ ಗಳಿಗೆ ತಲಾ 5 ಸಾವಿರ ರೂ. ನಂತೆ ಮುಂದಿನ ಆರು ತಿಂಗಳ …
Read More »Daily Archives: ಸೆಪ್ಟೆಂಬರ್ 22, 2020
ಹುಬ್ಬಳ್ಳಿಯಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಆರಂಭ
ಹುಬ್ಬಳ್ಳಿ: ಕೊರೊನಾ ಲಾಕ್‍ಡೌನ್ ನಿಂದ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ- ಮಹಾರಾಷ್ಟ್ರ ಬಸ್ ಸಂಚಾರವನ್ನು ಇದೀಗ ಮತ್ತೆ ಆರಂಭಿಸಲಾಗಿದೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಬಸ್ಸುಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ಆದರೆ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿರುವುದರಿಂದ ರಾಜ್ಯದಲ್ಲಿ ಜನರಲ್ಲಿ ಆತಂಕ ಹೆಚ್ಚಾಗಿದೆ. ಮೊದಲ ಹಂತದಲ್ಲಿ ವಿಜಯಪುರ ಹಾಗೂ ಚಿಕ್ಕೋಡಿ ಮಾರ್ಗವಾಗಿ ಮಹಾರಾಷ್ಟ್ರದ ಪ್ರಮುಖ ಸ್ಥಳಗಳಾದ ಸೊಲ್ಲಾಪುರ, ಬಾರ್ಶಿ, ಫಂಡರಪುರ, ಔರಂಗಬಾದ್, ಈಚಲಕರಂಜಿ, ಮೀರಜ್ ಮತ್ತಿತರ ಸ್ಥಳಗಳಿಗೆ …
Read More »ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ- ಜಾರ್ಜ್‍ಗೆ ಸಮನ್ಸ್ ಜಾರಿ
ಮಡಿಕೇರಿ: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಗೆ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ. ಈ ವಿಚಾರ ಖುಷಿ ತಂದಿದೆ. ಮತ್ತೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಡಿವೈಎಸ್‍ಪಿ ಗಣಪತಿ ತಂದೆ ಕುಶಾಲಪ್ಪ ಹಾಗೂ ಗಣಪತಿ ಸಹೋದರ ಮಚ್ಚಯ್ಯ ಸಂತಸ ವ್ಯಕ್ತಪಡಿಸಿದರು. ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ ಮಾತಾನಾಡಿದ ಅವರು, ಗಣಪತಿ ಅವರು ಮರಣ ಹೊಂದಿದ ನಂತರ ನ್ಯಾಯಕ್ಕಾಗಿ ಗಣಪತಿ ಕುಟುಂಬಸ್ಥರು ಹೋರಾಟ …
Read More »ಒಪ್ಪಿಗೆಯಿಲ್ಲದೆ ಫೋಟೋ ಬಳಕೆ- ಆ್ಯಪ್ ಕಂಪನಿ ವಿರುದ್ಧ ಸಂಸದೆ ದೂರು
ಕೋಲ್ಕತ್ತಾ: ವಿಡಿಯೋ ಚಾಟ್ ಆ್ಯಪ್ ‘ಫ್ಯಾನ್ಸಿಯೂ’ ಪ್ರಚಾರಕ್ಕಾಗಿ ಒಪ್ಪಿಗೆಯಿಲ್ಲದೆ ನನ್ನ ಫೋಟೋವನ್ನು ಬಳಸಿದೆ ಎಂದು ನಟಿ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಕೋಲ್ಕತ್ತಾ ಪೊಲೀಸರಿಗೆ ದೂರು ನೀಡಿದ್ದಾರೆ. ನಟಿ ನುಸ್ರತ್ ಜಹಾನ್ ಟ್ವೀಟ್ ಮಾಡುವ ಮೂಲಕ ತಮ್ಮ ಫೋಟೋವನ್ನು ಬಳಸಿರುವುದಾಗಿ ದೂರು ನೀಡಿದ್ದಾರೆ. ಅಲ್ಲದೇ ವಿಡಿಯೋ ಚಾಟ್ ಆ್ಯಪ್‍ಗಾಗಿ ಜಾಹೀರಾತಿ ನೀಡಿರುವ ಸ್ಕ್ರೀನ್‍ಶಾಟ್ ಕ್ಲಿಕ್ಕಿಸಿಕೊಂಡಿದ್ದು, ಆ ಫೋಟೋವನ್ನು ಟ್ವಿಟ್ಟರಿನಲ್ಲಿ ಶೇರ್ ಮಾಡಿದ್ದಾರೆ. ನಂತರ ಈ ಟ್ವೀಟನ್ನು ಕೋಲ್ಕತಾ …
Read More »ಬೆಳಗಾವಿಯ ಭೀಮ್ಸ್ ಆಸ್ಪತ್ರೆಯಲ್ಲಿ ಓರ್ವ ವೈದ್ಯ ಹಾಗೂ ನರ್ಸ್ ಮೇಲೆ ಹಲ್ಲೆ
ಬೆಳಗಾವಿ- ಬೆಳಗಾವಿಯ ಭೀಮ್ಸ್ ಆಸ್ಪತ್ರೆಯಲ್ಲಿ ಓರ್ವ ವೈದ್ಯ ಹಾಗೂ ನರ್ಸ್ ಮೇಲೆ ಹಲ್ಲೆ ಮಾಡಿದ ಘಟನೆ ತಡರಾತ್ರಿ ನಡೆದಿದೆ ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ತಡರಾತ್ರಿ ಮಹಿಳೆಯೊಬ್ಬಳಿಗೆ ಉಸಿರಾಟದ ತೊಂದರೆ ಆಗುತ್ತಿದೆ ಎಂದು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ, ಕೆಲ ಹೊತ್ತಿನಲ್ಲಿಯೇ ಮಹಿಳೆ ಮೃತಪಟ್ಟಿದ್ದಾಳೆ,ಆದ್ರೆ ಅವಳಿಗೆ ಸರಿಯಾಗಿ ಚಿಕಿತ್ಸೆ ಕೊಡಲಿಲ್ಲ ಎಂದು ಆರೋಪಿಸಿ,ಮೃತ ಮಹಿಳೆಯ ಸಮಂಧಿಕರು ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ ಮಹಿಳೆ ಸಾವನ್ನೊಪ್ಪುತ್ತಿದ್ದಂತೆಯೇ ಆಸ್ಪತ್ರೆಯಲ್ಲಿ ಗದ್ದಲ …
Read More »ರೈತ ವಿರೋಧಿ ಮಸೂದೆ ವಿರುದ್ಧ ಭುಗಿಲೆದ್ದ ಆಕ್ರೋಶ- ಶುಕ್ರವಾರ ಕರ್ನಾಟಕ ಬಂದ್ ಸಾಧ್ಯತೆ
ಬೆಂಗಳೂರು: ಸೆಪ್ಟೆಂಬರ್ 25ರಂದು ಕರ್ನಾಟಕವೇ ಬಂದ್ ಆಗುವ ಸಾಧ್ಯತೆ ಇದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಶುಕ್ರವಾರ ರಾಜ್ಯಾದ್ಯಂತ ಬಂದ್ ಆಚರಿಸುವ ನಿರೀಕ್ಷೆ ಇದೆ. ಈ ಸಂಬಂಧ ಇವತ್ತು ಬೆಳಗ್ಗೆ 11 ಗಂಟೆಗೆ ಅಧಿಕೃತ ಘೋಷಣೆ ಆಗಲಿದೆ. ಬಂದ್‍ಗೆ 32ಕ್ಕೂ ಹೆಚ್ಚು ಸಂಘಟನೆಗಳು ಕೈಜೋಡಿಸಲಿವೆ. ರೈತ ಸಂಘಟನೆಗಳು ಮಾತ್ರವಲ್ಲದೇ ನಾರಾಯಣಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು, ಓಲಾ-ಉಬರ್, ಆಟೋ, ಟ್ಯಾಕ್ಸಿ …
Read More »Latest 3 ವಿಕೆಟ್ ಕಿತ್ತು ರೋಚಕ ತಿರುವು ನೀಡಿದ ಚಹಲ್ –R.C.B.10 ರನ್‌ಗಳ ಗೆಲುವು
ದುಬೈ: ಆರಂಭದಲ್ಲಿ ಬ್ಯಾಟ್ಸ್ ಮನ್, ನಂತರ ಬೌಲರ್‌ಗಳ ಉತ್ತಮ ಪ್ರದರ್ಶನದಿಂದ ಹೈದರಾಬಾದ್ ಸನ್ ರೈಸರ್ಸ್ ವಿರುದ್ಧದ ನಡೆದ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 10 ರನ್‌ಗಳಿಂದ ಜಯಗಳಿಸಿದೆ.ಗೆಲ್ಲಲು 164 ರನ್‌ಗಳ ಗುರಿಯನ್ನು ಪಡೆದ ಹೈದರಾಬಾದ್ 19.4 ಓವರ್ ಗಳಲ್ಲಿ 153 ರನ್‌ಗಳಿಗೆ ಆಲೌಟ್ ಆಯ್ತು. ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಲ್ ಮೂರು ವಿಕೆಟ್ ಕಬಳಿಸಿ ಪಂದ್ಯಕ್ಕೆ ರೋಚಕ ತಿರುವ ನೀಡಿದರೆ ಸೈನಿ ಎರಡು ವಿಕೆಟ್ ಕೀಳುವ ಮೂಲಕ ಆರ್‌ಸಿಬಿ …
Read More »ಲೂಸ್ ಮಾದ, ಕ್ರಿಕೆಟಿಗ ಅಯ್ಯಪ್ಪ, ಸೇರಿದಂತೆ ಕೆಲ ಗಣ್ಯರ ಮಕ್ಕಳಿಗೆ ಡ್ರಗ್ಸ್ ಸಪ್ಲೈ ಇಬ್ಬರಿಗೆ ನೋಟಿಸ್
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನೂ ಮಾತ್ರ ವಿಚಾರಣೆ ನಡೆಸಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಕ್ರಿಕೆಟಿಗ ಅಯ್ಯಪ್ಪನನ್ನು ವಿಚಾರಣೆ ನಡೆಸಿದ್ದೇವೆ ಎಂದು ಐಎಸ್‍ಡಿ (ಆಂತರಿಕ ಭದ್ರತಾ ಪಡೆ) ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಲೂಸ್ ಮಾದ ಖ್ಯಾತಿಯ ಯೋಗಿ ಹಾಗೂ ಕ್ರಿಕೆಟಿಗ ಅಯ್ಯಪ್ಪನನ್ನು ವಿಚಾರಣೆ ಮಾಡಿದ್ದೇವೆ. ಯೋಗಿ, ಅಯ್ಯಪ್ಪ ಅಲ್ಲದೇ ಸೀರಿಯಲ್ …
Read More »ಹಲವು ಭಾಗಗಳಲ್ಲಿ ಮುಂದುವರಿಯಲಿದೆ ಮಳೆಯಬ್ಬರ,ಧಾರವಾಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಬಹುತೇಕ ಬೆಳೆಗಳು ನಾಶ
ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮಳೆ ಅಬ್ಬರ ಮುಂದುವರಿಯಲಿದೆ. ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ನಾಳೆ ಆರೆಂಜ್ ಮತ್ತು ನಾಡಿದ್ದು ಯೆಲ್ಲೋ ಅಲರ್ಟ್ ಘೋಷಣೆ ಆಗಿದೆ. ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಆಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕಳೆದೊಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕಲಬುರಗಿಯ ಮಂದಿ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, …
Read More »