ಬೆಂಗಳೂರು : ಉದ್ಯಮಿಯೊಬ್ಬರ ಪುತ್ರನನ್ನು ಅಪಹರಿಸಿ ಐದು ಲಕ್ಷ ರು.ಗಳಿಗೆ ಬೇಡಿಕೆ ಇಟ್ಟಿದ್ದ ಕಿಡಿಗೇಡಿಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಗುಂಡು ಹೊಡೆದು ಬಂಧಿಸಿರುವ ಘಟನೆ ನಡೆದಿದೆ. ಕೋಣನಕುಂಟೆ ನಿವಾಸಿ ಕೃಷ್ಣ ಅಲಿಯಾಸ್ ಆಟೋ ಕೃಷ್ಣ ಎಂಬಾತನಿಗೆ ಗುಂಡೇಟು ಬಿದ್ದಿದ್ದು, ಹುಳಿಮಾವು ಸಮೀಪದ ಬೇಗೂರು-ಕೊಪ್ಪ ರಸ್ತೆಯಲ್ಲಿ ಬುಧವಾರ ರಾತ್ರಿ ಈ ದಾಳಿ ನಡೆದಿದೆ. ಉದ್ಯಮಿ ಜೋಸೆಫ್ ಪುತ್ರ ಜೋಕಿಮ್‌ನನ್ನು ರಕ್ಷಿಸಲಾಗಿದೆ. ಬೇಗೂರು ಸುತ್ತಮುತ್ತ ಜೆಲ್ಲಿ ಕಲ್ಲು ಗಣಿಗಾರಿಕೆಯಲ್ಲಿ ಸಂತ್ರಸ್ತ ಜೊಕಿಮ್ ತಂದೆ ಜೋಸೆಫ್ …
Read More »Monthly Archives: ಸೆಪ್ಟೆಂಬರ್ 2020
ಆನ್‍ಲೈನ್ ಅಪ್ಲಿಕೇಶನ್ ಬಳಸಿ ಕ್ರಿಕೆಟ್ ಬೆಟ್ಟಿಂಗ್- ಐವರ ಬಂಧನ
ಹಾಸನ: ಆನ್‍ಲೈನ್ ಅಪ್ಲಿಕೇಶನ್ ಬಳಸಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಐವರು ಆರೋಪಿಗಳನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.ಆಕಾಶ್, ಕುಮಾರಸ್ವಾಮಿ, ಪೂರ್ಣಚಂದ್ರ, ಅವಿನಾಶ, ನಿರಂಜನ್ ಬಂಧಿತ ಆರೋಪಿಗಳು. ಇವರಲ್ಲಿ ಆಕಾಶ್ ಗ್ರಾಮ ಪಂಚಾಯಿತಿಯೊಂದರಲ್ಲಿ ಡಾಟಾ ಎಂಟ್ರಿ ಮಾಡುವ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಬಂಧಿತರಿಂದ 5 ಮೊಬೈಲ್, ನೋಟ್ ಬುಕ್ ವಶಕ್ಕೆ ಪಡೆಯಲಾಗಿದೆ. ಸತ್ಯಮಂಗಲ ಬಡಾವಣೆಯ ಕಾಂಪ್ಲೆಕ್ಸ್ ಒಂದರಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಪೊಲೀಸರು …
Read More »ಕಂಪ್ಲೀಟ್ ಲಾಕ್‍ಡೌನ್ ಮಾಡಿ:ಮಾಜಿಸ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕೇಂದ್ರ ಹಾಗೂ ರಾಜ್ಯಗಳು ಕೊರೊನಾದೊಂದಿಗೆ ಬದುಕಿ ಎಂದು ಹೇಳುವ ಮೂಲಕ ನಮ್ಮ ಕೈಯಲ್ಲಿ ಸೋಂಕಿನ ನಿಯಂತ್ರಣ ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿವೆ. ಶನಿವಾರ, ಭಾನುವಾರದ ಲಾಕ್‍ಡೌನ್ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಮಾಡಿದರೇ ಕಂಪ್ಲೀಟ್ ಲಾಕ್‍ಡೌನ್ ಮಾಡಬೇಕಿದೆ ಎಂದು ಮಾಜಿಸ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ಈ ಹಿಂದೆ ಲಾಕ್‍ಡೌನ್ ತೆಗೆದು ಹಾಕಿದಾಗ ಕೋವಿಡ್ ಹೆಚ್ಚಳ ಆಗಿತ್ತು. ಆದರೆ ಆಗ ಲಾಕ್‍ಡೌನ್ ಮುಂದುವರಿಸಬೇಕಿತ್ತು. …
Read More »ಗೋಕರ್ಣದ ಮಾಣೇಶ್ವರ ದೇವಾಲಯದ ಬಳಿ ಗುಡ್ಡ ಕುಸಿತ- ಭಾರೀ ಅನಾಹುತ ತಪ್ಪಿಸಿದ ಮರ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಪುರಾಣ ಪ್ರಸಿದ್ಧ ಮಾಣೇಶ್ವರ ದೇವಾಲಯದ ಬಳಿ ಗುಡ್ಡ ಕುಸಿತವಾಗಿದ್ದು, ಅದೃಷ್ಟವಶಾತ್ ದೇವಸ್ಥಾನಕ್ಕೆ ಯಾವುದೇ ಹಾನಿ ಸಂಭವಿಸಿಲ್ಲ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಗೋಕರ್ಣದ ಮಾಣೇಶ್ವರ ದೇವಸ್ಥಾನದ ಮೇಲ್ಭಾಗದಲ್ಲಿರುವ ಗುಡ್ಡ ಕುಸಿದಿದ್ದು, ಈ ವೇಳೆ ದೊಡ್ಡ ಕಲ್ಲುಬಂಡೆ ಜಾರಿದೆ. ಆದರೆ ಪಕ್ಕದಲ್ಲೇ ಬೃಹದಾಕಾರದ ಮರವಿದ್ದ ಕಾರಣ ಗುಡ್ಡದಿಂದ ಜಾರಿದ ಕಲ್ಲುಬಂಡೆ ಮರದ ಬಳಿ ನಿಂತಿದ್ದು, ದೊಡ್ಡ ಅನಾಹುತ …
Read More »ವಿದ್ಯುತ್ ಕಂಬಕ್ಕೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ವಿದ್ಯುತ್ ತಗುಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತ
ಶಿವಮೊಗ್ಗ: ವಿದ್ಯುತ್ ಕಂಬಕ್ಕೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ವಿದ್ಯುತ್ ತಗುಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಬಳಿ ನಡೆದಿದೆ. ಮೃತಪಟ್ಟವರನ್ನು ಕಲಾವತಿ (65), ಲೋಹಿತ್ (36) ಮತ್ತು ಶಶಾಂಕ್ (10) ಎಂದು ಗುರುತಿಸಲಾಗಿದೆ. ರಿಪ್ಪನ್ ಪೇಟೆ ನಿವಾಸಿಗಳಾದ ಇವರು ಎರಡು ದಿನದ ಹಿಂದೆ ರಿಪ್ಪನ್ ಪೇಟೆಯಿಂದ ಧರ್ಮಸ್ಥಳಕ್ಕೆ ಹೋಗಿದ್ದರು. ಟಾಟಾ ಇಂಡಿಕಾ ಕಾರಿನಲ್ಲಿ …
Read More »ನಿನ್ನಗಲಿಕೆ ನೋವು ಹೇಳತೀರದು – ಪ್ರೀತಿಯ ಸುಬ್ಬಿ ಸಾವಿಗೆ ಡಾಲಿ ಸಂತಾಪ
ಬೆಂಗಳೂರು: ಚಿತ್ರೀಕರಣ ನಡೆಯುತ್ತಿದ್ದ ವೇಳೆ ಹೃದಯಾಘಾತವಾಗಿ ಖ್ಯಾತ ಹಿರಿಯ ನಟ ರಾಕ್‍ಲೈನ್ ಸುಧಾಕರ್ ವಿಧಿವಶರಾಗಿದ್ದಾರೆ. ಇವರ ಅಗಲಿಗೆ ನಟ ಧನಂಜಯ್ ಸಂತಾಪ ಸೂಚಿಸಿದ್ದಾರೆ. ನಟ ಧನಂಜಯ್ ಇನ್‍ಸ್ಟಾಗ್ರಾಂನಲ್ಲಿ ಅವರ ಜೊತೆಗಿರುವ ಫೋಟೋವೊಂದನ್ನು ಪೋಸ್ಟ್ ಮಾಡಿ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. “ಪ್ರೀತಿಯ ಸುಬ್ಬಿ, ಸಿಕ್ಕಾಗಲೆಲ್ಲ ನಗಿಸುತ್ತ, ಬದುಕಿನ ಫಿಲಾಸಫಿಗಳ ನಿನ್ನದೇ ರೀತಿಯಲ್ಲಿ ಅದ್ಭುತವಾಗಿ ಹೇಳುತ್ತ, ಪ್ರೀತಿಯಿಂದ ತಬ್ಬಿ ಒಳ್ಳೆಯದೆ ಆಗುತ್ತದೆ ಎಂದು ಹರಸುತ್ತಿದ್ದೆ. ನಿನ್ನಗಲಿಕೆಯ ನೋವು ಹೇಳತೀರದು. ಶಾಂತಿಯಿಂದ ನಿದ್ರಿಸು …
Read More »ಕೊರೊನಾ ಊಹೆಗೆ ನಿಲುಕದ ವೈರಸ್- ಮತ್ತೆ ಲಾಕ್‍ಡೌನ್ ಸುಳಿವು ನೀಡಿದ ಸಿಟಿ ರವಿ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಲ್ ಲಾಕ್‍ಡೌನ್ ಮಾತು ಕೇಳಿ ಬಂದಿದೆ. ಇದರ ಬೆನ್ನಲ್ಲೇ ಸಚಿವ ಸಿಟಿ ರವಿ ಅವರು ಮತ್ತೆ ಲಾಕ್‍ಡೌನ್ ಮಾಡುವ ಕುರಿತ ಸುಳಿವನ್ನು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸಿಟಿ ರವಿ, ಕೊರೊನಾ ನಮ್ಮ ಊಹೆಗೂ ನಿಲುಕದ ವೈರಸ್ ಆಗಿದ್ದು, ಈ ಬಗ್ಗೆ ಯೋಚನೆ ಮಾಡಬೇಕಾದ ಸ್ಥಿತಿ ಬಂದಿದೆ ಎಂದು ತಿಳಿಸಿದರು ಸದ್ಯ ಆರೋಗ್ಯವಾಗಿದ್ದ ಕೇಂದ್ರ ಸಚಿವರು ವಿಧಿವಶರಾಗಿದ್ದು, ರಾಜ್ಯ, ದೇಶಕ್ಕೆ ದೊಡ್ಡ …
Read More »ಸಿನಿ ಕಲಾವಿದರಾದ ರಾಕ್‍ಲೈನ್ ಸುಧಾಕರ್ ಅವರು ಇಂದು ಮೇಕಪ್ ಹಚ್ಚಿರುವಾಗಲೇ ಹೃದಯಘಾತದಿಂದ ನಮ್ಮನ್ನೆಲ್ಲಾ ಅಗಲಿದ್ದಾರೆ.
ಬೆಂಗಳೂರು: ಹೃದಯಾಘಾತವಾಗಿ ಸ್ಯಾಂಡಲ್‍ವುಡ್‍ನ ಹಿರಿಯ ನಟ ರಾಕ್‍ಲೈನ್ ಸುಧಾಕರ್ ವಿಧಿವಶರಾಗಿದ್ದಾರೆ ಇತ್ತೀಚೆಗಷ್ಟೆ ನಟ ರಾಕ್‍ಲೈನ್ ಸುಧಾಕರ್ ಕೊರೊನಾ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ಬಂದಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ನಂತರ ಸಿನಿಮಾ ಕೆಲಸಗಳಲ್ಲಿ ಸುಧಾಕರ್ ಸಕ್ರಿಯರಾಗಿದ್ದರು. ಇಂದು ಸಹ ಸುಧಾಕರ್ ಚಿತ್ರೀಕರಣಕ್ಕೆ ಹಾಜರಾಗಿದ್ದರು. ಆದರೆ ಸುಧಾಕರ್ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಿಂಪಲ್ ಸುನಿ ನಿರ್ದೇಶಿಸುತ್ತಿರುವ ಸಿನಿಮಾ ಶೂಟಿಂಗ್ ವೇಳೆ ಹೃದಯಾಘಾತವಾಗಿ …
Read More »ಆರೋಗ್ಯ ಕಾಪಾಡಿಕೊಳ್ಳಿ ಅಂದ್ರೆ ನಾನು ಜನ ಸೇವಕ ಅಂತಿದ್ರು- ಗೆಳೆಯನ ನೆನೆದು ಪ್ರಭಾಕರ್ ಕೋರೆ ಕಂಬನಿ
ಬೆಳಗಾವಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಾನು ಉತ್ತಮ ಸ್ನೇಹಿತರಾಗಿದ್ದೆವು, ಕೊರೊನಾ ಬಳಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಮಾಸ್ಕ್ ಹಾಕಿಕೊಳ್ಳಿ ಎಂದು ಹೇಳುತ್ತಿದ್ದೆ. ಆದರೆ ಅವರು ನಾನು ಜನರ ಸೇವೆ ಮಾಡಲು ಬಂದವನು ಎನ್ನುತ್ತಿದ್ದರು ಎಂದು ಸುರೇಶ್ ಅಂಗಡಿ ಅಗಲಿಕೆ ಕುರಿತು ರಾಜ್ಯಸಭಾ ಸದಸ್ಯ, ಅವರ ಆಪ್ತ ಸ್ನೇಹಿತ ಪ್ರಭಾಕರ್ ಕೋರೆ ಕಂಬನಿ ಮಿಡಿದಿದ್ದಾರೆ. ಸುರೇಶ್ ಅಂಗಡಿಯವರ ಬೆಳಗಾವಿ ನಿವಾಸಕ್ಕೆ ದಂಪತಿ ಸಮೇತ ಭೇಟಿ ನೀಡಿ ಅವರ ತಾಯಿ …
Read More »ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಆದರಿಂದ ಲೋಕಲ್ ಲಾಕ್‌ಡೌನ್ ಮಾಡುವುದಾಗಿ ಘೋಷಿಸಿದ್ದಾರೆ.
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದನ್ನ ನಿಯಂತ್ರಣಕ್ಕೆ ತರುವುದು ಅತಿಮುಖ್ಯವಾಗಿದೆ. ಹಾಗಾಗಿ ಈ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಂದು ಯೋಜನೆಯನ್ನ ಹಾಕಿಕೊಂಡಿದ್ದು, ಲೋಕಲ್ ಲಾಕ್‌ಡೌನ್ ಮಾಡುವುದಾಗಿ ಘೋಷಿಸಿದ್ದಾರೆ. ಹೌದು, ಕೊರೊನಾ ಸೋಂಕು ನಿಯಂತ್ರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯಿಂದ ಟ್ವೀಟ್ ಮಾಡಿದ್ದು, 1-2 ದಿನಗಳ ಲೋಕಲ್ ಲಾಕ್‌ಡೌನ್ ಮಾಡಲಾಗುವುದು ಎಂದಿದ್ದಾರೆ. ಈ ಲೋಕಲ್ ಲಾಕ್‌ಡೌನ್ ಕೊರೊನಾ ನಿಯಂತ್ರಿಸುವಲ್ಲಿ ಇದು ಎಷ್ಟು ಪ್ರಭಾವಶಾಲಿಯಾಗಲಿದೆ …
Read More »