Breaking News

Monthly Archives: ಸೆಪ್ಟೆಂಬರ್ 2020

ಶಾಸಕಾಂಗದ ಒಪ್ಪಿಗೆ ಪಡೆಯದೆ ನ್ಯಾಯಾಂಗ ಅಧಿಕಾರಿಗಳು ತಮ್ಮ ವೇತನ ತಾವೇ ಹೆಚ್ಚಿಸಿಕೊಂಡಿದ್ದಾರೆ

ಬೆಂಗಳೂರು : ‘ಶಾಸಕಾಂಗದ ಒಪ್ಪಿಗೆ ಪಡೆಯದೆ ನ್ಯಾಯಾಂಗ ಅಧಿಕಾರಿಗಳು ತಮ್ಮ ವೇತನ ತಾವೇ ಹೆಚ್ಚಿಸಿಕೊಂಡಿದ್ದಾರೆ. ನಂತರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಅಧಿಕಾರಿಗಳಿಗೆ ಅಂತಹ ಅಧಿಕಾರ ಕೊಟ್ಟವರಾರ‍ಯರು? ಸರ್ಕಾರ ಅಷ್ಟುಬಲಹೀನವಾಯಿತಾ?’ ಎಂದು ಜೆಡಿಎಸ್‌ ಸದಸ್ಯ ಎ.ಟಿ. ರಾಮಸ್ವಾಮಿ ಅವರು ಸರ್ಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡ ಘಟನೆ ವಿಧಾನಸಭೆಯಲ್ಲಿ ಮಂಗಳವಾರ ನಡೆಯಿತು. ಕೋವಿಡ್‌ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ‘ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿವೇತನಗಳು ಮತ್ತು ಭತ್ಯೆಗಳು ಹಾಗೂ ಕೆಲವು ಇತರೆ ಕಾನೂನು (ತಿದ್ದುಪಡಿ) …

Read More »

ಕರ್ನಾಟಕ ಬಂದ್ ವೇಳೆ ಏನಿರುತ್ತೆ? ಏನಿರಲ್ಲ?

  ಬೆಂಗಳೂರು: ವಿದ್ಯುತ್, ಭೂಸುಧಾರಣಾ ಕಾಯ್ದೆ ಸುಗ್ರೀವಾಜ್ಞೆ ವಿರೋಧಿಸಿ ಶುಕ್ರವಾರ ರೈತ ಸಂಘಟನೆಗಳು, ನಾರಾಯಣ ಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು ಸೇರಿದಂತೆ 32 ಕ್ಕೂ ಹೆಚ್ಚು ಸಂಘಟನೆಗಳು ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿವೆ ಎನ್ನಲಾಗಿದೆ. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ರೈತರು ಬಂದ್ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗುವ ಸಾಧ್ಯತೆ ಇದೆ. ಹಾಗಾದ್ರೆ ಕರ್ನಾಟಕ …

Read More »

ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ದಾಖಲಾದವರ ಸಂಪೂರ್ಣ ವೆಚ್ಚವನ್ನು ಸರಕಾರವೇ ಭರಿಸುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌

ಬೆಂಗಳೂರು : ಸರಕಾರದ ಮೂಲಕ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ದಾಖಲಾದವರ ಸಂಪೂರ್ಣ ವೆಚ್ಚವನ್ನು ಸರಕಾರವೇ ಭರಿಸುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ. ಕೋವಿಡ್ ಚಿಕಿತ್ಸೆ ಹೆಸರಿನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ನಿಯಮ 69ರ ಅಡಿ ಪ್ರಸ್ತಾಪಿಸಿದ ವಿಷಯಗಳಿಗೆ ಮಂಗಳವಾರ ಅವರು ಉತ್ತರ ನೀಡಿದರು. ಚರ್ಚೆ ವೇಳೆ ಜೆಡಿಎಸ್‌ ಶಾಸಕ ಶಿವಲಿಂಗೇಗೌಡ ಅವರು, ಕೊರೋನ ಚಿಕಿತ್ಸೆ ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚು …

Read More »

ಕೆಪಿಸಿಸಿ ವಕ್ತಾರರಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕ :ಡಿ ಕೆ ಶಿವಕುಮಾರ್ ಆದೇಶ

ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಆದೇಶ ಹೊರಡಿಸಿದ್ದಾರೆ. ಯಾವುದೇ ವಿಷಯವನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯ ಲಕ್ಷ್ಮಿ ಹೆಬ್ಬಾಳ್ಕರ್​ ಅವರಿಗಿದೆ. ಇದನ್ನು ಗಮನಿಸಿ ಅವರಿಗೆ ಈ ಮಹತ್ವದ ಹುದ್ದೆಯನ್ನು ನೀಡಲಾಗಿದೆ ಎಂದು ಡಿಕೆಶಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಮಾಧ್ಯಮಗಳಲ್ಲಿ ನಮ್ಮ ವಿಚಾರ, ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅಗತ್ಯವಾಗಿದೆ. ತಮಗಿರುವ ಅನುಭವ, ತಿಳುವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ …

Read More »

ಫಾದರ್‌ ಲೈಂಗಿಕ ಕಿರುಕುಳ: SP ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನ

ಕಲಬುರಗಿ: ಫಾದರ್​ನಿಂದ‌ ಲೈಂಗಿಕ ಕಿರುಕುಳ ಆರೋಪಿಸಿ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿ ನಗರದ ಪೊಲೀಸ್ ಕಮೀಷನರ್ ಕಚೇರಿ ಮುಂದೆ ನಡೆದಿದೆ. ಕಲಬುರಗಿ ನಗರದ ಸೆಂಟ್ ಮೇರಿ ಕ್ಯಾಥೆಡ್ರಲ್ ಚರ್ಚ್​ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಸಂತ್ರಸ್ತೆಗೆ ಚರ್ಚ್​ನ ಫಾದರ್​ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ಥೆಗೆ ಆರೋಪಿಸಿದ್ದಾರೆ. ಒಮ್ಮೆ ಚರ್ಚ್​ನ ಫಾದರ್ ಕ್ಲೀವನ್ ಎಂಬುವವರು ರೂಂ ಕ್ಲೀನ್ ಮಾಡಲು ಕರೆದು ಸಂತ್ರಸ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು …

Read More »

ಅಪಾರ್ಟ್‌ಮೆಂಟ್ ನಿರ್ಮಾಣಕ್ಕೆ ಕೋಟಿ ಕೋಟಿ ಲಂಚ -BSY ಕುಟುಂಬದ ವಿರುದ್ಧ KPCC ಗಂಭೀರ ಆರೋಪ

ಬೆಂಗಳೂರು: ಕೆಪಿಸಿಸಿ ಉಸ್ತುವಾರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಹಿರಿಯ ಕಾಂಗ್ರೆಸ್​ ನಾಯಕ ರಣದೀಪ್ ಸುರ್ಜೇವಾಲ ಸಿಎಂ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಉಸ್ತುವಾರಿ ವಹಿಸಿಕೊಂಡ ಹಿನ್ನೆಲೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಣದೀಪ್ ಸುರ್ಜೇವಾಲ ಸಿಎಂ BSY ಪುತ್ರ ವಿಜಯೇಂದ್ರ, ಮೊಮ್ಮಗ ಶಶಿಧರ್ ಮರಾಡಿ ಮತ್ತು ಅಳಿಯ ವಿರೂಪಾಕ್ಷರ ವಿರುದ್ಧ ಅಕ್ರಮವಾಗಿ ಹಣ ಸ್ವೀಕರಿಸಿರುವ ಆರೋಪ ಮಾಡಿದ್ದಾರೆ. ಮಹಾತ್ಮ ಗಾಂಧಿ ದುರಾಡಳಿತ …

Read More »

APMC ಕಾಯ್ದೆ ತರುವಾಗ ರೈತರ ಜತೆ ಚರ್ಚಿಸಿದ್ದಾರಾ? -HDK

ಬೆಂಗಳೂರು: ಎಪಿಎಂಸಿ ಕಾಯ್ದೆ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಎಪಿಎಂಸಿ ಕಾಯ್ದೆ ತರುವಾಗ ರೈತರ ಜತೆ ಚರ್ಚಿಸಿದ್ದಾರಾ? ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭವಿದು. ಈ ಸಮಯದಲ್ಲಿ ಸುಗ್ರೀವಾಜ್ಞೆಯ ಮೂಲಕ ಜಾರಿ ಏಕೆ? ತರಾತುರಿಯಲ್ಲಿ ಕಾಯ್ದೆ ಜಾರಿ ಮಾಡುವ ಅಗತ್ಯವೇನಿದೆ? ಮೇ ನಲ್ಲಿ ಸುಗ್ರೀವಾಜ್ಞೆ ತಂದಿದ್ದಾರೆ. ಇದಾದ ಬಳಿಕ ಸಾಕಷ್ಟು ಸಮಯಾವಕಾಶ ಇತ್ತು. ಯಾವ ವಿರೋಧ ಪಕ್ಷದವರನ್ನ ಕರೆದು ಇವರು …

Read More »

ರವಿಶಂಕರ್​​ನನ್ನು ಸಿಸಿಬಿ ಪೊಲೀಸರು ಬಂಧಿಸಿ ಮೊಬೈಲ್ ರಿಟ್ರೈವ್​ ಮಾಡಿದಾಗ ಡ್ರಗ್ಸ್ ಜತೆ ಆತ ಹವಾಲಾ ದಂಧೆ

ಬೆಂಗಳೂರು : ಸ್ಯಾಂಡಲ್​​​​​ವುಡ್​ಗೆ ಡ್ರಗ್ಸ್​ ಜಾಲ ನಂಟು ಆರೋಪ ಪ್ರಕರಣ ಸಂಬಂಧ ಸದ್ಯ ಬಂಧನವಾಗಿರೋ ಆರೋಪಿಗಳು ಕೇವಲ ಡ್ರಗ್ಸ್​ ಪೆಡ್ಲಿಂಗ್ ಮತ್ತು ಸೇವನೆ‌ ಅಷ್ಟೇ ಮಾಡುತ್ತಿರಲಿಲ್ಲ. ಇವರ ಜಾಲ ಕಂಡು ಸಿಸಿಬಿ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಆರೋಪಿ ರವಿಶಂಕರ್​​ನನ್ನು ಸಿಸಿಬಿ ಪೊಲೀಸರು ಬಂಧಿಸಿ ಮೊಬೈಲ್ ರಿಟ್ರೈವ್​ ಮಾಡಿದಾಗ ಡ್ರಗ್ಸ್ ಜತೆ ಆತ ಹವಾಲಾ ದಂಧೆಯಲ್ಲೂ ತೊಡಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ ಎನ್ನಲಾಗ್ತಿದೆ. 5, 10 ರೂಪಾಯಿ ನೋಟುಗಳನ್ನು ಹವಾಲಾಗೆ ಬಳಸಿ, ಲಕ್ಷಕ್ಕೆ ಕೆ.ಜಿ …

Read More »

ತುಂಗಭದ್ರಾ ನದಿ ಸೇತುವೆ ದಿಢೀರನೆ ಕುಸಿದು ಬಿದ್ದಿದ್ದೆ.

ಬಳ್ಳಾರಿ: ಜಿಲ್ಲೆಯ ಹೂವಿನಹಡಗಲಿ ಮದಗಲಟ್ಟಿ ಬಳಿಯಿರುವ ತುಂಗಭದ್ರಾ ನದಿಗೆ ಕಟ್ಟಲಾಗಿರುವ ಸೇತುವೆ ದಿಢೀರನೆ ಕುಸಿದು ಬಿದ್ದಿದ್ದು, ಸಂಭವಿಸುತ್ತಿದ್ದ ಭಾರೀ ಅನಾಹುತವೊಂದು ತಪ್ಪಿದೆ. ಇದು ಹಡಗಲಿ ಮತ್ತು ಗದಗ ಮಾರ್ಗ ಸಂಪರ್ಕಸುವ ರಸ್ತೆಯಾಗಿದ್ದು, 2002ರಲ್ಲಿ ನಿರ್ಮಾಣಗೊಂಡಿತ್ತು. ಸೇತುವೆ ಸಾಕಷ್ಟು ಶಿಥಿಲಾವಸ್ಥೆಯಲ್ಲಿದ್ದರೂ ಸಹ ಲೋಕೋಪಯೋಗಿ ಇಲಾಖೆ ಇತ್ತ ಗಮನಹರಿಸಿಲ್ಲ ಎನ್ನಲಾಗಿದೆ. ಸೇತುವೆಯ ನವೀಕರಣದ ಬಗ್ಗೆ ಅನೇಕ ಸಲ ದೂರು ಸಲ್ಲಿಸಿದ್ದರು ಸಹ ಅಧಿಕಾರಿಗಳು ಕ್ಯಾರೇ ಎಂದಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಒಂದೆಡೆ ತುಂಗಾಭದ್ರಾ …

Read More »

ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡದಿದ್ದಕ್ಕೆ ರಾಡ್​ನಿಂದ ಹಲ್ಲೆ!

ನೆಲಮಂಗಲ: ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡದ ಹಿನ್ನೆಲೆಯಲ್ಲಿ ಬಸ್ ಚಾಲಕನ ತಲೆಗೆ ರಾಡ್‌ನಿಂದ ಹಲ್ಲೆ ಮಾಡಿರುವ ಘಟನೆ ನೆಲಮಂಗಲ ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡಲಿಲ್ಲ ಎಂದು ಶೌಚಾಲಯ ನಿರ್ವಹಣೆ ಮಾಡುತ್ತಿದ್ದ ರಾಜೇಶ್‌ ಎಂಬಾತ ಬಸ್ ಚಾಲಕ ವೆಂಕಟೇಶ್ ಮೇಲೆ ರಾಡ್​ನಿಂದ ಹಲ್ಲೆ ಮಾಡಿದ್ದಾರೆ. ಗಾಯಾಳು ವೆಂಕಟೇಶ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. …

Read More »