ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಸಿ.ಅಶ್ವಥ್ ನಾರಾಯಣ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಸ್ವತಃ ಅವರೇ ಸ್ಪಷ್ಟಪಡಿಸಿದ್ದು, ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಮನವಿ …
Read More »Monthly Archives: ಸೆಪ್ಟೆಂಬರ್ 2020
ಸ್ಯಾಂಡಲ್‍ವುಡ್ ನಟನ ಮಗನಿಗೂ, ನಟಿಗೆ ಸಿಸಿಬಿ ನೋಟಿಸ್ ಸಾಧ್ಯತೆ…..?
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‍ವುಡ್ ಹಿರಿಯ ನಟರೊಬ್ಬರ ಮಗ ಮತ್ತು ಓರ್ವ ನಟಿಗೆ ಸಿಸಿಬಿ ನೋಟಿಸ್ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಇಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕರಾದ ಅಕುಲ್ ಬಾಲಾಜಿ, ಸಂತೋಷ್ ಕುಮಾರ್ ಮತ್ತು ಮಾಜಿ ಶಾಸಕ ಆರ್.ವಿ.ದೇವರಾಜ್ ಪುತ್ರ ಆರ್.ವಿ.ಯುವರಾಜ್ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಈ ಮೂವರ ವಿಚಾರಣೆ ಬಳಿಕ ನಟನ ಮಗನಿಗೆ ಸಿಸಿಬಿ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ ಎನ್ನಲಾಗಿದೆ. ನಟನ ಮಗ …
Read More »ಮನೆಗಳಿಗೆ ಮಳೆ ನೀರು ನುಗ್ಗಿ ಊಟಕ್ಕೂ ಪರದಾಟ
ರಾಯಚೂರು: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ ಜನ ಊಟಕ್ಕೂ ಪರದಾಡುವಂತ ಪರಸ್ಥಿತಿ ನಿರ್ಮಾಣವಾಗಿದೆ. ಮನೆಗಳಿಗೆ ನೀರು ನುಗ್ಗಿರುವ ರಾಯಚೂರು ನಗರದ ಜಹಿರಾಬಾದ್, ಸಿಯತಲಾಬ್ ಪ್ರದೇಶಗಳಲ್ಲಿ ತಾತ್ಕಾಲಿಕ ಪರಿಹಾರ ಕೇಂದ್ರ ತೆರೆದು ಊಟದ ವ್ಯವಸ್ಥೆ ಮಾಡಲಾಗಿದೆ. ಮನೆಯಲ್ಲಿನ ದವಸ ಧಾನ್ಯ ಹಾಗೂ ಎಲ್ಲಾ ವಸ್ತುಗಳು ನೀರುಪಾಲಾಗಿದ್ದರಿಂದ ಸಾರ್ವಜನಿಕರು ಪರದಾಡುತ್ತಿದ್ದಾರೆ. ನಿಧಾನಕ್ಕೆ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ತಗ್ಗು ಪ್ರದೇಶಗಳಲ್ಲಿರುವ ಮನೆಗಳೆಲ್ಲಾ ಸತತವಾಗಿ ಸುರಿದ ಮಳೆಯಿಂದ …
Read More »SCP/TSP ಯೋಜನೆಯಡಿ ಉಚಿತ ಲ್ಯಾಪ್‌ಟಾಪ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ವಿತರಿಸಿದರು.
ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ/ಪಂಗಡಗಳ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಉಚಿತ ಲ್ಯಾಪ್‌ಟಾಪ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ವಿತರಿಸಿದರು. ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಶನಿವಾರ(ಸೆ.19) ನಡೆದ ಸಮಾರಂಭದಲ್ಲಿ ಲ್ಯಾಪ್‌ಟಾಪ್ ಗಳನ್ನು ನೀಡಲಾಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ, ದಶಮಾನೋತ್ಸವದ ಸಂಭ್ರಮದಲ್ಲಿ ಇರುವ ಅಭಿವೃದ್ಧಿ ಕೆಲಸ ಭರದಿಂದ ನಡೆಯಲಿವೆ ಎಂದರು. ಭೌಗೋಳಿಕವಾಗಿ ಹಾಗೂ ಶೈಕ್ಷಣಿಕವಾಗಿ …
Read More »ಡ್ರಗ್ಸ್ ಕೇಸ್ – ನಟ ಸಂತೋಷ್, ಐಂದ್ರಿತಾ ಕಾಲೆಳೆದ ಪ್ರಶಾಂತ್ ಸಂಬರಗಿ
ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿಯವರು ಫೇಸ್‍ಬುಕ್ ಪೋಸ್ಟ್ ಹಾಕುವ ಮೂಲಕ ಡ್ರಗ್ಸ್ ಜಾಲಕ್ಕೆ ಸಂಬಂಧಿಸದಂತೆ ಸಿಸಿಬಿ ವಿಚಾರಣೆ ಎದುರಿಸುತ್ತಿರುವ ನಟಿ ಐಂದ್ರಿತಾ ರೈ ಮತ್ತು ನಟ ಸಂತೋಷ್ ಕುಮಾರ್ ಅವರ ಕಾಲೆಳೆದಿದ್ದಾರೆ. ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ವಿಚಾರದಲ್ಲಿ ಕನ್ನಡದ ಸ್ಟಾರ್ ನಟ-ನಟಿಯರು ಸಿಲುಕಿ ಹಾಕಿಕೊಂಡಿದ್ದಾರೆ. ಇಂದು ನಿರೂಪಕ ಅಕುಲ್ ಬಾಲಾಜಿ ಮತ್ತು ನಟ ಸಂತೋಷ್ ಕುಮಾರ್ ಅವರನ್ನು ಸಿಸಿಬಿ ವಿಚಾರಣೆ ಮಾಡಿದೆ. ಈಗಾಗಲೇ ಈ ಪ್ರಕರಣದಲ್ಲಿ ನಟಿ ರಾಗಿಣಿ …
Read More »ದಿಲ್ಲಿಯಿಂದಲೇ ಬ್ರೇಕಿಂಗ್ ನ್ಯೂಸ್ ಕೊಟ್ಟ ಬಿಎಸ್‌ವೈ, ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ
ನವದೆಹಲಿ : ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ದಿನದಿಂದ ದಿನಕ್ಕೆ ಭಾರೀ ಕುತೂಹಲ ಮೂಡಿಸುತ್ತಿದೆ. ಮತ್ತೊಂದೆಡೆ ಆಕಾಂಕ್ಷಿಗಳಂತೂ ತುದಿಗಾಲಲ್ಲಿ ನಿಂತಿದ್ದು, ಸಂಪುಟ ಸೇರ್ಪಡೆಯ ಅದೃಷ್ಟ ಯಾರಿಗೆ ಒಲಿಯುವುದೋ ಎಂಬ ತವಕದಲ್ಲಿದ್ದಾರೆ. ಈ ನಡುವೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನವದೆಹಲಿಗೆ ತೆರಳಿ ವರಿಷ್ಠರ ಜತೆ ಸಂಪುಟ ವಿಸ್ತರಣೆ ಕುರಿತ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಇಂದು (ಶನಿವಾರ) ಸಂಜೆ ಬಿಗ್ ಬ್ರೇಕಿಂಗ್ ನ್ಯೂಸ್ ಕೊಡುವ ಸುಳಿವು ಸಹ ಕೊಟ್ಟಿದ್ದು, ರಾಜ್ಯ ಬಿಜೆಪಿಯಲ್ಲಿ ಸಂಚಲನ …
Read More »ಬ್ರೇಕಿಂಗ್ : ದೆಹಲಿಯಿಂದ ಬೆಂಗಳೂರಿಗೆ ಸಿಎಂ ಯಡಿಯೂರಪ್ಪ ವಾಪಾಸ್ : ಸದ್ಯದಲ್ಲೇ ಸಂಪುಟ ವಿಸ್ತರಣೆ.?
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಸೇರಿದಂತೆ ಕೇಂದ್ರದ ಬಿಜೆಪಿ ವರಿಷ್ಠರ ಭೇಟಿಯ ಬಳಿಕ, ದೆಹಲಿಯಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರಿಗೆ ಹಿಂದಿರುಗಿದ್ದಾರೆ. ಹೀಗಾಗಿ ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗುತ್ತಾ ಎನ್ನುವ ಕುತೂಲಹ ಮೂಡಿಸಿದೆ. BIG BREAKING : ಮುಂದಿನವಾರ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲು …
Read More »ʼಆಕೆ ಸಂಜನಾ ಗಿಲ್ರಾನಿ ಅಲ್ಲ ಮಾಹಿರಾʼ: ನಟಿಮಣಿಯ ಬುರ್ಕಾವತಾರ ಬಯಲು..!
ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿರುವ ನಟಿ ‘ಸಂಜನಾ ಗಲ್ರಾನಿʼ ಬಗ್ಗೆ ಮತ್ತೊಂದು ಹೊಸ ವಿಷ್ಯ ಬಹಿರಂಗವಾಗಿದ್ದು, ಸಮಾಜೀಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಆಕೆ ಸಂಜನಾ ಗಿಲ್ರಾನಿ ಅಲ್ಲ ಮಹಿರಾ ಎಂದು ಹೇಳಿದ್ದಾರೆ. ಹೌದು, ಪ್ರಶಾಂತ್ ಸಂಬರಗಿ ಈ ಕುರಿತು ಪೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದು, ‘ ಸಂಜನಾ ಮುಸ್ಲಿಂ ಧರ್ಮಕ್ಕೆ 2018ರಲ್ಲಿ ಮತಾಂತರಗೊಂಡಿದ್ದಾರೆ. ಈಗ ಅವರ ಹೊಸ ಹೆಸರು ಮಾಹಿರಾ. ನಮ್ಮ ಕರ್ನಾಟಕದಲ್ಲಿ ಲವ್ …
Read More »ಸುರತ್ಕಲ್: ತಡೆಗೋಡೆ ಕುಸಿದು ಕಾರ್ಮಿಕ ಸಾವು, ಇಬ್ಬರು ಅಪಾಯದಿಂದ ಪಾರು
ಸುರತ್ಕಲ್: ತಡೆಗೋಡೆಯೊಂದು ಬಿದ್ದ ಪರಿಣಾಮ ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ಇಬ್ಬರು ಕಾರ್ಮಿಕರು ಅಪಾಯದಿಂದ ಪಾರಾದ ಘಟನೆ ಕೂಳೂರಿನಲ್ಲಿ ಶನಿವಾರ ಸಂಭವಿಸಿದೆ. ಮೃತ ವ್ಯಕ್ತಿಯನ್ನು ನೀರುಮಾರ್ಗ ನಿವಾಸಿ ಉಮೇಶ (38) ಎಂದು ಗುರುತಿಸಲಾಗಿದೆ. ಉಳಿದ ಇಬ್ಬರು ಕಾರ್ಮಿಕರಾದ ಬಸವರಾಜ್ ಹಾಗೂ ನಾರಾಯಣ ಎನ್ನಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದ ಇಲ್ಲಿನ ನಿವಾಸಿ ಜಗದೀಶ್ ಎನ್ನುವವರ ಮನೆಯ ಕೆಲಸ ನಡೆಯುತಿದ್ದ ಸಂದರ್ಭ ಕಲ್ಲಿನಿಂದ ಕಟ್ಟಿದ ತಡೆಗೋಡೆ ಕುಸಿದು …
Read More »ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ತೀರ್ಮಾನ: ರಮೇಶ್ ಜಾರಕಿಹೊಳಿ
ಬೆಳಗಾವಿ: ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದ್ದು ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಜೊತೆ ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಹೇಳಿದರು. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ (Ramesh Jarakiholi) ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದರು. ಪತ್ರಿಕಾಗೋಷ್ಠಿ ಪ್ರಮುಖಾಂಶಗಳು ಹೀಗಿವೆ. ನದಿ ಪಾತ್ರದ ತೆರವು ಕುರಿತು ಮಹತ್ವದ ಮೊದಲ ಸಭೆ ಇಂದು ಆಯೋಜಿಸಲಾಗಿದೆ. * ಮಲಪ್ರಭಾ, ಘಟಪ್ರಭಾ, ಬಳ್ಳಾರಿ …
Read More »