ಕೋಲಾರ: ಜಿಲ್ಲೆಯ ಕೆಜಿಎಫ್ ನಗರದಲ್ಲಿ ವೈನ್ ಶಾಪ್ ಸೀಲ್ ಮಾಡಲು ಬಂದ ಅಬಕಾರಿ ಅಧಿಕಾರಿಗಳು, ತಪ್ಪಾಗಿ ಸ್ವೀಟ್ ಸ್ಟಾಲ್ ಸೀಲ್ ಮಾಡಿ ಯಡವಟ್ಟು ಮಾಡಿದ್ದಾರೆ. ಇಂದು ಗಾಂಧಿಜಯಂತಿಯ ಪ್ರಯುಕ್ತ ಅಬಕಾರಿ ಅಧಿಕಾರಿಗಳು ನಗರದ ಎಲ್ಲಾ ವೈನ್ಶಾಪ್ಗಳನ್ನು ಸೀಲ್ ಮಾಡಲು ಮುಂದಾಗಿದ್ದರು. ಈ ವೇಳೆ ತಿರುಮಲ ವೈನ್ ಅಂಗಡಿನ್ನು ಸೀಲ್ ಮಾಡುವ ವೇಳೆ ಎಡವಟ್ಟಾಗಿದೆ ಅದರ ಬದಲಾಗಿ ಶಮ ಸ್ಟೀಟ್ ಸ್ಟಾಲ್ ಅನ್ನು ಸೀಲ್ ಮಾಡಲಾಗಿದೆ.
Read More »Daily Archives: ಅಕ್ಟೋಬರ್ 2, 2020
ಬಾಗಲಕೋಟೆ ಜಿಲ್ಲೆಯಲ್ಲಿ ಮಾಸ್ಕ್ ಧರಿಸದವರಿಗೆ ಬರೋಬ್ಬರಿ 23.55 ಲಕ್ಷ ದಂಡ
ಬಾಗಲಕೋಟೆ: ಕೋವಿಡ್ ಅನ್ಲಾಕ್ ಆರಂಭವಾದ ಬಳಿಕ ಮಾಸ್ಕ್ ಹಾಕಿಕೊಳ್ಳದೆ ಬೇಜವಾಬ್ದಾರಿಯಿಂದ ಓಡಾಡುವವರಿಗೆ ಬಾಗಲಕೋಟೆ ಜಿಲ್ಲೆಯಲ್ಲಿ ಪೊಲೀಸರು ದಂಡದ ಬಿಸಿ ಮುಟ್ಟಿಸಿದರೂ ಇನ್ನೂ ಜನ ಬುದ್ಧಿ ಕಲಿಯುತ್ತಿಲ್ಲ. ಆರಂಭದ ಅನ್ಲಾಕ್ನಿಂದ ಸೆಪ್ಟೆಂಬರ್ ಮಾಸಾಂತ್ಯದವರೆಗೆ ಬಾಗಲಕೋಟೆ ಜಿಲ್ಲೆಯಲ್ಲಿ ಮಾಸ್ಕ್ ಧರಿಸದವರಿಗೆ ಬರೋಬ್ಬರಿ 23.55 ಲಕ್ಷ ದಂಡ ವಿಧಿಸಿದ್ದಾರೆ. ಆದರೂ ಜನರು ಇನ್ನೂ ಮಾಸ್ಕ್ ಹಾಕಿಕೊಳ್ಳದೆ ಕೊರೋನಾ ನಿಯಮ ಉಲ್ಲಂಘಿಸುತ್ತಿದ್ದಾರೆ. ಇದರಿಂದ ಬಾಗಲಕೋಟೆ ಜಿಲ್ಲೆಯಲ್ಲಿ ನಿತ್ಯ ನೂರಾರು ಹೊಸ ಕೇಸ್ಗಳು ಪತ್ತೆಯಾಗುತ್ತಿವೆ. ಬಾಗಲಕೋಟೆ ಜಿಲ್ಲೆಯಲ್ಲಿ …
Read More »ಕೈಮುಗಿದು ಕಣ್ಣೀರು ಹಾಕಿದ ಅನುಶ್ರೀ
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ನಿರೂಪಕಿ ಅನುಶ್ರೀ ಸಿಸಿಬಿ ಪೊಲೀಸರ ವಿಚಾರಣೆ ಎದುರಿಸಿದ್ದಾರೆ. ಸಂಜನಾ ಮೇಲೆ ಆರೋಪಗಳ ಸುರಿಮಳೆ ಮಾಡಿದ್ದ ವಕೀಲ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅನುಶ್ರೆಈ ವಿಚಾರದಲ್ಲಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ‘ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ನಟಿ ಹಾಗೂ ನಿರೂಪಕಿ ಅನುಶ್ರೀ ಬಂಧನವಾಗದಂತೆ ಆಕೆಯ ರಕ್ಷಣೆಗೆ ಶುಗರ್ ಡ್ಯಾಡಿಯೊಬ್ಬರು ನಿಂತಿದ್ದಾರೆ’ ಎಂದು ವಕೀಲ ಪ್ರಶಾಂತ್ ಸಂಬರಗಿ ಟ್ವೀಟ್ ಮಾಡಿರುವುದು ಸುದ್ದಿ ಸ್ಫೋಟಕ್ಕೆ ಕಾರಣವಾಗಿದೆ. ಕೈಮುಗಿದು …
Read More »ರಾಜ್ಯದಲ್ಲಿ ಇಂದು 8793 ಜನರಿಗೆ ಕೊರೋನಾ ಸೋಂಕು
ಬೆಂಗಳೂರು: ರಾಜ್ಯದಲ್ಲಿ ಇಂದು 8793 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 6,20,630 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 7094 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ 4,99,506 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು 1,11,986 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 125 ಮಂದಿ ಮೃತಪಟ್ಟಿದ್ದು ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9119 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇವತ್ತು …
Read More »ಆರ್. ಆರ್ ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುವುದು ಕುತೂಹಲ
ಬೆಂಗಳೂರು: ನವೆಂಬರ್ 3 ರಂದು ನಡೆಯಲಿರುವ ಆರ್. ಆರ್ ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುವುದು ಕುತೂಹಲ ಕೆರಳಿಸಿದೆ. ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಪ್ರ್ಲಾನ್‌ನಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಇಂದು ಹಿರಿಯ ನಾಯಕರು ಸಭೆ ನಡೆಸಿದ್ದಾರೆ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಚೆಲುವರಾಯಸ್ವಾಮಿ ಭಾಗಿಯಾಗಿದ್ದಾರೆ. ಅದಲ್ಲದೆ …
Read More »ಬೆಳಗಾವಿ ನಗರವನ್ನೇ ಬೆಚ್ಚಿ ಬೀಳಿಸಿದ ಜೋಡಿ ಕೊಲೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ.
ಬೆಳಗಾವಿ: ಬೆಳಗಾವಿ ನಗರವನ್ನೇ ಬೆಚ್ಚಿ ಬೀಳಿಸಿದ ಜೋಡಿ ಕೊಲೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಎರಡು ಕೊಲೆಯ ಹಿಂದಿದೆ ಡಬಲ್ ಪ್ರೇಮ್ ಕಹಾನಿ. ಹಣಕೊಟ್ಟು ಹೆಣ ಕೆಡವಲು ಯೋಜನೆ ರೂಪಿಸಿದ್ದ ಪಾಪಿ ಹೆಣ್ಣು ಹಾಗೂ ಸಹೋದರ ಮತ್ತು ಆತನ ಸ್ನೇಹಿತರು ಈಗ ಬಂಧಿತರಾಗಿದ್ದಾರೆ. ಈ ಪ್ರಕರಣವನ್ನು ಐದೇ ದಿನದಲ್ಲಿ ಬೆಳಗಾವಿ ಪೊಲೀಸರು ಭೇದಿಸಿದ್ದು, ಮಚ್ಚೆ ಗ್ರಾಮದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ಸೆಪ್ಟೆಂಬರ್.26 ರಂದು …
Read More »ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿ ‘ಕಾಂಗ್ರೆಸ್ ಭವನ’ವನ್ನು ಉದ್ಘಾಟನೆ
ಬೆಳಗಾವಿ: ಇಲ್ಲಿನ ಸಂಗೊಳ್ಳಿರಾಯಣ್ಣ ವೃತ್ತದ ಸಮೀಪ ನಿರ್ಮಿಸಿರುವ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿ ‘ಕಾಂಗ್ರೆಸ್ ಭವನ’ವನ್ನು ಶುಕ್ರವಾರ ಉದ್ಘಾಟಿಸಲಾಯಿತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಈಶ್ವರ್ ಖಂಡ್ರೆ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ, ಡಾ.ಅಂಜಲಿ ನಿಂಬಾಳ್ಕರ್, ಗಣೇಶ ಹುಕ್ಕೇರಿ, ಮಹಾಂತೇಶ ಕೌಜಲಗಿ, ಮುಖಂಡರಾದ ಐ.ಜಿ. ಸನದಿ, ವೀರಣ್ಣ ಮತ್ತಿಕಟ್ಟಿ, ಫಿರೋಜ್ …
Read More »‘ಮಹಾತ್ಮ ಗಾಂಧೀಜಿ ಅವರ ಚಿಂತನೆ, ವಿಚಾರವೇ ಕಾಂಗ್ರೆಸ್ ತತ್ವ
ಬೆಳಗಾವಿ : ‘ಮಹಾತ್ಮ ಗಾಂಧೀಜಿ ಅವರ ಚಿಂತನೆ, ವಿಚಾರವೇ ಕಾಂಗ್ರೆಸ್ ತತ್ವ. ಅವರ ಮಾರ್ಗದರ್ಶನವನ್ನು ನಾವು ಬಳಸಿಕೊಂಡು ಇಂದು ಈ ದೇಶದ ಐಕ್ಯತೆ, ಸಮಗ್ರತೆ ಹಾಗೂ ಶಾಂತಿಯನ್ನು ಕಾಪಾಡಬೇಕಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇಲ್ಲಿನ ಸೇವಾದಳ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಮಹಾತ್ಮ ಗಾಂಧೀಜಿ ಅವರ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿ.ಕೆ ಶಿವಕುಮಾರ್ ಅವರು ಗಾಂಧಿಜಿ ಅವರ ಕೊಡುಗೆಯನ್ನು ಸ್ಮರಿಸುತ್ತಾ ದೇಶದ ರಕ್ಷಣೆಗಾಗಿ ಪಕ್ಷದ ಕಾರ್ಯಕರ್ತರು …
Read More »ಯೋಗಿಯೋ ಅಥವಾ ರೋಗಿಯೋ ಎನ್ನುವುದು ನಮಗೆ ತಿಳಿಯುತ್ತಿಲ್ಲ : ಸಿದ್ದರಾಮಯ್ಯ
ಬೆಳಗಾವಿ: ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು ಉತ್ತರ ಪ್ರದೇಶದ ಹತ್ರಾಸ್‍ಗೆ ತೆರಳುತ್ತಿದ್ದ ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಅವರನ್ನು ಪೊಲೀಸರು ಯುಪಿ ಸಿಎಂ ಸೂಚನೆಯಂತೆ ತಡೆಯುವ ಮೂಲಕ ಸರ್ವಾಧಿಕಾರಿ ಧೋರಣೆ ಅನುಸರಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಶುಕ್ರವಾರ ಬೆಳಗಾವಿ ಕಾಂಗ್ರೆಸ್ ಕಚೇರಿ ಉದ್ಘಾಟನೆಗೆ ಆಗಮಿಸಿದ ಸಂದರ್ಭದಲ್ಲಿ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ …
Read More »ಈ ಸರ್ಕಾರಗಳು ಯಾವಾಗ ಇರುತ್ತೋ, ಯಾವಾಗ ಹೋಗುತ್ತೋ ಗೊತ್ತಿಲ್ಲ ಎಂದು ಆರಣ್ಯ ಸಚಿವ ಆನಂದ್ ಸಿಂಗ್ ಅಚ್ಚರಿ
ಬಳ್ಳಾರಿ: ಈ ಸರ್ಕಾರಗಳು ಯಾವಾಗ ಇರುತ್ತೋ, ಯಾವಾಗ ಹೋಗುತ್ತೋ ಗೊತ್ತಿಲ್ಲ ಎಂದು ಆರಣ್ಯ ಸಚಿವ ಆನಂದ್ ಸಿಂಗ್ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ. ಬಳ್ಳಾರಿಯ ಹೊಸಪೇಟೆ ತಾಲೂಕಿನ ಕಮಾಲಾಪುರದ ಅಟಲ್ ಬಿಹಾರಿ ವಾಜಪೇಯಿ ಝೂನಲ್ಲಿ 66ನೇ ವನ್ಯ ಜೀವಿ ಸಂರಕ್ಷಣಾ ಸಪ್ತಾಹದ ಅಂಗವಾಗಿ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಸಪ್ತಾಹದಲ್ಲಿ ಪಾಲ್ಗೊಂಡಿರುವ ಎಲ್ಲಾ ಅಧಿಕಾರಿಗಳಿಗೆ ಹಾಗೇ ಅರಣ್ಯ ರಕ್ಷಣೆ ಮಾಡುವಂತಹ ಎಲ್ಲಾ ಯುವಕರಾಗಿರಲಿ, ನಾವೆಲ್ಲರೂ ಇವತ್ತಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೀವಿ. ಇವತ್ತು …
Read More »