https://www.facebook.com/105350550949710/videos/756737581723043/?sfnsn=wiwspmo ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಮುಖಂಡರು ದೀಪ ಹಾಗೂ ಮೊಬೈಲ್ ಟಾರ್ಚ್ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಬಾಲಕಿ ಮನಿಷಾ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ದೇಶದಾದ್ಯಂತ ಭಾರೀ ಆಕ್ರೋಶ ಉಂಟಾಗಿದೆ. ಆದ್ರೂ ಕೂಡ ಉತ್ತರ ಪ್ರದೇಶ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ, ಸಂತ್ರಸ್ತ ಬಾಲಕಿ ಕುಟುಂಬಸ್ಥರ ಧ್ವನಿ ಅಡಗಿಸುವ ಕೆಲಸಗಳು …
Read More »Daily Archives: ಅಕ್ಟೋಬರ್ 4, 2020
ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ
ಬಾಗಲಕೋಟೆ: ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಜಿಲ್ಲೆಯ ಮುಧೋಳ ನಗರದಲ್ಲಿ ಇಂದು(ಭಾನುವಾರ) ನಡೆದಿದೆ. ಆನಂದ್ (23), ಅಕ್ಷತಾ (15) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳಾಗಿದ್ದಾರೆ. ಮೃತ ಪ್ರೇಮಿಗಳು ಮೂಲತಃ ಬಾಗಲಕೊಟೆ ಜಿಲ್ಲೆಯ ಮುಧೋಳ ತಾಲೂಕಿನ ಬರಗಿ ಗ್ರಾಮದವರು ಎಂದು ತಿಳಿದು ಬಂದಿದೆ. ಆನಂದ್ ಹಾಗೂ ಅಕ್ಷತಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಅಂತರ್ಜಾತಿ ಹಿನ್ನೆಲೆ ಮನೆಯಲ್ಲಿ ಪ್ರೀತಿಗೆ ಒಪ್ಪುವುದಿಲ್ಲ ಎಂದು ಮನನೊಂದು ಪ್ರೇಮಿಗಳು ಆತ್ಮಹತ್ಯೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ …
Read More »ಬೆಳಗಾವಿಯಲ್ಲಿ ಇನ್ನು ಆರಂಭವಾಗಿಲ್ಲ ಪ್ರವಾಹ ಪರಿಹಾರ ವಿತರಣೆ
ಬೆಳಗಾವಿ: ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಉಂಟಾದ ಪ್ರವಾಹ ಮತ್ತು ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ಸರ್ಕಾರದಿಂದ ಮೊದಲ ಹಂತದ ಪರಿಹಾರ ವಿತರಣೆ ಕಾರ್ಯ ಇನ್ನೂ ಆರಂಭವಾಗಿಲ್ಲ. ಹೋದ ವರ್ಷದ ಹಿಂದೆಂದೂ ಕಂಡರಿಯದ ರೀತಿಯಲ್ಲಿ ನೆರೆ ಮತ್ತು ಅತಿವೃಷ್ಟಿ ಆಗಿತ್ತು. ಈ ಬಾರಿಯೂ ಜಿಲ್ಲೆಯು ‘ನೆರೆಪೀಡಿತ’ ಎಂಬ ಪಟ್ಟಿಗೆ ಸೇರ್ಪಡೆಯಾಗಿದೆ. ನೂರಾರು ಮಂದಿ ಮನೆಗಳನ್ನು ಕಳೆದುಕೊಂಡಿದ್ದಾರೆ. ಸಾವಿರಾರು ಕೃಷಿಕರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲಾಗಲಿಲ್ಲ. ನೆರೆಯು ಗಾಯದ ಮೇಲೆ ‘ಬರೆ’ ಎಳೆದಿದ್ದು, ಜನರು ಪರಿಹಾರದ ‘ಮುಲಾಮಿಗಾಗಿ’ ಕಾಯುತ್ತಿದ್ದಾರೆ. …
Read More »ಸೂಕ್ಷ್ಮ ಪ್ರದೇಶಗಳ ಫೋಟೋಗಳನ್ನು ಪಾಕಿಸ್ತಾನದ ವಾಟ್ಸ್ಆಯಪ್ ಗ್ರೂಪಿಗೆ ರವಾನಿಸಿದಾತನನ್ನು ಪೊಲೀಸರು ಬಂಧಿಸಿದ್ದಾರೆ.
ನಾಶಿಕ್: ಮಹಾರಾಷ್ಟ್ರದ ನಾಶಿಕ್ ಜಿಲ್ಲೆಯ ದೇವಲಾಲಿಯಲ್ಲಿರುವ ರಕ್ಷಣಾ ವಸತಿ ಸಮುಚ್ಚಯ, ಸೈನಿಕ ತರಬೇತಿ ಶಾಲೆ ಮುಂತಾದ ಸೂಕ್ಷ್ಮ ಪ್ರದೇಶಗಳ ಫೋಟೋಗಳನ್ನು ಪಾಕಿಸ್ತಾನದ ವಾಟ್ಸ್ಆಯಪ್ ಗ್ರೂಪಿಗೆ ರವಾನಿಸಿದಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ 21 ವರ್ಷದವನಾಗಿದ್ದು ಸಂಜೀವ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಶುಕ್ರವಾರ ಸೇನಾ ಪ್ರದೇಶದೊಳಗೆ ಫೋಟೋಗ್ರಫಿ, ವಿಡಿಯೋಗ್ರಫಿ ನಿಷೇಧಿತ ಪ್ರದೇಶಕ್ಕೆ ತೆರಳಿ ತನ್ನ ಮೊಬೈಲ್ ಮೂಲಕ ಫೋಟೋ ಕ್ಲಿಕ್ಕಿಸಿದ್ದ, ಅಲ್ಲದೆ ವಿಡಿಯೋಗಳನ್ನೂ ಮಾಡಿದ್ದ. ಇದೇ ವೇಳೆ ಅಲ್ಲಿದ್ದ ಸೈನಿಕರು ಈತನ ಚಲನವಲನ …
Read More »ಧರ್ಮಸ್ಥಳ ಭಕ್ತರಿಗೆ ಹೆಗಡೆಯವರಿಂದ ಗುಡ್ ನ್ಯೂಸ್
ಧರ್ಮಸ್ಥಳ : ಮುಂದಿನ ವರ್ಷದಿಂದ ಆನ್‌ಲೈನ್ ಮೂಲಕ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ ನೀಡಲಾಗುವುದು ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಪ್ರಕಟಿಸಿದ್ದಾರೆ. ಧರ್ಮಸ್ಥಳದಲ್ಲಿ ಶನಿವಾರ ಕರ್ನಾಟಕ ಭಜನಾ ಪರಿಷತ್ ನೇತೃತ್ವದಲ್ಲಿ ಆಯೋಜಿಸಿದ ಪ್ರಾರ್ಥನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಧರ್ಮಸ್ಥಳದಲ್ಲಿ ದೇವರ ಅಪ್ಪಣೆ ಪಡೆದು ಜಾತ್ರೆ ಹಾಗೂ ಎಲ್ಲ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಲಾಗುತ್ತದೆ. ಈ ವರ್ಷ ಭಜನಾ ತರಬೇತಿ ಕಮ್ಮಟದ ಬದಲು ಸಾಂಕೇತಿಕವಾಗಿ ಒಂದು ದಿನದ ಪ್ರಾರ್ಥನಾ ಸಮಾವೇಶ …
Read More »ರೈಸ್ ಪುಲ್ಲಿಂಗ್ ಸಾಮಗ್ರಿಗಳನ್ನು ತೋರಿಸಿ ವಂಚನೆ ಮಾಡುತ್ತಿದ್ದ ಐವರನ್ನು ಮೈಸೂರು ದೇವರಾಜ ಪೊಲೀಸರು ಬಂಧಿಸಿದ್ದಾರೆ.
ಮೈಸೂರು: ರೈಸ್ ಪುಲ್ಲಿಂಗ್ ಸಾಮಗ್ರಿಗಳನ್ನು ತೋರಿಸಿ ವಂಚನೆ ಮಾಡುತ್ತಿದ್ದ ಐವರನ್ನು ಮೈಸೂರು ದೇವರಾಜ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡಿನ ಚಂದ್ರಮೋಹನ್(57), ಕೇರಳದ ಟಿ.ವಿ.ಇಬ್ರಾಹಿಂ (50), ಬೆಂಗಳೂರಿನ ಕೆ.ಆರ್.ಗಿರಿನಾಥನ್(49), ಎಂ.ಗೋಪಿ(40),ಚಾಮರಾಜನಗರದ ಇರ್ಷದ್ ಖಾನ್ ಎಂದು ಗುರುತಿಸಲಾಗಿದೆ. ಮೈಸೂರಿನ ಹೋಟೆಲೊಂದರಲ್ಲಿ ಕುಳಿತು ಬಕ್ರಗಳಿಗಾಗಿ ಹುಡುಕಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಖದೀಮರನ್ನು ಬಂಧಿಸಿದ್ದಾರೆ.ಶ್ರೀಮಂತರನ್ನ ಟಾರ್ಗೆಟ್ ಮಾಡಿದ್ದ ಇವರು, ಮತ್ತಷ್ಟು ಶ್ರೀಮಂತರಾಗಬಹುದು, ಭೂಮಿ ಖರೀದಿಸಲು ಅನುಕೂಲವಾಗುತ್ತದೆ ಎಂದು ಇನ್ನಿಲ್ಲದ ಆಸೆ …
Read More »ಲಂಚ ಪಡೆಯುತ್ತಿದ್ದ ಕಾರಾಗ್ರಹದ ಸಿಬ್ಬಂದಿ ರೆಡ್ ಹ್ಯಾಂಡ್ ಆಗಿಯೇ ಎಸಿಬಿ ಅಧಿಕಾರಿಗಳ ಬಲೆ
ಬೆಂಗಳೂರು: ಪರಪ್ಪನ ಅಗ್ರಹಾರದ ಜೈಲಧಿಕಾರಿಗಳ ಲಂಚಾವತಾರ ಮತ್ತೊಮ್ಮೆ ಬಯಲಾಗಿದೆ. ಅಪರಾಧಿಯೊಬ್ಬನ ಪೆರೋಲ್ ವಿಚಾರವಾಗಿ ಲಂಚ ಪಡೆಯುತ್ತಿದ್ದ ಕಾರಾಗ್ರಹದ ಸಿಬ್ಬಂದಿ ರೆಡ್ ಹ್ಯಾಂಡ್ ಆಗಿಯೇ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ತುಮಕೂರು ಮೂಲದ ಅಪರಾಧಿಯೊಬ್ಬರಿಗೆ 14 ವರ್ಷ ಜೈಲು ಶಿಕ್ಷೆ ನೀಡಿ ಸೆಷೆನ್ಸ್ ನ್ಯಾಯಾಲಯ ತೀರ್ಪು ನೀಡಿತ್ತುಇತ್ತೀಚೆಗೆ ಈ ವ್ಯಕ್ತಿ ಪೆರೋಲ್ ಕೋರಿ ಕೇಂದ್ರ ಕಾರಾಗೃಹಕ್ಕೆ ಅರ್ಜಿ ಹಾಕಿದ್ದರು ಎನ್ನಲಾಗಿದೆ. ಈ ವೇಳೆ ಕಾರಾಗೃಹದ ಅಧೀಕ್ಷಕ ಜಯರಾಮ್ …
Read More »ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರಿಗೂ ಕೊರೋನಾ ಸೋಂಕು
ಮುಂಬೈ: ಬಾಹುಬಲಿ ಖ್ಯಾತಿಯ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರಿಗೂ ಕೊರೋನಾ ಸೋಂಕು ಒಕ್ಕರಿಸಿದ್ದು, ಪ್ರಸ್ತುತ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಯುಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ಕೆಲವು ದಿನಗಳ ಹಿಂದೆ ತಮನ್ನಾ ಅವರ ತಂದೆ ತಾಯಿಗಳಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಕಾರಣ ತಮನ್ನಾ ತಮ್ಮ ಕುಟುಂಬ ಹಾಗೂ ಎಲ್ಲ ಸಿಬ್ಬಂದಿಗೆ ಕೊರೊನಾ ಪರೀಕ್ಷೆ ಮಾಡಿಸಿದ್ದರು. ಈ ಪರೀಕ್ಷೆಯಲ್ಲಿ ತಂದೆ ತಾಯಿಗೆ ಪಾಸಿಟಿವ್ …
Read More »ಮೇಘನಾ ರಾಜ್ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು.
ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿ.ಚಿರಂಜೀವಿ ಸರ್ಜಾ ಪತ್ನಿ, ನಟಿ ಮೇಘನಾರಾಜ್ ತುಂಬು ಗರ್ಭಿಣಿಯಾಗಿದ್ದು, ಇಂದು ಅವರ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮನೆಯವರು ಸರಳವಾಗಿ ಸೀಮಂತ ಕಾರ್ಯಕ್ರಮ ನೆರವೇರಿಸಿದ್ದಾರೆ. ಕುಟುಂಬದವರು, ಆಪ್ತರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪತಿ ಚಿರು ಅಗಲಿಕೆ ನೋವಿನಲ್ಲಿರುವ ಮೇಘನಾ, ಚಿರಂಜೀವಿ ಸರ್ಜಾ ಅವರ ದೊಡ್ಡ ಕಟೌಟ್ ಇಟ್ಟು ಅದರ ಮುಂದೆಯೇ ಕುಳಿತು ಸೀಮಂತ ಮಾಡಿಸಿಕೊಂಡಿದ್ದಾರೆ.
Read More »ಸಂಪುಟ ವಿಸ್ತರಣೆ ; ಮುಖ್ಯಮಂತ್ರಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ – ಸಚಿವ ರಮೇಶ್ ಜಾರಕಿಹೊಳಿ.
ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ. ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಕೂಡ ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ. ಸಂಪುಟ ವಿಸ್ತರಣೆ …
Read More »