ಗೋಕಾಕ : ಕೊರೊನಾ ಸೋಂಕು ನಿಯಂತ್ರಿಸಲು ಜನರು ಮಾಸ್ಕ್, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು 12ನೇ ಅಧಿಕ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶ ವಿಜಯಕುಮಾರ ಎಂ.ಎ. ಹೇಳಿದರು. ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾ ಆರೋಗ್ಯ ಇಲಾಖೆ, ತಾಲೂಕಾಡಳಿತ, ಶಿಕ್ಷಣ ಇಲಾಖೆ ಹಾಗೂ ಎಸ್‍ಎಲ್‍ಜೆ ಕಾನೂನು ಕಾಲೇಜ್ ಸಹಯೋಗದಲ್ಲಿ ನಡೆದ ಕೊರೊನಾ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಕೋವಿಡ್ ನಿಯಂತ್ರಿಸುವ …
Read More »Daily Archives: ಅಕ್ಟೋಬರ್ 14, 2020
ವೀರಮದಕರಿ ನಾಯಕನ ಪ್ರತಿಮೆಯನ್ನು ಸ್ಥಾಪನೆ ಮಾಡಬೇಕು:ಪ್ರಸನ್ನಾನಂದ ಸ್ವಾಮೀಜಿ
ಕಣಬರಗಿ : ಬೆಳಗಾವಿ ಆರ್.ಪಿ.ಡಿ ವೃತ್ತದಲ್ಲಿ ವೀರಮದಕರಿ ನಾಯಕನ ಪ್ರತಿಮೆಯನ್ನು ಸ್ಥಾಪನೆ ಮಾಡಬೇಕು ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ. ಕಣಬರಗಿಯ ವಾಲ್ಮೀಕಿ ನೌಕರರ ಭವನದಲ್ಲಿ ಇಂದು ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಮೋಘಲರ ದಾಳಿಯನ್ನು ಸಮರ್ಥವಾಗಿ ನಿಭಾಯಿಸಿದ ಮಹಾನ್ ನಾಯಕ ವೀರಮದಕರಿ. ಅಂತಹ ದಿಮಂತ ನಾಯಕನ ಪ್ರತಿಮೆ ಸ್ಥಾಪನೆ ಮಾಡಬೇಕಾಗಿದೆ ಎಂದರು. ಬೆಳಗಾವಿ ನಗರದಲ್ಲಿ ಈಗಾಗಲೇ ಪ್ರತಿಮೆ ಸ್ಥಾಪನೆಗೆ ಒತ್ತಾಯಿಸಿ ಕರ್ನಾಟಕ …
Read More »ರಾಯಬಾಗ ತಾಲ್ಲಕಿನ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ವಿರುದ್ಧ ಕೋವಿಡ್ ನಿರ್ವಹಣೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ ಆರೋಪ
ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲ್ಲಕಿನ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ವಿರುದ್ಧ ಕೋವಿಡ್ ನಿರ್ವಹಣೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ ಆರೋಪ ಕೇಳಿ ಬಂದಿದ್ದು, ತಹಶೀಲ್ದಾರ್ ವಿಚಾರಣೆ ಆರಂಭವಾಗಿದೆ. ಕೋವಿಡ್ ನಿರ್ವಹಣೆಯ 1.49 ಕೋಟಿ ಅನುದಾನವನ್ನು ತಮ್ಮ ಸ್ವಂತ ಖಾತೆಗೆ ತಹಶೀಲ್ದಾರ್ ವರ್ಗಾಯಿಸಿಕೊಂಡು ದುರ್ಬಳಕೆ ಮಾಡಿದ್ದಾರೆ ಎಂದು ಕುಡಚಿ ಶಾಸಕ ಪಿ.ರಾಜೀವ್ ವಿಧಾನಮಂಡಲ ಅಧಿವೇಶನದಲ್ಲಿ ಆರೋಪಿಸಿದ್ದರು. ಕೆಲ ಸಂಘಟನೆಗಳು ತನಿಖೆಗೆ ಜಿಲ್ಲಾಧಿಕಾರಿಗೆ ಒತ್ತಾಯಿಸಿ, ಮನವಿ ಸಲ್ಲಿಸಿದ್ದರು. ಇದರಿಂದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ …
Read More »ಕೊರೊನಾ ಸೋಂಕಿನಿಂದ ಮೃತಪಟ್ಟ ಸಾರಿಗೆ ಇಲಾಖೆ ಸಿಬ್ಬಂದಿ ಕುಟುಂಬಕ್ಕೆ ತಲಾ 30 ಲಕ್ಷ ರೂಪಾಯಿ ಪರಿಹಾರ:ಲಕ್ಷ್ಮಣ ಸವದಿ
ಬೆಳಗಾವಿ : ಕೊರೊನಾ ಸೋಂಕಿನಿಂದ ಮೃತಪಟ್ಟ ಸಾರಿಗೆ ಇಲಾಖೆ ಸಿಬ್ಬಂದಿ ಕುಟುಂಬಕ್ಕೆ ತಲಾ 30 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಸಾರಿಗೆ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಕೊರೊನಾದಿಂದ ಸಾರಿಗೆ ಇಲಾಖೆ ಮೂರು ಸಾವಿರ ಕೋಟಿಗೂ ಅಧಿಕ ನಷ್ಟ ಅನುಭವಿಸುತ್ತಿದೆ. ಇದರಿಂದ ಸಾರಿಗೆ ಇಲಾಖೆಯ ಸಿಬ್ಬಂದಿಯ ವೇತನ ವಿಳಂಬವಾಗುತ್ತಿದೆ. ಸದ್ಯ ಸಾರಿಗೆ ಇಲಾಖೆಯಲ್ಲಿ 1 ಲಕ್ಷ 30 ಸಾವಿರ ಸಿಬ್ಬಂದಿ …
Read More »ವಿದ್ಯಾರ್ಥಿನಿ ಕಣ್ಣೀರಿಗೆ ಮಿಡಿದ ಸಚಿವ- ಸರ್ಕಾರವೇ ಭರಿಸಲಿದೆ ಶಿಕ್ಷಕಿಯ ಚಿಕಿತ್ಸಾ ವೆಚ್ಚ
ಬೆಂಗಳೂರು: ಮೂಡಬಿದಿರೆ ತಾಲೂಕಿನ ಶಿರ್ತಾಡಿಯ ಶಿಕ್ಷಕಿ ಎನ್. ಪದ್ಮಾಕ್ಷಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ಹಾಗೂ ಅದರ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಶಿಕ್ಷಕ ದಂಪತಿಗೆ ಕೊರೊನಾ ಸೋಂಕು ತಗುಲಿದೆ ಎಂಬ ವರದಿಗಳನ್ನು ಗಮನಿಸಿದ ತಕ್ಷಣವೇ ಸಚಿವರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರೊಂದಿಗೆ ದೂರವಾಣಿಯಲ್ಲಿ ಚರ್ಚಿಸಿದ್ದಾರೆ. ಅಲ್ಲದೆ ಶಿಕ್ಷಕಿಗೆ ಉತ್ತಮ ಚಿಕಿತ್ಸೆ ನೀಡಲು …
Read More »ಸತ್ತಿದ್ದಾರೆಂದು ಫ್ರೀಜರ್ ಬಾಕ್ಸಿನಲ್ಲಿಟ್ಟ ಕುಟುಂಬಸ್ಥರು – ಬೆಳಗ್ಗೆ ಉಸಿರಾಡುತ್ತಿದ್ದ ವೃದ್
ಚೆನ್ನೈ: ಸತ್ತಿದ್ದಾರೆ ಎಂದು ರಾತ್ರಿ ಪೂರ್ತಿ ಫ್ರೀಜರ್ ಬಾಕ್ಸಿನಲ್ಲಿಟ್ಟ 74 ವರ್ಷದ ವೃದ್ಧರೊಬ್ಬರು ಬೆಳಗ್ಗೆ ಆ ಪೆಟ್ಟಿಗೆಯೊಳಗೆ ಉಸಿರಾಡುತ್ತಿರುವ ವಿಚಿತ್ರ ಘಟನೆ ತಮಿಳುನಾಡಿ ಸೇಲಂನಲ್ಲಿ ನಡೆದಿದೆ. ತಮಿಳುನಾಡಿನ ಸೇಲಂ ಜಿಲ್ಲೆಯ ಕಂಧಂಪತ್ತಿಯ ನಿವಾಸಿ 74 ವರ್ಷದ ವೃದ್ಧ ಬಾಲಸುಬ್ರಹ್ಮಣ್ಯ ಕುಮಾರ್ ಒಂದು ರಾತ್ರಿ ಪೆಟ್ಟಿಗೆಯಲ್ಲಿದ್ದ ವೃದ್ಧ ಎಂದು ಗುರತಿಸಲಾಗಿದೆ. ಸದ್ಯ ಅವರನ್ನು ಪೊಲೀಸರು ರಕ್ಷಿಸಿದ್ದು, ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಕೊಡಿಸಿದ್ದಾರೆ. ಬಾಲಸುಬ್ರಹ್ಮಣ್ಯ ಕುಮಾರ್ 70 ವರ್ಷದ ಕಿರಿಯ ಸಹೋದರ …
Read More »ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುತ್ತಾರಾ ಕೆ.ಎಚ್ ಮುನಿಯಪ್ಪ?
ಕೋಲಾರ: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ರಾಜಕಾರಣದತ್ತ ಗಮನ ಹರಿಸುವಂತೆ ಕೆಪಿಸಿಸಿ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು ಅಭಿಮತ ವ್ಯಕ್ತಪಡಿಸಿದ್ದಾರೆ ಎಂದು ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಹೇಳಿದ್ರು. ಕೋಲಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು ಜೊತೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲವೆಂದು ಸ್ಪಷ್ಟಪಡಿಸಿದ್ರು. ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ …
Read More »ಕೊರೊನಾ ನಡುವೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಬೆಂಗಳೂರು: ಕೊರೊನಾ ನಡುವೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ವರ್ಷದ ದೀಪಾವಳಿ ಹಬ್ಬಕ್ಕೆ ಕೊರೊನಾ ಕಾರ್ಮೋಡ ಕವಿದಿದೆ. ರಾಜ್ಯದಲ್ಲಿ ಕೊರೊನಾ ಅಬ್ಬರದ ನಡುವೆ ಸರಳವಾಗಿ ಹಬ್ಬ ಮಾಡಲು ರಾಜ್ಯ ಸರ್ಕಾರ 10 ನಿಯಮಗಳಿರುವ ಒಂದು ಮಾರ್ಗಸೂಚಿಯನ್ನು ಹೊರಡಿಸಿದೆ. 10 ನಿಯಮಗಳು 1. ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ ಮಾಡತಕ್ಕದ್ದು. 2. ಪಟಾಕಿ ಮಾರಾಟದ ಮಳಿಗೆಗಳನ್ನು …
Read More »ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸರಿಗೆ ಬಹುಮಾನ………..
ಬೆಂಗಳೂರು, ಅ.14- ಉತ್ತಮ ಕರ್ತವ್ಯ ನಿರ್ವಹಿಸಿ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ್ ಅಕಾರಿ ಮತ್ತು ಸಿಬ್ಬಂದಿಗಳನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದ್ದಾರೆ. ನಕಲಿ ಛಾಪಾ ಕಾಗದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಸುವಲ್ಲಿ ಯಶಸ್ವಿಯಾದ ಎಸ್‍ಜೆ ಪಾರ್ಕ್ ಪೊಲೀಸರ ತಂಡಕ್ಕೆ 50 ಸಾವಿರ ನಗದು ನೀಡಿದರೆ, ಅತ್ಯಾಚಾರಿಯನ್ನು ಬಂಸಿದ ಶ್ರೀರಾಮಪುರ ಪೆÇಲೀಸರ ತಂಡಕ್ಕೆ 1 ಲಕ್ಷ ರೂ. ನಗದು …
Read More »ಎರಡು ಅಫ್ಘಾನ್ ಸೇನೆಯ ಹೆಲಿಕಾಪ್ಟರ್‍ಗಳು ಅಪಘಾತಕ್ಕೀಡಾಗಿ ಸುಮಾರು 15 ಮಂದಿ ಸಾವನ್ನಪ್ಪಿರುವ ಘಟನೆ
ಅಫ್ಘಾನಿಸ್ತಾನ,ಅ.14- ಎರಡು ಅಫ್ಘಾನ್ ಸೇನೆಯ ಹೆಲಿಕಾಪ್ಟರ್‍ಗಳು ಅಪಘಾತಕ್ಕೀಡಾಗಿ ಸುಮಾರು 15 ಮಂದಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಹೆಲ್ಮಾಂಡ್ ಪ್ರಾಂತ್ಯದಲ್ಲಿ ನಡೆದಿದೆ. ಪ್ರಾಂತೀಯ ರಾಜಧಾನಿ ಲಷ್ಕರ್ ಗಹ್‍ನ ನೈರುತ್ಯ ದಿಕ್ಕಿನಲ್ಲಿರುವ ನಾವಾ-ಎ-ಬರಾಕಜಾಯಿ ಜಿಲ್ಲೆಯಲ್ಲಿ ಮಧ್ಯರಾತ್ರಿ ಈ ದುರ್ಘಟನೆ ಸಂಭವಿಸಿದೆ. ಸುಮಾರು 15 ಮಂದಿ ಸಾವನ್ನಪ್ಪಿರಬಹುದೆಂದು ಎಂದು ತಿಳಿದುಬಂದಿದೆ.ಇದಕ್ಕೂ ಮುನ್ನ ಸೆಪ್ಟೆಂಬರ್ 24 ರಂದು ಉತ್ತರ ಬಾಗ್ಲಾನ್ ಪ್ರಾಂತ್ಯದಲ್ಲಿ ಅಫಘಾನ್ ವಾಯುಪಡೆಯ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ತಾಂತ್ರಿಕ ದೋಷದಿಂದಾಗಿ ಇಬ್ಬರು ಪೈಲಟ್‍ಗಳು ಸಾವನ್ನಪ್ಪಿದ್ದರು.
Read More »