Breaking News

Daily Archives: ಅಕ್ಟೋಬರ್ 14, 2020

ಇಂದು ಇಬ್ಬರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಿರೀಕ್ಷೆಯಂತೆ ಮಾಜಿ ಶಾಸಕ ಮುನಿರತ್ನ ನಾಯ್ಡುಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇನ್ನು ಶಿರಾದಿಂದ ಮಾಜಿ ಸಂಸದ ಮೂಡಲಗಿರಿಯಪ್ಪ ಪುತ್ರ ಡಾ.ರಾಜೇಶ್ ಗೌಡಗೂ ಟಿಕೆಟ್ ನೀಡಲಾಗಿದೆ.  ಇಬ್ಬರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬಿ ಫಾರಂ ನೀಡಲಿದ್ದಾರೆ. ಇಂದು ಸುಪ್ರೀಂಕೋಟ್9 ನಲ್ಲಿ …

Read More »

ವರ್ಷಗಳ ಬಳಿಕ ತುಂಬಿದ ಕೆರೆ- ರೈತರ ಮೊಗದಲ್ಲಿ ಮಂದಹಾಸ

ಚಿಕ್ಕಮಗಳೂರು: ಕಳೆದ 15 ವರ್ಷಗಳಿಂದ ನೀರೇ ಇಲ್ಲದ ಮಕ್ಕಳ ಆಟದ ಮೈದಾನವಾಗಿದ್ದ ಬೃಹತ್ ಕೆರೆಗೆ ನೀರು ಹರಿದು ಬರುತ್ತಿದ್ದು ಚಿಕ್ಕಮಗಳೂರು ತಾಲೂಕಿನ ಬೆಳವಾಡಿ, ಕಳಸಾಪುರ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ತಾಲೂಕಿಣ ಬೆಳವಾಡಿಯ ಬೃಹತ್ ಕೆರೆಗೆ ನೀರು ಬಂದಿದ್ದು, ರೈತರಿಗೆ ಮರುಳುಗಾಡಲ್ಲಿ ಓಯಾಸಿಸ್ ಸಿಕ್ಕಂತಾಗಿದ್ದು, ಸ್ಥಳೀಯರ ಪಾಲಿಗೆ ಈ ಕೆರೆ ಪ್ರವಾಸಿ ತಾಣವಾಗಿದೆ. ತಾಲೂಕಿನ ಬೆಳವಾಡಿ, ಕಳಸಾಪುರ ಸೇರಿದಂತೆ ಈ ಭಾಗದ ಹತ್ತಾರು ಹಳ್ಳಿಗಳು …

Read More »

14 ತಿಂಗಳ ಬಳಿಕ ಮೆಹಬೂಬಾ ಮುಫ್ತಿ ಬಿಡುಗಡೆ,ಕೇಂದ್ರದ ನಿರ್ಧಾರ ಕ್ರೂರ ಎಂದು ಕಿಡಿ

ಶ್ರೀನಗರ: ಜಮ್ಮು ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಮುಖ್ಯಸ್ಥೆ, ಮಾಜಿ ಸಿಎಂ ಮೆಹಬೂಬಾ ಮುಫ್ತಿಯರನ್ನು ಗೃಹಬಂಧನದಿಂದ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 5ರಂದು 370ನೇ ವಿಧಿ ರದ್ದುಪಡಿಸಿದ ಬಳಿಕ ಮುಫ್ತಿ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು.ಬಿಡುಗಡೆಯಾಗುತ್ತಿದ್ದಂತೆ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಮೆಹಬೂಬಾ ಮುಫ್ತಿ ಕಿಡಿ ಕಾರಿದ್ದಾರೆ. ಪೂರ್ತಿ ಕಪ್ಪು ಬಣ್ಣದ ವಿಡಿಯೋವನ್ನು ಹಂಚಿಕೊಂಡಿರುವ ಅವರು, ಆಡಿಯೋ ಮೆಸೇಜ್ ಮೂಲಕ ಕಿಡಿಕಾರಿದ್ದಾರೆ. ಒಂದೂ ವರ್ಷಕ್ಕೂ ಹೆಚ್ಚು ಕಾಲ ಅಂದರೆ …

Read More »

ಮಳೆರಾಯ ರುದ್ರನರ್ತನಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ.

ಬೆಂಗಳೂರು: ಕೊರೊನಾ ಮಧ್ಯೆ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಅಲ್ಲದೇ ಸಾಕಷ್ಟು ಅವಾಂತರ ಸೃಷ್ಟಿಸಿದ್ದಾನೆ. ಮಳೆರಾಯ ರುದ್ರನರ್ತನಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ. ರಾಜ್ಯದಲ್ಲಿ ಮಹಾ ಮಳೆ ಮುಂದುವರಿದಿದ್ದು, ಇದು ಇಲ್ಲಿಗೆ ನಿಲ್ಲೋ ಲಕ್ಷಣಗಳು ಕಾಣುತ್ತಿಲ್ಲ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ರಾಜ್ಯದ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು ಜನ ತತ್ತರಿಸಿ ಹೋಗಿದ್ದಾರೆ.ಕೊರೊನಾದಿಂದ ಈಗಾಗಲೇ ಜನ …

Read More »

ನಿವೃತ್ತ ಐಪಿಎಸ್‌ ಅಧಿಕಾರಿ ಬಿಎನ್ ಎಸ್ ರೆಡ್ಡಿ ವಿರುದ್ಧ ಎಫ್‌ಐಆರ್‌

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಬಿಎನ್ಎಸ್ ರೆಡ್ಡಿ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಇಂದಿರಾನಗರ ಕ್ಲಬ್ ನಲ್ಲಿ ನಿಯಮ ಉಲ್ಲಂಘನೆ ಮಾಡಿ ಹಣವನ್ನು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಕ್ಲಬ್‌ ಸದಸ್ಯ ರಾಮ್ ಮೋಹನ್ ಕೋರ್ಟ್‌ಗೆ ದೂರು ನೀಡಿದ್ದರು.ಕೋರ್ಟ್‌ ನಿರ್ದೇಶನದಂತೆ ಈಗ ಬಿಎನ್‌ಎಸ್‌ ರೆಡ್ಡಿ ಮತ್ತು ನಾಗೇಂದ್ರ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಐಪಿಸಿ ಸೆಕ್ಷನ್‌ 120 ,418, 465, 471, 420,468, 417ರ ಅಡಿ ಪ್ರಕರಣ ದಾಖಲಾಗಿದೆ.ದೂರಿನಲ್ಲಿ …

Read More »

ರಾಜ್ಯದ ನಗರಗಳ ಹವಾಮಾನ ವರದಿ: 14-10-2020

ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ. ಇನ್ನುಳಿದಂತೆ ಹಲವೆಡೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. …

Read More »