ಬೆಂಗಳೂರು: ಕಳೆದ ಐದಾರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಇದರಿಂದ ಜನರು ಮನೆ-ಮಠ ಕಳೆದುಕೊಂಡು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಆದ್ರೆ, ಈ ಬಗ್ಗೆ ಕೇಂದ್ರ ಸರ್ಕಾರವಾಗಲಿ ಅಥವಾ ರಾಜ್ಯ ಸರ್ಕಾರವಾಗಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಇದರಿಂದ ಆಕ್ರೋಶಗಳ ವ್ಯಕ್ತವಾಗತ್ತಿವೆ. ಅದರಲ್ಲೂ ಆಂಧ್ರಪ್ರದೇಶ ಮತ್ತು ತೆಲಂಗಾಣದ ಪ್ರವಾಹದ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಬಗ್ಗೆ …
Read More »Daily Archives: ಅಕ್ಟೋಬರ್ 16, 2020
ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಯುವತಿ : ಬೆಂಕಿ ಹಚ್ಚಿಕೊಂಡು ಮೃತಪಟ್ಟಿದ್ದಾಳೆ
ಲಖನೌ: ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಯುವತಿಯೊಬ್ಬಳು ನ್ಯಾಯಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಕೋರಿ ಬೆಂಕಿ ಹಚ್ಚಿಕೊಂಡು ಮೃತಪಟ್ಟಿದ್ದಾಳೆ. ಗಂಡನ ಮನೆಯವರು ಕೊಡುವ ಹಿಂಸೆಯನ್ನು ಸಹಿಸಲಾರದೇ ಉತ್ತರ ಪ್ರದೇಶದ ವಿಧಾನಸಭಾ ಕಟ್ಟಡದ ಎದುರೇ ಮೊನ್ನೆ ಬೆಂಕಿಹಚ್ಚಿಕೊಂಡಿದ್ದ ಈ ಯುವತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ. ಅಂಜನಾ ತಿವಾರಿ ಅಲಿಯಾಸ್ ಆಯೇಷಾ ಈ ದುರ್ದೈವಿ. ಗಂಡನ ಮನೆಯವರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದರಿಂದ ಮುಖ್ಯಮಂತ್ರಿಗಳನ್ನೇ ಭೇಟಿ …
Read More »ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ಮಳೆ ಕ್ಷೀಣಿಸಿದೆ.
ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ಮಳೆ ಕ್ಷೀಣಿಸಿದೆ. ನಗರದಲ್ಲಿ ಗುರುವಾರ ರಾತ್ರಿಯಿಂದ ಜಿಟಿಜಿಟಿ ಮಳೆ ಬಿದ್ದಿತು. ಬೆಳಿಗ್ಗೆಯಿಂದಲೂ ಆಗಾಗ ಸಾಧಾರಣ ಮಳೆಯಾಗುತ್ತಿದೆ. ಚಿಕ್ಕೋಡಿ ತಾಲ್ಲೂಕಿನಲ್ಲಿ ಗುರುವಾರ ರಾತ್ರಿಯಿಂದ ಮಳೆ ಪ್ರಮಾಣ ಗಣನೀಯವಾಗಿ ಕ್ಷೀಣಿಸಿದೆ. ಆದರೆ, ಮಹಾರಾಷ್ಟ್ರದಿಂದ ಕೃಷ್ಣಾ ಮತ್ತು ಉಪ ನದಿಗಳಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಮಾತ್ರ ನಿರಂತರ ಏರಿಕೆ ದಾಖಲಾಗುತ್ತಿದೆ. ಶುಕ್ರವಾರ ಬೆಳಿಗ್ಗೆ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 1.04 ಲಕ್ಷ ಮತ್ತು ದೂಧ್‌ಗಂಗಾ ನದಿಯಿಂದ 15,135 ಕ್ಯುಸೆಕ್ ಸೇರಿದಂತೆ …
Read More »25 ಸಾವಿರ ಕೋಟಿ ಪ್ಯಾಕೇಜ್ ಘೋಷಿಸಬೇಕು’ ಎಂದು ಕನ್ನಡ ಚಳವಳಿ ವಾಟಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್
ಬೆಳಗಾವಿ: ‘ಕಲ್ಯಾಣ ಹಾಗೂ ಮುಂಬೈ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಖುದ್ದು ವೀಕ್ಷಿಸಬೇಕು ಮತ್ತು ಸಂತ್ರಸ್ತರ ನೆರವಿಗೆ ₹ 25 ಸಾವಿರ ಕೋಟಿ ಪ್ಯಾಕೇಜ್ ಘೋಷಿಸಬೇಕು’ ಎಂದು ಕನ್ನಡ ಚಳವಳಿ ವಾಟಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಒತ್ತಾಯಿಸಿದರು. ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ‘ಪ್ರವಾಹ ಹಾಗೂ ಅತಿವೃಷ್ಟಿಯಿಂದಾಗಿ ಭಾರಿ ಹಾನಿಯಾಗಿದೆ. ಆದರೆ, …
Read More »HD ದೇವೇಗೌಡ ಸೇತುವೆ ಮುಳುಗಡೆ: ಅಲ್ಲೇ ವಾಷಿಂಗ್, ಕ್ಲೀನಿಂಗ್, ಸ್ವಿಮ್ಮಿಂಗ್, ಡ್ಯಾನ್ಸಿಂಗ್!
ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಬಳಿಯಿರುವ ದೇವೇಗೌಡ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಹಾಗಾಗಿ, ಶೂರ್ಪಾಲಿ ಮತ್ತು ಜಮಖಂಡಿ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ಅಚ್ಚರಿಯ ಸಂಗತಿಯೆಂದರೆ ಸೇತುವೆ ಮೇಲೆ ಅಪಾರ ಪ್ರಮಾಣದಲ್ಲಿ ಹರಿಯುತ್ತಿರುವ ನೀರಿನಲ್ಲೇ ಸ್ಥಳೀಯರು ತಮ್ಮ ವಾಹನಗಳನ್ನು ತೊಳೆಯುತ್ತಿದ್ದಾರೆ. ಅಷ್ಟೇ ಅಲ್ಲ, ಮಹಿಳೆಯರು ಬಟ್ಟೆ ಒಗೆಯುತ್ತಿರುವುದು ಹಾಗೂ ಮಕ್ಕಳು ನೀರಲ್ಲಿ ಈಜುತ್ತಾ ಕುಣಿದು ಕುಪ್ಪಳಿಸುತ್ತಿರುವ ದೃಶ್ಯಗಳು ಸಹ ಕಂಡುಬಂದಿವೆ. HD …
Read More »ಕಳಪೆ ಕಾಮಗಾರಿ: ಸೇತುವೆ ಮುಳುಗಡೆಯಾಗದಿದ್ರೂ ವಾಹನ ಸಂಚಾರ ಬಂದ್
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಸೇತುವೆ ಮುಳುಗಡೆಯಾಗದಿದ್ದರೂ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಸೇತುವೆ ಮೇಲೆ ವಾಹನ ಸಂಚಾರ ಬಂದ್ ಮಾಡಲಾಗಿದೆ. ಅಚ್ಚರಿಯ ಸಂಗತಿಯೆಂದರೆ, ಭೀಮಾ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದು 2 ವರ್ಷಗಳ ಹಿಂದಷ್ಟೆ ಉದ್ಘಾಟನೆಯಾಗಿದ್ದ ಸೇತುವೆಯ ಗುಣಮಟ್ಟ ಕಳಪೆಯಾಗಿರುವ ಆರೋಪ ಕೇಳಬಂದಿದೆ. ಹೀಗಾಗಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿಲ್ಲವೆಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ನಿನ್ನೆಯಿಂದಲೇ ಸೇತುವೆಯ ಮೇಲೆ ವಾಹನ ಸಂಚಾರ ಸ್ಥಗಿತವಾಗಿದ್ದ ಹಿನ್ನೆಲೆಯಲ್ಲಿ ಕಲಬುರಗಿ ಬೆಂಗಳೂರು …
Read More »ಪದವೀಧರ ಕ್ಷೇತ್ರಗಳಿಗೆ ಚುನಾವಣೆ: 118 ಬಂದೂಕು, ಪಿಸ್ತೂಲ್ ಪೊಲೀಸರ ವಶಕ್ಕೆ
ಹುಬ್ಬಳ್ಳಿ: ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಹಿನ್ನೆಲೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ವ್ಯಾಪ್ತಿಯಲ್ಲಿ ಲೈಸನ್ಸ್ ಹೊಂದಿರುವ ಸಾರ್ವಜನಿಕರ ಬಂದೂಕು ಮತ್ತು ಪಿಸ್ತೂಲ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 118 ಬಂದೂಕು ಮತ್ತು ಪಿಸ್ತೂಲ್ಗಳನ್ನು ಮಾಲೀಕರು ಪೊಲೀಸರ ವಶಕ್ಕೆ ನೀಡಿದ್ದಾರೆ. ಚುನಾವಣೆ ಫಲುತಾಂಶದ ಬಳಿಕ ಮಾಲೀಕರುಗಳಿಗೆ ಅದನ್ನು ಮರಳಿ ಹಸ್ತಾಂತರ ಮಾಡಲಾಗುತ್ತದೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ …
Read More »ಪ್ರವಾಹ ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿ- 12 ಜಿಲ್ಲಾಧಿಕಾರಿಗಳಿಗೆ CM ಸೂಚನೆ
ಬೆಂಗಳೂರು: ಪ್ರವಾಹದಿಂದ ಹಾನಿಗೊಳಗಾದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವೀಡಿಯೋ ಸಂವಾದ ನಡೆಸಿದರು. ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ರೂ. 85.49 ಕೋಟಿ ರೂ.ಗಳನ್ನು ತುರ್ತು ಪರಿಹಾರಕ್ಕಾಗಿ ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ರಕ್ಷಣಾ ಕಾರ್ಯಗಳಿಗೆ ಅಗತ್ಯವಿರುವ ಸಂಪನ್ಮೂಲಗಳನ್ನು ಈಗಾಗಲೇ ಜಿಲ್ಲಾಡಳಿತಗಳಿಗೆ ಒದಗಿಸಲಾಗಿದೆ. ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ಸನ್ನದ್ಧರಾಗುವಂತೆ ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ …
Read More »ಬೆಳೆ ನಾಶದಿಂದ ಬೇಸತ್ತು ನದಿ ಪಾಲಾಗ್ತೀವಿ ಅಂತಾ ಮರವೇರಿದ ತಾಯಿ-ಮಗ, ಮುಂದೇನಾಯ್ತು?
ವಿಜಯಪುರ: ಬೆಳೆ ನಾಶದಿಂದ ಬೇಸತ್ತು ತಾಯಿ ಮತ್ತು ಆಕೆಯ ಮಗ ಮರವೇರಿದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಿಂಗಣಿ ಗ್ರಾಮದಲ್ಲಿ ನಡೆದಿದೆ. ಬೆಳೆ ನಾಶದಿಂದ ಮನನೊಂದಿದ್ದ ತಾಯಿ ಹಾಗೂ ಮಗನನ್ನು ರಕ್ಷಣೆ ಮಾಡಲಾಗಿದೆ. ಭೀಮಾ ನದಿ ಪ್ರವಾಹಕ್ಕೆ ಸಿಲುಕಿ ತಮ್ಮ ಜಮೀನಿನಲ್ಲಿದ್ದ ಬಾಳೆ ಹಾಗೂ ಕಬ್ಬು ಬೆಳೆ ಹಾಳಾದ ಕಾರಣ ತನ್ನ 110 ವರ್ಷದ ತಾಯಿ ನೀಲಮ್ಮಳ ಜೊತೆ ಶಿವಮಲಪ್ಪ ಕೋಳಿ ಮರವೇರಿ ಕುಳಿತಿದ್ದ. ಇಡೀ ಬೆಳೆ ಹಾಳಾಗಿದೆ. ನಮ್ಮನ್ನ ರಕ್ಷಣೆ …
Read More »ಚಿನ್ನದ ಸರ ಬಿಡಲಿಲ್ಲವೆಂದು.. ಅತ್ಯಾಚಾರ ಎಸಗಿ, ಬೆಂಕಿ ಹಚ್ಚಿ ಕೊಲೆಗೈದ ಪಾಪಿ ಸೆರೆ
ದಕ್ಷಿಣ ಕನ್ನಡ: ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಆಕೆಯನ್ನು ಹತ್ಯೆಗೈದಿದ್ದ ವ್ಯಕ್ತಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಕೇರಳದ ಕಾಸರಗೋಡು ನಿವಾಸಿಯಾದ ಆರೋಪಿ ಅಶ್ರಫ್(30) ಬಂಧನವಾಗಿದೆ. ಸೆಪ್ಟಂಬರ್ 25ರಂದು ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದಲ್ಲಿ ಕಳ್ಳತನಕ್ಕಾಗಿ ಬಂದಿದ್ದ ಆರೋಪಿ ಒಂಟಿಯಾಗಿ ವಾಸವಿದ್ದ ಕುಸುಮಾ(53) ಮೇಲೆ ಅತ್ಯಾಚಾರವೆಸಗಿ, ನಂತರ ಬೆಂಕಿ ಹಚ್ಚಿ ಕೊಲೆಗೈದಿದ್ದ. ಕುಸುಮಾರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿಯಲು ಯತ್ನಿಸಿ ವಿಫಲನಾಗಿದ್ದ ಅಶ್ರಫ್ ಅದೇ ಸಿಟ್ಟಿನಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ …
Read More »