Breaking News

Daily Archives: ಅಕ್ಟೋಬರ್ 24, 2020

ಆರ್.ಎಂ.ಪಿ ವೈದ್ಯ ಮಾಡಿದ ನಿರ್ಲಕ್ಷತೆ ಹಾಗೂ ಎಡವಟ್ಟಿನಿಂದ ಬಾಲಕ ತನ್ನ ಎರಡು ಕಣ್ಣನ್ನು ಕಳೆದುಕೊಳ್ಳುವಂತಾಗಿದೆ.

ಶಿವಮೊಗ್ಗ: ನಗುನಗುತ್ತಾ ಎಲ್ಲ ಮಕ್ಕಳಂತೆ ಆಡಿ, ಕುಣಿದು ಬೆಳೆಯಬೇಕಿದ್ದ ಮಗು ಇದೀಗ ತಂದೆಯನ್ನು ಬಿಟ್ಟು ಇರದಂತಹ ಸ್ಥಿತಿಗೆ ಬಂದಿದೆ. ಆರ್.ಎಂ.ಪಿ ವೈದ್ಯ ಮಾಡಿದ ನಿರ್ಲಕ್ಷತೆ ಹಾಗೂ ಎಡವಟ್ಟಿನಿಂದ ಬಾಲಕ ತನ್ನ ಎರಡು ಕಣ್ಣನ್ನು ಕಳೆದುಕೊಳ್ಳುವಂತಾಗಿದೆ. ಸೊರಬ ತಾಲೂಕಿನ ಚಿಟ್ಟೂರು ಗ್ರಾಮದ ನಿವಾಸಿ ಗಿರೀಶ್ ಅವರ ಪುತ್ರ ಶರತ್ ಹುಟ್ಟಿದಾಗ ಎಲ್ಲರಂತೆ ಕಣ್ಣು ಚೆನ್ನಾಗಿಯೇ ಇತ್ತು. ಎಲ್ಲರ ಜೊತೆ ಆಡಿ ಕುಣಿದು ನಲಿಯುತ್ತಿದ್ದ. ಆದರೆ ಇದೀಗ ತಂದೆಯ ಆಶ್ರಯ ಇದ್ದರೆ ಮಾತ್ರ …

Read More »

ಉತ್ತರ ಕರ್ನಾಟಕದ ಬಳಿಕ ರಣ ಮಳೆ ಈಗ ಬೆಂಗಳೂರನ್ನು ಅಟಕಾಯಿಸಿಕೊಂಡಿದೆ.

ಬೆಂಗಳೂರು: ಉತ್ತರ ಕರ್ನಾಟಕದ ಬಳಿಕ ರಣ ಮಳೆ ಈಗ ಬೆಂಗಳೂರನ್ನು ಅಟಕಾಯಿಸಿಕೊಂಡಿದೆ. ಸಿಲಿಕಾನ್ ಸಿಟಿಯಲ್ಲಿ ಚಿತ್ತಾ ಮಳೆ ತನ್ನ ಕುರುಡಾಟ ಪ್ರದರ್ಶಿಸುತ್ತಿದೆ. ಯಾವಾಗಂದ್ರೆ ಆಗ ಮಳೆ ಸುರಿದು ನಾನಾ ಅವಾಂತರ ಸೃಷ್ಟಿ ಮಾಡುತ್ತಿದೆ. ಕುರುಡ ಚಿತ್ತನ ಆಟಕ್ಕೆ ಬೆಂಗಳೂರು ಮಂದಿ ತತ್ತರಿಸಿ ಹೋಗಿದ್ದಾರೆ. ಬೆಂಗಳೂರಲ್ಲಿ ಬೆಳಗ್ಗೆಯಿಂದ ಸೂರ್ಯ ದರ್ಶನ ಆಗಿರಲಿಲ್ಲ. ಮಧ್ಯಾಹ್ನದವರೆಗೂ ನಗರದಲ್ಲಿ ಮೋಡಗಳ ಆಟ ಜೋರಿತ್ತು. ಆದರೆ ಆ ಬಳಿಕ ನಗರದಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯಿತು. ಅದ್ರಲ್ಲೂ ಸಂಜೆ …

Read More »

.ಗೂಂಡಾಗಿರಿಗೆ ಮತ್ತೊಂದು ಹೆಸರೇ ಡಿಕೆಶಿ ಮತ್ತು ಡಿಕೆ ಸುರೇಶ್. ಅವರ ಬಗ್ಗೆ ಇಡೀ ರಾಜ್ಯದ ಜನರಿಗೆ ಗೊತ್ತು ಎಂದ ಸಚಿವ ಕೆ.ಎಸ್ ಈಶ್ವರಪ್ಪ

ದಾವಣಗೆರೆ: ಗೂಂಡಾಗಿರಿಗೆ ಮತ್ತೊಂದು ಹೆಸರೇ ಡಿಕೆಶಿ ಮತ್ತು ಡಿಕೆ ಸುರೇಶ್. ಅವರ ಬಗ್ಗೆ ಇಡೀ ರಾಜ್ಯದ ಜನರಿಗೆ ಗೊತ್ತು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹಿರೇಕಲ್ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಆರ್ ಆರ್ ನಗರದಲ್ಲಿ ಬಿಜೆಪಿಯು ಕಾಂಗ್ರೆಸ್ ಅಭ್ಯರ್ಥಿ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿ, ನಾವು ದೌರ್ಜನ್ಯ ಮಾಡ್ತಾ ಇದ್ದೀವಿ. ಅವರು ತಪಸ್ಸು ಮಾಡ್ತಾ ಇದ್ದಾರೆ ಪಾಪಾ. ಗೂಂಡಾಗಿರಿಗೆ ಮತ್ತೊಂದು ಹೆಸರೇ …

Read More »