ಹುಬ್ಬಳ್ಳಿ : ಹೌದು.. ಹುಬ್ಬಳ್ಳಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವರ ಆಪ್ತರಾಗಿದ್ದಂತ ಗಿರೀಶ್ ಗದಿಗೆಪ್ಪಗೌಡರೇ ಹೀಗೆ ನಿರೀಕ್ಷಣಾ ಜಾಮೀನು ಪಡೆದಂತ ಕೈ ಮುಖಂಡ ಆಗಿದ್ದಾರೆ. ನಟಿ ರಾಗಿಣಿ ಜೊತೆಗೆ ನಂಟು ಹೊಂದಿದ್ದರಿಂದಾಗಿ, ಡ್ರಗ್ಸ್ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿ ಗಿರೀಶ್ ಗದಿಗೆಪ್ಪಗೌಡರ ಇದ್ದರು. ಇದೇ ಕಾರಣದಿಂದಾಗಿ ಸಿಸಿಬಿ ಪೊಲೀಸರಿಂದ ಯಾವುದೇ ಸಂದರ್ಭದಲ್ಲಿಯಾದರೂ ಬಂಧನದ ಭೀತಿ ಕೂಡ ಎದುರಿಸುವಂತಾಗಿತ್ತು. ಈ ಹಿನ್ನಲೆಯಲ್ಲಿ ಮುಂಜಾಗ್ರತೆಯಾಗಿ ಧಾರವಾಡ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಲಯದಿಂದ …
Read More »Daily Archives: ಅಕ್ಟೋಬರ್ 25, 2020
ನಡು ರಸ್ತೆಯಲ್ಲಿಯೇ ಧಗಧಗೆ ಕಾರೊಂದು ಹೊತ್ತಿ ಉರಿದ ಘಟನೆ
ಹಾವೇರಿ : ಓಮ್ನಿ ಕಾರಿನಲ್ಲಿ ದಾವಣಗೆರೆ ಜಿಲ್ಲೆಯ ಮಲೇಬೆನ್ನೂರಿನಿಂದ ಹಿರೇಕೆರೂರು ತಾಲೂಕಿನ ಸಾತೇನಹಳ್ಳಿಯ ದೇವಸ್ಥಾನಕ್ಕೆ ನಾಲ್ವರು ಕುಟುಂಬಸ್ಥರು ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಕ್ರಾಸ್ ಬಳಿ, ಧಗಧಗನೆ ಹೊತ್ತಿ ಉರಿದಿದೆ. ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದನ್ನು ದಾರಿ ಹೋಕರು ಚಾಲನಕನ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಕೂಡಲೇ ಕಾಲು ನಿಲ್ಲಿಸಿ, ಅದರಲ್ಲಿದ್ದ ಎಲ್ಲರೂ ಕೆಳಗೆ ಇಳಿದಿದ್ದಾರೆ ಹೀಗಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ವಿಷಯ ತಿಳಿದು …
Read More »ಕಾಂಗ್ರೆಸ್ ನಿಂದ ಹೊರಬರಲು ಕಾರಣ ಡಿ.ಕೆ. ಶಿವಕುಮಾರ್ ಎಂದು ಸಚಿವ ಎಸ್.ಟಿ. ಸೋಮಶೇಖರ್ ವಾಗ್ದಾಳಿ
ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತಿಗೆ ಕಾಂಗ್ರೆಸ್ ನಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ. ಅವರ ಮಾತನ್ನು ಸಿದ್ದರಾಮಯ್ಯನವರೇ ಕೇಳಲ್ಲ. ನಾವೆಲ್ಲ ಕಾಂಗ್ರೆಸ್ ನಿಂದ ಹೊರಬರಲು ಕಾರಣ ಡಿ.ಕೆ. ಶಿವಕುಮಾರ್ ಎಂದು ಸಚಿವ ಎಸ್.ಟಿ. ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ. ಆರ್.ಆರ್. ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಮಾತನಾಡಿದ ಸೋಮಶೇಖರ್, ಮುನಿರತ್ನ, ನಾನು ಹಾಗೂ ಭೈರತಿ ಕಾಂಗ್ರೆಸ್ ಗೆ ನಿಷ್ಠಾವಂತ ಕಾರ್ಯಕರ್ತರಾಗಿದ್ದೆವು. ಆದರೆ ನಾವು ಪಕ್ಷ ತೊರೆಯಲು ಕಾರಣ ಯಾರೆಂಬುದು ಎಲ್ಲರಿಗೂ ಗೊತ್ತಿದೆ ಎಂದರು. ಆರ್.ಆರ್.ನಗರದಲ್ಲಿ …
Read More »ಮಣ್ಣಿನ ಚಾವಣಿ ಕುಸಿದು ಬಿದ್ದು ಒಂದೇ ಕುಟುಂಬದ ಐವರು ಮಹಿಳೆಯರು ದಾರುಣ ಸಾವು
ಹೈದರಾಬಾದ್: ಪೂರ್ವಜರು ಕಟ್ಟಿಸಿದ್ದ ಹಳೇ ಮನೆಯ ಮಣ್ಣಿನ ಚಾವಣಿ ಕುಸಿದು ಬಿದ್ದು ಒಂದೇ ಕುಟುಂಬದ ಐವರು ಮಹಿಳೆಯರು ದಾರುಣ ಸಾವಿಗೀಡಾಗಿರುವ ಘಟನೆ ತೆಲಂಗಾಣದ ವಾನಪರ್ತೆ ಜಿಲ್ಲೆಯಲ್ಲಿ ನಡೆದಿದೆ. ದುರಂತವೆಂದರೆ ಸಾವಿಗೂ ಮುನ್ನ ಐವರು ಸಹ ಕುಟುಂಬದ ಸದಸ್ಯರೊಬ್ಬರ ತಿಥಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಗೋಪಾಲ್ಪೇಟೆ ಮಂಡಲದ ಬುದ್ದರಾಮ್ ಗ್ರಾಮದಲ್ಲಿ ಇಂದು (ಅ.25) ಬೆಳ್ಳಂಬೆಳಗ್ಗೆ ದುರ್ಘಟನೆ ಸಂಭವಿಸಿದೆ. ನಾಲ್ವರು ಗಂಡು ಮಕ್ಕಳು ತಮ್ಮ ಪತ್ನಿ ಹಾಗೂ ಮಕ್ಕಳ ಜತೆ ಸೇರಿ ತಂದೆಯ ವರ್ಷದ ತಿಥಿ …
Read More »ಉಪಚುನಾವಣಾ ಪ್ರಚಾರಕ್ಕೆ ಹೋಗಲ್ಲ: ಮುಖ್ಯ ಮಂತ್ರಿ ಯಡ್ಡಿಯೂರಪ್ಪ
ಬೆಂಗಳೂರು : ಉಪ ಚುನಾವಣೆಯಲ್ಲಿ ನಾನೂ ಎಲ್ಲಿಯೂ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾತನಾಡಿದ ಅವರು, ನಾನು ಉಪಚುನಾವಣಾ ಪ್ರಚಾರಕ್ಕೆ ಹೋಗಲ್ಲ. ಆದರೆ ಇದೇ ಅ. 30 ರಂದು ಶಿರಾದಲ್ಲಿ ಒಂದು ಪ್ರಚಾರ ಮಾಡಿ ಬರುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ತಿಳಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಮಾಸ್ಕ್ ಧರಿಸಿ, ಸಾಮಾಜಿಕ …
Read More »ಬೆಳಗಾವಿ ಲೋಕಸಭೆ ಚುನಾವಣೆ ದಿ.ಸುರೇಶ ಅಂಗಡಿ ಕುಟುಂಬ ಹೊರತು ಪಡಿಸಿ ಟಿಕೆಟ್ ನೀಡಿದರೇ ಕಾಂಗ್ರೆಸ್ ಬಿಜೆಪಿ ಯಾರೇ ಟಿಕೆಟ್ ನೀಡಿದರೂ ಸ್ಪರ್ಧಿಸಲು ಸಿದ್ದ- ಪ್ರಕಾಶ ಹುಕ್ಕೇರಿ
ಚಿಕ್ಕೋಡಿ: ಕೇಂದ್ರ ಸಚಿವ ದಿ.ಸುರೇಶ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸುರೇಶ ಅಂಗಡಿ ಕುಟುಂಬ ಹೊರತು ಪಡಿಸಿ ಟಿಕೆಟ್ ನೀಡಿದರೇ ಕಾಂಗ್ರೆಸ್ ಅಥವಾ ಬಿಜೆಪಿ ಪಕ್ಷದಿಂದ ಸ್ಪರ್ಧಿಸಲು ನಾನು ಸಿದ್ಧ ಎಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹೊಸ ಬಾಂಬ್ ಸಿಡಿಸಿದರು. ಚಿಕ್ಕೋಡಿ ತಾಲೂಕಿನ ಪ್ಯಾಕ್ಟರಿ ಕ್ರಾಸ್ ಬಳಿ ಪೆಟ್ರೋಲ್ ಬಂಕ್ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಸುರೇಶ ಅಂಗಡಿ ಬಿಜೆಪಿಯಲ್ಲಿ ಇದ್ದರೇ …
Read More »ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆ
ಉಡುಪಿ: ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಆದರೆ ವಿಪರ್ಯಾಸ ಅಂದ್ರೆ ಆಸ್ಪತ್ರೆಗೆ ದಾಖಲಾದ ಕೆಲವೇ ಕ್ಷಣಗಳಲ್ಲಿ ಯುವತಿ ಮೃತಪಟ್ಟಿದ್ದಾಳೆ. ನಿನ್ನೆ 6:30ರ ಹೊತ್ತಿಗೆ ರಿಕ್ಷಾದಲ್ಲಿ ಯುವತಿಯನ್ನು ಆಸ್ಪತ್ರೆಗೆ ಕರೆದು ತಂದಿದ್ದ ಯುವಕ, ಆಕೆಯ ಮನೆಯವರಿಗೆ ಕರೆಮಾಡಿ ವಿಷಯ ತಿಳಿಸಿ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ. ರಕ್ಷಿತಾ ನಾಯಕ್ ನಿಗೂಢವಾಗಿ ಸಾವನ್ನಪ್ಪಿರುವ ಯುವತಿ. ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ನಿವಾಸಿಯಾಗಿರುವ …
Read More »ವರನಟ ಡಾ ರಾಜ್ ಅಪಹರಣ ಸಮಯದಲ್ಲಿ ಸರಳ ಜಂಬೂ ಸವಾರಿ
ಮೈಸೂರು: ಜಗತ್ತಿನಾದ್ಯಂತ ಕೋವಿಡ್-19 ತನ್ನ ಕಬಂಧಬಾಹು ವಿಸ್ತರಿಸಿರುವ ಹಿನ್ನೆಲೆ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಸರಳವಾಗಿ ನಡೆಯುತ್ತಿದ್ದು, ದಸರೆಯ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಅರಮನೆ ಆವರಣಕ್ಕಷ್ಟೇ ಸೀಮಿತವಾಗಿದೆ. ಕೋವಿಡ್-19 ಸೋಂಕು ಸಂಕಷ್ಟ ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ರಾಜ್ಯ ಸರ್ಕಾರ ಈ ಬಾರಿಯ ದಸರಾ ಉತ್ಸವವನ್ನು ಸರಳವಾಗಿ ಆಚರಿಸಲು ತೀರ್ಮಾನಿಸಿದ್ದು, ಸಾಂಪ್ರದಾಯಿಕ ಆಚರಣೆ ಕೈಬಿಡದೆ, ವೈಭವಕ್ಕೆ ಕಡಿವಾಣ ಹಾಕುವ ಮೂಲಕ ಜನಸಂದಣಿ ಉಂಟಾಗದಂತೆ ಸರಳ ಹಾಗೂ ಸಂಕೇತಿಕವಾಗಿ ಆಚರಿಸಲಾಗುತ್ತಿದೆ. …
Read More »ಸುರೇಶ್ ಅಂಗಡಿ ಸಿಎಂ ಆಗುತ್ತಿದ್ರು ಅಂತಾ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಹೇಳಿಕೆ ಕೊಟ್ರಾ ಅನ್ನೋ ಮಾತು ಕೇಳಿಬಂದಿದೆ.
ಬೆಳಗಾವಿ: ಸುರೇಶ್ ಅಂಗಡಿ ಬದುಕಿದ್ದರೆ 2-3 ತಿಂಗಳಲ್ಲಿ ದೊಡ್ಡ ಹುದ್ದೆ ಸಿಗುತ್ತಿತ್ತು ಎಂದು ಗೋಕಾಕ್‌ನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಸುರೇಶ್ ಅಂಗಡಿಗೆ ಒಳ್ಳೆಯ ಭವಿಷ್ಯವಿರುತ್ತಿತ್ತು. ಅವರಿಗೆ ವಿಚಿತ್ರ ಹುದ್ದೆ ಸಿಗುತ್ತಿತ್ತು ಎಂದು ರಮೇಶ್ ಹೇಳಿದ್ದಾರೆ. ಈ ಮೂಲಕ ಸುರೇಶ್ ಅಂಗಡಿ ಸಿಎಂ ಆಗುತ್ತಿದ್ರು ಅಂತಾ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಹೇಳಿಕೆ ಕೊಟ್ರಾ ಅನ್ನೋ ಮಾತು ಕೇಳಿಬಂದಿದೆ. ಆದರೆ ಸುರೇಶ್ ಅಂಗಡಿ ನಮ್ಮನ್ನಗಲಿದ್ದು ದುರ್ದೈವ. ಒಳ್ಳೆಯವರನ್ನು ಆ ದೇವರು …
Read More »ನವರಾತ್ರಿಯ ಕೊನೆಯ ದಿನ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ.
ಪಶ್ಚಿಮ ಬಂಗಾಳ: ನವರಾತ್ರಿಯ ಕೊನೆಯ ದಿನ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ. ಡಾರ್ಜಿಲಿಂಗ್ನಲ್ಲಿರುವ ಸುಕ್ನಾ ಯುದ್ಧ ಸ್ಮಾರಕ ಬಳಿ ತೆರಳಿ ರಾಜನಾಥ್ಸಿಂಗ್ ಹುತಾತ್ಮರಿಗೆ ಗೌರವ ಸಲ್ಲಿಸಿದ್ದಾರೆ. ಜೊತೆಗೆ ರಕ್ಷಣಾ ಸಚಿವರು ಯುದ್ಧ ಟ್ಯಾಂಕರ್, ಸೇನಾ ವಾಹನ ಸೇರಿದಂತೆ ಯುದ್ಧಕ್ಕೆ ಬಳಸುವ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ರು. ಈ ವೇಳೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾಣೆ ಉಪಸ್ಥಿತರಿದ್ದರು. ಸದ್ಯ …
Read More »