ಗೋಕಾಕ : ತೀವ್ರ ವಿವಾದಕ್ಕೆ ಕಾರಣವಾಗಿದ್ದ ತಪಸಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನಿವೇಶನದ ಸಮಸ್ಯೆ ಕೊನೆಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಧ್ಯಸ್ಥಿಕೆಯಲ್ಲಿ ಸುಖಾಂತ್ಯಗೊಂಡಿದೆ. ೧೯.೨೦ ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ತಲೆಯೆತ್ತಲಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನೂತನ ಕಟ್ಟಡಕ್ಕೆ ತಪಸಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನಡೆದಿತ್ತು. ಗ್ರಾಮ ಪಂಚಾಯತ ತಪಸಿ ಅಧೀನದಲ್ಲಿ ಸರ್ವೇ ನಂ. ೧೯೩ ರಲ್ಲಿ ಈಗಾಗಲೇ ೩೯.೧೯ ಎಕರೆ ಸರ್ಕಾರಿ ಜಮೀನಿನಲ್ಲಿ …
Read More »Daily Archives: ಅಕ್ಟೋಬರ್ 26, 2020
ಸಂಗೊಳ್ಳಿ ರಾಯಣ್ಣ ಹಾಗೂ ರಾಣಿ ಚನ್ನಮ್ಮ ಪುತ್ಥಳಿಗಳನ್ನು ಸುವರ್ಣ ಸೌಧ ಆವರಣದಲ್ಲಿ ಸ್ಥಾಪಿಸಬೇಕು.: ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ
ಬೆಳಗಾವಿ – ಸಂಗೊಳ್ಳಿ ರಾಯಣ್ಣ ಹಾಗೂ ರಾಣಿ ಚನ್ನಮ್ಮ ಪುತ್ಥಳಿಗಳನ್ನು ಸುವರ್ಣ ಸೌಧ ಆವರಣದಲ್ಲಿ ಸ್ಥಾಪಿಸಬೇಕು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯವನ್ನು ಕಿತ್ತೂರಲ್ಲಿ ಸ್ಥಾಪಿಸಬೇಕೆಂದು ಆಗ್ರಹಿಸಿ ಕೂಡಲಸಂಗಮ ಮಹಾಪೀಠ ಧರ್ಮಕ್ಷೇತ್ರದ ಅಂಗಾಯತ ಪಂಚಮಸಾಲಿ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಇವರಿಂದ ಅಕ್ಟೋಬರ್ 28ರಂದು ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಅಖಿಲ ಭಾರತ ಅಂಗಾಯತ ಪಂಚಮಸಾಲಿ ಸಮಾಜದ ಸರ್ವ ಸಂಘಟನೆಗಳ ಸಹಯೋಗದೊಂದಿಗೆ …
Read More »ಯಮನಕಮರಡಿ ವ್ಯಾಪ್ತಿಯ ಕುರಿಹಾಳ ಗ್ರಾಮದಲ್ಲಿ ಹೈಟೆಕ್ ಎಲ್ ಇಡಿ ಬೀದಿ ದೀಪಗಳನ್ನು ಉದ್ಘಾಟಿಸಲಾಯಿತು.
ಬೆಳಗಾವಿ: ಯಮನಕಮರಡಿ ವ್ಯಾಪ್ತಿಯ ಕುರಿಹಾಳ ಗ್ರಾಮದಲ್ಲಿ ಹೈಟೆಕ್ ಎಲ್ ಇಡಿ ಬೀದಿ ದೀಪಗಳನ್ನು ಉದ್ಘಾಟಿಸಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಅನುದಾನದಲ್ಲಿ ಟಿಎಸ್ ಪಿ ಯೋಜನೆಯಡಿ ನಿರ್ಮಾಣಮಾಡಲಾದ ಬೀದಿ ದೀಪಗಳನ್ನು ಶಾಸಕರ ಆದೇಶದ ಮೇರೆಗೆ ಗ್ರಾಮದ ಮುಖಂಡರು, ಶಾಸಕರ ಆಪ್ತ ಸಹಾಯಕ ಮಲಗೌಡಾ ಪಾಟೀಲ್ ಚಾಲನೆ ನೀಡಿದರು. ನಂತರ ಗ್ರಾಮದ ಸಮುದಾಯ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ 250 ಕ್ಕೂ ಹೆಚ್ಚು ಖರ್ಚಿ ಹಾಗೂ ಸೌಂಡ್ …
Read More »ಸಂಜಯ್ ರಾವತ್ ನನ್ನನ್ನು ಹರಾಮ್‍ಕೋರ್ ಅಂದ, ಉದ್ಧವ್ ನನಗೆ ನಮಕ್ ಹರಾಮ್ ಅಂತ ಹೇಳಿದ್ದಾನೆ.ನಿಮ್ಮ ಕೊಳಕು ಭಾಷಣ, ಅಯೋಗ್ಯತನದ ಪ್ರತೀಕ
ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ ನಡುವಿನ ವಾಕ್ಸಮರ ಮತ್ತೆ ಮುನ್ನಲೆಗೆ ಬಂದಿದೆ. ಭಾನುವಾರ ದಸರಾ ಸಮಾವೇಶದಲ್ಲಿ ಸಿಎಂ ನೀಡಿದ ಹೇಳಿಕೆಯನ್ನ ಖಂಡಿಸಿರುವ ಮಣಿಕರ್ಣಿಕಾ ಸಾಲು ಸಾಲು ಟ್ವೀಟ್ ಗಳ ಮೂಲಕ ತಿರುಗೇಟು ನೀಡಿದ್ದಾರೆ. ಸಂಜಯ್ ರಾವತ್ ನನ್ನನ್ನು ಹರಾಮ್‍ಕೋರ್ ಅಂದ, ಉದ್ಧವ್ ನನಗೆ ನಮಕ್ ಹರಾಮ್ ಅಂತ ಹೇಳಿದ್ದಾನೆ. ಮುಂಬೈನಲ್ಲಿ ನನಗೆ ಆಶ್ರಯ ಸಿಗದಿದ್ರೆ ನನಗೆ ಊಟವೇ ಸಿಗುತ್ತಿರಲಿಲ್ಲ ಅಂತಾ ಹೇಳ್ತಿದ್ದಾರೆ. …
Read More »ಕುಲ್ಕರ್ಣಿ ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ
ಹುಬ್ಬಳ್ಳಿ: ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿಗೆ ದೊಡ್ಡ ಹುದ್ದೆ ಸಿಗುತ್ತಿತ್ತು ಎಂಬ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಈ ಬಗ್ಗೆ ಚರ್ಚೆ ನಡೆದಿರುವ ಕುರಿತು ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಜೋಶಿ, ದಿ.ಸುರೇಶ್ ಅಂಗಡಿಯವರಿಗೆ ಶೀಘ್ರದಲ್ಲಿಯೇ ದೊಡ್ಡ ಹುದ್ದೆ ಸಿಗುವುದರಲ್ಲಿತ್ತು ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ, ಬಿಜೆಪಿ ರಾಷ್ಟ್ರಾಧ್ಯಕ್ಷರ ಜೊತೆ ನಾನು ಸಂಪರ್ಕದಲ್ಲಿದ್ದೇನೆ. ಅಂತಹ ಚರ್ಚೆ ನಡೆದಿರುವ …
Read More »ನಿನ್ನೆ ರಾತ್ರಿ ಬೆಳಗಾವಿ ಮಹಾನಗರದ ಗ್ಯಾಂಗ್ ವಾಡಿ ಪ್ರದೇಶದಲ್ಲಿ ನಡೆದ ಭಯನಾಕ ಮರ್ಡರ್
ಬೆಳಗಾವಿ- ನಿನ್ನೆ ರಾತ್ರಿ ಬೆಳಗಾವಿ ಮಹಾನಗರದ ಗ್ಯಾಂಗ್ ವಾಡಿ ಪ್ರದೇಶದಲ್ಲಿ ನಡೆದ ಭಯನಾಕ ಮರ್ಡರ್ ಹಿಂದೆ,ಹಳೆಯ ವೈಷಮ್ಯ,ಸೇಡು ಎಲ್ಲವೂ ಅಡಗಿದೆ. ನಿನ್ನೆ ಮದ್ಯರಾತ್ರಿ ಬೆಳಗಾವಿಯಲ್ಲಿ ಶಹಬಾಜ್ ಪಠಾಣ್,ಉರ್ಫ ಶಹಬಾಜ್ ರೌಡಿ ಎಂಬಾತನ ಕೊಲೆ ಮಾಡಲಾಗಿತ್ರು,ಈ ಕೊಲೆಗೆ ಹಳೆಯ ವೈಷಮ್ಯವೇ ಕಾರಣ ಎಂಬುದು ಗೊತ್ತಾಗಿದೆ, ಬೈಕ್ ಮೇಲೆ ಸಾಗುವಾಗ ಸಿಡಿದ ರಾಡಿಯಿಂದ ಆರಂಭವಾದ ಈ ಜಗಳ ನಿನ್ನೆ ಮಿಡ್ ನೈಟ್ ಕೊನೆಯಲ್ಲಿ ಅಂತ್ಯವಾಗಿದೆ. ಮುತ್ಯಾನಟ್ಟಿಯ ಯುವಕನೊಬ್ಬ ಬೈಕ್ ಮೇಲೆ ಹೋಗುವಾಗ ಶಹಬಾಜ್ …
Read More »ಕಂದಾಯ ಸಚಿವ R.ಅಶೋಕ್ 25 ಸಾವಿರ ರೂ. ಪರಿಹಾರದ ಚೆಕ್ ವಿತರಣೆ :ಪರಿಹಾರ ಹಣ ಪಡೆದವರಿಗೆ ಬಿಬಿಎಂಪಿ ಶಾಕ್ ನೀಡಿದೆ
ಬೆಂಗಳೂರು: ಹೊಸಕೆರೆ ಹಳ್ಳಿಯ ದತ್ತಾತ್ರೇಯ ನಗರ ವ್ಯಾಪ್ತಿಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯಾಗಿತ್ತು. ಹೀಗಾಗಿ ಕಂದಾಯ ಸಚಿವ R.ಅಶೋಕ್ 25 ಸಾವಿರ ರೂ. ಪರಿಹಾರದ ಚೆಕ್ ವಿತರಿಸಿದ್ದರು. ಇದು ಸಂತ್ರಸ್ಥರಿಗೆ ಕೊಂಚ ಖುಷಿ ನೀಡಿತ್ತು. ಆದರೆ ಪರಿಹಾರ ಹಣ ಪಡೆದವರಿಗೆ ಬಿಬಿಎಂಪಿ ಶಾಕ್ ನೀಡಲಿದೆ. ದತ್ತಾತ್ರೇಯನಗರದಲ್ಲಿ ರಾಜಕಾಲುವೆ ಒತ್ತುವರಿಯಾದ ಹಿನ್ನೆಲೆಯಲ್ಲಿ ಒತ್ತುವರಿ ಜಾಗ ಪತ್ತೆಗೆ ಪಾಲಿಕೆಯ ಅಧಿಕಾರಿಗಳು ಮುಂದಾಗಿದ್ದಾರೆ. ಪರಿಹಾರ ಪಡೆದ 344 ಕುಟುಂಬಗಳ ಪೈಕಿ …
Read More »ತಿರುಪತಿ ದೇವಸ್ಥಾನದಲ್ಲಿ ಅವಘಡ
ಆಂಧ್ರಪ್ರದೇಶ : ತಿರುಪತಿ ತಿರುಮಲ ದೇವಾಲಯದಲ್ಲಿನ ಬಾಯ್ಲರ್ ನಿಂದ ಬಿಸಿನೀರು ಸೋರಿಕೆಯಾಗಿ, ಕಾರ್ಮಿಕರಿಗೆ ಸಿಡಿದಿದ್ದರಿಂದಾಗಿ, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಪ್ರಕಟಣೆ ಹೊರಡಿಸಿರುವಂತ ಟಿಟಿಡಿ, ಅಡುಗೆ ಮನೆಯಲ್ಲಿ ಬಾಯ್ಲರ್ ನಿಂದ ನೀರು ಸೋರಿಕೆಯಾಗಿ, ಕಾರ್ಮಿಕರ ಮೇಲೆ ಬಿದ್ದಿರುವ ಪರಿಣಾಮ, ಐವರು ಕೆಲಸಗಾರರು ಗಾಯಗೊಂಡಿದ್ದಾರೆ. ಇಂತಹ ಕಾರ್ಮಿಕರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡುತ್ತಿರುವುದಾಗಿ ತಿಳಿಸಿದೆ.
Read More »ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ
ಚೆನ್ನೈ: ತಮಿಳುನಾಡಿನ ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಲ್ವರನ್ನು ಬಂಧಿಸಿ ಗುದನಾಳಗಳಲ್ಲಿ ಇಟ್ಟುಕೊಂಡು ಸಾಗಿಸುತ್ತಿದ್ದ ಪೇಸ್ಟ್ ರೂಪದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಚೆನ್ನೈಗೆ ಆಗಮಿಸಿದ ನಾಲ್ವರು ಪ್ರಯಾಣಿಕರು ಚಿನ್ನದ ಪೇಸ್ಟ್ ಇಟ್ಟುಕೊಂಡು ಸಾಗಿಸುತ್ತಿದ್ದರು. ಇದರ ಮೌಲ್ಯ 45.5 ಲಕ್ಷ ರೂಪಾಯಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 864 ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗಿಸಲಾಗುತ್ತಿತ್ತು. ಪರಿಶೀಲನೆ ವೇಳೆ ಚಿನ್ನ ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯಕೀಯ ವಿಧಾನಗಳ ಮೂಲಕ ಹೊರತೆಗೆಯಲಾಗಿದೆ.
Read More »ಅಕ್ರಮ ಗಾಂಜಾ ವಶ
ಗದಗ : ಗದಗ ಜಿಲ್ಲೆಯ ಹುಲಕೋಟಿ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಮಾರುತ್ತಿದ್ದ ಮಹಿಳೆಯ ಮನೆಯ ಮೇಲೆ ಗದಗ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದೇವಕ್ಕ ನಾರಾಯಣ ಬೆಳ್ಳಿಕೊಪ್ಪ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯಾಗಿದ್ದಾಳೆ. ಮನೆಯಲ್ಲಿ 80 ಸಾವಿರ ಮೌಲ್ಯದ ಸುಮಾರು ೪ ಕೆಜಿ ಒಣ ಗಾಂಜಾವನ್ನು ಅಬಕಾರಿ ನಿರೀಕ್ಷಕ ಮಲ್ಲಿಕಾರ್ಜುನ ರೆಡ್ಡಿ ವಶಪಡಿಸಿಕೊಂಡಿದ್ದಾರೆ ಆರೋಪಿ ದೇವಕ್ಕ ಬೆಳ್ಳಿಕೊಪ್ಪ ಪರಾರಿಯಾಗಿದ್ದಾರೆ. ಗದಗ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »