ಮಂಗಳೂರು: ದೇವಸ್ಥಾನದ ನವರಾತ್ರಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದ್ದೀನ್ ಬಾವಾಗೆ ಮುಂಬೈನಿಂದ ಬೆದರಿಕೆ ಕರೆ ಬಂದಿದೆ. ಮಂಗಳೂರು ಹೊರವಲಯದ ಬಜಪೆ ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನವರಾತ್ರಿಯ ಪ್ರಯುಕ್ತ ಕೊಪ್ಪರಿಗೆ ಇಡುವ ಕಾರ್ಯಕ್ರಮವಿತ್ತು. ಇದಕ್ಕೆ ಕ್ಷೇತ್ರದ ಆಹ್ವಾನದಂತೆ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಭೇಟಿ ನೀಡಿದ್ದರು. ಅದೇ ವೇಳೆ ಕೊಪ್ಪರಿಗೆ ಇಡುವ ಧಾರ್ಮಿಕ ವಿಧಿ ವಿಧಾನ ನಡೆಯುತ್ತಿತ್ತು. ಹೀಗಾಗಿ ಕ್ಷೇತ್ರಾಡಳಿತ ಮಂಡಳಿಯವರು …
Read More »Monthly Archives: ಅಕ್ಟೋಬರ್ 2020
ಹೊಟ್ಟೆಕಿಚ್ಚಿನಿಂದ ಸರ್ಕಾರ ಇಂದಿರಾ ಕ್ಯಾಂಟೀನ್ಗೆ ಅನುದಾನ ಕೊಟ್ಟಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ
ಬೆಂಗಳೂರು: ಹೊಟ್ಟೆಕಿಚ್ಚಿನಿಂದ ಸರ್ಕಾರ ಇಂದಿರಾ ಕ್ಯಾಂಟೀನ್ಗೆ ಅನುದಾನ ಕೊಟ್ಟಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂದಿರಾ ಕ್ಯಾಂಟೀನ್ ಕುರಿತು ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಇಂದಿರಾ ಕ್ಯಾಂಟೀನ್ ನಿರ್ವಹಿಸುತ್ತಿರುವ ಬಿಬಿಎಂಪಿಗೆ ಸರ್ಕಾರ ಅನುದಾನ ನೀಡದಿರುವುದು ಹೊಟ್ಟೆಕಿಚ್ಚಿನ ರಾಜಕಾರಣ. ಇಂದಿರಾ ಕ್ಯಾಂಟೀನ್ ಮುಖಾಂತರ ಬಡವರ ಹಸಿದ ಹೊಟ್ಟೆಗಳು ತುಂಬುವುದು ಬಿಜೆಪಿಗೆ ಬೇಕಾಗಿಲ್ಲ. ಹಸಿವಿನ ಸಂಕಟ ಮತ್ತು ಅನ್ನದ ಬೆಲೆ ಗೊತ್ತಿದ್ದರೆ ಕೂಡಲೆ …
Read More »ಯತ್ನಾಳ್ ಹೇಳಿಕೆಯನ್ನು ಪಕ್ಷವು ಗಂಭೀರವಾಗಿ ಪರಿಗಣಿಸಿದ್ದು, ಪಕ್ಷದಿಂದ ಅಮಾನತು ಇಲ್ಲವೇ ಉಚ್ಛಾಟನೆ
ಬೆಂಗಳೂರು,ಅ.22-ಪಕ್ಷದ ನಿಯುಮ ಉಲ್ಲಂಘಿಸಿ ನಾಯಕರ ವಿರುದ್ದ ಬಹಿರಂಗವಾಗಿಯೇ ಹೇಳಿಕೆ ನೀಡುವ ಮೂಲಕ ಮುಜುಗರ ಉಂಟುಮಾಡುತ್ತಿರುವ ಮಾಜಿ ಸಚಿವ ಹಾಗೂ ವಿಜಪುರದ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ದ ಬಿಜೆಪಿ ಶಿಸ್ತು ಕ್ರಮ ಜರಗಿಸಲು ಮುಂದಾಗಿದೆ. ಯತ್ನಾಳ್ ವಿರುದ್ದ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಉಳಿದಿರುವವರು ಇದೇ ಹಾದಿ ತುಳಿಯಬಹುದು ಎಂಬ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ಘಟಕ, ಒಂದೆರೆಡು ದಿನದಲ್ಲಿ ಅವರ ಹೇಳಿಕೆ ಕುರಿತು ನೋಟಿಸ್ ಜಾರಿ ಮಾಡಲು …
Read More »ಬೆಂಗಳೂರಿನಲ್ಲಿ ರಸ್ತೆಗಿಳಿದ ಓಲೆಕ್ಟ್ರಾ ಎಲೆಕ್ಟ್ರಿಕ್ ಬಸ್
ಬೆಂಗಳೂರು, ಅಕ್ಟೋಬರ್, 22- ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ದೇಶಿಯ ನಿರ್ಮಿತ ಓಲೆಕ್ಟ್ರಾ ಎಲೆಕ್ಟ್ರಿಕ್ ಬಸ್ ಪರೀಕ್ಷಾರ್ಥ ಸಂಚಾರಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಇಂದು ಚಾಲನೆ ನೀಡಿದರು. ಬಿಎಂಟಿಸಿಯ ಕೇಂದ್ರ ಕಚೇರಿ ಆವರಣದಲ್ಲಿ ಈ ಬಸ್‍ಗೆ ಚಾಲನೆ ನೀಡಿದ ನಂತರ ವಿಧಾನಸೌಧದವರೆಗೂ ಅದೇ ಬಸ್‍ನಲ್ಲಿ ಪ್ರಯಾಣಿಸಿದರು. ವಿಧಾನಸೌಧದ ಆವರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ಎಲೆಕ್ಟ್ರಿಕ್ ಬಸ್‍ನ್ನು ವೀಕ್ಷಣೆ ಮಾಡಿ ನಂತರ ಉಪಮುಖ್ಯಮಂತ್ರಿಯವರಿಂದ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮಣ್ …
Read More »ಐಷಾರಾಮಿ ರೈಲು ಗೋಲ್ಡನ್ ಚಾರಿಯಟ್ ಪುನಃ ಸಂಚಾರ ಆರಂಭಿಸಲಿದ್ದು, ಜನವರಿಯಿಂದ ಆರಂಭ
ಬೆಂಗಳೂರು,ಅ.22- ಐಷಾರಾಮಿ ರೈಲು ಗೋಲ್ಡನ್ ಚಾರಿಯಟ್ ಪುನಃ ಸಂಚಾರ ಆರಂಭಿಸಲಿದ್ದು, ಜನವರಿಯಿಂದ ಆರಂಭವಾಗುವ ಸಂಚಾರಕ್ಕೆ ಈಗಾಗಲೇ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆ ಪ್ರಾರಂಭವಾಗಿದೆ. ಕಳೆದ 9 ತಿಂಗಳಿನಿಂದ ಐಷಾರಾಮಿ ರೈಲು ಗೋಲ್ಡನ್ ಚಾರಿಯಟ್ ರೈಲು ಸಂಚಾರ ಸ್ಥಗಿತವಾಗಿತ್ತು. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಹೊಸ ವಿನ್ಯಾಸ, ಸೇವೆಗಳ ಜೊತೆ ರೈಲು ಸಂಚಾರಕ್ಕೆ ಪುನಃ ಚಾಲನೆ ನೀಡಲಾಗುತ್ತಿದೆ. ಪುನಃ ಸಂಚಾರ ಆರಂಭಿಸಲಿದೆ ಐಷಾರಾಮಿ ಗೋಲ್ಡನ್ ಚಾರಿಯಟ್ಪುನಃ ಸಂಚಾರ ಆರಂಭಿಸಲಿದೆ ಐಷಾರಾಮಿ ಗೋಲ್ಡನ್ ಚಾರಿಯಟ್ ಬೆಂಗಳೂರು …
Read More »ಪ್ರಸಕ್ತ ಸಾಲಿನ ಪಿಯುಸಿ ಯ ಶೇ. 30 ರಷ್ಟು ಪಠ್ಯವನ್ನು ಕಡಿತಗೊಳಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಬೆಂಗಳೂರು: ಪ್ರಸಕ್ತ ಸಾಲಿನ ಪಿಯುಸಿ ಯ ಶೇ. 30 ರಷ್ಟು ಪಠ್ಯವನ್ನು ಕಡಿತಗೊಳಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳ ವಿಜ್ಞಾನ ವಿಷಯಗಳನ್ನು (ಭೌತ ವಿಜ್ಞಾನ, ರಸಾಯನ ವಿಜ್ಞಾನ, ಜೀವ ವಿಜ್ಞಾನ, ಗಣಿತ ಶಾಸ್ತ್ರ) ಹೊರತುಪಡಿಸಿ ಇತರೆ ವಿಷಯಗಳಲ್ಲಿ ಪಠ್ಯವನ್ನು ಕಡಿತಗೊಳಿಸಲು ಪಿಯು ಬೋರ್ಡ್ ನಿರ್ಧಾರ ಮಾಡಿದೆ. ಈ ಪಠ್ಯಕ್ರಮ 2020–21ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯವಾಗಲಿದೆ. ವಿಜ್ಞಾನ ವಿಷಯಗಳ ಪಠ್ಯವನ್ನು ಸಿಬಿಎಸ್‌ಇ ಶಿಕ್ಷಣ …
Read More »ಬೆಳಗಾವಿಯ ಸಮರ್ಥ ನಗರದಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರು ದಾಳಿ
ಬೆಳಗಾವಿ: ಬೆಳಗಾವಿಯ ಸಮರ್ಥ ನಗರದಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ, 11 ಜನ ಆರೋಪಿಗಳನ್ನು ನಿನ್ನೆ ತಡರಾತ್ರಿ ಬಂಧಿಸಿದ್ದಾರೆ. 27 ಸಾವಿರ ನಗದು ಹಣ, 8 ಮೊಬೈಲ್ ಜಪ್ತಿ ಮಾಡಿದ್ದಾರೆ. ಸರ್ಫರಾಜ್ ಶಹಾಪೂರಿ(21), ದಶರಥ ಕಾಂಬಳೆ(40), ಪ್ರಕಾಶ ಮಲಸೂರೆ(64), ಬಸವರಾಜ ಪಾಟೀಲ (38), ಮಧು ನಾಯಕ(40), ಅಕ್ಷಯ ಸಾಳುಂಕೆ(24), ಅರ್ಜುನ ಜಕ್ಕಪ್ಪನ್ನವರ(28), ಖಾಜಾಹುಸೇನ ಘೋರಿ(38), ಆನಂದ ಪ್ರಭು ವೆಂಕಟಪುರ(20), ವಸಂತ ನಾಯ್ಕ(38), ಚಂದ್ರಶೇಖರ ವೆಂಕಣ್ಣವರ(39) ಬಂಧಿತರು. ಮಾರ್ಕೇಟ್ …
Read More »ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು,ನಿಮ್ಮನ್ನು ಏನು ಮಾಡಬೇಕು: ಹರಕು ಬಾಯಿಈಶ್ವರಪ್ಪ ಹೇಳಿಕೆಗೆ ಅಭಿಮಾನಿ ಫೋಸ್ಟ್
ವಿಜಯಪುರ: ತಮ್ಮನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಅಭಿಮಾನಿ ಫೋಸ್ಟ್ ಮಾಡಿರುವುದನ್ನು ನಮ್ಮ ಖಾತೆಗೆ ಹಂಚಿಕೊಳ್ಳುವ ಮೂಲಕ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಿರುಗೇಟು ನೀಡಿದ್ದಾರೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಿಎಂ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಮಾಡಿರುವ ಆರೋಪಕ್ಕೆ ನಿನ್ನೆ ಸಚಿವ ಕೆ.ಎಸ್.ಈಶ್ವರಪ್ಪ, ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಆಗ್ರಹಿಸಿದ್ದರು. ಈ ಹೇಳಿಕೆಗೆ ಖಾರವಾಗಿ ಫೇಸ್ಬುಕ್ ಮೂಲಕ ಯತ್ನಾಳ್ ಬೆಂಬಲಿಗ ಎನ್ನಲಾದ …
Read More »ಮಲ್ಪೆ ಬಂದರಿನಲ್ಲಿ ಬಲೆಗೆ ಬಿದ್ವು 750, 250 ಕೆ.ಜಿ.ತೂಕದ ಮೀನುಗಳು- ಕ್ರೇನ್ ಬಳಸಿ ಸಾಗಣೆ
ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬೃಹತ್ ಮೀನುಗಳು ಬಲೆಗೆ ಬಿದ್ದಿವೆ. ಭಾರೀ ಗಾತ್ರದ ಎರಡು ತೊರಕೆ ಮೀನುಗಳು ಆಳಸಮುದ್ರ ದೋಣಿಯ ಮೀನುಗಾರರ ಬಲೆಗೆ ಬಿದ್ದಿವೆ. ಒಂದು ಮೀನು 750 ಕೆ.ಜಿ. ಹಾಗೂ ಇನ್ನೊಂದು 250 ಕೆ.ಜಿ. ತೂಗುತ್ತಿದೆ. ಮಲ್ಪೆ ಸುಭಾಸ್ ಸಾಲಿಯಾನ್ ಅವರ ಮಾಲೀಕತ್ವದ ನಾಗಸಿದ್ಧಿ ದೋಣಿಯ ಬಲೆಗೆ ಬಿದ್ದಿರುವ ಈ ಮೀನುಗಳನ್ನು ಬಂದರಿನಲ್ಲಿ ಕ್ರೇನ್ ಮೂಲಕ ಇಳಿಸಲಾಯಿತು. ತೊರಕೆ ಮೀನು ತುಂಬಾ ರುಚಿಕರವಾಗಿದ್ದು, ವಿದೇಶಗಳಿಗೆ ರಫ್ತಾಗುತ್ತದೆ. ಬೃಹತ್ …
Read More »ಪೋಕರಿ ಕಟೀಲ್ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್: ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಪ್ರತಿಯಾಗಿ ಸಿದ್ದರಾಮಯ್ಯ ಸರಣಿ ಟ್ವೀಟ್‍ಗಳ ಮೂಲಕ ತಿರುಗೇಟು ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್ ಕುಮಾರ್ ಅವರಿಗೆ ಸ್ವಲ್ಪ ಬುದ್ಧಿ ಹೇಳಿ …
Read More »