ಕೊಪ್ಪಳ: ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಏರಿ ಹನುಮನ ದರ್ಶನ ಪಡೆದಿದ್ದಾರೆ. ಕಳೆದ ಒಂದು ವಾರದಿಂದ ಜೇಮ್ಸ್ ಚಿತ್ರೀಕರಣಕ್ಕಾಗಿ ಪುನೀತ್ ಮಲ್ಲಾಪೂರ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಈ ನಡುವೆ 575 ಮೆಟ್ಟಿಲನ್ನೇರಿ ಹನುಮ ಹುಟ್ಟಿದ ಸ್ಥಳ ಎಂದು ಪ್ರಸಿದ್ದಿಯಾದ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡಿ ಹನುಮನ ದರ್ಶನ ಮಾಡಿದ್ದಾರೆ.
Read More »Monthly Archives: ಅಕ್ಟೋಬರ್ 2020
ಹಸ್ತಾಕ್ಷರ ಚಳುವಳಿ (ಸಹಿ) ಅಭಿಯಾನಕ್ಕೆ ರೈತರು ಬೆಂಬಲಿಸಿ: ಶಾಸಕ ಸತೀಶ್ ಜಾರಕಿಹೊಳಿ
ಬೆಂಗಳೂರು : ರೈತ ವಿರೋಧಿ ಮಸೂದೆಯನ್ನು ಹಿಂಪಡೆಯುವಂತೆ ಕಾಂಗ್ರೆಸ್ ನಡೆಸುತ್ತಿರುವ ಹಸ್ತಾಕ್ಷರ ಚಳುವಳಿ (ಸಹಿ) ಅಭಿಯಾನಕ್ಕೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮನವಿ ಮಾಡಿಕೊಂಡರು. ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಇಂದು ರೈತರ ಹಸ್ತಾಕ್ಷರ ಚಳುವಳಿ (ಸಹಿ)ಅಭಿಯಾನಕ್ಕೆ ಬೆಂಬಲ ನೀಡಿ ಮಾತನಾಡಿದರು. ಕೇಂದ್ರ ಸರ್ಕಾರದ 3 ಕೃಷಿ ಸುಗ್ರಿವಾಜ್ಞೆಗಳಾದ ಕೃಷಿ ವ್ಯಾಪಾರ ಮತ್ತು ವಾಣಿಜ್ಯ ಸುಗ್ರಿವಾಜ್ಞೆ, ರೈತರ ಬೆಲೆ ಭರವಸೆ ಮತ್ತು ಕೃಷಿ …
Read More »ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್ವುಡ್ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು.. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ …
Read More »ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್ವುಡ್ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ ಚಿರು ರೂಪದಲ್ಲಿ ಬಂದೇಬರುತ್ತಾನೆ ಎಂದು …
Read More »ಯೋಗ, ಯೋಗ್ಯತೆ ಇರುವ ಯಾರು ಬೇಕಾದರೂ ಸಿಎಂ ಆಗಬಹುದು: ಸಿ.ಟಿ.ರವಿ
ಕೊಪ್ಪಳ: ಸಮಗ್ರ ಕರ್ನಾಟಕದ ಯೋಗ ಯೋಗ್ಯತೆ ಇದ್ದವರು ಯಾರು ಬೇಕಾದರು ಸಿಎಂ ಆಗಬಹುದು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು. ಈ ಮಾತು ಆಡಲು ವಿಶ್ವಾಸ ಬಂದಿದ್ದರೆ ಅದು ಕರ್ನಾಟಕ ಏಕೀಕರಣದಿಂದ ಏಕೀಕರಣ ಆಶಯಕ್ಕೆ ಮಣ್ಣು ಹಾಕುವ ಕೆಲಸ ಮಾಡಬಾರದು. ಯತ್ನಾಳರಷ್ಟು ಬುದ್ಧಿವಂತ ನಾನಲ್ಲ, ನಾನು ಪಕ್ಷದ, ಜನರ ನೆಲೆಯಲ್ಲಿ ಕೆಲಸ ಮಾಡುವವನು. ಸಮಗ್ರ …
Read More »ಕಾರಣ ಕೊಡದೇ ಯತ್ನಾಳರನ್ನ ಪಕ್ಷದಿಂದ ಉಚ್ಛಾಟಿಸಬೇಕು: ಕೆ.ಎಸ್.ಈಶ್ವರಪ್ಪ
ಕೊಪ್ಪಳ: ಶಾಸನ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕಾರಣ ನೀಡದೇ ಪಕ್ಷದಿಂದ ಉಚ್ಛಾಟಿಸಬೇಕೆಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಕೆಲವರು ಬಾಯಿ ಚಪಲಕ್ಕೆ ಮೂರ್ಖತನದ ಹೇಳಿಕೆ ನೀಡುತ್ತಿರುತ್ತಾರೆ. ಇತ್ತೀಚೆಗೆ ನಡೆದ ಶಾಸಕಾಂಗ ಸಭೆಯಲ್ಲಿ ಎಲ್ಲ ಶಾಸಕರು ಭಾಗಿಯಾಗಿದ್ದರು. ಈ ವೇಳೆ ಮುಖ್ಯಮಂತ್ರಿಗಳು ಎಲ್ಲರಿಗೂ ನಿಮ್ಮ ಕ್ಷೇತ್ರದ ಸಮಸ್ಯೆ ಏನು ಅಂತ ಕೇಳಿ, ಬಗೆಹರಿಸಿಕೊಳ್ಳುವಂತೆ ಹೇಳಿದ್ದರು. ಆ ಸಭೆಯಲ್ಲಿ ಸುಮ್ಮನೆ ಬಾಯಿ ಮಚ್ಚಿ ಕುಳಿತುಕೊಂಡು, ಉತ್ತರನ …
Read More »ರಸ್ತೆ ದಾಟಿ ಬಂದ ಮೇಲೆ ಮೈಕೈ ನೋವು ಗ್ಯಾರೆಂಟಿ. ವಾಹನಗಳು ಸುರಕ್ಷಿತವಾಗಿ ಇರುತ್ತವೆ ಅನ್ನೋ ನಂಬಿಕೆಯೂ ಇಲ್ಲಾ
ರಾಯಚೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಅತಿಯಾದ ಮಳೆ ಜನಜೀವನವನ್ನ ಅಸ್ತವ್ಯಸ್ತಮಾಡಿದೆ. ರೈತರು ಬೆಳೆ ಕಳೆದುಕೊಂಡಿದ್ದಾರೆ, ನೂರಾರು ಮನೆಗಳು ಬಿದ್ದಿವೆ. ಇದರ ಜೊತೆ ಜೊತೆಗೆ ಜಿಲ್ಲೆಯ ರಸ್ತೆಗಳು ಸಹ ಹಾಳಾಗಿ ಹೋಗಿವೆ. ಜಿಲ್ಲೆಯಿಂದ ಆರಂಭವಾಗುವ ರಾಯಚೂರು- ಬಾಚಿ ರಾಜ್ಯ ಹೆದ್ದಾರಿ ಸಂಖ್ಯೆ 20 ಇದು ಹೆಸರಿಗೆ ಮಾತ್ರ ರಾಜ್ಯ ಹೆದ್ದಾರಿ. ರಸ್ತೆ ತುಂಬಾ ಎಲ್ಲಿ ನೋಡಿದ್ರೂ ಆರಡಿ ಮೂರಡಿ ಗುಂಡಿಗಳೇ ಕಾಣಿಸುತ್ತವೆ. ರಾಯಚೂರು ಹೊರವಲಯದ ಸಾಥಮೈಲ್ ನಿಂದ ಕಲ್ಮಲವರೆಗೆ ಇರುವ ರಸ್ತೆ ಆ …
Read More »ಯಡಿಯೂರಪ್ಪರನ್ನು ಕೈ ಬಿಟ್ಟರೆ ಕಾಂಗ್ರೆಸ್, ದಳದವರು ಅಧಿಕಾರಕ್ಕೆ ಬರ್ತಾರೆ: ನಾಗೇಶ್
ಕೋಲಾರ: ಯಡಿಯೂರಪ್ಪ ಇಲ್ಲದೆ ಬಿಜೆಪಿಗೆ ಅಸ್ಥಿತ್ವವಿಲ್ಲ, ಅವರು ಪೂರ್ಣಾವಧಿ ಸಿಎಂ ಅಗಿ ಕಾರ್ಯನಿರ್ವಹಿಸುತ್ತಾರೆ ಎಂದು ಕೋಲಾರದಲ್ಲಿ ಅಬಕಾರಿ ಸಚಿವ ಎಚ್ ನಾಗೇಶ್ ಹೇಳಿದ್ದಾರೆ.ಇಂದು ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಅವರು ಈ ರೀತಿ ಹೇಳಿಕೆ ನೀಡುವುದು ತಪ್ಪು ಕೋವಿಡ್ ಸಂದರ್ಭದಲ್ಲಿ ಜನರ ಪ್ರಾಣ ಹೋಗವಂತಹ ವೇಳೆ ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ. ಜೊತೆಗೆ ಯತ್ನಾಳ್ ಅವರು ಆಗಾಗ ಈ ರೀತಿ ಹೇಳಿಕೆ ನೀಡುವುದು ಸಹಜ. ಅದೊಂದು ಅವರಿಗೆ …
Read More »ಬಿಜೆಪಿ ನಾಯಕರು ಕಚ್ಚಾಡಿಕೊಂಡು ಸರ್ಕಾರ ಬಿದ್ರೆ, ನಾವು ಚುನಾವಣೆ ಎದುರಿಸಲು ಸಿದ್ದರಿದ್ದೇವೆ: ಸಿದ್ದರಾಮಯ್ಯ
ಹುಬ್ಬಳ್ಳಿ: ಬಿಜೆಪಿ ನಾಯಕರು ಕಚ್ಚಾಡಿಕೊಂಡು ಸರ್ಕಾರ ಬಿದ್ರೆ, ನಾವು ಚುನಾವಣೆ ಎದುರಿಸಲು ಸಿದ್ದರಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆಯ ಅಭ್ಯರ್ಥಿಯನ್ನು ಒಂದು ವರ್ಷದ ಮೊದಲ ಆಯ್ಕೆ ಮಾಡಿದ್ದೇವೆ. ಈ ಮೊದಲು ಪದವೀಧರರ ಚುನಾವಣೆಯನ್ನ ನಾವು ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ಆದರೆ ಈ ಬಾರಿ ಚುನಾವಣೆಗಳನ್ನ ಕಾಂಗ್ರೆಸ್ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದರು. ಕರ್ನಾಟಕದ ಎರಡು ಪದವೀಧರರ ಕ್ಷೇತ್ರಕ್ಕೆ ಚುನಾವಣೆ …
Read More »ಎಚ್ಚರಿಕೆ ಹಾಗೂ ಸುರಕ್ಷತೆಯಿಂದ ಹಬ್ಬಗಳನ್ನು ಆಚರಿಸುವಂತೆ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.
ಕಲ್ಲೋಳಿ : ಹಬ್ಬಗಳ ಆಚರಣೆಯ ಸಂಭ್ರಮದಲ್ಲಿ ಮೈ ಮರೆಯದೇ ಎಚ್ಚರಿಕೆ ಹಾಗೂ ಸುರಕ್ಷತೆಯಿಂದ ಹಬ್ಬಗಳನ್ನು ಆಚರಿಸುವಂತೆ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿನ್ನೆ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಜನತೆ ಕೋವಿಡ್ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದೇ ಇರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿಯವರು ಹೇಳಿದಂತೆ ಅಗತ್ಯ ಅರೋಗ್ಯ ನಿಯಮಗಳನ್ನು ಪಾಲಿಸಿ, ಮಾಸ್ಕ್ ಧರಿಸಿ, ನೈರ್ಮಲ್ಯ ಕಾಪಾಡಿ ಹಾಗೂ …
Read More »