ಮಂಗಳೂರು: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೂಡಿನ ಬಳಿಯ ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದ. ಈ ವೇಳೆ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿದೆ. ಹಾಸನ ಜಿಲ್ಲೆಯ ಕುಮಾರ್ ಮಂಗಳೂರಿನಲ್ಲಿ ಖಾಸಗಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಇಂದು ಬಂಟ್ವಾಳದ ಗೂಡಿನ ಬಳಿ ಹಳೆ ಸೇತುವೆಯ ಮೇಲಿಂದ ನೇತ್ರಾವತಿ ನದಿಗೆ ಹಾರಿದ್ದಾನೆ. ಇದನ್ನು ನೋಡಿದ …
Read More »Monthly Archives: ಅಕ್ಟೋಬರ್ 2020
ಪದೇ ಪದೇ ನನ್ನನ್ನು ಕೆಣಕಬೇಡಿ- ಸಿದ್ದರಾಮಯ್ಯಗೆ ಎಚ್‍ಡಿಕೆ ವಾರ್ನಿಂಗ್
ಬೆಂಗಳೂರು: ಜಾತಿ ಸಮೀಕ್ಷೆ ಬಿಡುಗಡೆಗೆ ಎಚ್‍ಡಿಕೆ ಅಡ್ಡಗಾಲು ಹಾಕಿದ್ದರು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೆಂಡಾಮಂಡಲರಾಗಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಪದೇ ಪದೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ರಾಜಕೀಯ ತೆವಲಿಗೆ ಸಿದ್ದರಾಮ್ಯಯ ಅವರು ಏನೋನೋ ಮಾತಾಡೋದು ಬೇಡ. ಅವರಿಗೆ ಜಾತಿ ಸಮೀಕ್ಷೆಗೆ ಅಡ್ಡಗಾಲು ಹಾಕಿದ್ದು, ನಿನ್ನೆ ರಾತ್ರಿ ಅವರಿಗೆ ಕನಸ್ಸು ಬಿದ್ದಿದಂತಾ? ನನ್ನ ವಿರುದ್ಧ ಟೀಕೆ ಮಾಡಲು ಬೇರೆ …
Read More »ಜಿಲ್ಲೆಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ ಜೊಲ್ಲೆ, ಹುಕ್ಕೇರಿ ನಡುವೆ ಬಿಗ್ ಫೈಟ್!
ಬೆಳಗಾವಿ : ಜಿಲ್ಲೆಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದ್ದು, ನಿರ್ದೇಶಕರ ಸ್ಥಾನಕ್ಕೆ ಅ.22ರಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ನ.6ಕ್ಕೆ ನಡೆಯುವ ಚುನಾವಣೆಗೆ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಜಿಲ್ಲೆಯ ಹತ್ತು ತಾಲ್ಲೂಕಿನಿಂದ ತಲಾ ಒಬ್ಬರು ನಿರ್ದೇಶಕರು ಚುನಾಯಿತರಾಗುತ್ತಾರೆ. ಚಿಕ್ಕೋಡಿಯಿಂದ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು ಸಂಸದ ಅಣ್ಣಾಸಾಹೇಬ ಜೊಲ್ಲೆ ಮತ್ತು ಶಾಸಕ ಗಣೇಶ ಹುಕ್ಕೇರಿ ನಡುವೆ ಬಿಗ್ ಫೈಟ್ ನಡೆದಿದೆ. ಡಿಸಿಎಂ ಲಕ್ಷ್ಮಣ ಸವದಿ ಮತ್ತು …
Read More »ಚಿಕ್ಕೋಡಿ ಪುರಸಭೆಗೆ ಬಿಜೆಪಿ ಬೆಂಬಲಿತ ಪ್ರವೀಣ ಕಾಂಬಳೆ ಅಧ್ಯಕ್ಷರಾಗಿ, ಸಂಜಯ ಕವಟಗಿಮಠ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ
ಚಿಕ್ಕೋಡಿ: ಚಿಕ್ಕೋಡಿ ಪುರಸಭೆಗೆ ಬಿಜೆಪಿ ಬೆಂಬಲಿತ ಪ್ರವೀಣ ಕಾಂಬಳೆ ಅಧ್ಯಕ್ಷರಾಗಿ, ಸಂಜಯ ಕವಟಗಿಮಠ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಚುನಾವಣಾಧಿಕಾರಿಯಾಗಿ ತಹಶೀಲ್ದಾರರ ಸುಭಾಷ ಸಂಪಗಾವಿ ಕಾರ್ಯನಿರ್ವಹಿಸಿದರು. 23 ಸದಸ್ಯರ ಬಲದ ಪುರಸಭೆಯಲ್ಲಿ 13 ಬಿಜೆಪಿ ಬೆಂಬಲಿತ ಹಾಗೂ 10 ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಂದ ಮಾತ್ರ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಚುನಾವಣಾಧಿಕಾರಿ ಅವಿರೋಧವಾಗಿ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ …
Read More »ಬೆಳಗಾವಿ ಉತ್ತರ ಕ್ಷೇತ್ರದ ಹಲವೆಡೆ ಮನೆ ಕಳೆದುಕೊಂಡ ಹಲವರ ಹೆಸರು ಪಟ್ಟಿಯಲ್ಲಿ ಇಲ್ಲ:
ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕಂದಾಯ ಸಚಿವರಾದ ಶ್ರೀ ಆರ್.ಅಶೋಕ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಅತಿವೃಷ್ಟಿ/ ಪ್ರವಾಹ ಸ್ಥಿತಿಗತಿ, ಕೈಗೊಂಡ ಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಬೆಳಗಾವಿ ಉತ್ತರ ಕ್ಷೇತ್ರದ ಹಲವೆಡೆ ಮನೆ ಕಳೆದುಕೊಂಡ ಹಲವರ ಹೆಸರು ಪಟ್ಟಿಯಲ್ಲಿ ಇಲ್ಲ. ಹಾಗೂ ನನ್ನ ಮತಕ್ಷೇತ್ರದಲ್ಲಿ ಕಳೆದ ಮಳೆಗಾಲದಲ್ಲಿ ಬಿದ್ದ ಮನೆಗಳನ್ನು ಕಟ್ಟಲು 2ನೇ ಅನುದಾನ ಕೂಡಲೇ ಬಿಡುಗಡೆ ಮಾಡಬೇಕು ಎಂದು ಸಂಭಂದಿಸಿದ ಅಧಿಕಾರಿಗಳು ಇದನ್ನು ಸರಿಪಡಿಸಲು ಕೂಡಲೇ ಕ್ರಮ …
Read More »ಕಂದಾಯ ಇಲಾಖೆಯ ಸಚಿವ ಆರ್. ಅಶೋಕ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
ಬೆಳಗಾವಿ : ಕಳೆದ ವರ್ಷ ಆಗಸ್ಟ್ ನಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡವರ ಸಮೀಕ್ಷೆ ಪೂರ್ಣಗೊಂಡು ವಸತಿ ನಿಗಮದ ತಂತ್ರಾಂಶದಲ್ಲಿ ದಾಖಲಿಸಲಾಗಿರುವ ಕುಟುಂಬಗಳಿಗೆ ತಕ್ಷಣವೇ ಪರಿಹಾರ ಒದಗಿಸಬೇಕು. ಈಗಾಗಲೇ ಪರಿಹಾರ ಪಡೆದವರು ಮನೆ ನಿರ್ಮಿಸಲು ಕ್ರಮಕೈಗೊಳ್ಳಬೇಕು ಎಂದು ಕಂದಾಯ ಇಲಾಖೆಯ ಸಚಿವ ಆರ್. ಅಶೋಕ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅತಿವೃಷ್ಟಿ ಹಾಗೂ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ(ಅ.19) ನಡೆದ ಪ್ರಗತಿ …
Read More »ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಸ್ಥಾನಗಳಲ್ಲಿಯೂ ಗೆಲುವು
ಬೆಂಗಳೂರು : ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಚುನಾವಣೆಯಲ್ಲಿ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಸ್ಥಾನಗಳಲ್ಲಿಯೂ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಕ್ರಮವಾಗಿ ಚುನಾವಣೆ ನಡೆಯುತ್ತಿದೆ ಎಂದು ಬಹಿಷ್ಕಾರ ಮಾಡಿದ್ದರು. ಇದರಿಂದಾಗಿ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್‌ಗೆ ಹಿನ್ನಡೆಯಾಗಿದೆ. ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರಲು ಈ ಚುನಾವಣೆ ಸಹಕಾರಿಯಾಗಿದೆ.ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಕ್ಷೇತರ ಶಾಸಕ ಶರತ್ …
Read More »ಕಣ್ಣೇದುರು ರೈತರ ಸತ್ತರೂ ಭಾಷಣ ಮುಂದುವರಿಸಿದ ಬಿಜೆಪಿ ನಾಯಕರು
ಮಧ್ಯಪ್ರದೇಶ: ಮಧ್ಯಪ್ರದೇಶದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಬಿಜೆಪಿಯ ರಾಜ್ಯಸಭಾ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಭಾಷಣ ಮಾಡಬೇಕಿದ್ದ ಸಂದರ್ಭದಲ್ಲಿ ರೈತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಭಾನುವಾರ ಸಾರ್ವಜನಿಕ ಸಭೆ ನಡೆಯುವ ಸಂದರ್ಭದಲ್ಲಿ 80 ವರ್ಷದ ರೈತ ಮೃತಪಟ್ಟಿದ್ದಾರೆ. ನವೆಂಬರ್ 3ರಂದು ನಡೆಯುವ ಉಪ ಚುನಾವಣೆ ಸಂಬಂಧ ಈ ಪ್ರಚಾರ ಸಭೆ ಆಯೋಜಿಸಲಾಗಿತ್ತು.ಬಿಜೆಪಿಯ ಪಂಧಾನ ಕ್ಷೇತ್ರದ ಶಾಸಕ ರಾಮ್ ಡಾಂಗೊರೆ ಭಾಷಣ ಮಾಡುವ ಸಂದರ್ಭದಲ್ಲಿ ಕುರ್ಚಿಯ ಮೇಲೆ ಕುಳಿತಿದ್ದ ರೈತ ಜೀವನ್ …
Read More »PUBG ಆಡಬೇಡಿ ಎಂದು ತಂದೆ ಮಗನಿಗೆ ಹೇಳಿದ್ದಕ್ಕೆ ತನ್ನ ತಂದೆಯ ಕತ್ತನ್ನು ಸೀಳಿ ದ್ದಾನೆ
ನವದೆಹಲಿ : ಆರೋಪಿ ಅಮೀರ್ ಈ ಕೊಲೆ ಮಾಡಲಾಗಿದ್ದು ಘಟನೆಯಲ್ಲಿ ತಂದೆ ತೀವ್ರವಾಗಿ ಗಾಯಗೊಳಿಸಿದ ಬಳಿಕ ತಾನುಕೂಡ ಚಾಕುವಿನಿಂದ ಆತ್ಮಹತ್ಯೆಗೆ ಯತ್ನಸಿದ್ದ ಎನ್ನಲಾಗಿದೆ ಸದ್ಯ ತಂದೆ ಮತ್ತು ಮಗ ಇಬ್ಬರೂ ಮೀರತ್ ವೈದ್ಯಕೀಯ ಕಾಲೇಜಿನಲ್ಲಿ ದಾಖಲಾಗಿದ್ದಾರೆ.ವರದಿಗಳ ಪ್ರಕಾರ, ಜಿಲ್ಲೆಯ ಖಾರ್ಖೋಡಾ ಪಟ್ಟಣದ ಜಮ್ನಗರದಲ್ಲಿ ಗುರುವಾರ ಈ ಘಟನೆ ನಡೆದಿದ್ದರೂ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿಲ್ಲ ಎನ್ನಲಾಗಿದ್ದು, ತಡವಾಗಿ ಈ ಘಟನೆ ಬೆಳಕಿಗೆ ಬಂದಿದೆ.ಗೇಮಿಂಗ್‌ನಲ್ಲಿ ಹೆಚ್ಚು ಸಮಯ ಕಳೆಯುವುದನ್ನು ತಡೆಯುವಂತೆ ತನ್ನ …
Read More »ಚೀನಾದ ಸೇನೆಗೆ ಸೇರಿದ್ದ ಸೈನಿಕನೊಬ್ಬನನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ.
ಲಡಾಖ್: ಲಡಾಖ್‌ನ ಚುಮಾರ್-ಡೆಮ್‌ಚೋಕ್ ಪ್ರದೇಶದಲ್ಲಿ ಚೀನಾದ ಸೇನೆಗೆ ಸೇರಿದ್ದ ಸೈನಿಕನೊಬ್ಬನನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ. ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಸೈನಿಕ ಅಜಾಗರೂಕತೆಯಿಂದ ಭಾರತೀಯ ಭೂಪ್ರದೇಶವನ್ನು ಪ್ರವೇಶಿಸಿರಬಹುದು ಎನ್ನಲಾಗಿದ್ದು ವಶಕ್ಕೆ ಪಡೆದ ಸೈನಿಕನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ಮುಗಿದ ನಂತರ ಪ್ರೋಟೋಕಾಲ್ ಪ್ರಕಾರ ಅವನನ್ನು ಚೀನಾಗೆ ವಾಪಾಸ್ ಕಳಿಸಲಾಗುತ್ತದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.ಲಡಾಖ್ ನಲ್ಲಿ ನಡೆಯುತ್ತಿರುವ ಗಡಿ ಸಂಘರ್ಷದ ನಡುವೆ …
Read More »