Breaking News

Monthly Archives: ಅಕ್ಟೋಬರ್ 2020

ಅಕ್ರಮವಾಗಿ ಸಂಗ್ರಹಿಸಿದ್ದ 420 ಮೂಟೆ ಯೂರಿಯಾ ಗೊಬ್ಬರವನ್ನು ಕೃಷಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ

ಕೋಲಾರ: ಅಕ್ರಮವಾಗಿ ಸಂಗ್ರಹಿಸಿದ್ದ 420 ಮೂಟೆ ಯೂರಿಯಾ ಗೊಬ್ಬರವನ್ನು ಕೃಷಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಮಾಲೂರು ಕೃಷಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ರೈತರಿಗೆ ಸರಬರಾಜು ಮಾಡಬೇಕಿದ್ದ ಯೂರಿಯಾ ಗೊಬ್ಬರವನ್ನು ಖಾಸಗಿ ಕಾರ್ಖಾನೆ ಗೋಡೌನ್‍ನಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೃಷಿ ಅಧಿಕಾರಿಗಳು 420 ಮೂಟೆ ಗೊಬ್ಬರವನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಾಲೂರು ಸಹಾಯಕ ಕೃಷಿ ಅಧಿಕಾರಿ ಚಂದ್ರಪ್ಪ ಅವರ …

Read More »

ಬಿಟೆಕ್ ವಿದ್ಯಾರ್ಥಿನಿ ಕೊಲೆ ಪ್ರಕರಣ- ಪೊಲೀಸರ ಎದುರು ಆರೋಪಿಯ ಅಚ್ಚರಿಯ ಹೇಳಿಕೆ

ಹೈದರಾಬಾದ್: ಆಂಧ್ರ ಪ್ರದೇಶದ ವಿಜಯರವಾಡ ನಗರದ ಬಿಟೆಕ್ ವಿದ್ಯಾರ್ಥಿನಿ ದಿವ್ಯ ತೇಜಸ್ವಿನಿ ಕೊಲೆ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ಲಭಿಸಿದ್ದು, ಪ್ರಕರಣದ ಆರೋಪಿ ನಾಗೇಂದ್ರ ಪೊಲೀಸರ ಎದುರು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾನೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ದಿವ್ಯ ತೇಜಸ್ವಿನಿ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿ ನಾಗೇಂದ್ರ ಬಾಬು, ಗುಂಟೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸದ್ಯ ಕೃತ್ಯದ ಕುರಿತು ಪೊಲೀಸರ ಬಳಿ …

Read More »

ಚಿರಂಜೀವಿ ಸರ್ಜಾ ನಮ್ಮೊಂದಿಗೆ ಇದ್ದಿದ್ರೆ 35ವರ್ಷ ತುಂಬುತ್ತಿತ್ತು.

ಬೆಂಗಳೂರು: ಇಂದು ಯುವಸಾಮ್ರಾಟ್ ಚಿರಂಜೀವಿ ಸರ್ಜಾ ನಮ್ಮೊಂದಿಗೆ ಇದ್ದಿದ್ರೆ 35ವರ್ಷ ತುಂಬುತ್ತಿತ್ತು. ಆದ್ರೆ ಇವತ್ತು ಚಿರು ಸರ್ಜಾ ನಮ್ಮೊಂದಿಗಿಲ್ಲ ಅನ್ನೋ ನೋವಿನಲ್ಲೇ ಇಂದು ಸರ್ಜಾ ಕುಟುಂಬದವರು ಹಾಗೂ ಅವರ ಅಭಿಮಾನಿ ಬಳಗವಿದೆ.ಚಿರು ಕುಡಿಯನ್ನು ಬರಮಾಡಿಕೊಳ್ಳಲು ಕಾತುರದಿಂದ ಎದುರು ನೋಡ್ತಿದ್ದಾರೆ. ಧ್ರುವ ಸರ್ಜಾ ಬೃಂದಾವನದಲ್ಲಿರುವ ಚಿರು ಸಮಾಧಿ ಸ್ಥಳಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಇಷ್ಟೆಲ್ಲಾ ಕಾರ್ಯಕ್ರಮಗಳ ಮಧ್ಯೆ ಸಂತೋಷ್ ಚಿತ್ರಮಂದಿರದಲ್ಲಿ ರೀ-ರಿಲೀಸ್ ಆಗಿರುವ ಶಿವಾರ್ಜುನ್ ಚಿತ್ರವನ್ನು ಧ್ರುವ ನೋಡಲಿದ್ದು, ಅಭಿಮಾನಿಗಳ ಜೊತೆಗೆ …

Read More »

ನಿಮಗೆ ಕನ್ನಡಿಗರು ಎಂದ್ರೆ ಇಷ್ಟವಿಲ್ವಾ? ಅಥವಾ ನಮ್ಮ ಯಡಿಯೂರಪ್ಪ ಎಂದ್ರೆ ಇಷ್ಟವಿಲ್ವಾ? ಎಂದು ಟ್ವೀಟ್ ಮಾಡುವ ಮೂಲಕ ನರೇಂದ್ರ ಮೋದಿಗೆ ಪ್ರಶ್ನಿಸಿದ್ದಾರೆ

ಬೆಂಗಳೂರು: ಕಳೆದ ಐದಾರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಇದರಿಂದ ಜನರು ಮನೆ-ಮಠ ಕಳೆದುಕೊಂಡು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಆದ್ರೆ, ಈ ಬಗ್ಗೆ ಕೇಂದ್ರ ಸರ್ಕಾರವಾಗಲಿ ಅಥವಾ ರಾಜ್ಯ ಸರ್ಕಾರವಾಗಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಇದರಿಂದ ಆಕ್ರೋಶಗಳ ವ್ಯಕ್ತವಾಗತ್ತಿವೆ. ಅದರಲ್ಲೂ ಆಂಧ್ರಪ್ರದೇಶ ಮತ್ತು ತೆಲಂಗಾಣದ ಪ್ರವಾಹದ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಬಗ್ಗೆ …

Read More »

ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಯುವತಿ : ಬೆಂಕಿ ಹಚ್ಚಿಕೊಂಡು ಮೃತಪಟ್ಟಿದ್ದಾಳೆ

ಲಖನೌ: ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಯುವತಿಯೊಬ್ಬಳು ನ್ಯಾಯಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಕೋರಿ ಬೆಂಕಿ ಹಚ್ಚಿಕೊಂಡು ಮೃತಪಟ್ಟಿದ್ದಾಳೆ. ಗಂಡನ ಮನೆಯವರು ಕೊಡುವ ಹಿಂಸೆಯನ್ನು ಸಹಿಸಲಾರದೇ ಉತ್ತರ ಪ್ರದೇಶದ ವಿಧಾನಸಭಾ ಕಟ್ಟಡದ ಎದುರೇ ಮೊನ್ನೆ ಬೆಂಕಿಹಚ್ಚಿಕೊಂಡಿದ್ದ ಈ ಯುವತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ. ಅಂಜನಾ ತಿವಾರಿ ಅಲಿಯಾಸ್​ ಆಯೇಷಾ ಈ ದುರ್ದೈವಿ. ಗಂಡನ ಮನೆಯವರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದರಿಂದ ಮುಖ್ಯಮಂತ್ರಿಗಳನ್ನೇ ಭೇಟಿ …

Read More »

ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ಮಳೆ ಕ್ಷೀಣಿಸಿದೆ.

ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ಮಳೆ ಕ್ಷೀಣಿಸಿದೆ. ನಗರದಲ್ಲಿ ಗುರುವಾರ ರಾತ್ರಿಯಿಂದ ಜಿಟಿಜಿಟಿ ಮಳೆ ಬಿದ್ದಿತು. ಬೆಳಿಗ್ಗೆಯಿಂದಲೂ ಆಗಾಗ ಸಾಧಾರಣ ಮಳೆಯಾಗುತ್ತಿದೆ. ಚಿಕ್ಕೋಡಿ ತಾಲ್ಲೂಕಿನಲ್ಲಿ ಗುರುವಾರ ರಾತ್ರಿಯಿಂದ ಮಳೆ ಪ್ರಮಾಣ ಗಣನೀಯವಾಗಿ ಕ್ಷೀಣಿಸಿದೆ. ಆದರೆ, ಮಹಾರಾಷ್ಟ್ರದಿಂದ ಕೃಷ್ಣಾ ಮತ್ತು ಉಪ ನದಿಗಳಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಮಾತ್ರ ನಿರಂತರ ಏರಿಕೆ ದಾಖಲಾಗುತ್ತಿದೆ. ಶುಕ್ರವಾರ ಬೆಳಿಗ್ಗೆ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 1.04 ಲಕ್ಷ ಮತ್ತು ದೂಧ್‌ಗಂಗಾ ನದಿಯಿಂದ 15,135 ಕ್ಯುಸೆಕ್ ಸೇರಿದಂತೆ …

Read More »

25 ಸಾವಿರ ಕೋಟಿ ಪ್ಯಾಕೇಜ್‌ ಘೋಷಿಸಬೇಕು’ ಎಂದು ಕನ್ನಡ ಚಳವಳಿ ವಾಟಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್‌

ಬೆಳಗಾವಿ: ‘ಕಲ್ಯಾಣ ಹಾಗೂ ಮುಂಬೈ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಖುದ್ದು ವೀಕ್ಷಿಸಬೇಕು ಮತ್ತು ಸಂತ್ರಸ್ತರ ನೆರವಿಗೆ ₹ 25 ಸಾವಿರ ಕೋಟಿ ಪ್ಯಾಕೇಜ್‌ ಘೋಷಿಸಬೇಕು’ ಎಂದು ಕನ್ನಡ ಚಳವಳಿ ವಾಟಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್‌ ಒತ್ತಾಯಿಸಿದರು. ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಶುಕ್ರವಾರ ‍ಪ್ರತಿಭಟನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ‘ಪ್ರವಾಹ ಹಾಗೂ ಅತಿವೃಷ್ಟಿಯಿಂದಾಗಿ ಭಾರಿ ಹಾನಿಯಾಗಿದೆ. ಆದರೆ, …

Read More »

HD ದೇವೇಗೌಡ ಸೇತುವೆ ಮುಳುಗಡೆ: ಅಲ್ಲೇ ವಾಷಿಂಗ್​, ಕ್ಲೀನಿಂಗ್​, ಸ್ವಿಮ್ಮಿಂಗ್, ಡ್ಯಾನ್ಸಿಂಗ್​!

ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಬಳಿಯಿರುವ ದೇವೇಗೌಡ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಹಾಗಾಗಿ, ಶೂರ್ಪಾಲಿ ಮತ್ತು ಜಮಖಂಡಿ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ಅಚ್ಚರಿಯ ಸಂಗತಿಯೆಂದರೆ ಸೇತುವೆ ಮೇಲೆ ಅಪಾರ ಪ್ರಮಾಣದಲ್ಲಿ ಹರಿಯುತ್ತಿರುವ ನೀರಿನಲ್ಲೇ ಸ್ಥಳೀಯರು ತಮ್ಮ ವಾಹನಗಳನ್ನು ತೊಳೆಯುತ್ತಿದ್ದಾರೆ. ಅಷ್ಟೇ ಅಲ್ಲ, ಮಹಿಳೆಯರು ಬಟ್ಟೆ ಒಗೆಯುತ್ತಿರುವುದು ಹಾಗೂ ಮಕ್ಕಳು ನೀರಲ್ಲಿ ಈಜುತ್ತಾ ಕುಣಿದು ಕುಪ್ಪಳಿಸುತ್ತಿರುವ ದೃಶ್ಯಗಳು ಸಹ ಕಂಡುಬಂದಿವೆ. HD …

Read More »

ಕಳಪೆ ಕಾಮಗಾರಿ: ಸೇತುವೆ ಮುಳುಗಡೆಯಾಗದಿದ್ರೂ ವಾಹನ ಸಂಚಾರ ಬಂದ್

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಸೇತುವೆ ಮುಳುಗಡೆಯಾಗದಿದ್ದರೂ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಸೇತುವೆ ಮೇಲೆ ವಾಹನ ಸಂಚಾರ ಬಂದ್ ಮಾಡಲಾಗಿದೆ.    ಅಚ್ಚರಿಯ ಸಂಗತಿಯೆಂದರೆ, ಭೀಮಾ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದು 2 ವರ್ಷಗಳ ಹಿಂದಷ್ಟೆ ಉದ್ಘಾಟನೆಯಾಗಿದ್ದ ಸೇತುವೆಯ ಗುಣಮಟ್ಟ ಕಳಪೆಯಾಗಿರುವ ಆರೋಪ ಕೇಳಬಂದಿದೆ. ಹೀಗಾಗಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿಲ್ಲವೆಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ನಿನ್ನೆಯಿಂದಲೇ ಸೇತುವೆಯ ಮೇಲೆ ವಾಹನ ಸಂಚಾರ ಸ್ಥಗಿತವಾಗಿದ್ದ ಹಿನ್ನೆಲೆಯಲ್ಲಿ ಕಲಬುರಗಿ ಬೆಂಗಳೂರು …

Read More »

ಪದವೀಧರ ಕ್ಷೇತ್ರಗಳಿಗೆ ಚುನಾವಣೆ: 118 ಬಂದೂಕು, ಪಿಸ್ತೂಲ್ ಪೊಲೀಸರ ವಶಕ್ಕೆ

ಹುಬ್ಬಳ್ಳಿ: ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಹಿನ್ನೆಲೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ವ್ಯಾಪ್ತಿಯಲ್ಲಿ ಲೈಸನ್ಸ್ ಹೊಂದಿರುವ ಸಾರ್ವಜನಿಕರ ಬಂದೂಕು ಮತ್ತು ಪಿಸ್ತೂಲ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 118 ಬಂದೂಕು ಮತ್ತು ಪಿಸ್ತೂಲ್​ಗಳನ್ನು ಮಾಲೀಕರು ಪೊಲೀಸರ ವಶಕ್ಕೆ ನೀಡಿದ್ದಾರೆ. ಚುನಾವಣೆ ಫಲುತಾಂಶದ ಬಳಿಕ ಮಾಲೀಕರುಗಳಿಗೆ ಅದನ್ನು ಮರಳಿ ಹಸ್ತಾಂತರ ಮಾಡಲಾಗುತ್ತದೆ.   *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ …

Read More »