ಹುಬ್ಬಳ್ಳಿ: ವಿವಾದದಿಂದಲೇ ಸುದ್ದಿಯಾಗುತ್ತಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಎಡವಟ್ಟು ನಡೆದಿದೆ. ಇದೀಗ ಕಿಮ್ಸ್ ಆರೋಗ್ಯ ಅಧಿಕಾರಿಗಳು ಮಾಡಿದ ಕೆಲಸದಿಂದ ಮನೆಯ ಹಿರಿಯನ ಮುಖವನ್ನು ನೋಡದೇ ಅಂತ್ಯಕ್ರಿಯೆ ಮಾಡುವಂತ ಪರಿಸ್ಥಿತಿ ತಂದಿಟ್ಟಿರುವುದು ಸಂಬಂಧಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸುಳ್ಳ ಗ್ರಾಮದ 72 ವರ್ಷದ ವೃದ್ಧ ಬಸಪ್ಪ ಹುಬ್ಬಳ್ಳಿ ನೆಗಡಿ ಹಾಗೂ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಅವರನ್ನು ಕೋವಿಡ್ ವಾರ್ಡಿಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಕೋವಿಡ್ ಇದೆ …
Read More »Monthly Archives: ಅಕ್ಟೋಬರ್ 2020
ಹೊಸ ಯೂಟ್ಯೂಬ್ ಚಾನೆಲ್ ತೆರೆದ ಆಸೀಸ್ ಆಟಗಾರ ಡೇವಿಡ್ ವಾರ್ನರ್ ಅವರನ್ನು ಭಾರತದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರು ಕಾಲೆಳೆದಿದ್ದಾರೆ.
ನವದೆಹಲಿ: ಹೊಸ ಯೂಟ್ಯೂಬ್ ಚಾನೆಲ್ ತೆರೆದ ಆಸೀಸ್ ಆಟಗಾರ ಡೇವಿಡ್ ವಾರ್ನರ್ ಅವರನ್ನು ಭಾರತದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರು ಕಾಲೆಳೆದಿದ್ದಾರೆ. ಡೇವಿಡ್ ವಾರ್ನರ್ ಅವರು ಸದ್ಯ ಯುಇಎಯಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಭಾಗಿಯಾಗಿದ್ದಾರೆ. ತನ್ನ ನಾಯಕತ್ವದ ಸನ್‍ರೈಸಸ್ ಹೈದರಾಬಾದ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ನಿನ್ನೆ ನಡೆದ ಪಂಜಾಬ್ ವಿರುದ್ಧ ಪಂದ್ಯದಲ್ಲಿ ಹೈದರಾಬಾದ್ ತಂಡ 69 ರನ್‍ಗಳಿಂದ ಭರ್ಜರಿ ಗೆಲುವು ಸಾಧಿಸಿತ್ತು. ಈ ನಡುವೆ ಇಂದು ಟ್ವೀಟ್ ಮಾಡಿರುವ …
Read More »ಎರಡು ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಬೆಳೆಯುತ್ತದೆ ಎಂಬ ಭಯ: ಹೆಚ್‍ಡಿ.ರೇವಣ್ಣ ಆಕ್ರೋಶ
ಹಾಸನ: ಹಾಸನ ನಗರಸಭೆ ಅಧ್ಯಕ್ಷಗಾದಿಯನ್ನು ಎಸ್‍ಟಿ ಅಭ್ಯರ್ಥಿಗೆ ಮೀಸಲಿರಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಹಾಸನದಲ್ಲಿ ಶಾಸಕ ಹೆಚ್‍ಡಿ.ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ. ಹಾಸನ ನಗರಸಭೆ ಅಧ್ಯಕ್ಷರಾಗಿ ಬಿಜೆಪಿ ಅಭ್ಯರ್ಥಿ ಆಯ್ಕೆಯಾಗುವುದು ಖಚಿತವಾಗಿದ್ದು, ಬಹುಮತವಿದ್ದರೂ ಜೆಡಿಎಸ್ ಪಕ್ಷ ಅಧ್ಯಕ್ಷ ಸ್ಥಾನದಿಂದ ವಂಚಿತವಾಗಿದೆ. ಈ ಬಗ್ಗೆ ಹಾಸನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ ರೇವಣ್ಣ, ಮೀಸಲು ನಿಗದಿಯಲ್ಲಿ ನ್ಯಾಯ ದೇವತೆಗೆ ಅನ್ಯಾಯ ಮಾಡಿದ್ದಾರೆ ಎಂದರು. ಎರಡು ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಬೆಳೆಯುತ್ತದೆ ಎಂಬ ಭಯ ಇರಬಹುದು. ಜಿಲ್ಲೆಯಲ್ಲಿ …
Read More »ಧೋನಿ ಐಪಿಎಲ್-2020ಯಲ್ಲಿ ವಿಫಲವಾಗಿದ್ದಕ್ಕೆ ವ್ಯಕ್ತಿಯೋರ್ವ ಅವರ ಮಗಳು ಝೀವಾ ಮೇಲೆ ಅತ್ಯಾಚಾರ ಮಾಡುವ ಬೆದರಿಕೆ ಹಾಕಿದ್ದಾನೆ.
ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಐಪಿಎಲ್-2020ಯಲ್ಲಿ ವಿಫಲವಾಗಿದ್ದಕ್ಕೆ ವ್ಯಕ್ತಿಯೋರ್ವ ಅವರ ಮಗಳು ಝೀವಾ ಮೇಲೆ ಅತ್ಯಾಚಾರ ಮಾಡುವ ಬೆದರಿಕೆ ಹಾಕಿದ್ದಾನೆ. ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್‍ನಲ್ಲಿ ಧೋನಿ ನೇತೃತ್ವದ ತಂಡ ಆರಂಭದಲ್ಲೇ ಎಡವಿದೆ. ಟೂರ್ನಿಯ ಆರಂಭದ ಮೊದಲ ಪಂದ್ಯವನ್ನು ಗೆದ್ದರೂ ನಂತರ ಅದೇ ಲಯದಲ್ಲಿ ತಂಡವನ್ನು ತೆಗೆದುಕೊಂಡು ಹೋಗುವಲ್ಲಿ ಧೋನಿ ಎಡವಿದ್ದಾರೆ. ಹೀಗಾಗಿ ವ್ಯಕ್ತಿಯೋರ್ವ ಧೋನಿಯ ಐದು ವರ್ಷದ ಮಗಳನ್ನು ಅತ್ಯಾಚಾರ ಮಾಡುವುದಾಗಿ ಟ್ವಿಟ್ಟರಿನಲ್ಲಿ ಕಮೆಂಟ್ ಮಾಡಿದ್ದಾನೆ. …
Read More »ಶಾಲೆ ಆರಂಭ: ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬಿಡುಗಡೆ
ಬೆಂಗಳೂರು: ಶಾಲೆಗಳನ್ನು ಆರಂಭಿಸುವ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಹೇಳಿಕೆಯ ಪೂರ್ಣ ಪಾಠ ಹೀಗಿದೆ – “ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು …
Read More »ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು.
ಶಿವಮೊಗ್ಗ: ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಕುರಿತು ಈಶ್ವರಪ್ಪ ಹೇಳಿಕೆಗೆ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು. ಮೀಸಲಾತಿ ಹೆಚ್ಚಳ ಕುರಿತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ. ಒಂದು ಬಾರಿ ವಾಲ್ಮೀಕಿ ಜನಾಂಗ ಬೇಡಿಕೆ ಈಡೇರಿಸಲಾಗುವುದು ಎನ್ನುತ್ತಾರೆ. ಮತ್ತೊಮ್ಮೆ ಕುರುಬ ಜನಾಂಗ ಸೇರಿದಂತೆ ಇನ್ನೂ ಎರಡು ಮೂರು …
Read More »ಮಂಕಡಿಂಗ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ!
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ನಡುವಿನ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ , ಆರ್ಸಿಬಿಯ ಓಪನರ್ ಆರನ್ ಫಿಂಚ್ ಅವರನ್ನು ‘ಮಂಕಡಿಂಗ್’ ಮಾಡದೆ ಕೇವಲ ಎಚ್ಚರಿಸಿದ್ದು ಕ್ರಿಕೆಟ್ ವಲಯಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ . ಭಾರತದ ಮಾಜಿ ಕ್ಯಾಪ್ಟನ್ಗಳಾದ ಸುನಿಲ್ ಗವಾಸ್ಕರ್ ಮತ್ತು ಕಪಿಲೆ ದೇವ್ , ನಾನ್ಸ್ಟ್ರೈಕರ್ ಬ್ಯಾಟ್ಸ್ಮನ್ನನ್ನು ಮಂಕಡಿಂಗ್ ( ನಾನ್ಸ್ಟ್ರೈಕರ್ ಬ್ಯಾಟ್ಸ್ಮನ್ , ಬೌಲರ್ ಚೆಂಡೆಸೆಯುವ ಮೊದಲೇ ಕ್ರೀಸ್ ಬಿಟ್ಟು ಮುಂದೆ ಸಾಗಿದಾಗ ಬೌಲರ್ ಅವನನ್ನು …
Read More »ಜೈಲಿನ ಸೆಲ್ ನಲ್ಲೇ ಕಿತ್ತಾಡಿಕೊಳ್ಳುತ್ತಿದ್ದು ನಟಿಯರು : ಜೈಲ್ ಸಿಬ್ಬಂದಿಗಳಿಗೆ ತಲೆ ನೋವು
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಜೈಲಿನ ಸೆಲ್ ನಲ್ಲೇ ಕಿತ್ತಾಡಿಕೊಳ್ಳುತ್ತಿದ್ದು, ಜೈಲು ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಂದೇ ಕೊಠಡಿಗೆ ರಾಗಿಣಿ, ಸಂಜನಾರನ್ನು ಶಿಫ್ಟ್ ಮಾಡಲಾಗಿದ್ದು, ಜೈಲಿನಲ್ಲೇ ಇಬ್ಬರೂ ಪ್ರತಿ ದಿನ ಕಾದಾಟ ನಡೆಸಿದ್ದಾರೆ. ಚಿಕ್ಕ ಚಿಕ್ಕ ವಿಷಯಗಳಿಗೂ ಪರಸ್ಪರ ಒಬ್ಬರ ಮೇಲೆ ಇನ್ನೊಬ್ಬರು ಆರೋಪ ಮಾಡಿಕೊಳ್ಳುತ್ತಿದ್ದು, ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೂ ಹೋಗುತ್ತಿದ್ದಾರೆ ಎನ್ನಲಾಗಿದೆ. ಅಕ್ಕಪಕ್ಕದ …
Read More »ಕಬ್ಬಿನ್ ಬಾಕಿ ಬಿಲ್ ಗಾಗಿ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡ ರೈತ
ಬೆಳಗಾವಿ: ಮಲಪ್ರಭಾ ಸಕ್ಕರೆ ಕಾರ್ಖಾನೆಯಿಂದ ಕಬ್ಬಿನ್ ಬಾಕಿ ಬಿಲ್ ನೀಡದ ಇರುವ ಹಿನ್ನೆಲೆಯಲ್ಲಿ ರೈತನೊಬ್ಬ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ. https://www.facebook.com/105350550949710/posts/202232631261501/?sfnsn=wiwspmo ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದ ಶಿವಾನಂದ ಗೋಹಾರ್ ತನ್ನ ಸಮಾಧಿಯನ್ನು ತೋಡಿಕೊಂಡ ರೈತ ಎನ್ನಲಾಗುತ್ತಿದೆ. ಮಲಪ್ರಭಾ ಸಕ್ಕರೆ ಕಾರ್ಖಾನೆಗೆ 114 ಟನ್ ಕಬ್ಬಿನ, 85 ಸಾವಿರ ರೂಪಾಯಿ ಬಾಕಿ ಬಿಲ್ ಬರಬೇಕು . ಕಾರ್ಖಾನೆಗೆ ಈಗಾಗಲೇ 20 …
Read More »ಮೈಸೂರು ದಸರಾ ಉತ್ಸವ ತುಂಬಾ ಸರಳವಾಗಿ ನಡೆಯಲಿದೆ
ಮೈಸೂರು: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವ ತುಂಬಾ ಸರಳವಾಗಿ ನಡೆಯಲಿದ್ದು, ಅರಮನೆ ಮತ್ತು ಚಾಮುಂಡಿ ಬೆಟ್ಟಕ್ಕೆ ಮಾತ್ರ ಸೀಮಿತವಾಗಿರಲಿದೆ ಎಂಬುದು ಗೊತ್ತಿರುವ ವಿಚಾರ. ಸಂಪ್ರದಾಯದಂತೆ ಅರಮನೆಯಲ್ಲಿ ದಸರಾ ಕಾರ್ಯಕ್ರಮಗಳು ನಡೆಯಲಿದ್ದು, ಇದೀಗ ದಸರಾ ಕಾರ್ಯಕ್ರಮಗಳ ಪಟ್ಟಿ ಸಿದ್ಧವಾಗಿದೆ. ಅಕ್ಟೋಬರ್ 17ರಿಂದ ಶರನ್ನವರಾತ್ರಿ ಆರಂಭವಾಗಲಿದ್ದು, ಅಂದು ಬೆಳಿಗ್ಗೆ 6:15ರಿಂದ 6:30ಕ್ಕೆ ಸಲ್ಲುವ ಶುಭ ಮುಹೂರ್ತದಲ್ಲಿ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಲಾಗುತ್ತದೆ. 7:45ರಿಂದ 8:15ರ ಶುಭ …
Read More »