ಧರ್ಮಸ್ಥಳ : ಮುಂದಿನ ವರ್ಷದಿಂದ ಆನ್‌ಲೈನ್ ಮೂಲಕ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ ನೀಡಲಾಗುವುದು ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಪ್ರಕಟಿಸಿದ್ದಾರೆ. ಧರ್ಮಸ್ಥಳದಲ್ಲಿ ಶನಿವಾರ ಕರ್ನಾಟಕ ಭಜನಾ ಪರಿಷತ್ ನೇತೃತ್ವದಲ್ಲಿ ಆಯೋಜಿಸಿದ ಪ್ರಾರ್ಥನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಧರ್ಮಸ್ಥಳದಲ್ಲಿ ದೇವರ ಅಪ್ಪಣೆ ಪಡೆದು ಜಾತ್ರೆ ಹಾಗೂ ಎಲ್ಲ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಲಾಗುತ್ತದೆ. ಈ ವರ್ಷ ಭಜನಾ ತರಬೇತಿ ಕಮ್ಮಟದ ಬದಲು ಸಾಂಕೇತಿಕವಾಗಿ ಒಂದು ದಿನದ ಪ್ರಾರ್ಥನಾ ಸಮಾವೇಶ …
Read More »Monthly Archives: ಅಕ್ಟೋಬರ್ 2020
ರೈಸ್ ಪುಲ್ಲಿಂಗ್ ಸಾಮಗ್ರಿಗಳನ್ನು ತೋರಿಸಿ ವಂಚನೆ ಮಾಡುತ್ತಿದ್ದ ಐವರನ್ನು ಮೈಸೂರು ದೇವರಾಜ ಪೊಲೀಸರು ಬಂಧಿಸಿದ್ದಾರೆ.
ಮೈಸೂರು: ರೈಸ್ ಪುಲ್ಲಿಂಗ್ ಸಾಮಗ್ರಿಗಳನ್ನು ತೋರಿಸಿ ವಂಚನೆ ಮಾಡುತ್ತಿದ್ದ ಐವರನ್ನು ಮೈಸೂರು ದೇವರಾಜ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡಿನ ಚಂದ್ರಮೋಹನ್(57), ಕೇರಳದ ಟಿ.ವಿ.ಇಬ್ರಾಹಿಂ (50), ಬೆಂಗಳೂರಿನ ಕೆ.ಆರ್.ಗಿರಿನಾಥನ್(49), ಎಂ.ಗೋಪಿ(40),ಚಾಮರಾಜನಗರದ ಇರ್ಷದ್ ಖಾನ್ ಎಂದು ಗುರುತಿಸಲಾಗಿದೆ. ಮೈಸೂರಿನ ಹೋಟೆಲೊಂದರಲ್ಲಿ ಕುಳಿತು ಬಕ್ರಗಳಿಗಾಗಿ ಹುಡುಕಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಖದೀಮರನ್ನು ಬಂಧಿಸಿದ್ದಾರೆ.ಶ್ರೀಮಂತರನ್ನ ಟಾರ್ಗೆಟ್ ಮಾಡಿದ್ದ ಇವರು, ಮತ್ತಷ್ಟು ಶ್ರೀಮಂತರಾಗಬಹುದು, ಭೂಮಿ ಖರೀದಿಸಲು ಅನುಕೂಲವಾಗುತ್ತದೆ ಎಂದು ಇನ್ನಿಲ್ಲದ ಆಸೆ …
Read More »ಲಂಚ ಪಡೆಯುತ್ತಿದ್ದ ಕಾರಾಗ್ರಹದ ಸಿಬ್ಬಂದಿ ರೆಡ್ ಹ್ಯಾಂಡ್ ಆಗಿಯೇ ಎಸಿಬಿ ಅಧಿಕಾರಿಗಳ ಬಲೆ
ಬೆಂಗಳೂರು: ಪರಪ್ಪನ ಅಗ್ರಹಾರದ ಜೈಲಧಿಕಾರಿಗಳ ಲಂಚಾವತಾರ ಮತ್ತೊಮ್ಮೆ ಬಯಲಾಗಿದೆ. ಅಪರಾಧಿಯೊಬ್ಬನ ಪೆರೋಲ್ ವಿಚಾರವಾಗಿ ಲಂಚ ಪಡೆಯುತ್ತಿದ್ದ ಕಾರಾಗ್ರಹದ ಸಿಬ್ಬಂದಿ ರೆಡ್ ಹ್ಯಾಂಡ್ ಆಗಿಯೇ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ತುಮಕೂರು ಮೂಲದ ಅಪರಾಧಿಯೊಬ್ಬರಿಗೆ 14 ವರ್ಷ ಜೈಲು ಶಿಕ್ಷೆ ನೀಡಿ ಸೆಷೆನ್ಸ್ ನ್ಯಾಯಾಲಯ ತೀರ್ಪು ನೀಡಿತ್ತುಇತ್ತೀಚೆಗೆ ಈ ವ್ಯಕ್ತಿ ಪೆರೋಲ್ ಕೋರಿ ಕೇಂದ್ರ ಕಾರಾಗೃಹಕ್ಕೆ ಅರ್ಜಿ ಹಾಕಿದ್ದರು ಎನ್ನಲಾಗಿದೆ. ಈ ವೇಳೆ ಕಾರಾಗೃಹದ ಅಧೀಕ್ಷಕ ಜಯರಾಮ್ …
Read More »ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರಿಗೂ ಕೊರೋನಾ ಸೋಂಕು
ಮುಂಬೈ: ಬಾಹುಬಲಿ ಖ್ಯಾತಿಯ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರಿಗೂ ಕೊರೋನಾ ಸೋಂಕು ಒಕ್ಕರಿಸಿದ್ದು, ಪ್ರಸ್ತುತ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಯುಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ಕೆಲವು ದಿನಗಳ ಹಿಂದೆ ತಮನ್ನಾ ಅವರ ತಂದೆ ತಾಯಿಗಳಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಕಾರಣ ತಮನ್ನಾ ತಮ್ಮ ಕುಟುಂಬ ಹಾಗೂ ಎಲ್ಲ ಸಿಬ್ಬಂದಿಗೆ ಕೊರೊನಾ ಪರೀಕ್ಷೆ ಮಾಡಿಸಿದ್ದರು. ಈ ಪರೀಕ್ಷೆಯಲ್ಲಿ ತಂದೆ ತಾಯಿಗೆ ಪಾಸಿಟಿವ್ …
Read More »ಮೇಘನಾ ರಾಜ್ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು.
ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿ.ಚಿರಂಜೀವಿ ಸರ್ಜಾ ಪತ್ನಿ, ನಟಿ ಮೇಘನಾರಾಜ್ ತುಂಬು ಗರ್ಭಿಣಿಯಾಗಿದ್ದು, ಇಂದು ಅವರ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮನೆಯವರು ಸರಳವಾಗಿ ಸೀಮಂತ ಕಾರ್ಯಕ್ರಮ ನೆರವೇರಿಸಿದ್ದಾರೆ. ಕುಟುಂಬದವರು, ಆಪ್ತರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪತಿ ಚಿರು ಅಗಲಿಕೆ ನೋವಿನಲ್ಲಿರುವ ಮೇಘನಾ, ಚಿರಂಜೀವಿ ಸರ್ಜಾ ಅವರ ದೊಡ್ಡ ಕಟೌಟ್ ಇಟ್ಟು ಅದರ ಮುಂದೆಯೇ ಕುಳಿತು ಸೀಮಂತ ಮಾಡಿಸಿಕೊಂಡಿದ್ದಾರೆ.
Read More »ಸಂಪುಟ ವಿಸ್ತರಣೆ ; ಮುಖ್ಯಮಂತ್ರಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ – ಸಚಿವ ರಮೇಶ್ ಜಾರಕಿಹೊಳಿ.
ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ. ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಕೂಡ ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ. ಸಂಪುಟ ವಿಸ್ತರಣೆ …
Read More »ಉತ್ತರ ಪ್ರದೇಶ ಪೊಲೀಸರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರ ಬಳಿ ಕ್ಷಮೆ ಯಾಚಿಸಿದ್ದಾರೆ
ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶ ಹಾಥರಸ್ಗೆ ಹೋದಾಗ ಅವರನ್ನು ಪೊಲೀಸರು ತಳ್ಳಿದ್ದಾರೆಂಬ ಆರೋಪ ಕೇಳಿಬಂದಿದೆ. ಮೊದಲ ದಿನ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಹಾಥರಸ್ಗೆ ತೆರಳಿದ್ದಾಗ ನಡೆದ ನೂಕುನುಗ್ಗಲು, ಪೊಲೀಸರ ಲಾಠಿ ಚಾರ್ಜ್ ವೇಳೆ ರಾಹುಲ್ ಗಾಂಧಿಯವರು ಪೊದೆಗೆ ಬಿದ್ದಿದ್ದರು. ಆದರೂ ಬೆಂಬಿಡದೆ ಎರಡನೇ ಬಾರಿ ಭೇಟಿಗೆ ತೆರಳಿದ ಸಂದರ್ಭದಲ್ಲಿ ಪುರುಷ ಅಧಿಕಾರಿಯೋರ್ವ ಪ್ರಿಯಾಂಕಾ ಗಾಂಧಿಯವರ ಬಟ್ಟೆಯನ್ನು ಹಿಡಿದು ಎಳೆದಿದ್ದಾರೆ. ಈ ಫೊಟೋ ಕೂಡ ಎಲ್ಲೆಡೆ …
Read More »ನಮ್ಮ ಸಮಾಜದಲ್ಲಿ ದೇವಸ್ಥಾನದಲ್ಲಿದೇವರು ಕಾಣದೆ ಇದ್ದರು, ಜನರು ಕೈ ಮುಗಿತಾರೆ. ಆದರೆ, ಹೆಣ್ಣನ್ನ ನೋಡುವ ದೃಷ್ಟಿಯೇ ಬೇರೆಯಿದೆ:ಕೆಜಿಎಫ್ ಶಾಸಕಿ ರೂಪಾ ಶಶಿಧರ್
ಕೋಲಾರ : ನಮ್ಮ ಸಮಾಜದಲ್ಲಿ ದೇವಸ್ಥಾನದಲ್ಲಿದೇವರು ಕಾಣದೆ ಇದ್ದರು, ಜನರು ಕೈ ಮುಗಿತಾರೆ. ಆದರೆ, ಹೆಣ್ಣನ್ನ ನೋಡುವ ದೃಷ್ಟಿಯೇ ಬೇರೆಯಿದೆ. ಅದು ಬದಲಾದಲ್ಲಿ ಮಾತ್ರ ಹೆಣ್ಣಿನ ರಕ್ಷಣೆ ಸಾಧ್ಯ ಎಂದು ಕೆಜಿಎಫ್ ಶಾಸಕಿ ರೂಪಾ ಶಶಿಧರ್ ಉತ್ತರ ಪ್ರದೇಶ ಘಟನೆಯನ್ನ ಕಟುವಾಗಿ ಖಂಡಿಸಿದ್ದಾರೆ. ಇನ್ನು ಯುವತಿಯ ಮೇಲೆರೆಗಿ ಮೃಗಗಳಂತೆ ಕೆಲವರು ವರ್ತಿಸಿದರೆ, ಪೊಲೀಸ್ ಅಧಿಕಾರಿಗಳು ರಾತ್ರೋ ರಾತ್ರಿ ಸುಟ್ಟು ಹಾಕಿದ್ದಾರೆ, ಅಲ್ಲಿ ಯಾರೂ ಕೇಳುವವರು ಮಾಡುವವರು ಇಲ್ಲ, ಸ್ವಂತ ತಂದೆ …
Read More »ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ: ‘ಏಣಗಿ ಬಾಳಪ್ಪ ಸ್ಮಾರಕ ಟ್ರಸ್ಟ್ ಸ್ಥಾಪಿಸಬೇಕು’ ಎಂದು ಒತ್ತಾಯಿಸಿ ಸಾಹಿತಿಗಳು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಶನಿವಾರ ಮನವಿ ಸಲ್ಲಿಸಿದರು. ‘ನಗರದ ಟಿಳಕವಾಡಿಯಲ್ಲಿ ಪುನರ್ ನಿರ್ಮಾಣವಾಗುತ್ತಿರುವ ಕಲಾಮಂದಿರಕ್ಕೆ ಏಣಗಿ ಬಾಳಪ್ಪ ಅವರ ಹೆಸರು ನಾಮಕರಣ ಮಾಡಬೇಕು. ಪ್ರಮುಖ ರಸ್ತೆಗೆ ಅವರ ಹೆಸರಿಡಬೇಕು’ ಎಂದು ಕೋರಿದರು. ‘ಅವರ ಹೆಸರಿನಲ್ಲಿ ಟ್ರಸ್ಟ್ ರಚಿಸಲು ಸರ್ಕಾರ ಹಿಂದೇಟು ಹಾಕುತ್ತಿರುವ ಕಾರಣ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಂದ, ಶಾಸಕರು ಮತ್ತು ಸಂಸದರ ನಿಧಿಯಿಂದ ವಂತಿಗೆ ಸಂಗ್ರಹಿಸಿ ನಾಟಕ …
Read More »ಹುಲ್ಲು ತರಲು ಅಡವಿಗೆ ಕರೆದೊಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ?
ದಾವಣಗೆರೆ: ಅಪ್ರಾಪ್ತೆಯೊಬ್ಬಳ ಮೇಲೆ ಆಕೆಯ ಸಂಬಂಧಿಕನೇ ಅತ್ಯಾಚಾರ ಎಸಗಿರುವ ಆರೋಪ ಜಿಲ್ಲೆಯ ಜಗಳೂರು ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ. ಹುಲ್ಲು ತರಲು ಅಪ್ರಾಪ್ತೆಯನ್ನು ಅಡವಿಗೆ ಕರೆದುಕೊಂಡು ಹೋದ ಆಕೆಯ ಸಂಬಂಧಿಕ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಈ ವಿಷಯ ಮನೆಯಲ್ಲಿ ಹೇಳದಂತೆ ಆರೋಪಿ ಅಪ್ರಾಪ್ತೆಗೆ ಬೆದರಿಕೆ ಸಹ ಒಡ್ಡಿದ್ದಾನೆ ಎಂದು ಹೇಳಲಾಗಿದೆ. ಈ ನಡುವೆ, ಬಾಲಕಿ ಅನಾರೋಗ್ಯದಿಂದ ಬಳಲಿದ್ದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. …
Read More »